Subscribe to Updates
Get the latest creative news from FooBar about art, design and business.
- ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ: ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
- ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
- ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
- ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
Author: admin
ತುಮಕೂರು: ತುಮಕೂರು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್, (ಭಾ.ಆ.ಸೇ.) ISDA Infracon National Awards — 2025 (IINA) ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮಹತ್ವದ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಬೇಕಾದ ಭೂಸ್ವಾಧೀನ ಪ್ರಕ್ರಿಯೆಗೆ ಇವರು ತೆಗೆದುಕೊಂಡ ಕ್ರಮಗಳಿಗೆ ಈ ಪ್ರಶಸ್ತಿ ಲಭಿಸಿದೆ. ತುಮಕೂರು ಜಿಲ್ಲೆಯ ಸರಾಸರಿ ವಾರ್ಷಿಕ ಮಳೆಯ ಪ್ರಮಾಣ ಕೇವಲ 590 ಮಿ.ಮೀ. ಆಗಿದ್ದು, ಈ ಹಿನ್ನಲೆಯಲ್ಲಿ, ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿರುವುದು ಅತ್ಯವಶ್ಯಕವಾಗಿದ್ದು. ಈ ಸಮಸ್ಯೆಯ ತೀವ್ರತೆಯನ್ನು ಅರಿತುಕೊಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿರುತ್ತಾರೆ. ಎತ್ತಿನಹೊಳೆ ಯೋಜನೆಗೆ ಅವಶ್ಯಕವಾಗಿ ಬೇಕಾದ 1335 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು, ರೂ. 365 ಕೋಟಿ ಪರಿಹಾರ ಹಣವನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಭೂ-ಮಾಲೀಕರಿಗೆ ಪಾರದರ್ಶಕವಾಗಿ ಪಾವತಿಸಿ ಭೂ ಸ್ವಾಧೀನಕ್ಕೆ ಹೆಚ್ಚಿನ ಒತ್ತು ನೀಡಿರುತ್ತಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 75ಕ್ಕೂ ಹೆಚ್ಚು ಪರಿಶೀಲನಾ ಸಭೆಗಳನ್ನು ಕೈಗೊಂಡು,…
ತುಮಕೂರು: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆ ಆಗಿದೆ. ಅಲ್ಲದೆ ಎರಡು ಪಕ್ಷಗಳಿಗೂ ಇದು ಅನುಕೂಲವಾಗಿದೆ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟ ಕುರಿತು ಬಗೆಹರಿಸುವ ದೃಷ್ಟಿಯಿಂದ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಆಗಿರುವ ಅವರು ರೈತರೊಂದಿಗೆ ಕುಳಿತು ಚರ್ಚಿಸುವ ಬಗೆಹರಿಸುವ ಕುರಿತು ಚಿಂತನೆ ನಡೆಸಿಲ್ಲ. ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು ಎಂದು ಹೇಳಿದರು. “ಜನರೊಂದಿಗೆ ಜನತಾದಳ” ಮೊದಲನೇ ದಿನದ ಪ್ರವಾಸಕ್ಕೂ ಮೊದಲು ಪರಮಪೂಜ್ಯ ಡಾ.ಶಿವಕುಮಾರ ಶ್ರೀಗಳ ತಪೋಭೂಮಿ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಪಕ್ಷದ ಸದಸ್ಯತಾ ಅಭಿಯಾನದ ನಿರೀಕ್ಷಿತ ಗುರಿ ಸಾಧಿಸಲು ಲಿಂಗೈಕ್ಯ ಶ್ರೀಗಳ…
ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಒಬ್ಬ ಮಾತ್ರವೇ ಬದುಕುಳಿದಿದ್ದಾರೆ. ಅಹಮದಾಬಾದ್‌ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಈ ಅವಘಡದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಮಾತ್ರವಲ್ಲದೇ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 272 ಡಿಎನ್ ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ — ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 – [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಡಿಎನ್ ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್…
ಪುಣೆ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಸಾವನ್ನಪ್ಪಿದ್ಧಾರೆ. ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಸೇರಿದಂತೆ ಪೊಲೀಸರು ಮತ್ತು ವಿಪತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ. ಇಲ್ಲಿಯವರೆಗೆ ಎಂಟು ಜನರನ್ನು ರಕ್ಷಿಸಲಾಗಿದ್ದು, ಇಬ್ಬರು ಮಹಿಳೆಯರು ಇನ್ನೂ ಸೇತುವೆಯ ಕೆಳಗೆ ಸಿಲುಕಿಕೊಂಡಿದ್ದಾರೆ. ಪುಣೆ ಮತ್ತು ಪಿಂಪ್ರಿ ಚಿಂಚ್ ವಾಡ್ ಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದರೂ, ಪುಣೆ ಗ್ರಾಮೀಣ ಪ್ರದೇಶದ ಮಾವಲ್ ಪ್ರದೇಶದಲ್ಲಿ ಸೇತುವೆ ಕುಸಿತ ಸಂಭವಿಸಿದೆ, ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government e–Marketing) ಪೋರ್ಟಲ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತ ಟೆಂಡರುದಾರರು GeM ಪೋರ್ಟಲ್ ಮೂಲಕ ಜೂನ್ 16ರ ಮಧ್ಯಾಹ್ನ 3 ಗಂಟೆಯೊಳಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.08137–283346ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3 ವರ್ಷಗಳ ಅವಧಿಗೆ ಘನತ್ಯಾಜ್ಯ ನಿರ್ವಹಣೆ, ಸ್ವಚ್ಛ ಸರ್ವೇಕ್ಷಣೆ, ತ್ಯಾಜ್ಯ ನೀರು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪಿ(ಎಸ್ ಹೆಚ್ ಜಿ)ನ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ಅರ್ಜಿ ನಮೂನೆ, ಆಯ್ಕೆ ಪ್ರಕ್ರಿಯೆ, ಸಲ್ಲಿಸಬೇಕಾದ ಅಗತ್ಯ ದಾಖಲೆ, ಷರತ್ತು ಮತ್ತು ನಿಯಮ, ವೇತನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಜಾಲತಾಣ http://tumakurucity.mrc.gov.in/en ನಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವವರು ‘ನಲ್ಮ್–ಡೇ’ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಬೇಕು. ಜಾಲತಾಣದಲ್ಲಿ ಲಭ್ಯವಿರುವ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರೊಳಗಾಗಿ ಇ-ಮೇಲ್ ವಿಳಾಸ itstaff_ulb_tumkur@yahoo.com ಗೆ ಸಲ್ಲಿಸಬಹುದು. ಆಸಕ್ತ ಎಸ್ ಹೆಚ್ ಜಿ ಸದಸ್ಯರು ಅರ್ಜಿಯೊಂದಿಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಅರ್ಹತಾ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ(ಎಂಪಾನೆಲ್) ದಾಖಲೆ, ಸ್ವ–ಸಹಾಯ ನೋಂದಣಿ ದಾಖಲೆ, ಶೈಕ್ಷಣಿಕ ಅರ್ಹತಾ ದಾಖಲೆ, NULM–DAY ಅವರಿಂದ ಪಡೆದ ಹಿಂಬರಹ…
ತುಮಕೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಕಾಡುಗೊಲ್ಲ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಅರಿವು–ಶೈಕ್ಷಣಿಕ ನೇರ ಸಾಲ(ಹೊಸದು), ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕುಗಳ ಸಹಯೋಗದೊಂದಿಗೆ), ಸಾವಲಂಬಿ ಸಾರಥಿ ಹಾಗೂ ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ತುಮಕೂರು ಒನ್ ಸೇವಾಕೇಂದ್ರಗಳ ಮೂಲಕ ಜುಲೈ 2ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂ.ಸಂ. 0816–2005008ನ್ನು ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ತುಮಕೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು–ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ತುಮಕೂರು ಒನ್ ಸೇವಾಕೇಂದ್ರಗಳ ಮೂಲಕ ಜೂನ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kmmd.karnataka.gov.in ಅಥವಾ ದೂ.ಸಂ.080-22374832, 8050770004, 8050770005 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ರಾತ್ರಿಯಾದರೆ ಸಾಕು ಕುಡುಕರ ಅಡ್ಡವಾಗಿಬಿಡುತ್ತೆ. ಇದರಿಂದ ಮಹಿಳೆಯರಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಕೊರಟಗೆರೆ ಶಾಖಾ ಗ್ರಂಥಾಲಯ ಈಗ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ. ರಾತ್ರಿಯಾದರೆ ಸಾಕು ಮಧ್ಯಪಾನ, ಧೂಮಪಾನ, ಗುಟ್ಕ ಇತರೆ ಅನೈತಿಕ ಚಟವಟಿಕೆ ತಾಣವಾಗಿದ್ದು, ರಾತ್ರಿ ಅಪರಿಚಿತ ವ್ಯಕ್ತಿಗಳು ಗುಟ್ಕ ವಸ್ತುಗಳನ್ನು ಸೇವಿಸಿ ಗ್ರಂಥಾಲಯ ಮೆಟ್ಟಿಲು ಮತ್ತು ನೆಲದ ಮೇಲೆ ಉಗುಳಿರುವುದು ದುರ್ವಾಸನೆ ಬೀರುತ್ತಿದ್ದು ಅನಾರೋಗ್ಯಕ್ಕೆ ಎಡೆಮಾಡಿ ಕೊಟ್ಟಿದೆ. ಗುಟ್ಕ ವಸ್ತು ತಿಂದು ಉಗುಳಿದ ಮತ್ತು ಮದ್ಯಪಾನ ಸೇವಿಸಿ, ವಾಂತಿಯನ್ನು ಮಾಡಿರುವುದನ್ನ ಗ್ರಂಥಾಲಯ ಸಿಬ್ಬಂದಿಗಳು ಸ್ವಚ್ಚತೆ ಮಾಡುವಂತಹ ಸ್ಥಿತಿ ಸೃಷ್ಟಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ, ಇಂತಹ ಘಟನೆಗಳು ಮರುಕಳಿಸುತ್ತೀವೆ ಎಂದು ಓದುಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿಯೇ ಈ ಘಟನೆ: ಸಮಾಜ ಕಲ್ಯಾಣ ಇಲಾಖೆ ಬಳಿ ಇರುವ ಸಿಸಿ ಟಿವಿಯು ಗ್ರಂಥಾಲಯವನ್ನು ವೀಕ್ಷಿಸಲಿದೆ. ಸಿಸಿ ಟಿವಿ ಭಯವಿಲ್ಲದೇ…
ತುಮಕೂರು: ಜಿಲ್ಲೆಯಲ್ಲಿ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಂಪೂರ್ಣವಾಗಿ ಸಹಕರಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಗುರುವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿ ನೀಡಿದ ನಂತರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತಿ ತಿಂಗಳು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ–ಕಾಲೇಜು ಸಮಯದಲ್ಲಿ ಸೂಕ್ತ ಬಸ್ ಸೇವೆ ಲಭ್ಯವಿಲ್ಲದ ಕಾರಣ ವಿದ್ಯಾರ್ಥಿನಿಯರು ಶಕ್ತಿ ಯೋಜನೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್…