Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಸಿಡ್ ದಾಳಿಕೋರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರೀತಿ ನಿರಾಕರಿಸಿದ್ದಕ್ಕೆ ನಿನ್ನೆ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ್ದ. ರಾಮನಗರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಸಂತ್ರಸ್ತ ಬಾಲಕಿಯ ಆರೋಗ್ಯ ವಿಚಾರಿಸಿದರು. ಪ್ರಮೀಳಾ ನಾಯ್ಡು ಮತ್ತು ಎಂಎಲ್ ಸಿ ಭಾರತ ಶೆಟ್ಟಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಶೋಭಾ ಕರಂಧ್ಲಾಜೆ, ಹೆಣ್ಣುಮಕ್ಕಳ ಮೇಳೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಮೈನರ್ ರೇಪ್ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುತ್ತದೆ. ಅದೇ ರೀತಿ ಆ್ಯಸಿಡ್ ದಾಳಿಕೋರರಿಗೂ ಗಲ್ಲು ಶಿಕ್ಷೆಯಾಗಬೇಕು. ಸಂತ್ರಸ್ತೆ ಎಲ್ಲಿ ಓದಲು ಇಚ್ಚೆ ಇದೆಯೋ ಅಲ್ಲಿ ಓದಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣುಗೆ ಜೀವಾವಧಿ ಶಿಕ್ಷೆಗೆ ಗುರಿಯಾದವರು. 2022ರ ಫೆಬ್ರವರಿಯಲ್ಲಿ ನಾಲ್ವರು ಅಪರಾಧಿಗಳು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಬಿಪಿ ದೇವಮಾನೆ ಅವರು ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ನಾನ ಮಾಡುತ್ತಿದ್ದ ವೇಳೆ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಛ್ಲಾ ಗಂಗಾ ಘಾಟ್ ನಲ್ಲಿ ನಡೆದಿದೆ. ಸಾವಿಗೀಡಾದ ವಿದ್ಯಾರ್ಥಿಗಳು ಜೈ ಮೌರ್ಯ, ಪವನ್ ಪ್ರಕಾಶ್, ನವೀನ್ ಸೆಂಗರ್, ಪ್ರಮೋದ್ ಯಾದವ್, ಅಂಕುಶ್ ಗೆಹ್ಲೋಟ್ ಎಂದು ವರದಿಯಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಆಳವಾದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐದು ವಿದ್ಯಾರ್ಥಿಗಳು ಸ್ನಾನಕ್ಕೆ ತೆರಳಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾಲೇಜು ಪ್ರಾಂಶುಪಾಲ ಡಾ.ಧರ್ಮೇಂದ್ರ ಗುಪ್ತಾ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ತಿಳಿಸದೆ ಸ್ನಾನ ಮಾಡಲು ಹೋಗಿದ್ದರು ಎಂದು ಹೇಳಿದರು. ಕಾಣೆಯಾದ ಮೂವರು ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬದೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೋಜ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಹಾಸನ ಜಿಲ್ಲೆ ಅರಕಲಗೂಡು ನಗರದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಇಂದಿರಾ ಅವರು ವಿದ್ಯಾರ್ಥಿನಿಯರ ಹೇಳಿಕೆ ಪಡೆದು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ಈಶಪ್ಪ (22) ಹಾಗೂ ಸುವರ್ಣ(20) ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈಶಪ್ಪ ಮತ್ತು ಸುವರ್ಣ ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಬೇರೆ ಯುವಕನೊಂದಿಗೆ ಜೊತೆ ಸುವರ್ಣಳ ಮದುವೆಯಾಗಿತ್ತು . ಸುವರ್ಣ ಬೆಂಗಳೂರು ನಗರದಲ್ಲಿ ಪತಿ ಜೊತೆ ವಾಸವಿದ್ದಳು. ಶುಕ್ರವಾರ (ಫೆ.17) ಗಂಡನಿಗೆ ತಿಳಿಸದೇ ಹುರುಸಗುಂಡಗಿ ಗ್ರಾಮಕ್ಕೆ ಬಂದಿದ್ದಳು. ಶನಿವಾರ (ಫೆ.18) ಅದೇನಾಯಿತು ಏನೋ ಬೆಳಗ್ಗೆ ವಿಷ ಸೇವಿಸಿ ಸುವರ್ಣ, ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಭೀಮರಾಯನಗುಡಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದಲ್ಲಿ ರಾಜ್ಯ ಬಜೆಟ್‌ನಲ್ಲಿ ಮಹಾಲಿಂಗಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಅಲ್ಲದೆ ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿ ಹೆಸರಿನಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಫೋಟೊ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಈ ಪೋಟೊ ಕೆಳಗೆ ಜನನ 2008, ಮರಣ 2023 ಎಂದು ನಮೂದಿಸಲಾಗಿದೆ. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ನಡೆದಿರುವ ಹೋರಾಟವು ಶುಕ್ರವಾರ 310 ದಿನಗಳನ್ನು ಪೂರೈಸಿದೆ. ಇನ್ನೂ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಮಹಾಲಿಂಗಪುರ ತಾಲೂಕು ಘೋಷಣೆ ಆಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ನಿರೀಕ್ಷೆಗಳು ಸುಳ್ಳಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹೋರಾಟ ಸಮಿತಿ ಹಾಗೂ ಸಾರ್ವಜನಿಕರು ಚೆನ್ನಮ್ಮ ಸರ್ಕಲ್ ನಲ್ಲಿ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟನೆಗಿಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜನರ ಭಾವನೆಗಳ ವಿರುದ್ಧ, ಬೆಂಕಿಯ ಜೊತೆ ಸರಸವಾಡುತ್ತಿದ್ದೀರಿ ಎಚ್ಚರ ಎಂದಿದ್ದಾರೆ. ಶನಿವಾರ, ಶಿವರಾತ್ರಿಯ ಸಂದರ್ಭದಲ್ಲಿ ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗ್ಗೆ ಪೂಜೆ ಇಟ್ಟುಕೊಂಡಿದ್ದರು. ಪೂಜೆ ಮುಗಿಸಿ ಹೊರಡುವ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಕಾರು ಎದುರಾಯಿತು. ಚನ್ನರಾಜ ಹಟ್ಟಿಹೊಳಿ ಕಾರಿಗೆ ಮುಂದೆ ಹೋಗದಂತೆ ರಮೇಶ ಜಾರಕಿಹೊಳಿ ಕಾರು ಅಡ್ಡ ಬಂದು ನಿಂತಿತು. ಚನ್ನರಾಜ ಹಟ್ಟಿಹೊಳಿ ತಾಳ್ಮೆಯಿಂದಲೇ ಕೆಲ ಹೊತ್ತು ಕಾದರೂ ರಮೇಶ ಜಾರಕಿಹೊಳಿ ಕಾರಿನ ಚಾಲಕ ದಾರಿ ಬಿಟ್ಟು ಕೊಡಲಿಲ್ಲ. ನಂತರ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ಕಾರಿನ ಹಿಂದೆ ನಿಂತ ಕಾರಿನವರಿಗೆ ವಿನಂತಿಸಿ ಹಿಂದೆ ಸರಿಸಿ ತಮ್ಮ ಕಾರನ್ನು ಪಕ್ಕದಿಂದ ತೆಗೆದುಕೊಂಡು ಹೊರಟರು. ಈ ಸಂದರ್ಭದಲ್ಲಿ ಅಲ್ಲಿದ್ದ ಜನರು ಚನ್ನರಾಜ ಹಟ್ಟಿಹೊಳಿಗೆ ಜಯವಾಗಲಿ…
ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ಅವರನ್ನು ಮಧುಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಈ ಮಹಾ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಮಧು ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಗಡಿನಾಡ ಧ್ವನಿಯ ಅಧ್ಯಕ್ಷರಾದ ಡಾ. ಹಾಜಿಎಸ್ ಅಬೂಬಕರ್ ಅರ್ಲಪದವು, ಪ್ರಧಾನ ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೀಡಲ್ಪಡುವ ರಾಜ್ಯ ಪ್ರಶಸ್ತಿಗೆ ವಿಶ್ವದಲ್ಲಿ ಪ್ರಪ್ರಥಮವಾಗಿ ಜೇನು ಗಡ್ಡ ತೋರಿಸಿಕೊಟ್ಟ ಸಾಧಕಿ, ಮಹಿಳೆ ಜೇನು ಕೃಷಿ ವಿಶಿಷ್ಟ ಬರಹಗಳು, ಕಲಾಪ್ರಿಯರು ಕಲಾ ಪೋಷಕರಾಗಿ ಗುರುತಿಸಿಕೊಂಡಿರುವ ಸೌಮ್ಯ ಪೆರ್ನಾಜೆ ಆಯ್ಕೆಯಾಗಿದ್ದಾರೆ. ಇವರಿಗೆ ಈಗಾಗಲೇ ಈಶ್ವರಮಂಗಳದಲ್ಲಿ ಗ್ರಾಮ ಗ್ರಾಮದ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ. ವರದಿ: ಕುಮಾರ್ ಪೆರ್ನಾಜೆ ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ. 39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಹೃದಯಾಘಾತಕ್ಕೀಡಾಗಿದ್ದ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳ ಚಿಕಿತ್ಸೆಯ ಬಳಿಕವೂ ಅವರು ಚೇತರಿಸಿಕೊಳ್ಳದೇ ಇದೀಗ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಯಾರ್ರೀ ರಮೇಶ ಜಾರಕಿಹೊಳಿ? ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೂ ಇವರಿಗೂ ಏನು ಸಂಬಂಧ? ನಿಮ್ಮ ಗೋಕಾಕ ಕ್ಷೇತ್ರವನ್ನು ನೀವು ನೋಡಿಕೊಳ್ಳಿ. ಗ್ರಾಮೀಣ ಕ್ಷೇತ್ರದ ಶಾಸಕರು ಸಮರ್ಥರಿದ್ದಾರೆ. ಉತ್ತಮ ಕೆಲಸ ಮಾಡುತ್ತಿದ್ದಾರೆ. ಜನರ ವಿಶ್ವಾಸಗಳಿಸಿದ್ದಾರೆ. ಅವರ ಕ್ಷೇತ್ರವನ್ನು ಅವರು ನೋಡಿಕೊಳ್ಳುತ್ತಾರೆ ಎಂದು ಎಂಎಲ್.ಸಿ ಚನ್ನರಾಜ ಹಟ್ಟಿಹೊಳಿ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ಯ ಹಮ್ಮಿಕೊಂಡಿದ್ದ ಪೂಜೆ ಮುಗಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿ ಮಾತಿಗೆ ಪ್ರತಿಕ್ರಿಸಿ ನೂರು ವರ್ಷದಿಂದ ಬೆಳಗಾವಿ ಗ್ರಾಮೀಣ ಜನರ ಕನಸಿತ್ತು. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣವಾಗಬೇಕೆನ್ನುವ ಕನಸು ಇಂದು ಈಡೇರಿದೆ ಎಂದರು. ರಮೇಶ ಜಾರಕಿಹೊಳಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಏನು ಸಂಬಂಧ? ಗೋಕಾಕ ಕ್ಷೇತ್ರದ ಶಾಸಕರು ಅವರು, ಬೆಳಗಾವಿ ತಾಲೂಕಿಗೆ ಏನು ಸಂಬಂಧ? ಈ ಭಾಗದ ಶಾಸಕರು ಲಕ್ಷ್ಮೀ ಹೆಬ್ಬಾಳಕರ್,…