Author: admin

ತುಮಕೂರು:  ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ, SMAM, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ, ಜೇನುಕೃಷಿ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ತೋಟಗಾರಿಕಾ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೂಪ ಎನ್.ಎಸ್. ಮನವಿ ಮಾಡಿದ್ದಾರೆ. ಹನಿ ನೀರಾವರಿ : ಅಡಿಕೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಈ ಯೋಜನೆಯಡಿ 2 ಹೆಕ್ಟೇರ್‌ವರೆಗೆ ಸಾಮಾನ್ಯ ವರ್ಗ, ಪ.ಜಾತಿ/ಪ.ಪಂಗಡ ವರ್ಗಕ್ಕೆ ಶೇ.90ರಷ್ಟು ಸಹಾಯಧನ ನೀಡಲಾಗುವುದು. ಪ.ಜಾತಿ/ಪ.ಪಂಗಡ ರೈತರು ಹನಿ ನೀರಾವರಿ ಪಡೆದು 7 ವರ್ಷಗಳಾಗಿದ್ದಲ್ಲಿ ಮತ್ತೊಮ್ಮೆ ಸಹಾಯಧನ ಪಡೆಯಲು ಅರ್ಹರಿರುತ್ತಾರೆ. SMAM ಯೋಜನೆ : ಈ ಯೋಜನೆಯಡಿ ಪವರ್ ವೀಡರ್, ಬ್ರಷ್ ಕಟರ್, ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ದೋಟಿ, ಮತ್ತಿತರ ಯಂತ್ರೋಪಕರಣಗಳನ್ನು ಖರೀದಿಸಿದ ರೈತರಿಗೆ ಶೇ.40 ರಿಂದ 50ರವರೆಗೆ ಸಹಾಯಧನ ನೀಡಲಾಗುವುದು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ (ನರೇಗಾ)ಯೋಜನೆ: ನರೇಗಾ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ಪುನಶ್ಚೇತನ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುವುದು. ಜೇನುಕೃಷಿ:- ಜೇನುಕೃಷಿ ಯೋಜನೆಯಡಿ ರೈತರ…

Read More

ತುಮಕೂರು:  ರುಡ್‌ ಸೆಟ್ ಸಂಸ್ಥೆ ವತಿಯಿಂದ ಜುಲೈ 14 ರಿಂದ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು. ಅವರು ನಗರದ ಎಂಪ್ರೆಸ್‌ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ಯಾಟ್ಸ್‌ ಹಾಗೂ ರೋಸ್ಟರ್‌ ತಂತ್ರಾಂಶ ನಿರ್ವಹಣೆ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು. ದೇಶದ ಭವಿಷ್ಯವೇ ಮಾನವ ಸಂಪನ್ಮೂಲ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದ ಅವರು  ದೇಶದ ಬಾಹ್ಯ ರಕ್ಷಣಾ ವ್ಯವಸ್ಥೆಯೇ ಆಗಲಿ,  ಆಂತರಿಕ ಭದ್ರತೆಯನ್ನು ಒದಗಿಸುವ ಪೋಲೀಸ್‌ ವ್ಯವಸ್ಥೆಯೇ ಆಗಲಿ ಎಲ್ಲವೂ ಮೌಲ್ಯಯುತ ಶಿಕ್ಷಣದ ಮೇಲೆಯೇ ನಿಂತಿದೆ ಎಂದರು. ಕನಿಷ್ಟ ಹತ್ತು ಮೌಲ್ಯಗಳನ್ನು ಪರಿಗಣಿಸಿ ಪಠ್ಯಪುಸ್ತಕಗಳನ್ನು ರಚಿಸಿ ವಿದ್ಯಾರ್ಥಿಗಳಲ್ಲಿ ಮೌಲ್ಯ ಬಿತ್ತುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಬುನಾದಿ ಮೌಲ್ಯಯುತವಾಗಿದ್ದರೆ ಕಟ್ಟಡ ನಿರ್ಮಿಸುವುದು ಸರಳ ಎಂದರು. ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿಯವರ ನೇತೃತ್ವದಲ್ಲಿ ಜಿಲ್ಲಾ ಪಿಯು ವ್ಯವಸ್ಥೆ ಪರಿಣಾಮಕಾರಿ ಮೂಡಿ ಬರುತ್ತಿರುವುದು ಮೆಚ್ಚುವಂತದ್ದು…

Read More

ತುಮಕೂರು:  ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟವನ್ನು ಕೈಬಿಡುವಂತೆ ಕೇಂದ್ರ ರೈಲ್ವೆ ಖಾತೆ ಸಚಿವ ಸೋಮಣ್ಣ ತಿಳಿಸಿದ್ದು, ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ  ಎಂದು  ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಕೇಂದ್ರ ಸಚಿವ ವಿ ಸೋಮಣ್ಣ ಅವರ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಹೇಮಾವತಿ ನೀರನ್ನು ರಾಮನಗರಕ್ಕೆ ಅಥವಾ ಕುಣಿಗಲ್ ಗೆ  ತೆಗೆದುಕೊಂಡು ಹೋಗಲು ನಮ್ಮ ಯಾವುದೇ ತಕರಾರು ಇಲ್ಲ ಎಂದು ಹೇಳಿದರು. ಯಾವುದೇ ಜಿಲ್ಲೆಗೂ ಅನ್ಯಾಯವಾಗಬಾರದು ಎಂಬ ಒತ್ತಾಸೆ ನಮ್ಮದಾಗಿದೆ. ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೂ ಕೂಡ ನಾವು ಇರುತ್ತೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಸ್ವಚ್ಛಂದವಾಗಿ ಆಟ–ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ನಲಿವು, ಶಿಕ್ಷಣ, ವಿಶ್ರಾಂತಿ, ನೆಮ್ಮದಿಯನ್ನು ಕಸಿದುಕೊಳ್ಳುವ ಅನಿಷ್ಠ ಪದ್ಧತಿಯಾಗಿದೆ. ಅಂಕಿ–ಅಂಶದ ಪ್ರಕಾರ ವಿಶ್ವದಲ್ಲಿ 160 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ ಮಕ್ಕಳು ಹಾಗೂ 18 ವರ್ಷದೊಳಗಿನ ಕಿಶೋರ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನು ಅಪರಾಧ. ಮಕ್ಕಳು ಅವರ ಬಾಲ್ಯವನ್ನು ಸ್ವಚ್ಛಂದವಾಗಿ ಕಳೆಯಲು ಪೋಷಕರು…

Read More

ತುಮಕೂರು: ಪರಿಸರ ಹಸಿರಾಗಿದ್ದಲ್ಲಿ ಮಾತ್ರ ನಾವೆಲ್ಲಾ ಆರೋಗ್ಯವಾಗಿರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನ ಕಾರ್ಯಕ್ರಮವನ್ನು ನಗರದ ಅಮಾನಿಕೆರೆ ಪಾರ್ಕ್ನಲ್ಲಿ ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶುದ್ಧ ನೀರು ಹಾಗೂ ಶುದ್ಧ ವಾತಾವರಣ ಪಡೆಯಬೇಕೆಂದರೆ ಪರಿಸರವನ್ನು ಹಸಿರುಗೊಳಿಸಬೇಕು. ಗಿಡವನ್ನು ನೆಡುವುದರೊಂದಿಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸುವುದು ಬಹು ಮುಖ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅನುಪಮ ಹೆಚ್. ಮತ್ತು ದೇವರಾಜು ಸೇರಿದಂತೆ ವಿವಿಧ ನ್ಯಾಯಾಧೀಶರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಪ್ರತಿನಿತ್ಯ ದಿನಪತ್ರಿಕೆ ಓದುವುದರಿಂದ ಜಗತ್ತಿನ ಆಗುಹೋಗು ತಿಳಿದುಕೊಳ್ಳುವುದು ಸಾಧ್ಯ ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಿಣಿ ತಿಳಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ಶಾಂತಿನಿಕೇತನ ಯುವವೃಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಶಾಂತಿನಿಕೇತನ ಜ್ಞಾನ ಸ್ಪೂರ್ತಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಬಹುಮಾನ ವಿತರಿಸಿ ಮಾತನಾಡಿದರು. ಶಾಂತಿನಿಕೇತನ ಸಂಸ್ಥಾಪಕ ರಾಜೇಶ್ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವನ್ನು ಮೂಡಿಸಲು ಶಾಂತಿನಿಕೇತನವು ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದೆ. ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ತುಮಕೂರಿನ ಬೇರೆ ಬೇರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಈಗಾಗಲೇ 30 ಸಂಚಿಕೆಗಳನ್ನು ಪೂರೈಸಿದೆ ಎಂದರು. ವ್ಯವಹಾರಾಡಳಿತ ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹೊಸ ಆವಿಷ್ಕಾರದ ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ವಿಭಿನ್ನ ಕೌಶಲ್ಯ ಕಲಿತುಕೊಳ್ಳಬೇಕು ಎಂದರು. ಕಲಾ ಕಾಲೇಜಿನ ಇತಿಹಾಸ…

Read More

ತಿಪಟೂರು: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ ರೈತಾಪಿ ವರ್ಗದವರಿಗೆ ಉಪಯೋಗವಾಗುವ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆವಿಮೆ ಮಾಡಿಸಲು ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ. ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಉದಯ್ ಕೆ. ರೈತಾಪಿ ವರ್ಗದವರ ಬಾಳು ಬೆಳಗಿಸುವ ಕೃಷಿ ಕ್ಷೇತ್ರದಲ್ಲಿ ಸಮಾಜದ ಎಲ್ಲಾ ಜನತೆಗೆ ಅನ್ನಕೊಡುವ ರೈತನಿಗೆ ಬೆಳೆ ಬೆಳೆಯುವ, ಭೂಮಿಯ ಹದದಿಂದ, ಬೆಳೆ ಕಟಾವಿನವರೆಗೂ ಅನೇಕ ಪ್ರಾಕೃತಿಕ ವಿಕೋಪಗಳಿಂದ ಬೆಳೆನಷ್ಟ ಅನುಭವಿಸಬಾರದು ಎಂಬ ಕಾರಣಕ್ಕೆ ಕೇಂದ್ರ ಸರಕಾರದ ವತಿಯಿಂದ ಫಸಲ್ ಭೀಮಾ ಬೆಳೆ ವಿಮೆಯಂತಹ ಅದ್ಬುತ ಯೋಜನೆಯನ್ನು ಪರಿಚಯಸಲಾಗಿದೆ. ಈ ಒಂದು ವಿಮೆ ರಾಜ್ಯದ ಎಲ್ಲಾ ರೈತಾಪಿ ವರ್ಗದವರಿಗೂ ಉಪಯೋಗವಾಗಬೇಕೆಂದು ಪೂಜ್ಯ ವೀರೇಂದ್ರ ಹೆಗ್ಗಡೆಯವರು ರಾಜ್ಯದ ಪ್ರತಿ ತಾಲ್ಲೂಕಿನ CSC ಸೇವಾದರರಿಂದ ರೈತರಿಗೆ ಬೆಳೆವಿಮೆ ಮಾಡಿಸಿಕೊಳ್ಳುವ ಸವಲತ್ತನ್ನು ಒದಗಿಸಿಕೊಡಲಾಗಿದೆ ಎಂದರು. ಕಳೆದ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನಾದ್ಯಂತ ಸರಿಸುಮಾರು 4,252 ರೈತರಿಗೆ ಬೆಳೆವಿಮೆ ಮಾಡಿಕೊಡಲಾಗಿತ್ತು. ಪ್ರಸ್ತುತ…

Read More

ಸರಗೂರು:  ಗ್ರಾಮದಲ್ಲಿ ‘ಗ್ರಾಮ ಅರಣ್ಯ ಹಕ್ಕು ಸಮಿತಿ’ ರಚಿಸಿ ಅಲ್ಲಿನ ಜನರನ್ನು ಅರಣ್ಯವಾಸಿಗಳೆಂದು ಪರಿಗಣಿಸಿ ಸರಕಾರದಿಂದ ಸಿಗುವ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್ ಸೂಚನೆ ನೀಡಿದರು. ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಸ್ಕೂರು ಹಾಡಿಯಲ್ಲಿ ಶುಕ್ರವಾರದಂದು ಅರಣ್ಯ ಹಕ್ಕುಗಳ ಹಾಗೂ ಮಹಿಳಾ ಗ್ರಾಮ ಸಭೆ ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನವೆಂಬರ್ ತಿಂಗಳ ಕೆರೆ ಹಾಡಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ  ಆರ್ಜಿಗಳನ್ನ ಅರಣ್ಯವಾಸಿಗಳ ಆದಿವಾಸಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಕೆಲವೇ ದಿನಗಳಲ್ಲಿ 700 ಕುಟುಂಬಗಳಿಗೆ ವೈಯಕ್ತಿಕವಾಗಿ ಅರಣ್ಯ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ. 234 ಕುಟುಂಬಗಳಿಗೆ ಉಪವಿಭಾಗಾಧಿಕಾರಿಗಳಿಂದ ಅನುಮೋದನೆಗೊಂಡು ಜಿಲ್ಲಾಧಿಕಾರಿ…

Read More

ಸರಗೂರು:  ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸಂಪುಟದಲ್ಲಿ ಉನ್ನತ ಮಟ್ಟದ ಸ್ಥಾನ ನೀಡುವಂತೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸಂಪುಟ ವಿಸ್ತರಣೆ ಸಭೆಯಲ್ಲಿ ಉನ್ನತ ಮಟ್ಟದ ಸಚಿವ ಸ್ಥಾನ ನೀಡಲಿ ಎಂದು ಪಟ್ಟಣ ಆರ್ಯ ಈಡಿಗ ಸಮಾಜದವರು ಸಂತೆ ಮಾಸ್ತಮ್ಮ ಹಾಗೂ ರಾಮಮಂದಿರ ದೇವಸ್ಥಾನದಲ್ಲಿ ಶುಕ್ರವಾರ ದಂದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸಮಾಜದ ನಾಯಕರು ಬಸವರಾಜು, ‌ ಜನಾರ್ಧನ್ ಪೂಜಾರು, ದಿ.ಎಸ್.ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಆರ್.ಎನ್.ಜಾಲಪ್ಪ, ಕುಮಾರ್ ಬಂಗಾರಪ್ಪ ಇವರು ಎಲ್ಲಾರೂ ರಾಜ್ಯದಲ್ಲಿ ರಾಜಕೀಯ ಮಾಡಿಕೊಂಡು ಬಂದರು. ಅಲ್ಲಿಂದ ಇಲ್ಲಿಯವರೆಗೆ ಯಾವುದೇ ನಮ್ಮ ಸಮಾಜದ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ.ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಅವರು ಎಲ್ಲಾ ಸಮುದಾಯಗಳ ಜೊತೆ ಕೈಜೋಡಿಸಿಕೊಂಡು ಅಧಿಕಾರದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ…

Read More