Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಪಾವಗಡ: ವೈದ್ಯಕೀಯ ದೃಢೀಕರಣ ಹಾಗೂ ಪರವಾನಗಿ ರಹಿತವಾಗಿ ಸಾಗಿಸುತ್ತಿದ್ದ 8 ಎಮ್ಮೆ ಕರುಗಳನ್ನು ಪಾವಗಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುಡಿಬಂಡೆ ಸಂತೆಯಿಂದ ಪೆನುಕೊಂಡ ಕಡೆಗೆ ಬೊಲೆರೋ ವಾಹನದಲ್ಲಿ ಎಮ್ಮೆ ಕರುಗಳನ್ನು ಸಾಗಿಸಲಾಗುತ್ತಿತ್ತು. 8ಎಮ್ಮೆ ಕರುಗಳು ಸಾಗಾಟ ಮಾಡುತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಜಿಲ್ಲಾ ಸಹ ಸಂಯೋಜಕ್ ಸುಮನ್ ತಾಲೂಕು ಸಂಯೋಜಕ್ ವಾಸು ಗೋರಕ್ಷ ಪ್ರಮುಖ್ ರಾಕೇಶ್ ಸುರಕ್ಷಾ ಪ್ರಮುಖ್ ರವಿ, ಹರ್ಷ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಜರಂಗದಳದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಮ್ಮೆ ಕರುಗಳನ್ನು ವಶಪಡಿಸಿಕೊಂಡು ಗೋ ಹತ್ಯೆ ನಿಷೇಧ ಕಾನೂನಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೊಳೆನರಸೀಪುರ: ತಾಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿಯ ದೇವರ ಮುದ್ದನಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರಾಜ ಸತ್ಯವ್ರತ ಅಥವಾ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾಯರ್ಯಕ್ರಮ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜವರೇಗೌಡರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂತಹ ನಾಟಕಗಳು ಗ್ರಾಮೀಣ ಭಾಗದಲ್ಲಿ ಉಳಿದುಕೊಂಡಿವೆ ಎಂದರೆ ಪ್ರೇಕ್ಷಕರಿಂದ ಮಾತ್ರ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿಸಮಾಜ ಸೇವಕ ದಿವಾಕರ್ ಗೌಡ, ದಿನೇಶ್ ಬೈರೆಗೌಡ, ಎ.ಮಂಜು, ಪುಟೇಗೌಡ, ಕಾಳೆಗೌಡ, ಶ್ರೀಧರ್ ಗೌಡ, ಮದುಸೂದನ್, ನಾಗೇಶ್, ಡಿ.ಕೆ.ರಮೇಶ್, ಮಂಜು, ಗಣೇಶ್, ಪುನೀತ್, ದೇವರಮುದ್ದನಹಳ್ಳಿ ಗ್ರಾಮಸ್ಥರು ಹಾಗೂ ಸುತ್ತ ಮುತ್ತ ಹಳ್ಳಿ ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೂಡಲಗಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-2024ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಠಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್‌ನ್ನು ರೈತಾಪಿ ವರ್ಗಕ್ಕೆ ಶೂನ್ಯ ಬಡ್ಡಿದರದಲ್ಲಿ ರೂ 5 ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಮಹಿಳೆಯರಿಗೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಬಜೆಟ್ ಕುರಿತು ಹರ್ಷ ವಕ್ತಪಡಿಸಿದರು. ಈ ವರ್ಷದ ಒಟ್ಟು ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂ, ಕೃಷಿ ಕ್ಷೇತ್ರಕ್ಕೆ 39,031 ಕೋಟಿ ಅನುದಾನ ನೀಡಲಾಗಿದೆ. ಕಿಸಾನ್ ಕ್ರೇಡಿಟ್ ಕಾರ್ಡ ಹೊಂದಿರುವ 50 ಲಕ್ಷ ರೈತರಿಗೆ ‘ಭೂ ಸಿರಿ’ ನೂತನ ಯೋಜನೆಯನ್ನು ಜಾರಿಗೆ ತಂದಿದ್ದು ಬಿತ್ತನೆ ಬೀಜ, ಗೋಬ್ಬರಕ್ಕೆ ಹೆಚ್ಚುವರಿಯಾಗಿ ರೂ 10 ಸಾವಿರ ಸಹಾಯಧನ ನೀಡಲಾಗುವುದು. ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸಲು…
ದೊಡ್ಡಬಳ್ಳಾಪುರ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡು ತಿಂಗಳು ಮಾತ್ರ ಬಾಕಿ ಉಳಿದಿದೆ, ಚುನಾವಣಾ ಪ್ರಚಾರಕ್ಕೆ ಇಳಿದಿರು ಅಭ್ಯರ್ಥಿಗಳು ಕ್ರಿಕೆಟ್ ಟೂರ್ನಮೆಂಟ್ ನಡೆಸೋದು ಈಗ ಸಾಮಾನ್ಯವಾಗಿ ಬಿಟ್ಟಿದೆ, ಹೀಗೇ ನಡೆದ ಕ್ರಿಕೆಟ್ ಟೂರ್ನಮೆಂಟ್ ಇಬ್ಬರು ಯುವಕರ ಸಾವಿಗೆ ಕಾರಣವಾಗಿದೆ, ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರು ಯುವಕರ ಗುಪ್ತಾಂಗಗಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜಿಸಿದ್ದರು, ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಚಾಕುವಿನಿಂದ ಇಬ್ಬರು ಯುವಕರು ಗುಪ್ತಾಂಗಗಳಿಗೆ ಇರಿಯಲಾಗಿದ್ದು, ಚಾಕು ಇರಿತಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತ ಯುವಕರನ್ನ ದೊಡ್ಡಬೆಳವಂಗಲದ ಭರತ್ (23), ಪ್ರತೀಕ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಮೊದಲಿಗೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿ ದೊಡ್ಡಬೆಳವಂಗಲ ಹಾಗೂ…
ಬೆಂಗಳೂರು: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿರುವುದು ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ ಕುರಿತಂತೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತರಿಗೆ ಭೂ ಸಿರಿ: ಕೃಷಿಗೆ ರೈತರ ಸಾಲದ ಮಿತಿಯನ್ನು 3 ರಿಂದ 5ಲಕ್ಷದ ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲದಲ್ಲಿ ಹೆಚ್ಚಳವಾಗದಿದ್ದು 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಲಾಭವಾಗಲಿದೆ. ಇನ್ನು ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆಯುವ ಅಗತ್ಯವಿಲ್ಲ. ಅಗತ್ಯವಿದ್ದಾಗ ಬೀಜ ಗೊಬ್ಬರ ಖರೀದಿಗೆ ಭೂಸಿರಿ ಎಂಬ ಯೋಜನೆಯಡಿ 10ಸಾವಿರ ರೂ. ನೀಡಲಾಗುವುದು. 2500 ರೂ.ರಾಜ್ಯ ಸರ್ಕಾರ, 7500 ರೂ. ನಬಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದರು. ಜೀವನ ಜ್ಯೋತಿ ಜೀವ ವಿಮೆ ಯೋಜನೆ: ರೈತ ಯಾವುದೇ ಕಾರಣದಿಮದ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ತೊಂದರೆಯಾದಬಾರದೆಂದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ…
ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಧ್ಯಾಹ್ನ ಅವರು ನಿಧನರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಮೃತರು ಪತಿ, ಓರ್ವಳು ಮಗಳು, ಓರ್ವ ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್…
ನಮ್ಮ ತುರುವೇಕೆರೆ ತಾಲ್ಲೂಕು ಅನೇಕ ಕಲಾವಿದರನ್ನು ನಮ್ಮ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದೆ, ಇಂತಹ ಜಾಗದಲ್ಲಿ ನಾನು ಒಬ್ಬ ಕಲಾವಿದನಾಗಿ ಈ ತಾಲೂಕಿನಲ್ಲಿ ಕೆಲಸ ಮಾಡಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದು ಚಿತ್ರ ನಟ, ಎಎಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಟೆನ್ನಿಸ್ ಕೃಷ್ಣ ಹೇಳಿದರು. ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಎಎಪಿ ಪಕ್ಷದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಪಕ್ಷದ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ಅಭಿವೃದ್ಧಿಯ ಚಿಂತನೆಯ ಎಎಪಿ ಪಕ್ಷವು ಬಡವರ ಪರವಾಗಿ ಇರುವ ಒಳ್ಳೆಯ ನಾಯಕತ್ವದ ಪಕ್ಷವಾಗಿದ್ದು, ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷವಾಗಿದೆ ಎಂದರು. ಕೇಜ್ರಿವಾಲ್ ಅವರ ನಾಯಕತ್ವದಲ್ಲಿ ನಾವುಗಳು ಈ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ. ಜೊತೆಗೆ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ಬಿಡುವುದಿಲ್ಲ, ಜೊತೆಗೆ 5,000 ರೂ. ಬೆಂಬಲ ಬೆಲೆಯನ್ನು ಕೊಬ್ಬರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಎಎಪಿ ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ತುಮಕೂರು…
ಮಧುಗಿರಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳು ಸೌಹಾರ್ದ ಕೇಂದ್ರಗಳಾಗಿ ಪರಿವರ್ತನೆಯಾಗಬೇಕಾದರೆ ಸಾಮೂಹಿಕ ವಿವಾಹದಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ನಡೆಸಬೇಕೆಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹೇಳಿದರು. ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಶ್ರೀಗಾಳಿ ಆಂಜನೇಯ ಸೇವಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಹತ್ತನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ವಿವಾಹದಲ್ಲಿ ಮಾತನಾಡಿದ ಅವರು, ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು ಕಂಡುಕೊಳ್ಳಬಹುದು. ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸುತ್ತದೆ. ಮನುಷ್ಯ ಜೀವನದಲ್ಲಿ ಸರಳತೆ ಪಾಲಿಸಬೇಕು. ಅಂದಾಗ ಮಾತ್ರ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ ಜೊತೆಗೆ ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವರ ಹಿತಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕಾಗಿದೆ ಎಂದರು. ಸಮಾಜದಲ್ಲಿನ ಉಳ್ಳವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಮೂಲಕ ಶ್ರೀಸಾಮಾನ್ಯರ ಕಲ್ಯಾಣಕ್ಕೆ ನೆರವಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿನ ಕೀಳರಿಮೆ ಕಣ್ಮರೆಯಾಗಲು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಂತಹ ಪ್ರತಿ…
ಪಾವಗಡ: ಪಟ್ಟಣದಲ್ಲಿ ತಾಲ್ಲೂಕು ಆಡಳಿತ ವರ್ಗದವರು ಹಾಗೂ ಗೋರ್ಸೇದಾ ತಾಲ್ಲೂಕು ಘಟಕ ಮತ್ತು ತಾಲ್ಲೂಕಿನ ಬಂಜಾರ ಸಂಘಟನೆಗಳ ಒಕ್ಕೂಟದಿಂದ ದೈವಿ ಅವತಾರ ಪುರುಷ ಸಂತ ಸೇವಾಲಾಲ್ 284 ನೇ ಜಯಂತಿಯನ್ನು ಆಚರಿಸಲಾಯಿತು. ಸಂತ ಸೇವಾಲಾಲ್ ಒರ್ವ ಪವಾಡ ಪುರುಷ ಬಂಜಾರ ಸಮಾಜದ ಕುಲ ದೈವರಾಗಿದ್ದಾರೆ. ಇವರು ಅನೇಕ ಚಮತ್ಕಾರ, ಪವಾಡಗಳ ಮೂಲಕನೇ ಜನರಲ್ಲಿ ಜಾಗೃತಿ ಮೂಡಿಸುವ ಅವತಾರಿ ಪುರುಷಯೆನಿಸಿಕೊಂಡಿದ್ದವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೂರಗೊಂಡನ ಕೊಪ್ಪ ಎಂಬಲ್ಲಿ ಭೀಮ ನಾಯಕ್, ಧರ್ಮಿಣಿ ಯಾಡಿ ಯವರ ಮಗನಾಗಿ 15 ಫೆಬ್ರವರಿ 1739ರಲ್ಲಿ ಜನಿಸಿದರು. ಇವರು ಜನನವಾದ ಸೂರಗೊಂಡನ ಕೊಪ್ಪವನ್ನು ಭಾಯಗಢ ಎಂದು ಕರೆಯಲಾಗುತ್ತದೆ. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನವನ್ನು ಪಡೆದು ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನದ ಜ್ಯೋತಿ ಬೆಳಗಿಸಿದ ಶ್ರೇಷ್ಟ ಸಂತರೆನಿಸಿದ್ದಾರೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಲಂಬಾಣಿ ಸಮಾಜದ ಯುವ ಮುಖಂಡ ಕೃಷ್ಣನಾಯ್ಕ, ಶಕುಂತಲಬಾಯಿ, ತಾಲ್ಲೂಕಿನಲ್ಲಿ 30 ತಾಂಡಗಳಿವೆ ಸುಮಾರು 26 ಸಾವಿರ ಜನಸಂಖ್ಯೆಯಿದೆ. ಆದರೂ…