Author: admin

ಮುಟ್ಟಿನ ಶಿಕ್ಷಣದ ಕೊರತೆಯಿಂದ ಸರಾಸರಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರು ಶಾಲೆ ತೊರೆಯುತ್ತಿದ್ದಾರೆ. ಶೇ 70ರಷ್ಟು ಹುಡುಗಿಯರಿಗೆ ಮೊದಲ ಬಾರಿ ಋತುಚಕ್ರವಾದಾಗ ಅದರ ಅರಿವೇ ಇರುವುದಿಲ್ಲ’ ಎಂದು ನಟಿ ರೂಪಾಲಿ ಗಂಗೂಲಿ ಕಳವಳ ವ್ಯಕ್ತಪಡಿಸಿದರು. ಅಮೃತ ವಿಶ್ವ ವಿದ್ಯಾಪೀಠ ಹಾಗೂ ಜೆಂಡರ್ ಇಕ್ವಾಲಿಟಿ ವರ್ಕಿಂಗ್ ಗ್ರೂಪ್ ಆಫ್ ಸಿ 20 ಜಂಟಿಯಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ‘ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ’ಯ ಸಮೀಕ್ಷಾ ವರದಿ ಬಿಡುಗಡೆ ಮಾಡಿ, ಮಾತನಾಡಿದರು. ‘ಹಲವರು ಮುಟ್ಟಿನ ವಿಷಯದಲ್ಲಿ ಭಯ ಪಡುತ್ತಾರೆ. ಹೆಣ್ಣು ಮಕ್ಕಳ ತಾಯಂದಿರಿಗೂ ಅರಿವಿನ ಕೊರತೆಯಿದೆ. ಇದರಿಂದಾಗಿ ಸೂಕ್ತ ಮಾರ್ಗದರ್ಶನ ಅವರಿಗೆ ಸಿಗುತ್ತಿಲ್ಲ. ಹಲವರು ಮುಟ್ಟಿನ ತೊಂದರೆಗಳನ್ನು ಹೇಳಿಕೊಳ್ಳದೆ ಮುಚ್ಚಿಡುತ್ತಾರೆ. ಇದು ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗುವಂತೆ ಮಾಡುತ್ತದೆ. ಆದ್ದರಿಂದ ಮುಟ್ಟಿನ ನೈರ್ಮಲ್ಯ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿ ಬಿ. ಬಿ. ಕಾವೇರಿ, ‘ಮುಟ್ಟಿನ ಆರೋಗ್ಯ ಹಾಗೂ ನೈರ್ಮಲ್ಯದ…

Read More

ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ವಿಧಾನಮಂಡಲ ಅಧಿವೇಶನದ ಆರಂಭದ ದಿನದಿಂದಲೇ ಪ್ರತಿಭಟನೆ ನಡೆಸುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಹೇಳಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಸಂಜೆ ನಡೆದ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲೂ ಇದೇ ಮಾತು ಹೇಳಿದರು. ಕಾಂಗ್ರೆಸ್ ನೀಡಿದ್ದ ‘ಗ್ಯಾರಂಟಿ’ ಭರವಸೆಗಳೇ ನಮ್ಮ ಸೋಲಿಗೆ ಕಾರಣ. ಅವರು ಅಧಿಕಾರದ ಮದದಿಂದ ಏನೇನೋ ಭರವಸೆಗಳನ್ನು ಕೊಟ್ಟು, ಈಗ ನರೇಂದ್ರ ಮೋದಿಯವರತ್ತ ಕೈ ತೋರಿಸುತ್ತಿದ್ದಾರೆ. ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬೇಕು. ಐದೂ ಗ್ಯಾರಂಟಿಗಳನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲಿ. ಇಲ್ಲವಾದರೆ ಅಧಿಕಾರ ಬಿಟ್ಟು ತೊಲಗಲಿ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ನಮ್ಮ ಮೆಟ್ರೋ ರೈಲುಗಳಲ್ಲಿ ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಪ್ರಸಾರ ಮಾಡುವುದನ್ನು ಬಿಎಂಆರ್‌ಸಿಎಲ್ ನಿಷೇಧಿಸಿದೆ. ಇಯರ್ ಫೋನ್ ಬಳಸಿ ಸಂಗೀತ ಆಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ. ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಕೇಳುವುದರಿಂದ, ಇತರೆ ಪ್ರಯಾಣಕರಿಗೆ ಇದು ಕಿರಿಕಿರಿ ಉಂಟುಮಾಡುತ್ತದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ರಯಾಣಿಸುವಾಗ ಓದುತ್ತಿರುತ್ತಾರೆ. ಕೆಲವರು ಲ್ಯಾಪ್‌ ಟಾಪ್‌ ನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಇನ್ನು ಹಲವರು ಕೆಲಸಕ್ಕೆ ಸಂಬಂಧಿಸಿದಂತೆ ದೂರವಾಣಿಯಲ್ಲಿ ಮಾತನಾಡುತ್ತಾರೆ.ಹೀಗಾಗಿ ದೊಡ್ಡದಾಗಿ ಮ್ಯೂಸಿಕ್ ಹಾಕಿದ್ರೆ ಸಹಜವಾಗಿ ತೊಂದರೆ ಆಗುತ್ತೆ ಅಂತ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ ಪ್ರತಿನಿಧಿಗಳ ಸಮಸ್ಯೆಗಳನ್ನ ಆಲೀಸಿದ ಸಚಿವರು, ಸಮಸ್ಯೆಗಳನ್ನ ಒಂದೊಂದಾಗಿ ಬಗೆಹರಿಸುವುದಾಗಿ ಹೇಳಿದರು. ರಾಜ್ಯದಾದ್ಯಂತ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಪ್ರತಿನಿಧಿಗಳು ಇಂದು ಸಚಿವರನ್ನ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನ ಹೇಳಿಕೊಂಡರು. ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ದೊರೆಯುತ್ತಿಲ್ಲ. ಅಲ್ಲದೇ ಹೆಚ್ಚುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಇದೆ. ಇಲ್ಲಿಯವರೆಗೂ ಏಜನ್ಸಿಯವರಿಂದ ಪಿ. ಎಫ್ ಪಾವತಿಯಾಗಿಲ್ಲ. ಎಂದು ತಮ್ಮ ಕಷ್ಟಗಳನ್ನ ಹೇಳಿಕೊಂಡರು. ಸಮಸ್ಯೆ ಹೀಗೆ ಮುಂದುವರಿದರೆ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 800 ಸಿಬ್ಬಂದಿಗಳು ನಿರ್ಧರಿಸಿದ್ದಾರೆ ಎಂದರು. ಸಿಬ್ಬಂದಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ಸ್ಥಗಿತವಾಗಬಾರದು. ಏಜನ್ಸಿಯವರೊಂದಿಗೆ ಮಾತುಕತೆ ನಡೆಸಿ ಬಾಕಿ ವೇತನ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ…

Read More

ಮಹಾರಾಷ್ಟ್ರದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಿನುದ್ದೀನ್ ಅಲಿಯಾಸ್ ಶೇಕ್ (25), ಉಸ್ಮಾನ್ ರೆಹಮಾನ್ (28) ಹಾಗೂ ತನ್ನೀಶ್ (38)ನನ್ನು ಬಂಧಿಸಿ, 13 ಕೆ. ಜಿ. ಗಾಂಜಾ, 1 ಕೆ. ಜಿ ಹಶೀಷ್ ಹಾಗೂ 2 ಕಾರು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಜೂನ್ 21ರಂದು ಬಿಎಚ್‌ ಇಎಲ್ ಉದ್ಯಾನ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಗ್ರಾಹಕರಿಗೆ ಗಾಂಜಾ ಮಾರಲು ಯತ್ನಿಸುತ್ತಿದ್ದರು. ಬಂಧಿತರ ಪೈಕಿ ಒಬ್ಬ ಮಹಾರಾಷ್ಟ್ರದವ, ಆಗಾಗ ಊರಿಗೆ ಹೋಗಿ ಗಾಂಜಾ ಖರೀದಿಸಿ ಬಸ್‌ ಗಳಲ್ಲಿ ನಗರಕ್ಕೆ ತರುತ್ತಿದ್ದ. ಇತರೆ ಆರೋಪಿಗಳ ಜೊತೆ ಸೇರಿ ಗ್ರಾಹಕರಿಗೆ ಮಾರುತ್ತಿದ್ದ. ಅದರಿಂದ ಬಂದ ಹಣವನ್ನು ಮೂವರು ಹಂಚಿಕೊಳ್ಳುತ್ತಿದ್ದರು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಅಂತಾರಾಷ್ಟ್ರೀಯ ಶಸ್ತ್ರಚಿಕಿತ್ಸಾ ತಜ್ಞರ ದಿನವನ್ನು ಇದೇ 26ಕ್ಕೆ ಆಚರಿಸಲಾಗುವುದು. ಇದರ ಪ್ರಯುಕ್ತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 150 ರೋಗಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಶಸ್ತ್ರ ಚಿಕಿತ್ಸಕರ ಅಸೋಸಿಯೇಶನ್ (ಕೆಎಸ್‌ ಸಿಎಎಸ್‌ಐ) ಅಧ್ಯಕ್ಷ ಡಾ. ಎಚ್. ವಿ. ಶಿವರಾಮ್ ತಿಳಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಶಸ್ತ್ರಚಿಕಿತ್ಸಕರು ಕನಿಷ್ಠ ಒಬ್ಬರಿಗೆ ಉಚಿತ ಚಿಕಿತ್ಸೆ ನೀಡಿದರೆ ಹಲವಾರು ರೋಗಿಗಳಿಗೆ ಚಿಕಿತ್ಸೆ ದೊರೆಯಲಿದೆ. ಸದ್ಯ 150 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಿದ್ದೇವೆ. ಜತೆಗೆ 20 ಕಡೆ ಆರೋಗ್ಯ ಸೇವೆ ಒದಗಿಸಲಾಗುವುದು. ಸರ್ಜನ್‌ಗಳ ಆರೋಗ್ಯ ಸಹ ಮುಖ್ಯ ಆಗಿರುವುದರಿಂದ ಅವರಿಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಗೋಮಾಂಸ ಸಾಗಿಸುತ್ತಿದ್ದ ಸ್ಕಾರ್ಫಿಯೊ ವಾಹನ ಅಡ್ಡಗಟ್ಟಿ ಅಪಘಾತದ ನೆಪದಲ್ಲಿ ಸುಲಿಗೆ ಮಾಡಿದ್ದ ಆರೋಪದಡಿ ಪ್ರಶಾಂತ್ ಹಾಗೂ ಸೋಮುಗೌಡ ಅವರನ್ನು ಆರ್. ಎಂ. ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಬಂಧಿತ ಪ್ರಶಾಂತ್, ಕಾಂಗ್ರೆಸ್ ಪಕ್ಷದ ಸುಂಕದಕಟ್ಟೆ ವಾರ್ಡ್ ಸದಸ್ಯ. ಸಹಚರ ಸೋಮುಗೌಡ ಜೊತೆ ಸೇರಿ ಕೃತ್ಯ ಎಸಗಿದ್ದ’ ಎಂದು ಪೊಲೀಸರು ಹೇಳಿದರು. ಮಾಗಡಿ ಗಂಗೊಂಡನಹಳ್ಳಿಯ ಉಮೇಶ್ ಹಾಗೂ ಖಾಜಾ ಮೊಹಿನ್, ಸ್ಕಾರ್ಫಿಯೊ ವಾಹನದಲ್ಲಿ ಗೋಮಾಂಸ ಇಟ್ಟುಕೊಂಡು ಶಿವಾಜಿನಗರಕ್ಕೆ ಜೂನ್ 21ರಂದು ಹೊರಟಿದ್ದರು. ಇನ್ನೊವಾ ಕ್ರಿಸ್ಟಾ ವಾಹನದಲ್ಲಿ ಬಂದಿದ್ದ ಆರೋಪಿಗಳು, ಬೆಳಿಗ್ಗೆ 8. 30ರ ಸುಮಾರಿಗೆ ಎಂ. ಇ. ಐ ರಸ್ತೆಯಲ್ಲಿ ಸ್ಕಾರ್ಫಿಯೊ ವಾಹನ ಅಡ್ಡಗಟ್ಟಿದ್ದರು.’ ಮಾರ್ಗಮಧ್ಯೆ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದ್ದಿರಾ. ಇದರಿಂದ ವಾಹನ ಜಖಂಗೊಂಡಿದ್ದು, ದುರಸ್ತಿಗೆ ಹಣ ನೀಡಿ’ ಎಂದು ಆರೋಪಿಗಳು ಒತ್ತಾಯಿಸಿದ್ದರು. ಯಾವುದೇ ಅಪಘಾತ ಮಾಡಿಲ್ಲವೆಂದು ಉಮೇಶ್ ಹಾಗೂ ಖಾಜಾ ಮೊಹೀನ್ ಹೇಳಿದ್ದರು. ಸುಮ್ಮನಾಗದ ಆರೋಪಿಗಳು, ಇಬ್ಬರ ಮೇಲೆ ಹಲ್ಲೆ ಮಾಡಿದ್ದರು. ವಾಹನ ಸಮೇತ ಇಬ್ಬರನ್ನು ಅಪಹರಿಸಿ, 15…

Read More

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,‌ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದರು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಸಿಎಂ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ಯೋಜನೆ ಜಾರಿಗೆ ಬರುತ್ತೆ. ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ.  ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ ಎಂದು ಸಚಿವರಾದ ಲಕ್ಷ್ಮಿ…

Read More

ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿರುವ ಬೆಂಗಳೂರು ಪೊಲೀಸರು ನಗರದಾದ್ಯಂತ 30 ಎಮರ್ಜೆನ್ಸಿ SOS ಬೂತ್ ಗಳನ್ನು ನಿರ್ಮಾಣ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿರುವ ಬೆಂಗಳೂರು ಪೊಲೀಸರು ನಗರದಾದ್ಯಂತ 30 ಎಮರ್ಜೆನ್ಸಿ SOS ಬೂತ್ ಗಳನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ 30 ಎಮರ್ಜೆನ್ಸಿ SOS ಬೂತ್ ನಿರ್ಮಾಣ ಮಾಡಲಾಗಿದ್ದು, ಈ ಬೂತ್ ನಲ್ಲಿರುವ ಕಿಯೋಸ್ಕ್ ನ ಎಸ್ ಒಎಸ್ ಬಟನ್ ಒತ್ತಿದರೆ ಹತ್ತೇ ನಿಮಿಷದಲ್ಲಿ ಪೊಲೀಸರು ಹಾಜರಿದ್ದು ಮಹಿಳೆಯರಿಗೆ ನೆರವು ನೀಡುತ್ತಾರೆ. ಮೊದಲ ಹಂತದಲ್ಲಿ ಪ್ರಯೋಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಹಿಳೆಯರಿಗಾಗಿ 30 ಸುರಕ್ಷತಾ ದ್ವೀಪಗಳನ್ನು ಪೊಲೀಸರು ಸ್ಥಾಪಿಸಿದ್ದಾರೆ. ‘ನಿರ್ಭಯಾ ಫಂಡ್’ ಯೋಜನೆಯಡಿ ಯೋಜನೆಗಾಗಿ ಇತರ 20 ಕಿಯೋಸ್ಕಳನ್ನು ಎರಡನೇ ಹಂತದಲ್ಲಿ ಕೊಳೆಗೇರಿಗಳು, ಮಾಲ್ಗಳ ಬಳಿ ಮತ್ತು ಐಟಿ ಕಂಪನಿಗಳಿರುವ ಪ್ರದೇಶಗಳಂತಹ ದುರ್ಬಲ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಸೇಫ್ಟಿ ಐಲ್ಯಾಂಡ್ ಬೂತ್ SOS ಅಥವಾ…

Read More

ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು. ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಶುಕ್ರವಾರ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಮನವಿ ಮಾಡಿತು. ‘ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ’ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ತಿಳಿಸಿದರು. ಈ ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More