Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಬೆಂಗಳೂರು: ರಸ್ತೆ ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಅಪ್ಪಟ ಅಭಿಮಾನಿಯನ್ನು ಧ್ರುವ ಸರ್ಜಾ ನೋಡಲು ಆಗಮಿಸಿದ್ದಾರೆ. ಅಭಿಮಾನಿಯ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಯಲ್ಲಿದ್ದು, ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಧ್ರುವ ಸರ್ಜಾ ಅವರ ಅಪ್ಪಟ ಅಭಿಮಾನಿ ಶಿಡ್ಲಘಟ್ಟದ ಪೃಥ್ವಿರಾಜ್ ನಾಲ್ಕು ದಿನಗಳ ಹಿಂದೆಯೇ ಬೈಕ್ ನಿಂದ ಬಿದ್ದಿದ್ದು, ಪರಿಣಾಮವಾಗಿ ತಲೆಗೆ ಗಂಭೀರವಾದ ಏಟು ಬಿದ್ದಿತ್ತು. ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಪೃಥ್ವಿರಾಜ್ ಸಹಜ ಸ್ಥಿತಿಗೆ ಬರುವುದು ಅನುಮಾನ ಎಂದು ವೈದ್ಯರು ತಿಳಿಸಿದ್ದು ಆತನ ಅಂಗಾಂಗ ದಾನಕ್ಕೆ ಕುಟುಂಬ ಮುಂದಾಗಿದೆ. ಮಗನ ಕೊನೆಯಾಸೆ ಸರ್ಜಾರನ್ನು ನೋಡುವುದಾಗಿತ್ತು. ಧ್ರುವ ಸರ್ಜಾ ಅವರಿಗೆ ಈ ವಿಷಯ ತಿಳಿದು ಇಂದು ಮಧ್ಯಾಹ್ನ 2 ಗಂಟೆ ಹೊತ್ತಿಗೆ ಅಭಿಮಾನಿಗಳನ್ನು ಭೇಟಿ ಮಾಡಲು ಧ್ರುವ ಆಸ್ಪತ್ರೆಗೆ ಆಗಮಿಸಿದ್ದರು. ಮಗನ ಚಿಕಿತ್ಸಾ ಖರ್ಚಿಗೆ ಸಾಲ ಮಾಡಿದ ಪೃಥ್ವಿ ತಂದೆ ಜಗದೀಶ್ ಅವರಿಗೆ ಧ್ರುವ 5 ಲಕ್ಷ ರೂಪಾಯಿ ಆಸ್ಪತ್ರೆ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ದೂರದ ರೈಲು ಪ್ರಯಾಣವನ್ನು ಇಷ್ಟಪಡುವ ಅನೇಕರು ನಮ್ಮ ನಡುವೆ ಇದ್ದಾರೆ. ಆದರೆ ರೈಲಿನಿಂದ ಸಿಗುವ ಆಹಾರ ಹೆಚ್ಚಾಗಿ ರುಚಿ ಕೆಡಿಸುತ್ತದೆ. . ರೈಲು ಆಹಾರದ ಗುಣಮಟ್ಟ ಕ್ಷೀಣಿಸುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಇತ್ತೀಚಿನ ದೂರು ಭೂಮಿಕಾ ಎಂಬ ಯುವತಿ ಟ್ವಿಟರ್‌ನಲ್ಲಿ ಎತ್ತಿರುವ ದೂರು. ಮಹಿಳೆ ಆಹಾರದ ಫೋಟೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಭೂಮಿಕಾ ಎಂಬ ಪ್ರಯಾಣಿಕರು ಅರೆಬರೆ ತಿಂದ ಆಹಾರದ ಚಿತ್ರವನ್ನು ಶೇರ್ ಮಾಡುವ ಮೂಲಕ ರೈಲ್ವೇ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ಲೇಟ್ ದಾಲ್, ಸಬ್ಜಿ, ರೊಟ್ಟಿ ಮತ್ತು ಅನ್ನವನ್ನು ಒಳಗೊಂಡಿರುತ್ತದೆ. ಭೂಮಿಕಾ ಅವರನ್ನು ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ. ಭೂಮಿಕಾ ಇನ್ನೂ ಒಂದು ಹೆಜ್ಜೆ ಮುಂದಿಟ್ಟಳು, ಒಮ್ಮೆಯಾದರೂ ಈ ಊಟ ತಿಂದಿದ್ದೀಯಾ ಎಂದು ಕೇಳುತ್ತಾಳೆ ಫುಡ್ ನೀಡಿದವರನ್ನು ನೋಡಿ.ನಿಮ್ಮ ಕುಟುಂಬ ಅಥವಾ ಮಕ್ಕಳಿಗೆ ಇಂತಹ ಕೆಟ್ಟ ಆಹಾರವನ್ನು ತಿನ್ನಿಸುತ್ತೀರಾ ಎಂದು ಅವರು ಕೇಳಿದರು. ಪದೇ ಪದೇ ಟಿಕೆಟ್ ದರ ಏರಿಕೆಯಾಗುತ್ತಿದ್ದರೂ ಉತ್ತಮ ಆಹಾರ ನೀಡುವ ಕ್ರಮ…
ಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿ ಉರಸ್ ಮತ್ತು ಶಿವಲಿಂಗ ಪೂಜೆ ಸಲ್ಲಿಕೆಗೆ ಕೋರ್ಟ್ ಅನುಮತಿ ನೀಡಿದ್ದು ಇಂದು ಪೂಜೆ ಸಲ್ಲಿಸುವ ಕಾರಣ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದರ್ಗಾದ ಸುತ್ತಮುತ್ತ ಪ್ರತಿಯೊಂದು ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದು, ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಭದ್ರತೆಗೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದರ್ಗಾದಲ್ಲಿ ಪೂಜೆ ಸಲ್ಲಿಸಲು ಹಿಂದೂ, ಮುಸ್ಲಿಮರಿಗೆ ಕೋರ್ಟ್ ಅವಕಾಶ ನೀಡಿದೆ. ಬೆಳಗ್ಗೆ ಉರುಸ್ ಆಚರಿಸಲು ಅವಕಾಶ ನೀಡಿದ್ದು, ಮುಸ್ಲಿಂ ಸಮುದಾಯದ 15 ಜನರಿಗೆ ಮಾತ್ರ ಉರುಸ್ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಶಿವಲಿಂಗ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಹಿಂದೂ ಸಮುದಾಯದ 15 ಜನ ಪೂಜೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಮಧ್ಯೆ, ದರ್ಗಾದಲ್ಲಿ ಉರುಸ್ ಆರಂಭವಾಗಿದ್ದು, ಮುಸ್ಲಿಂ ಸಮುದಾಯದ ಜನರು ದರ್ಗಾ ಪ್ರವೇಶಿಸಿದ್ದಾರೆ. ದರ್ಗಾದ ಎರಡನೇ ಗೇಟ್ ಮೂಲಕ ಮುಸ್ಲಿಂ ಸಮುದಾಯದ ಜನರು ಒಳ ಪ್ರವೇಶಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಿ ಒಳಗೆ ಬಿಟ್ಟಿದ್ದಾರೆ.…
ಕೊಡಗಿನ ಎರಡು ಬೆಟ್ಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೊಡಗಿದ್ದಾರೆ. ಪುಷ್ಪಗಿರಿ ಅರಣ್ಯ ವ್ಯಾಪ್ತಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ, ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಿಶಾನಿ ಬೆಟ್ಟದಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದು, ಒಂದು ಗಂಟೆಯಿಂದಲ್ಲೂ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ. ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಸಾರ್ವಜನಿಕರೂ ಕೂಡ ಸಾಥ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೂರು ವರ್ಷಗಳ ನಂತರ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇಂದು ಆರಂಭವಾಗಿದೆ. ರಾಯಪುರದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸಿ ತ್ರೀ ಕೇರಳ ಸ್ಟ್ರೈಕರ್ಸ್ ತೆಲುಗು ವಾರಿಯರ್ಸ್ ಪಂದ್ಯ ನಾಳೆ. ಫ್ಲವರ್ಸ್ ಕೇರಳ ಸ್ಟ್ರೈಕರ್ಸ್ ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮೂಲಕ ಭಾರತೀಯ ಚಿತ್ರರಂಗದ ವಿವಿಧ ಇಂಡಸ್ಟ್ರಿಗಳ ಸೆಲೆಬ್ರಿಟಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಚೆನ್ನೈ ರೈನರ್ಸ್ ಮತ್ತು ಕರ್ನಾಟಕ ಬುಲ್ಲಾರ್ಡ್ಸ್ ನಡುವಿನ ಆರಂಭಿಕ ಪಂದ್ಯದೊಂದಿಗೆ ವಿರಾಮದ ನಂತರ ಸ್ಟಾರ್ ಕ್ರಿಕೆಟ್ ಪ್ರಾರಂಭವಾಗುತ್ತದೆ. ಕುಂಚಾಕೊ ಬೋಬನ್ ನೇತೃತ್ವದ ಸೀ ತ್ರೀ ಕೇರಳ ಸ್ಟ್ರೈಕರ್ಸ್‌ನ ಮೊದಲ ಪಂದ್ಯ ತೆಲುಗು ವಾರಿಯರ್ಸ್ ವಿರುದ್ಧ.ರಾಯಪುರದಲ್ಲಿ ನಾಳೆ ನಡೆಯಲಿರುವ ಪಂದ್ಯಕ್ಕೆ ಕೇರಳ ತಂಡ ಸಂಪೂರ್ಣ ಸಜ್ಜಾಗಿದೆ. ಆಸಿಫ್ ಅಲಿ, ರಾಜೀವ್ ಪಿಳ್ಳೈ, ಉನ್ನಿ ಮುಕುಂದನ್, ಅರ್ಜುನ್ ನಂದಕುಮಾರ್, ಇಂದ್ರಜಿತ್ ಸುಕುಮಾರನ್, ಸಿದ್ಧಾರ್ಥ್ ಮೆನನ್, ಮಣಿಕುಟ್ಟನ್, ವಿಜಯ್ ಯೇಸುದಾಸ್, ಶಫೀಕ್ ರೆಹಮಾನ್, ವಿವೇಕ್ ಗೋಪನ್, ಸೈಜು ಕುರುಪ್. ವಿನು ಮೋಹನ್,…
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನಾ ಪಕ್ಷದ ಚಿಹ್ನೆ ಮತ್ತು ಹೆಸರನ್ನು ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ನಿಂತು ಪ್ರಜಾಪ್ರಭುತ್ವ ಮೃತಪಟ್ಟಿದೆ ಎಂದು ಘೋಷಿಸಬಹುದು ಎಂದು ಉದ್ದವ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಂಧೆ ಅವರು ಬಂಡಾಯವೆದ್ದು ಬಿಜೆಪಿ ಜತೆ ಕೈಜೋಡಿಸಿದ ಸುಮಾರು 8 ತಿಂಗಳ ನಂತರ ಚುನಾವಣಾ ಆಯೋಗ ಪಕ್ಷದ ಹೆಸರು ಮತ್ತು ಚಿಹ್ನೆಗೆ ಸಂಬಂಧಿಸಿದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿತ್ತು. ಅವರು ಶಿವಸೇನಾ ಚಿಹ್ನೆಯನ್ನು ಕಳವು ಮಾಡಿದ್ದಾರೆ. ನಾವು ಭರವಸೆ ಕಳೆದುಕೊಳ್ಳುವುದಿಲ್ಲ. ಹೋರಾಟ ಮುಂದುವರಿಸಲಿದ್ದೇವೆ ಎಂದರು. ಕೇಂದ್ರ ಚುನಾವಣಾ ಆಯೋಗ ‘ಶಿವಸೇನಾ’ ಎಂಬ ಹೆಸರು ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂಧೆ ಬಣಕ್ಕೆ ನೀಡಿತ್ತು. ಉದ್ಧವ್ ಠಾಕ್ರೆ ಬಣವು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎಂದು ಗುರುತಿಸಿಕೊಳ್ಳಬಹುದು ಎಂಬುದಾಗಿ ಸೂಚಿಸಿತ್ತು. ಈ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಠಾಕ್ರೆ ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿ ನನ್ನ ಕಿಡ್ನಿ ಮಾರಿ ಚುನಾವಣಾ ಖರ್ಚು ಹೊಂದಿಸುತ್ತೇನೆ ಎಂದು ಯುವಕನೋರ್ವ ಹುಚ್ಚಾಟದ ಹೇಳಿಕೆ ನೀಡಿದ್ದು ಭಾರಿ ವೈರಲ್ ಆಗಿದೆ. ಕೆಂಕೆರೆ ಗ್ರಾಮದ ಪ್ರಭುಕುಮಾರ್ ಹುಚ್ಚಾಟದ ಹೇಳಿಕೆ ನೀಡಿದ್ದು ತುಮಕೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ 7 ಮಂದಿ ಕಾಂಗ್ರೆಸ್ ಪಕ್ಷದ ಟಿಕೆಟ್ ರೇಸ್‌ನಲ್ಲಿದ್ದಾರೆ. ವೈ.ಸಿ ಸಿದ್ದರಾಮಯ್ಯ ಕೂಡ ಪ್ರಭಲ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೇಟ್ ನೀಡುವಂತೆ ಮನವಿ ಮಾಡಿಕೊಂಡಿರುವ ಯುವಕ ತಾನು ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ. ಈ ವೇಳೆ ಚುನಾವಣೆಗೆ ನಿಲ್ಲಲು ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರು ಎಂಬುದಾಗಿಯೂ ಯುವಕ ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಸಿನಿಮಾ ‘ಕಬ್ಜ’ ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ ‘ನಮಾಮಿ ನಮಾಮಿ’ ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ. ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, ‘ಕಬ್ಜ’ ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು…
ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ನಡೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಪಾಗಲ್ ಪ್ರೇಮಿ ಸುಮಂತ್ (30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೈಪಾಸ್ ರಸ್ತೆಗೆ ಮಾತನಾಡಬೇಕಿದೆ ಎಂದು ಯುವತಿಯನ್ನು ಕರೆಸಿಕೊಂಡಿದ್ದಾನೆ. ಕಾಲ್ ಮಾಡಿದ ಕಾರಣ ತಮ್ಮನ ಜೊತೆಗೆ ಯುವತಿ ಹೋಗಿದ್ದಾಳೆ. ಈ ವೇಳೆ ಮುಖಕ್ಕೆ ಆಸಿಡ್ ಎರಚಿ ಸುಮಂತ್ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಯುವತಿಗೆ ಕನಕಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸಿಡ್ ದಾಳಿ ನಡೆಸಿದ ಸುಮಂತ್ ನ್ನು ಕನಕಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಬಜೆಟ್ “ಚುನಾವಣೆ ದೃಷ್ಟಿಯಿಂದ ಹೆಣೆಯಲಾದ ತಳಬುಡವಿಲ್ಲದ ಬಜೆಟ್” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಂಟಿಯಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಜೆಟ್ ನಲ್ಲಿ ನಿರುದ್ಯೋಗ ನಿವಾರಣೆಗೆ ಯಾವ ಕ್ರಮವೂ ಇಲ್ಲ. ತಾಂಡವಾಡುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹ ಯಾವುದೇ ಕ್ರಮಗಳಿಲ್ಲ. ಈ ಬಜೆಟ್ ನಲ್ಲಿ ಎಲ್ಲರ ಮೂಗಿಗೆ ಬರಿ ತುಪ್ಪ ಸವರುವ ಕೆಲಸವಾಗಿದೆ ಎಂದು ಲೆವಡಿ ಮಾಡಿದ್ದಾರೆ. “ಈ ಬಜೆಟ್ ನಿಂದ ಕೆಳ ಅಥವಾ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನವಿಲ್ಲ ಎಂಎಸ್‌ಎಂಇಗಳನ್ನು ಸ್ಥಾಪಿಸುವ ಅಥವಾ ಉದ್ಯೋಗ ಸೃಷ್ಟಿಸುವ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸುವ ಕ್ರಮಗಳ ಬಗ್ಗೆ ಯಾವುದೇ ಉಲ್ಲೇಖವೇ ಇಲ್ಲದಿರುವುದು ಆಶ್ಚರ್ಯಕರ” ಎಂದು ಅವರು ಹೇಳಿದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಪ್ರಾಥಮಿಕ ಕ್ಷೇತ್ರಗಳಿಗೆ ಬಜೆಟ್ ನಲ್ಲಿ ಯಾವುದೇ ಪ್ರಾಮುಖ್ಯತೆಯನ್ನು ನೀಡಿಲ್ಲ. ಹೆಚ್ಚಿನ ಹೊಸ ಯೋಜನೆಗಳನ್ನು ಘೋಷಿಸುವುದಕ್ಕಿಂತ ಹಳೆಯ ಯೋಜನೆಗಳಿಗೆ ಹೊಳಪು ನೀಡುವ ಕೆಲಸ ಈ…