Author: admin

ಸರಗೂರು: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಡಾ ಅಲೀಲ್ ಪಾಷಾ ತಿಳಿಸಿದರು. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ವಾರ್ಷಿಕೋತ್ಸವವನ್ನು ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಮಹೇಂದ್ರ ವಹಿಸಿ ಮಾತನಾಡಿ, ಪ್ರಸ್ತುತ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಏಕ ರೂಪ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿರುವ ಕಾರಣ ಗುಣಮಟ್ಟದ ಶಿಕ್ಷಣ ಸಮನಾಗಿ ಮಕ್ಕಳಿಗೆ ದೊರೆಯುತ್ತಿದೆ. ಇದರ ಜತೆಯಲ್ಲಿಯೇ ಸಾಂಸ್ಕೃತಿಕ ಚಟುವಟಿಕೆಗಳು ಜರುಗುತ್ತಿರುವುದು ಮಕ್ಕಳನ್ನು ಉತ್ತೇಜಿಸಿದಂತಾಗುತ್ತಿದೆ ಎಂದರು. ಶಾಲಾ ವಾರ್ಷಿಕೋತ್ಸವಗಳಲ್ಲಿ ಸಾಂಸ್ಕೃತಿಕ ಕಲೆಗಳನ್ನು ಮಕ್ಕಳಿಂದ ಪ್ರದರ್ಶಿಸುವ ಮೂಲಕ ಅವರಿಗೆ ನಮ್ಮ ಸಂಸ್ಕೃತಿಯ ಅರಿವು ಮೂಡಿಸಿದಂತಾಗುತ್ತಿದೆ. ಈ ನಿಟ್ಟಿನಲ್ಲಿ ದೇಶೀಯ ಪರಂಪರೆಯನ್ನು ಬಿಂಬಿಸುವ ಕಲೆಗಳು ವಿದ್ಯಾರ್ಥಿಗಳಿಂದ ಮೂಡಿ ಬರಲು ಶಿಕ್ಷಕರ ಶ್ರಮಿಸಬೇಕಿದೆ ಎಂದು ಸಲಹೆ ನೀಡಿದರು. ಗ್ರಾಪಂ ಸದಸ್ಯ ಪ್ರಕಾಶ್ ಮಾತನಾಡಿ, ಆಧುನಿಕ ಯುಗಕ್ಕೆ ಮಾರುಹೋಗುತ್ತಿರುವ ಯುವ ಜನತೆಗೆ ಐತಿಹಾಸಿಕ ವಿಚಾರವನ್ನು ತಿಳಿ ಹೇಳುವ ಅಗತ್ಯ ಇದೆ. ಪಠ್ಯದಲ್ಲಿ ಸಾಮಾಜಿಕ ವಾದ…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ.ಎನ್ ಬಿನ್ ನರಸಿಂಹಯ್ಯ (45) ಎಂಬ ಬಡರೈತ ಸಾಲಬಾಧೆ ತಾಳಲಾರದೆ ತನ್ನದೇ ಜಮೀನಿನಲ್ಲಿ (ಸರ್ವೇ ನಂಬರ್ 22/2 ರಲ್ಲಿ) ಇರುವ ತುಗಲಿ ಮರಕ್ಕೆ ನೇಣು ಹಾಕಿಕೊಂಡು ಮೃತನಾಗಿದ್ದ ಘಟನೆ ಕಳೆದ ಮಂಗಳವಾರ ನಡೆದಿತ್ತು. ಕೊರಟಗೆರೆ ಕೆನರಾ ಬ್ಯಾಂಕ್ ನಲ್ಲಿ ದಾಳಿಂಬೆ ಬೆಳೆಯುವ ಸಲುವಾಗಿ ಐದು ಲಕ್ಷ ಸಾಲ, ವಿ ಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ ಐವತ್ತು ಸಾವಿರ ಸಾಲ, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ ಹೈನುಗಾರಿಕೆಗಾಗಿ 70,000 ಸಾಲವನ್ನು ಮಾಡಿದ್ದರು ಮತ್ತು ಮಗನ ಚಿಕಿತ್ಸೆಗಾಗಿ ಸ್ಥಳೀಯ ಸಾರ್ವಜನಿಕರಲ್ಲಿ ಕೈ ಸಾಲವನ್ನು ಸಹ ಮಾಡಿ ಅತಿಯಾದ ಬಡ್ಡಿಯಿಂದ ಸಾಲವನ್ನು ತೀರಿಸಲಾಗದೆ ಕೊರಟಗೆರೆಯ ಕೆನರಾ ಬ್ಯಾಂಕ್ ಕಳುಹಿಸಿದ್ದ ಲೀಗಲ್ ನೋಟಿಸ್ ತನ್ನ ಜೇಬಿನಲ್ಲಿಯೇ ಇಟ್ಟುಕೊಂಡು ಮರಕ್ಕೆ ನೀನು ತೆಗೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು. ಮೃತ ರೈತನ ಮನೆಗೆ ತಹಶೀಲ್ದಾರ್ ಮತ್ತು ಸಹಾಯಕ ಕೃಷಿ…

Read More

ಬೆಂಗಳೂರು: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್.ಎಸ್. ಬೊಮ್ಮಾಯಿರವರು ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದರು. ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮೂಲಕ 59 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ವಿಷಯವನ್ನು ಹಾಗೂ ಅರ್ಕಾವತಿ ಬಡಾವಣೆ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಕುರಿತು ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು “ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತವನ್ನು ಪುನರ್ ಸ್ಥಾಪಿಸಿದ್ದು, ಎಲ್ಲಾ ಅಧಿಕಾರವನ್ನು ನೀಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲಾ ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಬೊಮ್ಮಾಯಿ ಘೋಷಿಸಿದರು. ಹೈಕೋರ್ಟ್ ನ್ಯಾಯಾಧೀಶರೇ ಲೋಕಾಯುಕ್ತವನ್ನು ಪುನಃ ಆರಂಭಿಸಿ ಎಸಿಬಿ ಯನ್ನು ಮುಚ್ಚುವಂತೆ ಆದೇಶ ನೀಡಿದ್ದಾರೆ. ತನಿಖೆ ಬಾಕಿಯಿರುವ ಪ್ರಕರಣಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದಲೇ ಎಸಿಬಿ…

Read More

ರೈಲ್ವೆ ಹಳಿಗಳಲ್ಲಿ ನಿಂತು ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಿಸುತ್ತಿದ್ದ ವೇಳೆ ಇಬ್ಬರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ದೆಹಲಿಯ ಕಾಂತಿ ನಗರಲ್ಲಿ ನಡೆದಿದೆ. ಮೃತರನ್ನು ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ ವಂಶ್ ಶರ್ಮಾ (23) ಮತ್ತು ಸೇಲ್ಸ್ಮ್ಯಾನ್ ಮೋನು (20) ಎಂದು ಗುರುತಿಸಲಾಗಿದೆ. ಇಬ್ಬರೂ ಕಾಂತಿ ನಗರದ ನಿವಾಸಿಗಳಾಗಿದ್ದಾರೆ. ಯುವಕರು ಮೊಬೈಲ್ ನಲ್ಲಿ ಕಿರುಚಿತ್ರಗಳನ್ನು ಚಿತ್ರೀಕರಿಸುತ್ತಿರುವ ಹವ್ಯಾಸಹೊಂದಿದ್ದರು. ಆಗಾಗ ಲೈವ್ ವಿಡಿಯೊಗಳನ್ನು ಮಾಡಲು ರೈಲ್ವೆ ಹಳಿಗಳ ಬಳಿ ಬರುತ್ತಿದ್ದರು ಎಂಬುದು ವಿಷಯ ತಿಳಿದುಬಂದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 22 ರಂದು ಈ ಘಟನೆ ನಡೆದಿದ್ದು, ಹಳೆ ದೆಹಲಿ ರೈಲ್ವೆ ನಿಲ್ದಾಣದ ಶಹದಾರ ಪೊಲೀಸ್ ಠಾಣೆಗೆ ಸಂಜೆ 4.35 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ.. ರೈಲ್ವೆ ಹಳಿ ಮೇಲೆ ಅವರ ಮೊಬೈಲ್ ಗಳು  ಕೂಡ ಪತ್ತೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ತುರುವೇಕೆರೆ: ತಾಲೂಕು ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷರಾಗಿ ಸೂಳೆಕೆರೆ ಮೋಹನ್ ಕುಮಾರ್ ಅವರನ್ನು ಮಾಜಿ ಶಾಸಕ ಎಂ ಟಿ ಕೃಷ್ಣಪ್ಪನವರು ಆಯ್ಕೆ ಮಾಡಿ ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ನೂತನವಾಗಿ ಆಯ್ಕೆಯಾದ ಸೂಳೆಕೆರೆ ಮೋಹನ್ ಕುಮಾರ್, ಕ್ಷೇತ್ರ ಅಭಿವೃದ್ಧಿಯಾಗಲು ಇರುವ ಅವಕಾಶಗಳನ್ನು ನಾವುಗಳು ಮೈಮರೆಯಬಾರದು, ಜೆಡಿಎಸ್ ಗೆ ಮತ ನೀಡುವ ಮೂಲಕ ಜೆ ಡಿ ಎಸ್ ಪಕ್ಷವನ್ನು ಬಲಿಷ್ಠಗೊಳಿಸಿ ಜೊತೆಗೆ ಚುನಾವಣಾ ಸಮಯದಲ್ಲಿ ಕೆಲವು ಆಸೆ ಆಮಿಷ ತೋರಿಸುತ್ತಾರೆ. ಯಾವುದೇ ಕಾರಣಕ್ಕೂ ಅಂಥವುಗಳಿಗೆ ಮಣೆ ಹಾಕದೆ ಈ ಬಾರಿ ಎಂ.ಟಿ.ಕೃಷ್ಣಪ್ಪನವರನ್ನು ತಾಲೂಕಿನ ಶಾಸಕರನ್ನಾಗಿ ಆಯ್ಕೆ ಮಾಡುವುದು ನಮ್ಮೆಲ್ಲರ ಗುರಿ ಎಂದರು. ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾದ ಗೋಣಿ ತುಮಕೂರು ನಾಗೇಂದ್ರ, ಸೂಳೆಕೆರೆ ಶಂಕರೇಗೌಡ, ಮಂಜುನಾಥ್ . ವೆಂಕಟೇಶ್, ಚಂದ್ರಣ್ಣ, ಗೋಣಿ ತುಮಕೂರು ಮಂಜು, (ಜಲ್ಲಿ) ಮಾದಿಹಳ್ಳಿ ಮಲ್ಲಿಕಾ, ಕಾಂತಣ್ಣ, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ರಾಘವೇಂದ್ರ ನಗರದ ಕಿರಣ್, ಕಲ್ಕೆರೆ ಅವಿನಾಶ್, ಇನ್ನು ಅನೇಕ ಮುಖಂಡರುಗಳು…

Read More

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ.1 ಮಾಡುತ್ತೇವೆ. ಮುಂದಿನ 5 ವರ್ಷ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಅಮಿತ್ ಶಾ, ಸಂಡೂರಿನ ಕುಮಾರಸ್ವಾಮಿ ದೇವರಿಗೆ ನನ್ನ ನಮಸ್ಕಾರಗಳು . ಕಾಂಗ್ರೆಸ್ ಜೆಡಿಎಸ್ ಎರಡೂ ಪರಿವಾರವಾದಿ ಪಕ್ಷಗಳು. ಪರಿವಾರವಾದಿ ಪಕ್ಷಗಳಿಂದ ಬಡವರ ಕಲ್ಯಾಣವಾಗುವುದಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಕರ್ನಾಟಕ ಕಾಂಗ್ರೆಸ್ ನ ಹೈಕಮಾಂಡ್ ಗೆ ಎಟಿಎಂ ಆಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕರ್ನಾಟಕ ದೆಹಲಿಯ ಎಟಿಎಂ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಪಿಎಫ್ ಐ ಸಂಘಟನೆ ನಿಷೇಧ ಮಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಪಿಎಫ್ ಐ ಮೇಲಿನ ಕೇಸ್ ಗಳನ್ನ ಹಿಂಪಡೆದರು. ಹಲವು ಬಾರಿ ಪಾಕ್ ನಿಂದ ದಾಳಿಯಾದರೂ ಯುಪಿಎ ಮೌನ ವಹಿಸಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಳೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ . ವೈರಿ…

Read More

ನಕಲಿ ಪ್ರಮಾಣಪತ್ರಗಳನ್ನು ತೋರಿಸಿ ಲೈಂಗಿಕ ಉದ್ದೀಪನ ಮದ್ದುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಎಸ್‌ಟಿಎಫ್ ತಂಡ ಬಂಧಿಸಿದೆ. ಉತ್ತರ ಪ್ರದೇಶದ ಪ್ಯಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೊರಾದಾಬಾದ್‌ನ ಧರ್ಮ ಸಿಂಗ್, ಧ್ಯಾನ್ ಸಿಂಗ್, ವೀರ್ ಸಿಂಗ್ ಮತ್ತು ಸಂಭಾಲ್‌ನ ಲಾಲ್ ಸಿಂಗ್ ಅಲಿಯಾಸ್ ಗುಲಾಬ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪೊಲೀಸರು ಅವರಿಂದ ನಾಲ್ಕು ಮೊಬೈಲ್ ಫೋನ್, ನಗದು ಪುಸ್ತಕ, ಎರಡು ನಕಲಿ ಪ್ರಮಾಣಪತ್ರಗಳು, ಆಯುರ್ವೇದ ಮಾತ್ರೆ ತುಂಬಿದ 22 ಸಣ್ಣ ಬಾಟಲಿಗಳು ಮತ್ತು 2,640 ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕಲಿ ಕಾಮೋತ್ತೇಜಕ ಔಷಧಗಳನ್ನು ಮಾರಾಟ ಮಾಡುವ ಹೆಚ್ಚಿನ ಗ್ಯಾಂಗ್‌ಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ ಎಂದು ಎಸ್‌ಟಿಎಫ್ ಹೆಚ್ಚುವರಿ ಎಸ್‌ಪಿ ವಿಶಾಲ್ ವಿಕ್ರಮ್ ಹೇಳಿದ್ದಾರೆ. ಅಕ್ರಮ ಲೈಂಗಿಕ ಉತ್ತೇಜಕಗಳನ್ನು ಮಾರಾಟ ಮಾಡುವ ಗ್ಯಾಂಗ್ ಬಗ್ಗೆ ತನಿಖಾ ತಂಡಕ್ಕೆ ಸುಳಿವು ಸಿಕ್ಕಿದೆ. “ನಾವು ಅವರನ್ನು ಬಲೆಯ ಮೂಲಕ ಹಿಡಿದೆವು. ಅಪರಾಧಿಗಳು ಸೈಬರ್ ಕೆಫೆಯ ಮಾಲೀಕರಿಗೆ 750 ರೂಪಾಯಿ…

Read More

ಉಡುಪಿ ಜಿಲ್ಲೆಯ ಮಣಿಪಾಲದ ಹೆರ್ಗ ಗ್ರಾಮದ ಸಮೀಪ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದ ಘಟನೆ ನಡೆದಿದೆ. ಲಾಡ್ಜ್‌ನ ಮ್ಯಾನೇಜರ್ ಸಂಪತ್’ಕುಮಾರ್ ಮತ್ತು ರೂಮ್’ಬಾಯ್ ದಿನೇಶ್ ಲಾಡ್ಜ್‌ನಲ್ಲಿ ಅಕ್ರಮ  ಚಟುವಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ. ಇನ್ನು ಎರಡು ಪ್ರತ್ಯೇಕ ಕೊಠಡಿಗಳಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಪೊಲೀಸರು ವಶಕ್ಕೆ  ಪಡೆದಿದ್ದಾರೆ. ಬಂಧಿತ ಆರೋಪಿಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರಕ್ಕೆ ಪೋಲಿಸ್ ಅಧಿಕಾರಿಯೊಬ್ಬರು ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಥಣಿಯಲ್ಲಿ ಪಿಎಸ್ಐ ಆಗಿದ್ದ ಸಂದರ್ಭದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದು, ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬಿಸನಕೊಪ್ಪ ಈಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆಯೇ ಬಸವರಾಜ ತಮ್ಮ ಪೊಲೀಸ್ ವೃತ್ತಿ ತೊರೆದು ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಸದ್ಯ ಅಥಣಿ ಮತಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ನಿರ್ಧರಿಸಿರುವ ಅವರು ಈಗಾಗಲೇ ತಮ್ಮ ಸಿಪಿಐ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಡಿಸಿಎಂ ಲಕ್ಷಣ ಸವದಿ, ಶಾಸಕ ಮಹೇಶ್ ಕುಮಠಳ್ಳಿ ಅವರಂತಹ ಘಟಾನುಘಟಿ ರಾಜಕಾರಣಿಗಳನ್ನು ಹೊಂದಿರುವ ಅಥಣಿ ಕ್ಷೇತ್ರಕ್ಕೆ ಸದ್ಯ ಖಡಕ್ ಪೊಲೀಸ್ ಅಧಿಕಾರಿ ಅಥಣಿಯ ಸಿಂಗಂ ಎಂದೇ ಖ್ಯಾತಿ ಹೊಂದಿರುವ ಬಸವರಾಜ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು ಚುನಾವಣೆಯ ಕಾವು ರಂಗೇರುವಂತೆ ಮಾಡಿದೆ. ಇನ್ನೂ ಬಸವರಾಜ ಬಿಸನಕೊಪ್ಪ ಮೂಲತಃ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದವರಾಗಿದ್ದು,…

Read More

ಡಾ.ಬಿ.ಆರ್. ಅಂಬೇಡ್ಕರ್ ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರ ಏಳಿಗೆಗೆ ದುಡಿದ ಮಹಾನಾಯಕ, ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ್ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಮಾಜಿ ಸಂಸದರು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ  ಗುರುವಾರ ರಂದು ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಪುತ್ಥಳಿ ಹಾಗೂ ಭವನ ಅನಾವರಣಗೊಳಿಸಿ ಮಾತನಾಡಿದರು. ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಸಾಗಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಅವರು ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮೀಸಲಾತಿಯಲ್ಲಿ ಅನುಕೂಲ ಕಲ್ಪಿಸುವಂತೆ ರಚನೆ ಮಾಡಿದ್ದಾರೆ ಡಾ ಬಿ ಆರ್ ಅಂಬೇಡ್ಕರ್ ಮಹಾನ್ ವ್ಯಕ್ತಿ ಎಂದರು. ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ…

Read More