Author: admin

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಕೊಟಗಾರಲಹಳ್ಳಿ ಶಾಲೆಯ ಸಹ ಶಿಕ್ಷಕ ಪಿ.ನಾಗಭೂಷಣ್‌   ವಿದ್ಯಾರ್ಥಿನಿಯರ ಮೊಬೈಲ್‌ಗಳಿಗೆ ಅಸಭ್ಯ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಆತನನ್ನು ಅಮಾನತು ಮಾಡಲಾಗಿದೆ. ಶಾಲಾ ವಿದ್ಯಾರ್ಥಿನಿಯರಿಗೆ ಅಸಭ್ಯ ಸಂದೇಶ ಕಳುಹಿಸುವುದು ಹಾಗೂ ಶಾಲಾ ವಿದ್ಯಾರ್ಥಿನಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಸಂದರ್ಭದಲ್ಲಿ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದರು. ಈ ಆರೋಪಗಳ ಬಗ್ಗೆ ಶಾಲಾ ಮುಖ್ಯ ಶಿಕ್ಷಕರು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದರು. ಶಿಕ್ಷಕ ನಾಗಭೂಷಣ್ ವರ್ತನೆಯನ್ನು ತಿದ್ದಿಕೊಳ್ಳುವುದಾಗಿ ತಿಳಿಸಿ ತಪ್ಪೊಪ್ಪಿಗೆ ಪತ್ರ ನೀಡಿದ್ದಾರೆ. ಶಿಕ್ಷಕರ ಈ ದುರ್ವರ್ತನೆ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಶಿಕ್ಷಕನ ವಿರುದ್ಧ ಶಿಸ್ತುಕ್ರಮ ಜರುಗಿಸಲು ನಿರ್ಣಯಿಸಿ, ಆರೋಪಗಳ ಬಗ್ಗೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ವಿಜಯಪುರ : ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ನಡೆದಿದೆ. ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಶಿಕ್ಷಕಿಯ ಪುತ್ರ ಮುಜಾಮಿಲ್ ಮೇಲೆಯೂ ಹಲ್ಲೆ ನಡೆಸಲಾಗಿದೆ. ಮುಜಾಮಿಲ್ ಸ್ಥಿತಿ ಗಂಭೀರವಾಗಿದ್ದು ವಿಜಯಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಭೀಕರ ಹತ್ಯೆಯಿಂದಾಗಿ ಇಂಡಿ ಪಟ್ಟಣದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾಗಿ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಹಿಂಡಲಗಾ ಗ್ರಾಮದ ಕಲ್ಮೇಶ್ವರ ನಗರದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ ಹಣ ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಸಂಜೆ ಭೂಮಿ ಪೂಜೆಯನ್ನು ನಡೆಸಿ ಚಾಲನೆ ನೀಡಿದರು. ಇದೇ ವೇಳೆ, ಹಿಂಡಲಗಾ ಗ್ರಾಮದ ಶ್ರೀನಾಥ ನಗರದ ಚರಂಡಿ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಹಣ ಮಂಜೂರು ಮಾಡಿಸಿ, ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸಹ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಆನಂದ ಪಾಟೀಲ, ನಿಖಿಲ ಮಾಸೇಕರ್, ಸಂದೀಪ ಮೊರೆ, ಗಜು ಕಾಕತ್ಕರ್, ರಾಗೋಜಿ, ಪಾಟೀಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಚಂದ್ರ ಕುದುರೆಮನಿಕರ್, ವಿಠ್ಠಲ ದೇಸಾಯಿ, ಅಶೋಕ ಕಾಂಬಳೆ, ರಾಹುಲ್ ಉರನಕರ್, ಪ್ರವೀಣ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಂಜಾರ ಸಮಾಜದ ನಾಯಕ ಮತ್ತು ಕಾರಭಾರಿ ಪಗಡಿಯ ವೈಭವ್ ನಗರದ ಕಲ್ಮೇಶ್ವರ ನಗರದಲ್ಲಿಸಮಾರಂಭ ಜರುಗಿತು.ಕಾರ್ಯಕ್ರಮದ ವಿಶೇಷತೆ ಎಂದರೆ ಬಂಜಾರ ಸಮುದಾಯ ತಮ್ಮ ನಾಯಕ ಮತ್ತು ಕಾರಭಾರಿ ಯನ್ನುಆಯ್ಕೆ ಮಾಡಿ ಅವರಿಗೆ ತಮ್ಮ ಸಮಾಜದ ನೇತೃತ್ವವನ್ನು ನೀಡುತ್ತಾರೆ. ನಾಯಕ ಮತ್ತು ಕಾರಭಾರಿ ಸಮಾಜದ ಧಾರ್ಮಿಕ ಸಮಾರಂಭದ ನೇತೃತ್ವ ವಹಿಸಿಕೊಳ್ಳುವುದು , ಸಮಾಜದ ಏಳಿಗೆಗಾಗಿ ಶ್ರಮಿಸುವುದು, ಮತ್ತು ಸಮಾಜದ ನ್ಯಾಯದಾನವಾಗಿ ಕಾರ್ಯನಿರ್ವಹಿಸುವುದು ಇವರ ಕರ್ತವ್ಯ ಇರುತ್ತದೆ. ಬಂಜಾರ ಸಮಾಜದ ಹಲವಾರು ಮುಖಂಡರುಗಳು ಹಾಗೂ ಸಮುದಾಯ ಜನರಗಳು ಈ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ನಾಯಕ ಮತ್ತು ಕಾರಭಾರಿ ಪಗಡಿಯ ಆಯ್ಕೆ ಮಾಡಿ ಸಂಭ್ರಮಿಸಿತು ಸುರೇಶ ರಾಥೋಡ್ ಇವರು ಬಿ .ಕೆ ಕಂಗ್ರಾಳಿ ಗ್ರಾಮ    ಪಂಚಾಯತ್  ಸದಸ್ಯರಾಗಿಯೂ   ಕಾರ್ಯನಿರ್ವಹಿಸುತ್ತಿದ್ದಾರೆ. ಅತ್ಯುತ್ತಮ ಸಮಾಜ ಸೇವಕರಾಗಿ ಬಡ ಮತ್ತು ದೀನದಲಿತರಗಾಗಿ ಇವರ ಸಮಾಜ ಸೇವೆ ನಡೆಯುತ್ತಲೇ ಇದೆ .ಈಗ ಇವರ ನೇತೃತ್ವಕ್ಕೆ ಬಂಜಾರ ಸಮಾಜದ ನಾಯಕ ಪಟ್ಟ ದೊರಕಿದ್ದು ಈ ಸಮಾಜದ ಏಳಿಗೆಗಾಗಿ ಹಾಗೂ ಅಭಿವೃದ್ಧಿಗಾಗಿ. ನಮ್ಮತುಮಕೂರು.ಕಾಂನ…

Read More

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಾರುತಿ ಕನ್ನೆಕರ (32) ಹತ್ಯೆ ಆದ ವ್ಯಕ್ತಿ. ಸೋಮವಾರ ರಾತ್ರಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳುದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಚಂಡೀಗಡ ನಗರದಲ್ಲಿ ನಡೆದ 190ನೇ ಇಎಸ್‌ಆಯ್ ಕಾರ್ಪೋರೇಶನ ಸಭೆಯಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಕಿತ್ತೂರು ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ.20 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕಳೆದ 2 ವರ್ಷಗಳ ಸತತ ಪ್ರಯತ್ನದಿಂದ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸುವ ಮೂಲಕ, ಖುದ್ದು ವೈಯಕ್ತಿಕ ಭೇಟಿಯಾಗುವ ಮೂಲಕ, ರಾಜ್ಯಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ಮತ್ತು ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ 25 ಸಾವಿರಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕ ವರ್ಗವಿದ್ದು ಈ ಎಲ್ಲಾ ಕುಟುಂಬದ ಸದಸ್ಯರುಗಳಿಗೆ ಉಚಿತ ಆರೋಗ್ಯ…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ ಎನ್ ಬಿನ್ ನರಸಿಂಹಯ್ಯ (45) ಎಂಬ ಬಡರೈತ ಸಾಲಬಾಧೆ ತಾಳಲಾರದ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.. ಬೆಂಡೋಣಿ ಗ್ರಾಮದ ಸರ್ವೆ ನಂಬರ್ 22/2 ರ ತನ್ನ ಜಮೀನಿನ ತುಗಲಿ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊರಟಗೆರೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜಮೀನಿನ ಅಭಿವೃದ್ಧಿಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಪಡೆದಿದ್ದರು ಮತ್ತು ವಿಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ 1 ಲಕ್ಷ ಸಾಲ ಪಡೆದಿದ್ದರು. ನಂತರ ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ 70,000 ರೂ ಗಳನ್ನೂ ಹೈನುಗಾರಿಕೆಗಾಗಿ ಸಾಲ ಪಡೆದಿದ್ದರು ಮತ್ತು ತನ್ನ ಮಗನ ಆರೋಗ್ಯದ ಕಾರಣದಿಂದ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಸಾಲವನ್ನು ಸಹ ಮಾಡಿಕೊಂಡಿದ್ದರು. ಸಾಲವನ್ನು ತೀರಿಸಲಾಗದೆ ಪ್ರತಿನಿತ್ಯ ಪರದಾಡುತ್ತಿದ್ದ ವ್ಯಕ್ತಿಗೆ ಕೆನರಾ ಬ್ಯಾಂಕ್ ಸಾಲವನ್ನು ತೀರಿಸುವಂತೆ ನೋಟಿಸನ್ನು ನೀಡಲಾಗಿತ್ತು ಹೀಗಾಗಿ ಸಾಲವನ್ನು ತೀರಿಸಲಾಗದೆ ಮಕ್ಕಳ ವಿದ್ಯಾಭಾಸವನ್ನು ಮಾಡಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡ ಈ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಚಿಕ್ಕಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಸೋಮವಾರದಂದು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಮುತ್ತುರಾಜು,  ಶ್ರದ್ಧೆಯಿಂದ ಚೆನ್ನಾಗಿ ಶಿಕ್ಷಣಭ್ಯಾಸವನ್ನು ಮಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಚೆನ್ನಾಗಿ ಓದಿಕೊಂಡು ಸಮಾಜದಲ್ಲಿ ಉನ್ನತ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು ಮತ್ತು ಶಾಲೆಯ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಮಾರ್ತೀಶ್, ಸೋಮಶೇಖರ್, ರಾಜಕುಮಾರ್, ನರಸಿಂಹಮೂರ್ತಿ, ತಿಪ್ಪೇಸ್ವಾಮಿ, ಲತಾ, ಮತ್ತು ಶಿಕ್ಷಕ ವೃಂದ ಹಾಜರಿದ್ದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್…

Read More

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ. ಮೇಘಳಾಪುರ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದರು. ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ. ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More