Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತುಮಕೂರು: ಮಹಾನಗರಪಾಲಿಕೆಯ 2026–27ನೇ ಸಾಲಿನ ಆಯವ್ಯಯವನ್ನು ಸಿದ್ಧಪಡಿಸುವ ಕುರಿತು ಸಲಹೆ ಸೂಚನೆ ನೀಡಲು ಜನವರಿ 20ರಂದು ಬೆಳಗ್ಗೆ 11.30 ಗಂಟೆಗೆ ಮಹಾನಗರಪಾಲಿಕೆ ಹೊಸ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಸಭೆಗೆ ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಅಮೂಲ್ಯವಾದ ಸಲಹೆಗಳನ್ನು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನಕ್ಷಣಕ್ಷಣದಸುದ್ದಿಗಳನ್ನುನಿರಂತರವಾಗಿಪಡೆಯಲುನಿಮ್ಮವಾಟ್ಸಾಪ್ಗ್ರೂಪ್ಗೆ 8123382149 ಸಂಖ್ಯೆಯನ್ನುಸೇರಿಸಿ. ಗ್ರೂಪ್ಗೆಜಾಯಿನ್ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ಶಾಮಿಯಾನ ಮತ್ತು ಫ್ಲವರ್ ಡೆಕೋರೇಷನ್ ಅಂಗಡಿಯ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದ ಪ್ರಕರಣವನ್ನು ಭೇದಿಸಿರುವ ಜಿಲ್ಲೆಯ ಪೊಲೀಸರು ನಾಲ್ವರು ಅಂತರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಕೆ.ವಿ.ಅಶೋಕ್ ಅವರು ತಮಿಳುನಾಡಿನ ಹೊಸೂರು ಬತ್ತಲಪಲ್ಲಿಯ ಸತೀಶ್ ಕುಮಾರ್ (40), ಸೇಲಂ ತಾಲೂಕಿನ ಕಡತ್ತೂರು ಗ್ರಾಮದ ಕೇಶವನ್ (43), ಸೋಲಂದಡಿ ತಾಲೂಕಿನ ದಿಂಡಲೋನ ಕವಿತೇಶ್ವರನ್ ಹಾಗೂ ದಿಂಡಗಲ್ ಜಿಲ್ಲೆಯ ಅರುಣ್ ಪ್ರಶಾಂತ್ (26) ಎಂಬುವರೇ ಬಂಧಿತ ಆರೋಪಿಗಳಾಗಿದ್ದು, ತಿಪಟೂರು ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ, ಸಿರಾ, ಹಂದನಕೆರೆ, ತುಮಕೂರಿನ ಜಯನಗರ ಪೊಲೀಸರು ಹಾಗೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳ ಸಹಕಾರದೊಂದಿಗೆ ಆರೋಪಿಗಳನ್ನು ಸೆರೆಹಿಡಿದಿರುವುದಾಗಿ ತಿಳಿಸಿದರು. ಕೊಲೆಯಾದ ಮಂಜುನಾಥ್ ಅವರ ಸಹೋದರ, ಕೃತ್ಯ ನಡೆದ ದಿನ ರಾತ್ರಿಯೇ ಹುಳಿಯಾರು ಠಾಣೆಗೆ ಹಾಜರಾಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಡಿಷನಲ್ ಎಸ್ಪಿಗಳಾದ ಪುರುಷೋತ್ತಮ್, ಗೋಪಾಲ್…
ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ವಿವರ: ಕೊಲೆಯಾದ ಮಹಿಳೆಯನ್ನು ದ್ರಾಕ್ಷಾಯಿಣಿ (55) ಎಂದು ಗುರುತಿಸಲಾಗಿದೆ. ಈ ಘಟನೆಯು ಬೆಂಗಳೂರು ಉತ್ತರದ ಕುದುರೆಗೆರೆ ಗ್ರಾಮದ ಬಳಿ ನಡೆದಿದೆ. ದ್ರಾಕ್ಷಾಯಿಣಿ ಅವರು ತಮ್ಮ ಮೊಮ್ಮಗನ ಶಾಲೆಗೆ ಮಧ್ಯಾಹ್ನದ ಊಟವನ್ನು ನೀಡಿ ವಾಪಸ್ ಮನೆಗೆ ಮರಳುತ್ತಿದ್ದಾಗ ಈ ದಾಳಿ ನಡೆದಿದೆ. ನಡೆದಿದ್ದೇನು? ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿ, ಏಕಾಏಕಿ ಆಕೆಯನ್ನು ಅಡ್ಡಗಟ್ಟಿದ್ದಾನೆ. ಯಾವುದೇ ಮುನ್ಸೂಚನೆ ಇಲ್ಲದೆ ಮಚ್ಚಿನಿಂದ ಆಕೆಯ ಕತ್ತಿನ ಭಾಗಕ್ಕೆ ಬಲವಾಗಿ ಏಟು ನೀಡಿದ್ದಾನೆ. ದಾಳಿಯ ತೀವ್ರತೆಗೆ ಮಹಿಳೆ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಮಚ್ಚನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕುಟುಂಬದ ಶಂಕೆ: ಈ ಕೊಲೆಯು ಪೂರ್ವಯೋಜಿತ ಎಂದು ಹೇಳಲಾಗುತ್ತಿದೆ. ಮೃತ ಮಹಿಳೆಯ ಕುಟುಂಬದವರು ತಮ್ಮ ಸಂಬಂಧಿಕರೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆಯನ್ನು…
ಧಾರವಾಡ: ಪತ್ನಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬರು ಜೈಲಿನ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಮೃತರ ವಿವರ: ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ. ಪತ್ನಿಯ ಕೊಲೆ ಪ್ರಕರಣದಲ್ಲಿ ಈತನಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಕಳೆದ ಏಳು ವರ್ಷಗಳಿಂದ ಈಶ್ವರಪ್ಪ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಘಟನೆ ಹಿನ್ನೆಲೆ: ಜೈಲಿನ ಆವರಣದಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಈಶ್ವರಪ್ಪ ನೇಣು ಬಿಗಿದುಕೊಂಡಿದ್ದಾರೆ. ಕೆಲಸ ಮುಗಿದ ನಂತರ ಎಲ್ಲ ಕೈದಿಗಳು ತಮ್ಮ ಸೆಲ್‌ಗಳಿಗೆ ಮರಳಿದ್ದರು. ಆದರೆ, ಈಶ್ವರಪ್ಪ ಹಿಂದಿರುಗಿರಲಿಲ್ಲ. ಇದರಿಂದ ಅನುಮಾನಗೊಂಡ ಜೈಲು ಸಿಬ್ಬಂದಿ ಹುಡುಕಾಟ ನಡೆಸಿದಾಗ, ನಿರ್ಮಾಣ ಹಂತದ ಕಟ್ಟಡದಲ್ಲಿ ಹಗ್ಗದ ಸಹಾಯದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನಿಖೆ ಮತ್ತು ಕ್ರಮ: ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಧಾರವಾಡ ಉಪನಗರ ಪೊಲೀಸ್…
ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ಬಗ್ಗೆ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. “ನನ್ನ ಮತ್ತು ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ಯಾರೂ ಹೆಚ್ಚಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಉಂಟಾದ ಕುತೂಹಲಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕರನ್ನು ಭೇಟಿಯಾಗುವುದು ಮತ್ತು ರಾಜಕೀಯ ವಿಚಾರಗಳನ್ನು ಚರ್ಚಿಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ನಮ್ಮ ನಡುವೆ ನಡೆದ ಚರ್ಚೆಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಅದು ನಮಗೆ ಸಂಬಂಧಿಸಿದ ವಿಚಾರ ಎಂದು ತಿಳಿಸಿದರು. ಮತ್ತೆ ಗೂಡಾರ್ಥದ ಪೋಸ್ಟ್: ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ. “ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗಳು ವಿಫಲವಾಗುವುದಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ. ಈ ಮಾತುಗಳು ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಮುಖ್ಯಮಂತ್ರಿ ಸ್ಥಾನದ ಪೈಪೋಟಿಯ ಹಿನ್ನೆಲೆಯಲ್ಲಿ ಹಲವು…
ರಾಘವೇಂದ್ರ ಅಡಿಗ ಎಚ್ಚೆನ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್‍ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮಾಡಿದೆ. ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ ಬಾಕ್ಸ್ ಆಫೀಸ್‍ನಲ್ಲಿ ದೊಡ್ಡ ಗಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಲೋಕೇಶ್ ಕನಕರಾಜು ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲಕ್ಕೆ ತೆರೆಬಿದ್ದಿ. ಕಳೆದ ಕೆಲ ಸಮಯದ ಹಿಂದಷ್ಟೇ ಲೋಕೇಶ್ — ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮವಾಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಎಂದಿದ್ದಾರೆ. ‘ಪುಷ್ಪ’ ಸಿನಿಮಾದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ…
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಮಾದೇನಹಳ್ಳಿ ತಾಂಡದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಗುಣಶೀಲ ಅವರು ಬೇರೆಡೆ ವರ್ಗಾವಣೆಯಾದ ಹಿನ್ನೆಲೆ ಗ್ರಾಮಸ್ಥರು ಬೀ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಮಾದೇನಹಳ್ಳಿ ತಾಂಡದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಸುಮಾರು 14 ವರ್ಷದಿಂದ ಮುಖ್ಯ ಶಿಕ್ಷಕಿ ಗುಣಶೀಲ ಅವರು ಈ ಗ್ರಾಮದಲ್ಲಿರುವ ಬಡ ವಿದ್ಯಾರ್ಥಿಗಳಿಗೆ ಪಾಠವನ್ನ ಹೇಳಿ ಕೊಟ್ಟಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುತ್ತಿರುವ ಉದಾಹರಣೆಗಳಿವೆ ಎಂದು ಇಲ್ಲಿನ ಪೋಷಕರು ತಿಳಿಸಿದ್ದಾರೆ. ಮುಖ್ಯ ಶಿಕ್ಷಕಿ ವರ್ಗಾವಣೆ ಆಗಿರುವುದು ಇಲ್ಲಿನ ಗ್ರಾಮಸ್ಥರಿಗೆ ನೋವು ತಂದಿದೆ ಎಂದು ಪೋಷಕರು ತಮ್ಮ ಆಳಲನ್ನ ತೊಡಿಕೊಂಡರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಣ್ಣ ಮಾತನಾಡಿ, ಮುಖ್ಯ ಶಿಕ್ಷಕಿ ಗುಣಶೀಲ ಅವರು 14 ವರ್ಷದಿಂದ ನಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಮ್ಮ ಬಡ ಮಕ್ಕಳಿಗೆ ಭೋದನೆ ಮಾಡುತ್ತಿದ್ದರು. ಇಲ್ಲಿ ಇವರು ಕೇವಲ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರಲಿಲ್ಲ ನಮ್ಮ ಗ್ರಾಮದ ಹೆಣ್ಣು ಮಗಳು ತರ…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್, ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲಾಗುವುದು. ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುತ್ತಿದ್ದು, ಆಸಕ್ತರು ಜನವರಿ 17ರ ಸಂಜೆ 4.30 ಗಂಟೆಯೊಳಗಾಗಿ ದೂ.ವಾ.ಸಂ. 0821–2515944ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಪೊಲೋ ಫಾರ್ಮಸಿ, ಇಂಡ್ ಆಟೋ ಫಿಲ್ಟರ್ಸ್, ಪಿಟ್ಟಿ ಇನ್‌ಡಸ್ಟ್ರೀಸ್ ಪ್ರೈ. ಲಿ., ವಾಹಿನಿ ಪೈಪ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಜನವರಿ 16ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ, ಡಿಪ್ಲೊಮಾ (ಮೆಕ್ಯಾನಿಕಲ್), ಡಿ.ಫಾರ್ಮ್ ಹಾಗೂ ಬಿ.ಫಾರ್ಮ್, ಬಿ.ಇ ಹಾಗೂ ಬಿ.ಇ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಕನಿಷ್ಠ 5 ವರ್ಷ ಅನುಭವ) ಪಾಸಾದ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಜನವರಿ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು–572102 ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಶಿರಾ: ತಾಲೂಕಿನ ಚಿಕ್ಕಗೊಳ್ಳ ಕದಿರೇಕಂಬದಹಳ್ಳಿಯಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ನೂತನ ದೇವಸ್ಥಾನ ಮತ್ತು ಶ್ರೀ ನವಗ್ರಹ, ಶ್ರೀ ನಾಗದೇವತಾ, ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ವಿಮಾನ ಕಳಸ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವು ಜ.22 ರಿಂದ 25 ರವರೆಗೆ ನಡೆಯಲಿದೆ. ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಸೇವಾ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಜ.22, 23 ಮತ್ತು 24ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿವೆ. 24ರಂದು ರಾತ್ರಿ 10 ಗಂಟೆಗೆ ನೂತನ ಸ್ಥಿರಬಿಂಬ ಪ್ರತಿಷ್ಠಾಪನಾ ಪಿಂಡಿಕಾ ಪೂಜಾ ವಿಧಿವಿಧಾನ ನಡೆಯಲಿದೆ. ಸಿದ್ಧಲಿಂಗ ಸ್ವಾಮೀಜಿ, ವೀರೇಶಾನಂದರ ಸಾನ್ನಿಧ್ಯದಲ್ಲಿ ಸಾಮೂಹಿಕ ವಿವಾಹ: ಜ.25 ರಂದು ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹಾಗೂ ಶ್ರೀ ರಾಮಕೃಷ್ಣ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಪಾರ್ವತಮ್ಮ ಮುಲ್ಲೇಗೌಡ ಕುಟುಂಬದವರಿಂದ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಮಹಿಳಾ ವೀರಗಾಸೆ ಉತ್ಸವ ಮೆರವಣಿಗೆ: ಜ.25 ರಂದು ಸಂಜೆ ಉತ್ಸವ ನಡೆಯಲಿದ್ದು, ತ್ಯಾಗನಕಟ್ಟೆಯ ನವದುರ್ಗಿ ಮಹಿಳಾ…