Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಮಧುಗಿರಿ: ಅಟಲ್ ಭೂಜಲ ಪಕ್ವಾಡ ಯೋಜನೆ ಕಾರ್ಯಕ್ರಮದಡಿಯಲ್ಲಿ ಡಿ.ವಿ. ಹಳ್ಳಿ ಗ್ರಾಮಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಅಟಲ್ ಭೋಜನ ಯೋಜನೆ ಅಡಿಯಲ್ಲಿ ನೀರಿನ ಉಪಯೋಗ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಕಮ್ಯುನಿಟಿ ಮೊಬೈಲೈಸರ್ ಸ್ವಾತಿ ಮಲ್ಲಿಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಣದ ರಂಗಯ್ಯ, ಕಾರ್ಯದರ್ಶಿ ನವೀನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ , ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ನ್ಯಾಯ ಕೋರಿ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಮಹಿಳೆಯೋರ್ವಳು, ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಬಂದ ಘಟನೆ ಮಧ್ಯಪ್ರದೇಶದ ಶಾದೂಲ್ ಜಿಲ್ಲೆಯಲ್ಲಿ ನಡೆದಿದೆ. ಸೋಹಾಗ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ವ್ಯಕ್ತಿ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಹೋಗಿದ್ದರು. ಇನ್ನೂ ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ಆಕ್ರೋಶಗೊಂಡ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರೆತಂದಿದ್ದಾರೆ. ಬಳಿಕ ಇವರ ದೂರು ಆಲಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುಕೇಶ್ ವೈಶ್ಯ, ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹೆಚ್.ಡಿ.ಕೋಟೆ: ಬೆಂಗಳೂರು ಜೈನ್ ವಿಶ್ವ ವಿದ್ಯಾನಿಲಯ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹೆಚ್.ಡಿ.ಕೋಟೆ ಪಟ್ಟಣದ ಮಿನಿ ವಿಧಾನ ಸೌದದ ಎದುರು ತಾಲ್ಲೂಕು ಪ್ರಗತಿ ಪರ ದಲಿತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಕುರಿತು ಮಾತನಾಡಿ ರಾಜ್ಯ ಸಂಶೋದಕರ ಸಂಘದ ಅದ್ಯಕ್ಷ ಮರಿದೇವಯ್ಯ , ಜೈನ ವಿಶ್ವವಿದ್ಯಾನಿಲಯ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಸಲುವಾಗಿಯೇ ಕಾರ್ಯಕ್ರಮ ರೂಪಿಸಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಪಿತೂರಿ ನಡೆಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುವ ಜೈನ ವಿಶ್ವವಿದ್ಯಾಲಯನ್ನು ಈ ಕೂಡಲೇ ರದ್ದುಗೊಳಿಸಿ ತಪ್ಪಿತಸ್ಥರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಜೀವಿಕ ಬಸವರಾಜು ಮಾತನಾಡಿ, ಇತ್ತೀಚೆಗೆ ಬೆಂಗಳೂರು ಜೈನ ವಿಶ್ವವಿದ್ಯಾನಿಲಯದಲ್ಲಿ ಕಿರುನಾಟಕ ಪ್ರದರ್ಶನ ಮಾಡಿ, ಅಲ್ಲಿನ ಆಯೋಜಕರು ಮತ್ತು ಸಮಿತಿಯವರು ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ತಪ್ಪಿತಸ್ಥರನ್ನು ಗಡಿಪಾರು ಮಾಡಿ ಜೈನ್ ವಿಶ್ವವಿದ್ಯಾಲಯದ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಆದಿಕರ್ನಾಟ ಮಹಾಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ಮಾತನಾಡಿ, ವಿಶ್ವ ವಿದ್ಯಾನಿಲಯವನ್ನು ಮೊದಲು ರದ್ದುಗೊಳಿಸಬೇಕು. ಅಂಬೇಡ್ಕರ್ ರವರಿಗೆ ಅಪಮಾನ ಇಡೀ ಮಾನವನ ಕುಲವೇ…
ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರೂ.3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. 56 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರೂ.180 ಕೋಟಿ ವೆಚ್ಚದಲ್ಲಿ “ಜೀವನ್ ಜ್ಯೋತಿ ಯೋಜನೆಯನ್ನು” ಜಾರಿಗೊಳಿಸಲಾಗುತ್ತಿದೆ. “ಸಹಸ್ರ ಸರೋವರ” ಕಾರ್ಯಕ್ರಮದಡಿ ರಾಜ್ಯದಲ್ಲಿ 1 ಸಾವಿರ ಸರೋವರಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದು ಕೃಷಿ ವಲಯದ ನೀರಾವರಿ ಯೋಜನೆಗಳಿಗೆ ಅನುಕೂಲವಾಗುತ್ತದೆ. ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ “ಭೂ ಸಿರಿ ಯೋಜನೆಯಡಿ” 10 ಸಾವಿರ ರೂಪಾಯಿಗಳ ಧನ ಸಹಾಯವನ್ನು ಒದಗಿಸಲಾಗುವುದು ಒಟ್ಟಾರೆಯಾಗಿ ಕೃಷಿ ಮತ್ತು ಅದಕ್ಕೆ ಪೂರಕ ಚಟುವಟಿಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39031 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. “ಅಮೃತ್ ಸ್ವಾಭಿಮಾನಿ ಕುರಿಗಾಹಿ ಯೋಜನೆ” ಅಡಿಯಲ್ಲಿ 20 ಸಾವಿರ ಫಲಾನುಭವಿಗಳಿಗೆ 355 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆ ಅಡಿಯಲ್ಲಿ ರಾಜ್ಯದ 287 ನಗರ ಪ್ರದೇಶಗಳಲ್ಲಿ…
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟಕೊಟ್ಟ ಘಟನೆ ನಡೆದಿದೆ. ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ಪಾದಯಾತ್ರೆಗೆ ಬಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿಯ ಪ್ರಪಾತಕ್ಕೆ ಕಾಲು ಜಾರಿ ಬೀಳುವ ಅಪಾಯವಿರುವುದರಿಂದ ಪಾನಮತ್ತನಾಗಿ ಚಾರ್ಮಾಡಿ ಘಾಟ್ ನಲ್ಲಿದ್ದ ವ್ಯಕ್ತಿಗೆ ಸ್ಥಳೀಯರು ಹಾಗೂ ಪಾದಯಾತ್ರಿಗರು ಬುದ್ದಿ ಹೇಳಿ ಕಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಜನಪರ ಯೋಜನೆಗಳನ್ನು ಘೋಷಿಸುತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2023- 24ರ ಚುನಾವಣಾ ಬಜೆಟ್ ಅನ್ನು ಎಂದು ವಿಧಾನಸಭಾ ಸದನದ ಒಳಗಡೆ ಮಂಡಿಸುತ್ತಾ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ಗೃಹನಿ ಶಕ್ತಿ ಯೋಜನೆ ಭೂ ರೈತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಕೆ.ದುಡಿಯುವ ಮೂರು ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ 1 ಲಕ್ಷಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ, ಮಕ್ಕಳ ಆರೋಗ್ಯ ತಪಾಸಣೆ ವಾಸ್ತಲ್ಯ ಯೋಜನೆ, ವಿದ್ಯಾ ವಾಹಿನಿ ಯೋಜನೆಗೆ 350 ಕೋಟಿ ಜಾರಿಗೆ, ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂಸೇರಿ ರೈತರಿಗೆ 10000 ಹೆಚ್ಚುವರಿ ಸಹಾಯಧನ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾಸಿಕ 6 ಕೆಜಿ ಅಕ್ಕಿ, ನಿರುದ್ಯೋಗಿ ಯುವಕರಿಗಳಿಗೆ ರೂ.2000, ರೈತರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಮಹಿಳಾ ಕಾಲೇಜುಗಳಿಗೆ ಯೋಗ ತರಬೇತಿ , ಗ್ರಾಮ ಪಂಚಾಯತ್ ಸದಸ್ಯರ 1000 ಗೌರವಧನ ಹೆಚ್ಚಳ, ಬಿಸಿ ಊಟ ಸಹಾಯಕರಿಗೆ ಗೌರವದನ ಹೆಚ್ಚಳ,…
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರದ ಇ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡ ಪತ್ರವನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3ಲಕ್ಷ 7 ಸಾವಿರ ಕೋಟಿ ರೂ. ಮೊತ್ತದ ಅತಿ ದೊಡ್ಡ ಗಾತ್ರದ ಬಜೆಟ್ ಇದಾಗಿದ್ದು. ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ನೀಡಲಾಗಿದ್ದು ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಘೋಷಿಸಲಾಗಿದೆ. ಚುನಾವಣೆ ಹೊಸ್ತಿಲಲ್ಲೆ ಕೊನೆಯ ಬಜೆಟ್ ಮಂಡನೆಯಾಗುತ್ತಿದ್ದು ಜನರನ್ನು ಸರಕಾರದತ್ತ ಸೆಳೆಯುವ ಮಾದರಿಯಲ್ಲಿ ಬಜೆಟ್ ಮಂಡನೆಯಾಗಬಹುದೆಂಬ ಕುತೂಹಲ ಎಲ್ಲರಲ್ಲಿದ್ದು ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಬಜೆಟ್ ನಲ್ಲಿ ರೈತರಿಗೆ ಆಫರ್ ನೀಡಲಾಗಿದ್ದು ಬಡ್ಡಿ ರಹಿತ ಸಾಲ ಸೌಲಭ್ಯ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ಸೌಲಭ್ಯ ನೀಡುವುದಾಗಿ ಬಜೆಟ್ ಮಂಡಿಸಲಾಗಿದೆ. ಇನ್ನೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 781 ಕೋಟಿ ರೂ. ಆರೋಗ್ಯ ಕ್ಷೇತ್ರಕ್ಕೆ ಅನುದಾನ ನೀಡಲಾಗಿದ್ದು 438 ನಮ್ಮ ಕ್ಲಿನಿಕ್ ಸ್ಥಾಪನೆ ಮಾಡುವುದರ ಜೊತೆಗೆ 1000 ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಬೆಂಗಳೂರು: ಭಾರತೀಯ ಜನತಾ ಪಕ್ಷದ ಆಡಳಿತದ ಅವಧಿ ಕೊನೆಯ ಆಯವಯವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಬೆಳಗ್ಗೆ 10: 15_ ಗಂಟೆಗೆ ತನ್ನ ಎರಡನೇ ಅವಧಿಯ ಬಜೆಟ್ ಅನ್ನು ಮಂಡನೆ ಮಾಡುವ ಪ್ರಾರಂಭದಲ್ಲಿ ಕುವೆಂಪು ಅವರ ಬದಲಾವಣೆಯ ಕಾಲ ಬರುತ್ತಾ ಇದೆ. ಕವನದ ಮೂಲಕ ಕಾಂಗ್ರೆಸ್ಸಿಗೆ ಪರೋಕ್ಷವಾಗಿ ಟಾಂಗ್ ನೀಡಿ ನೀವು ಜನರ ಕಿವಿಗೆ ಹೂ ಬಿಟ್ಟಿದ್ದೀರಿ ,ಅದಕ್ಕೆ ಜನ ನಿಮ್ಮ ಕಿವಿಗೆ ಹೂವಿಟ್ಟಿದ್ದಾರೆ ಎಂದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಭಟಿಸಿ ಸರ್ಕಾರ ಬರಿ ಸುಳ್ಳು ಭರವಸೆಗಳನ್ನು ನೀಡಿ ಜನರ ಕಿವಿಗೆ ಹೂವು ಇಡ್ತಾ ಇದೆ. ನೀವು ಘೋಷಿಸಿದ ಯೋಜನೆಗಳನ್ನು ಒಂದನ್ನು ಜಾರಿಗೆ ತಂದಿದ್ದೀರಾ? ಎಂದು ಪ್ರಶ್ನಿಸಿ ಸದನದಲ್ಲಿ ಕೆಲಕ್ಷಣ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಂತರ ಸಭಾಧ್ಯಕ್ಷರು ಸಭೆಯನ್ನು ಸಂಜಯಸಿ ಮುಖ್ಯಮಂತ್ರಿಗಳಿಗೆ ಬಜೆಟ್ ಮಂಡನೆ ಮಾಡಲು ಅವಕಾಶ ಮಾಡಿಕೊಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು ಇದನ್ನ ಗಮನದಲ್ಲಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ. ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಒಪ್ಪಿಗೆ ಪಡೆಯಲಿದ್ದಾರೆ. ಬಜೆಟ್ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಿದ್ದಾರೆಯೇ ಎಂದು ಕಾದು ನೋಡಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ವಿರುದ್ಧ ಪ್ರಿಯಕರನ (Lover) ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆಯಾದ ವ್ಯಕ್ತಿ ಹೂಟಗಳ್ಳಿ ನಿವಾಸಿ ಮಂಜು ಎಂದು ತಿಳಿದು ಬಂದಿದೆ. ಪತ್ನಿ ಲಿಖಿತಾ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಮಂಜುನ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ 12 ವರ್ಷದ ಹಿಂದೆ ಮಂಜು ಹಾಗೂ ಲಿಖಿತಾ ಅವರ ಮದುವೆಯನ್ನು ಕುಟುಂಬಸ್ಥರು ಮಾಡಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ ಇತ್ತೀಚೆಗೆ ಲಿಖಿತಾ ಪತಿಯನ್ನು ಬಿಟ್ಟು ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಈ ವೇಳೆ ಹಿರಿಯರು ರಾಜಿ ಪಂಚಾಯಿತಿ ನಡೆಸಿ ಲಿಖಿತಾಳನ್ನು ಮತ್ತೆ ಗಂಡನ ಮನೆಗೆ ವಾಪಸ್ ಕಳುಹಿಸಿದ್ದರು. ಈ ನಡುವೆ ಪತಿ, ಪತ್ನಿಗೆ ಅನೈತಿಕ ಸಂಬಂಧ ಮುಂದುವರಿಸದಂತೆ ಹೇಳಿದ್ದನಂತೆ. ಇದರಿಂದ ಕೋಪಗೊಂಡ ಪತ್ನಿ ಲಿಖಿತಾ, ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿರುವ…