Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಲಂಚ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಬಂಧನ. ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಶಾಸಕ ಅಮಿತ್ ರತನ್ ಕೊಟ್‌ಫಾಟಾ ಅವರನ್ನು ವಿಜಿಲೆನ್ಸ್ ಬಂಧಿಸಿದೆ. ಶಾಸಕರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ ಬಂಧಿಸಿದ ಕೆಲವೇ ದಿನಗಳಲ್ಲಿ ಶಾಸಕರ ಬಂಧನವಾಗಿದೆ. ಆಮ್ ಆದ್ಮಿ ಪಕ್ಷದ ಶಾಸಕನ ಬಂಧನದ ಬಗ್ಗೆ ವಿಜಿಲೆನ್ಸ್ ಬ್ಯೂರೋದ ಉನ್ನತ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಮಾಹಿತಿ ನೀಡಿದೆ. ಬುಧವಾರ ಸಂಜೆ ರಾಜಪುರದಿಂದ ಶಾಸಕರನ್ನು ಬಂಧಿಸಲಾಗಿದ್ದು, ಅವರ ಬಂಧನವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಫೆಬ್ರವರಿ 16 ರಂದು ಶಾಸಕರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಬಂಧಿಸಲಾಗಿತ್ತು. 25 ಲಕ್ಷ ಸರಕಾರದ ಅನುದಾನ ಪಡೆಯಲು ರಶೀಮ್ ಅವರು 5 ಲಕ್ಷ ರೂ. ವಿಜಿಲೆನ್ಸ್ ಬ್ಯೂರೋದ ತಂಡವು 4 ಲಕ್ಷ ರೂ.ಗಳೊಂದಿಗೆ ಗಾರ್ಗ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬಿಎಸ್ ವೈಗೆ ಬಿಜೆಪಿ ಅನ್ಯಾಯ ಮಾಡಿದೆ ಅಂತಾರೆ. ನನಗೆ ಕೊಟ್ಟಷ್ಟು ಅವಕಾಶ ಯಾರಿಗೂ ಕೊಟ್ಟಿಲ್ಲ ಬಿಜೆಪಿ ಅವಕಾಶ ಕೊಟ್ಟಿದ್ದಕ್ಕೆ ನಾನು ನಾಲ್ಕು ಬಾರಿ ಸಿಎಂ ಆಗಿದ್ಧೆ. ಸೂರ್ಯ ಚಂದ್ರ ಇರುವವರೆಗೂ ಬಿಜೆಪಿ ಗೆಲುವು ಸಾಧಿಸುತ್ತದೆ. ನಾನು ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡುವೆ ಎಂದರು. ಬಜೆಟ್ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಸಿದ್ದರಾಂಯ್ಯ ಮಾತು ಗಮನಿಸಿದ್ದೇನೆ. ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ಧ ಬಾದಾಮಿ ಕ್ಷೇತ್ರವನ್ನ ಬಿಟ್ಟು ಸಿದ್ಧರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಎಸ್ ವೈ, ಬಾದಾಮಿಯಿಂದ ಸ್ಪರ್ಧಿಸಲು ಸಿದ್ಧರಾಮಯ್ಯಗೆ ಧೈರ್ಯವಿಲ್ಲ. ಗೆದ್ದ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಿಲ್ಲವಾ..? ಜನ ಹೇಗೆ ನಿಮ್ಮನ್ನ ನಂಬುತ್ತಾರೆ. ಬಾದಾಮಿಯಲ್ಲಿ ಸ್ಪರ್ಧಿಸಿದ್ರೆ ಜನರ ಋಣ ತೀರಿಸಬಹುದು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಎಐಸಿಸಿ ಖಜಾಂಚಿ ಪವನ್ ಕುಮಾರ್ ಬೆನ್ಸಾಲ್ ಮಾತನಾಡಿ, ಕೇಂದ್ರ ಸರ್ಕಾರ ಕಾಂಗ್ರೆಸ್ ಸರ್ವಸದಸ್ಯರ ವಿರುದ್ಧ ಪ್ರಜಾಪ್ರಭುತ್ವ ವಿರೋಧಿ ವಿಧಾನಗಳನ್ನು ಬಳಸುತ್ತಿದೆ.ರಾಯಪುರದಲ್ಲಿ ಇಡಿ ತಪಾಸಣೆ ಬಿಜೆಪಿಯ ರಾಜಕೀಯ ಅಜೆಂಡಾ ಎಂದು ಪವನ್ ಕುಮಾರ್ ಬೆನ್ಸಾಲ್ ಹೇಳಿದ್ದಾರೆ. ಕೇಂದ್ರೀಯ ಸಂಸ್ಥೆಗಳು ಬಿಜೆಪಿಯ ರಾಜಕೀಯ ಅಸ್ತ್ರ ಎನ್ನುವುದಕ್ಕೆ ಈ ಡಿ-ಚೆಕ್‌ಗಳೇ ಸಾಕ್ಷಿ. ಇಡಿ ತಪಾಸಣೆಯಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಭಾವನೆಯನ್ನು ತಣಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಜನಸಾಮಾನ್ಯರ ಭಾವನೆಯು ಸಂಪುಟ ಅಧಿವೇಶನದಲ್ಲಿ ಪ್ರತಿಫಲಿಸಲಿದೆ. ರಾಯ್‌ಪುರ ಸಮ್ಮೇಳನವು ದೇಶದ ರಾಜಕೀಯ ಬದಲಾವಣೆಗೆ ವೇದಿಕೆಯಾಗಲಿದೆ ಎಂದು ಪವನ್ ಕುಮಾರ್ ಬೆಂಜಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಗೆಲುವು ಸಾಧಿಸಿದ್ದಾರೆ. ಶೆಲ್ಲಿ ಒಬೆರಾಯ್ 150 ಮತಗಳಿಂದ ಜಯಗಳಿಸಿದರೆ, ಬಿಜೆಪಿಯ ರೇಖಾ ಗುಪ್ತಾ ಅವರು ಬಿಜೆಪಿಯ ಮತಗಳಿಗಿಂತ 3 ಮತಗಳನ್ನು ಪಡೆದರು. ಉಪಮೇಯರ್ ಆಗಿ ಆಮ್ ಆದ್ಮಿ ಪಕ್ಷದ ಆಲೆ ಮುಹಮ್ಮದ್ ಇಕ್ಬಾಲ್ ಆಯ್ಕೆಯಾದರು. ಆಮ್ ಆದ್ಮಿ ಪಕ್ಷ-ಬಿಜೆಪಿ ಸಂಘರ್ಷದಿಂದ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಮೇಯರ್ ಚುನಾವಣೆ ಪೂರ್ಣಗೊಂಡಿದೆ. ಶೆಲ್ಲಿ ಒಬೆರಾಯ್ ದೆಹಲಿ ಪೂರ್ವ ಪಟೇಲ್ ನಗರ ವಾರ್ಡ್‌ನ ಕೌನ್ಸಿಲರ್. ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶೆಲ್ಲಿ ಒಬೆರಾಯ್ ಅವರು ಮೊದಲ ಬಾರಿಗೆ ಸಲಹೆಗಾರರಾಗಿದ್ದಾರೆ. 150 ಮತಗಳ ಬಲ ಹೊಂದಿರುವ ಆಮ್ ಆದ್ಮಿ ಪಕ್ಷ ಸಂಪೂರ್ಣ ಮತಗಳನ್ನು ಪಡೆದುಕೊಂಡಿದೆ. ಆದರೆ ಎದುರಾಳಿ ಅಭ್ಯರ್ಥಿ ರೇಖಾ ಗುಪ್ತಾ ಅವರು ಬಿಜೆಪಿಯ ಪ್ರಬಲ 113 ಮತಗಳಿಗಿಂತ 3 ಮತಗಳನ್ನು ಹೆಚ್ಚು ಪಡೆದರು. ಇಬ್ಬರು ಪಕ್ಷೇತರರು ಹಾಗೂ ಒಬ್ಬ ಕಾಂಗ್ರೆಸ್ ಸದಸ್ಯರ ಮತಗಳು ಬಿಜೆಪಿ ಪಾಲಾಗಿವೆ ಎಂದು ತಿಳಿದುಬಂದಿದೆ. ಒಂಬತ್ತು ಸದಸ್ಯ…
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಡೂರಿಗೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ದೆಹಲಿಯಿಂದ 12.50ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುಮ ಅಮಿತ್ ಶಾ ಸಂಡೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ1.30ಕ್ಕೆ ಸಂಡೂರಿಗೆ ಆಗಮಿಸಲಿದ್ದು, 1.30ರಿಂದ 2.30ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಹಾಗೂ ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೈಕ್ ರಾಲಿ, ರೋಡ್ ಶೋ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ರಾಣಿ ಚನ್ನಮ್ಮ ವೃತ್ತ ಇಲ್ಲವೇ ಸಂಭಾಜಿ ವೃತ್ತದಿಂದ ರೋಡ್ ಶೋಗೆ ಸಿದ್ಧತೆ ಮಾಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇತ್ತೀಚೆಗೆ ಸಾಮಾಜಿಕ ಜಾಲತಾಣ ಹಾಗೂ ಕನ್ನಡ ಚಿತ್ರರಂಗದ ಗಮನ ಸೆಳೆಯುತ್ತಿರುವ ಪಾಲಾರ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಿತ್ರದ ಪ್ರೀಮಿಯರ್ ಶೋಗಳು ಯಶಸ್ವಿಯಾಗಿದ್ದು, ಚಿತ್ರ ವೀಕ್ಷಿಸಿದವರು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 24ರಂದು ಚಿತ್ರಮಂದಿರಕ್ಕೆ ಕಾಲಿಡಲಿರುವ ಪಾಲಾರ್ ಚಿತ್ರ ನೋಡಲು ಸಾಕಷ್ಟು ಜನರು ಕುತೂಹಲದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಕಲಾತ್ಮಕ ಚಿತ್ರಗಳು ಹೆಚ್ಚು ಯಶಸ್ವಿಯಾಗುತ್ತಿದೆ. ನಮ್ಮ ನೆಲಮೂಲದ ಕಥೆಗಳನ್ನು ಜನರು ಹೆಚ್ಚು ಆಕರ್ಷಿತರಾಗಿ ನೋಡುತ್ತಿದ್ದಾರೆ. ಇಂತಹ ಕಥೆಗಳ ಸಾಲಿನಲ್ಲಿ ಪಾಲಾರ್ ಚಿತ್ರ ಕೂಡ ಸ್ಥಾನ ಪಡೆಯಲಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಶೋಷಿತರು ಮೇಲ್ವರ್ಗಗಳ ರಾಜಕೀಯ, ಆರ್ಥಿಕ ಸಾಮರ್ಥ್ಯದ ನಡುವೆ ಸಿಲುಕಿ ಮತ್ತಷ್ಟು ಶೋಷಣೆಗೊಳಪಡುತ್ತಿರುವ ದುಸ್ಥಿತಿಗಳು ಇಂದಿಗೂ ನಮ್ಮ ಸಮಾಜದಲ್ಲಿದೆ. ಅಂತಹ ಘಟನೆಯೊಂದನ್ನು ಪಾಲಾರ್ ಚಿತ್ರ ಹೇಳಲು ಹೊರಟಿದೆ. ಈ ಚಿತ್ರ ಯಶಸ್ವಿಯಾದರೆ ಮುಂದೆ ಇನ್ನಷ್ಟು ಇಂತಹ ಕಥೆಗಳ ಚಿತ್ರಗಳು ತೆರೆಯ ಮೇಲೆ ಬರಲು ಸಾಧ್ಯವಾಗುತ್ತದೆ. ಇದರಿಂದ ಸಾಮಾಜಿಕವಾಗಿಯೂ ಸಾಕಷ್ಟು ಬದಲಾವಣೆಯಾಗುತ್ತದೆ. ಶೋಷಿತರು ಜಾಗೃತರಾದರೆ, ಶೋಷಣೆ ಮಾಡುತ್ತಿರುವವರ ಮನಃಪರಿವರ್ತನೆಯೂ ಆಗುತ್ತದೆ ಅನ್ನೋದು…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂ ದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ.ಎನ್ ಬಿನ್ ನರಸಿಂಹಯ್ಯ (45) ಎಂಬ ಬಡ ರೈತ ಸಾಲಬಾಧೆ ತಾಳಲಾರದೆ ತನ್ನದೇ ಜಮೀನಿನಲ್ಲಿ (ಸರ್ವೇ ನಂಬರ್ 22/2 ರಲ್ಲಿ) ಇರುವ ತುಗಲಿ ಮರಕ್ಕೆ ನೇಣು ಹಾಕಿಕೊಂಡು ಮೃತನಾಗಿದ್ದ ಘಟನೆ ಮಂಗಳವಾರ ನಡೆದಿತ್ತು. ಕೊರಟಗೆರೆ ಕೆನರಾ ಬ್ಯಾಂಕ್ ನಲ್ಲಿ ದಾಳಿಂಬೆ ಬೆಳೆ ಬೆಳೆಯುವ ಸಲುವಾಗಿ ಐದು ಲಕ್ಷ ಸಾಲ, ವಿ ಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ ಒಂದು ಲಕ್ಷ ಸಾಲ, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ ಹೈನುಗಾರಿಕೆಗಾಗಿ 70,000 ಸಾಲವನ್ನು ಮಾಡಿದ್ದರು ಮತ್ತು ಮಗನ ಚಿಕಿತ್ಸೆಗಾಗಿ ಸ್ಥಳೀಯ ಸಾರ್ವಜನಿಕರಲ್ಲಿ ಕೈ ಸಾಲವನ್ನು ಸಹ ಮಾಡಿ ಅತಿಯಾದ ಬಡ್ಡಿಯಿಂದ ಸಾಲವನ್ನು ತೀರಿಸಲಾಗದೆ ಕೊರಟಗೆರೆಯ ಕೆನರಾ ಬ್ಯಾಂಕ್ ಕಳುಹಿಸಿದ್ದ ಲೀಗಲ್ ನೋಟಿಸ್ ತನ್ನ ಜೇಬಿನಲ್ಲಿಯೇ ಇಟ್ಟುಕೊಂಡು ಮರಕ್ಕೆ ನೀನು ತೆಗೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು…
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರ ಹಾಗೂ ದಬ್ಬೇಗಟ್ಟ ಹೋಬಳಿ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಸುಳ್ಳು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಬಹುಮತಗಳನ್ನು ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಬೆಮೆಲ್ ಕಾಂತರಾಜು ಅಭಿಪ್ರಾಯಪಟ್ಟರು. ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಮಾವಿನಹಳ್ಳಿಯಲ್ಲಿ ಮಾತನಾಡಿದ ಬೆಮೆಲ್ ಕಾಂತರಾಜು, ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆ ಪ್ರತಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆಯನ್ನು ಮಾಡಿದ್ದೇವೆ, ಸಾರ್ವಜನಿಕರಿಗೆ ಇವುಗಳ ಮನವರಿಕೆ ಮಾಡಿ ಗ್ಯಾರಂಟಿ ಕಾರ್ಡುಗಳನ್ನು ಕೊಡಲಾಗುವುದು, ಇದೇ ಕಾರ್ಯಕ್ರಮವನ್ನು ತುಮಕೂರಿನಲ್ಲಿ ನಮ್ಮ ಪಕ್ಷದ ಉಸ್ತುವಾರಿಗಳಾದ ಸುರ್ಜೆವಾಲ ರವರು ಉದ್ಘಾಟಿಸಿದ್ದು. ಅವುಗಳ ಬಗ್ಗೆ ಮನವರಿಕೆಯನ್ನು ಜನತೆಗೆ ಮಾಡಿಕೊಡಲು ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಮಾವಿನಹಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದೇವೆ ಎಂದರು. ಇಲ್ಲಿ ಸೇರಿರುವ ಜನಗಳನ್ನು ನೋಡಿ ನಮ್ಮ ಕಾಂಗ್ರೆಸ್ ಪಕ್ಷದ ಮೇಲೆ ನೀವು ಇಟ್ಟಿರುವ ಅಭಿಮಾನವನ್ನು ಬೆಂಬಲವನ್ನು ತೋರುತ್ತದೆ.…
2017-18ರಲ್ಲಿ ಕೇಂದ್ರ ಸರ್ಕಾರದಿಂದ ನಮಗೆ ಬರುವ ನಮ್ಮ ತೆರಿಗೆ ಪಾಲು 31,752 ಕೋಟಿ ಇತ್ತು. 2022-23ರಲ್ಲಿ 34,596 ಕೋಟಿ, ಮುಂದಿನ ವರ್ಷ 37,252 ಕೋಟಿ ಬರಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಸಂಗ್ರಹ ಮತ್ತು ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ನಮಗೆ ದೊಡ್ಡ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಬರುವ ಹಣ 2017-18ರಲ್ಲಿ 12,389 ಕೋಟಿ ಇತ್ತು. 2022-23ರಲ್ಲಿ 12,391 ಕೋಟಿ. ಮುಂದಿನ ವರ್ಷಕ್ಕೆ 13,005 ಕೋಟಿ. ನಮಗೆ ಒಟ್ಟು ನಮ್ಮ ತೆರಿಗೆ ಪಾಲು, ಕೇಂದ್ರದ ಸಹಾಯಧನ ಸೇರಿ 50,257 ಕೋಟಿ ಬರಲಿದೆ. 2017-18ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24,42,000 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ ತೆರಿಗೆ 35,895 ಕೋಟಿ. ಕೇಂದ್ರ ನೀಡಿದ್ದ ಅನುದಾನ 16,082 ಕೋಟಿ. ಒಟ್ಟು 51,977 ಕೋಟಿ ಬಂದಿತ್ತು. 2019-20ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 27,86,349 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ…
ಐಪಿಎಸ್ ಅಧಿಕಾರಿ ಡಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಸದ್ಯಕ್ಕಂತೂ ಮುಗಿಯೋ ಲಕ್ಷಣ ಕಾಣುತ್ತಿಲ್ಲ. ಸರ್ಕಾರವು ಇಬ್ಬರು ಅಧಿಕಾರಿಗಳಿಗೂ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಬಾರದೆಂದು ತಾಕೀತು ಮಾಡಿತ್ತು. ಇದರ ನಡುವೆಯೇ ಡಿ.ರೂಪಾ ಅವರು ರೋಹಿಣಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡುತ್ತಿರುವ ಆಡಿಯೋವೊಂದು ವೈರಲ್ ಆಗಿದೆ. ಆಡಿಯೋದಲ್ಲಿ ಡಿ ರೂಪಾ ಅವರು ರೋಹಿಣಿ ಸಿಂಧೂರಿಯವರನ್ನು ಹಿಗ್ಗಾಮುಗ್ಗ ಬೈಯುತ್ತಿರುವ ಮತ್ತು ತಮ್ಮ ಸಂಸಾರದ ವಿಷಯಗಳನ್ನು ಎತ್ತಿ ಮಾತನಾಡಿದ್ದಾರೆ. ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್…