Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಕಳೆದ ಕೆಲವು ವರ್ಷಗಳಲ್ಲಿ UPI ವಹಿವಾಟುಗಳ ಸಂಖ್ಯೆಯಲ್ಲಿನ ಹೆಚ್ಚಳದೊಂದಿಗೆ Google Pay ಜನರಲ್ಲಿ ಬಹಳ ಜನಪ್ರಿಯವಾಗಿದೆ. ಈಗ ನೀವು ಹೋದಲ್ಲೆಲ್ಲಾ Google Pay ಇದೆ. ಹತ್ತಾರು ರೂಪಾಯಿಯಿಂದ ಹತ್ತು ಸಾವಿರ ರೂಪಾಯಿಗಳಿಗೆ ಡಿಜಿಟಲ್ ಮೂಲಕ ಹಣ ಕಳುಹಿಸುವುದು ತುಂಬಾ ಸುಲಭ ಎಂಬುದೇ ಇದಕ್ಕೆ ಕಾರಣ. G-Pay ಎನ್ನುವುದು ಸ್ನೇಹಿತರಿಂದ ಅಪರಿಚಿತರಿಂದ ವ್ಯಾಪಾರ ಸಹೋದ್ಯೋಗಿಗಳಿಗೆ ಯಾರಿಗಾದರೂ ಹಣವನ್ನು ಕಳುಹಿಸಲು ಸುಲಭವಾದ ಮಾರ್ಗವಾಗಿದೆ. ಕೆಲವು ಸೆಕೆಂಡುಗಳಲ್ಲಿ ಪೂರ್ಣಗೊಳ್ಳುವ ಈ ಹಣ ವರ್ಗಾವಣೆಯಲ್ಲಿ ಸಾಮಾನ್ಯವಾಗಿ ತಪ್ಪುಗಳು ಸಂಭವಿಸುತ್ತವೆ.. ಅವುಗಳಲ್ಲಿ ಒಂದು Google Pay ಖಾತೆಯನ್ನು ಹೊಂದಿರುವ ಬೇರೆಯವರು ಉದ್ದೇಶಿತ ವ್ಯಕ್ತಿಯ ಬದಲಿಗೆ ಏನು ಮಾಡಬೇಕೆಂದು ತಿಳಿದಿರುವುದು. ಮೊದಲು 18001201740 ಗೆ ಕರೆ ಮಾಡಿ ದೂರು ದಾಖಲಿಸಿಕೊಳ್ಳಿ. ಅದರ ನಂತರ ನೀವು ನಿಮ್ಮ ಸ್ಥಳೀಯ ಶಾಖೆಯ ವ್ಯವಸ್ಥಾಪಕರನ್ನು ಭೇಟಿ ಮಾಡಬಹುದು. ತಪ್ಪಾದ ಹಣ ರವಾನೆಯ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರನ್ನು ಮೂರು ದಿನಗಳೊಳಗೆ ಸಂಪರ್ಕಿಸಬೇಕು. ಅವರು ಹಣವನ್ನು ಮರಳಿ ಪಡೆಯಲು ಕ್ರಮಗಳನ್ನು ತೆಗೆದುಕೊಳ್ಳಬಹುದು. ಇಲ್ಲವಾದರೆ ನೀವು https://rbi.org.in/Scripts/Complaints.aspx ವೆಬ್‌ಸೈಟ್‌ಗೆ…
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಪೆ.27ಕ್ಕೆ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಪೂರ್ವ ಭಾವಿ ಸಭೆ ಮಾಡಲಾಯಿತು. ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ರಾಜ್ಯ ಕಾರ್ಯದರ್ಶಿ ಕು. ಉಜ್ವಲಾ ಬಡವನಾಚೆ, ರಾಜ್ಯ ವಕ್ತಾರ ಎಮ್. ಬಿ ಝಿರಲಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಂಘಟನಾ ಸಹ ಪ್ರಧಾನ ಕಾರ್ಯದರ್ಶಿ ಎಮ್. ಸಿ. ಜಯಪ್ರಕಾಶ ಹಾಗೂ ಬೆಳಗಾವಿ ಮೇಯರ ಶೋಭಾ ಸೋಮನಾಚೆ ಹಾಗೂ ಉಪಮೇಯರ ರೇಷ್ಮಾ ಪಾಟೀಲ ಪ್ರಮುಖರಾದ ಆರ್ ಎಸ್ ಮುತಾಲಿಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದಾರ ಬೆಳಗಾವಿ, ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷೆ ಗೀತಾ ಸುತಾರ, ವಿಜಯ ಕೊಡಗಾನೂರ ಹಾಗೂ ಮಾಧ್ಯಮ ಸಂಚಾಲಕ ಶರದ ಪಾಟೀಲ ಹಾಗೂ…
ತುಮಕೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷ, ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿದ್ದು ತುಮಕೂರಿನಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂ.ಎಲ್ಎ ಎಂಬಂತಹ ಪೋಸ್ಟರ್ ವಾರ್ ಶುರುವಾಗಿದೆ. ಇನ್ನು ರಾತ್ರೋರಾತ್ರಿ ನಗರದ ಹಲವೆಡೆ ಶಾಸಕರ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿರುವ ಕಾರ್ಯಕರ್ತರು. ‘PayMLA ನಿಮಗೆ ಕೆಲಸ ಆಗಬೇಕೆ, ನನಗೆ ಪೇ ಮಾಡಿ, ಭ್ರಷ್ಟಾಚಾರವೇ ನನ್ನ ಮೊದಲ ಆಧ್ಯತೆ’ ಎಂದು ಬರೆದಿರುವ ಪೋಸ್ಟರ್ ಅಂಟಿಸಲಾಗಿದೆ. ಈ ಹಿಂದೆ ಪ್ರತಿಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ, ಭ್ರಷ್ಟ ಸರ್ಕಾರ ಎಂಬಿತ್ಯಾದಿ ಟೀಕೆಗಳನ್ನು ಮಾಡುವುದರ ಜೊತೆಗೆ ಪೇ ಸಿಎಂ ಎಂಬ ಅಭಿಯಾನವನ್ನು ಆರಂಭಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಹೊಸದಾಗಿ ಮದುವೆಯಾಗಿ ಸುಂದರ ಜೀವನ ನಡೆಸಬೇಕಿದ್ದ ಜೋಡಿಯ ನಡುವೆ ಅನುಮಾನ ವಿಪರೀತಕ್ಕೆ ಹೋಗಿದ್ದು ಪತಿ ಪತ್ನಿಯನ್ನೆ ಕೊಲೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಮಮತಾ ಅಲಿಯಾಸ್ ಮಮತಾ ಹಾಗೂ ನಾಗರಾಜ್ ಮಾನ್ವಿ ಕಳೆದ ವರ್ಷವಷ್ಟೇ ವಿವಾಹವಾಗಿದ್ದರು ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪತ್ನಿ ಮಮತಾ ಮೇಲೆ ಅನುಮಾನ ವಿಪರೀತಕ್ಕೆ ಹೋಗಿ ಈಗ ಹೆಂಡತಿಯನ್ನೇ ಕೊಲೆಗೈದಿದ್ದಾನೆ. ಮಾನ್ವಿ ಪೊಲೀಸರು ಆರೋಪಿ ನಾಗರಾಜ್ ನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯ ವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಫೆಬ್ರವರಿ 27ರಂದು ಮೇಘಾಲಯದ 60 ಕ್ಷೇತ್ರಗಳಿಗೆ ಮತದಾನ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಮೇಘಾಲಯ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಮೇಘಾಲಯದ ತುರಾದಲ್ಲಿ ಇಂದು ಮೋದಿ ರೋಡ್ಶೋ ಆಯೋಜಿಸಲಾಗಿದ್ದು ರೋಡ್ ಶೋ ಬಳಿಕ ಬೃಹತ್ ಸಮಾವೇಶ ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ನಗರದ ಹೃದಯಭಾಗದಲ್ಲಿರುವ ಖಿಂದೈಲಾದ್ ಪ್ರದೇಶದಲ್ಲಿ ನಡೆಯುವ ರೋಡ್‌ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯದ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಯು ಟಿರೋಟ್ ಸಿಂಗ್, ಯು ಕಿಯಾಂಗ್ ನಂಗ್ಬಾ ಮತ್ತು ಪಾ ಟೋಗನ್ ಸಂಗ್ಮಾ ಅವರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಪುಷ್ಪ ನಮನ ಸಲ್ಲಿಸಿ ನಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೇಘಾಲಯದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೇರಿ: ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಹನುಮಂತಗೌಡ ಪಾಟೀಲ (54), ಪತ್ನಿ ಲಲಿತಾ ಪಾಟೀಲ (50) ಮತ್ತು ಮಗಳು ನೇತ್ರಾ (22) ಮೃತ ದುರ್ಧೈವಿಗಳಾಗಿದ್ದು ಮಗಳ ವಿದ್ಯಾಭ್ಯಾಸ ಮತ್ತು ಮದುವೆಗಾಗಿ ಸಾಲ ಮಾಡಿ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಹನುಮಂತಗೌಡ ತಮ್ಮ ಪುತ್ರಿ ನೇತ್ರಾ ಅವರನ್ನು 7 ತಿಂಗಳ ಹಿಂದೆ ದಾವಣಗೆರೆಯ ಉಮಾ ಶಂಕರ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. 125 ಲಕ್ಷ ಸಾಲವನ್ನು ತೀರಿಸಲು ಸಾಧ್ಯವಾಗದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರೀಕಟ್ಟಿ ಗ್ರಾಮದಲ್ಲಿ ಫೆ.20ರ ರಾತ್ರಿ ವೇಳೆಯಲ್ಲಿ ಮಾರುತಿ ಪವನ ತಂದೆ ಪರಶುರಾಮ ಖನ್ನುಕರ, (32) ಎನ್ನುವವನನ್ನು ಕೊಲೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಮಾರುತಿಯನ್ನು ಕೊಲೆ ಮಾಡಿದ ಬಗ್ಗೆ ಆತನ ತಂದೆ ಪರಶುರಾಮ ಬಸವಂತ ಖನ್ನುಕರ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಆಯುಕ್ತರು, ಡಿಸಿಪಿ (ಕಾ&ಸು) ಬೆಳಗಾವಿ ನಗರ ಹಾಗೂ ಗೋಪಾಲಕೃಷ್ಣ ಗೌಡರ ಎಸಿಪಿ ಬೆಳಗಾವಿ ಗ್ರಾಮೀಣ ಉಪವಿಭಾಗ ಇವರ ಮಾರ್ಗದರ್ಶನದಲ್ಲಿ ಮಾರಿಹಾಳ ಪೊಲೀಸ್ ಠಾಣೆಯ ಪಿಐ ಚಂದ್ರಶೇಖರ ತಿಗಡಿ ನೇತೃತ್ವದ ತಂಡವು ಕಾರ್ಯಪ್ರವೃತ್ತರಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು. 1] ಸೋಮನಾಥ ಗುಂಡು ಗೋಮನ್ನಾಟೆ. (25) ಸಾ ತಾನಾಜಿ ಗಲ್ಲ, ನಿಲಜಿ. ತಾ,ಜಿ!! ಬೆಳಗಾವಿ, 2] ಪ್ರಶಾಂತ@ಪರಶುರಾಮ ವಸಂತ ಮೋದಗೇಕರ, (27) ಸಾ ಬ್ರಹ್ಮ ನಗರ, ನಿಲಜಿ. ತಾ,ಜಿ|| ಬೆಳಗಾವಿ ಬಂಧಿತರು. ಇವರನ್ನು ಪತ್ತೆ ಮಾಡಿ ದಿನಾಂಕ 23/02/2023…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಾಗುತ್ತಿರುವ 2022ನೆಯ ಸಾಲಿನ ಪ್ರತಿಷ್ಟಿತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼ ಹಾಗೂ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಬರಹಗಾರರಾದ ಉಡುಪಿಯ ಶ್ರೀಮತಿ ವೈದೇಹಿಯವರನ್ನು ನೃಪತುಂಗ ಪ್ರಶಸ್ತಿಗೆ ಏಕಧ್ವನಿಯಲ್ಲಿ ಹಾಗೂ ಸರ್ವಾನುಮತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿಯು 7(ಏಳು) ಲಕ್ಷ ರೂ. ನಗದು ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಕನ್ನಡ ನಾಡಿನ ಪ್ರಶಸ್ತಿಯೆಂದು ಪ್ರಖ್ಯಾತವಾಗಿದೆ. ಈ ಬಾರಿ ಹಿರಿಯ ಬರಹಗಾರ್ತಿ ವೈದೇಹಿ ಅವರನ್ನು ಈ ಮೌಲಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದು,…
ಬೆಳಗಾವಿ: “ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಓರ್ವ ಶಾಸಕಿಯಾಗಿ ಕ್ಷೇತ್ರದಲ್ಲಿ ಕೈಗೊಂಡ ಎಲ್ಲ ತರಹದ ಅಭಿವೃದ್ಧಿ ಕೆಲಸಗಳು ಮನಸ್ಸಿಗೆ ತೃಪ್ತಿಯನ್ನುಂಟು ಮಾಡಿವೆ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕುಕಡೊಳ್ಳಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ನೂತನ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ಕೈಗೊಂಡು ಚಾಲನೆ ನೀಡಿ ಅವರು ಮಾತನಾಡಿದರು. ಜನರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಜತೆಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಜ್ವಲಂತ ಉದಾಹರಣೆಯಾಗಿದೆ” ಎಂದು ಅವರು ಹೇಳಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ವೀರನಗೌಡ ಪಾಟೀಲ, ಮಂಜು ಹುಬ್ಬಳ್ಳಿ, ರಮೇಶ ಮರಕಟ್ಟಿ, ಕಲ್ಲಪ್ಪ ಬಸರಿ, ತಾಯಪ್ಪ ಕಮ್ಮಾರ, ಶಿವಾನಂದ ದೇವಲತ್ತಿ, ಶಿವಾಜಿ ಭೈರೋಜಿ, ಬಸಪ್ಪ ಭೈರೋಜಿ, ಅರ್ಜುನ ಬಸರಗಿ, ಕಲ್ಲಪ್ಪ ಭೈರೋಜಿ, ನೂತನ ಬಸರಿ, ಈರಣ್ಣ ಕುರುಬರ, ನಾಗೇಶ ಮೆಟ್ಟಿನ್ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ : ಕಲ್ಪತರು ನಾಡಿನಲ್ಲಿಯೇ ಪ್ರಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಭವನ ಕಟ್ಟಡವು ನಿರ್ಮಾಣವಾಗಿದ್ದು, ಮಾರ್ಚ್ 5 ರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ ಪರಮೇಶ್ವರ್ ರವರು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕ್ಷೇತ್ರದ ಪ್ರತಿಯೊಂದು ಬೂತ್ ನಲ್ಲಿ ಹಾಗೂ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹಿಸಿ ಕಾಂಗ್ರೆಸ್ ಭವನವನ್ನು ನಿರ್ಮಿಸಲಾಗಿದೆ, ಕಾಂಗ್ರೆಸ್ ಪಕ್ಷದ ಕಟ್ಟಡ ಹೊರತು ಯಾರದು ಸ್ವಂತ ಕಟ್ಟಡವಲ್ಲ, ನಿರ್ಮಾಣಕ್ಕೆ 1.5 ಕೋಟಿಗೂ ಹೆಚ್ಚಿನ ಹಣ ಖರ್ಚಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನಸ್ತೋಮ ಸೇರಲಿದೆ ಎಂದು ಹೇಳಿದರು. ಪಕ್ಷದ ನಾಯಕರೆಲ್ಲಾ ಒಟ್ಟಾಗಿ ಪ್ರಜಾಧ್ವನಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ, ನಮ್ಮಲ್ಲಿ ಯಾವುಧೇ ಗುಂಪುಗಾರಿಕೆ ಇಲ್ಲ, ಸಂಘಟನೆಯಿಂದ ಇನ್ನಷ್ಟು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಕಾಂಗ್ರೇಸ್‍ಗೆ ಬೆಂಬಲವಿದೆ. ವಿರೋಧ ಪಕ್ಷಕ್ಕೆ ಆಹಾರವಾಗದೆ 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ,…