Subscribe to Updates
Get the latest creative news from FooBar about art, design and business.
- ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
- ಎಫ್ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್ ನಲ್ಲಿ ಹೆಚ್ಚು ಲಾಭ?
- ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
- ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
- ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
- ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
- ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
- ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ ಎಂದು ದೂರಿದರು. ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳಲಿದೆ. ಈ ಅಧಿವೇಶನ ರಾಜ್ಯ ಸರಕಾರ ಮತ್ತು ವಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಜುಲೈ 3, ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲದ ಉಭಯ ಸದನಗಳ ಕಲಾಪ ನಡೆಯಲಿದೆ. ಜುಲೈ. 3ರ ಮೊದಲ ದಿನವಾದ ಇಂದು ಮಧ್ಯಾಹ್ನ 12 ಗಂಟೆಗೆ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರು ಭಾಷಣ ಮಾಡಲಿದ್ದಾರೆ. ಇನ್ನೂ ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ತಯಾರಿ ನಡೆಸಿದೆ. ವಿಪಕ್ಷಗಳನ್ನು ಮಣಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೂಡ ತಯಾರಿ ನಡೆಸಿದೆ. ಇದೇ ವಿಧಾನಮಂಡಲದ ಅಧಿವೇಶನದಲ್ಲೇ ಕರ್ನಾಟಕ ಬಜೆಟ್ ಅನ್ನು ಕೂಡ ಮಂಡಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಗೃಹ ಜ್ಯೋತಿ ಯೋಜನೆಯಡಿ ಹಿಂಬಾಕಿ ಇದ್ದರೂ ಈ ಯೋಜನೆಯ ಪ್ರಯೋಜನ ದೊರೆಯಲಿದೆ ಎಂಬುದಾಗಿ ಇಂಧನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಇಲಾಖೆಯೂ, ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಹಿಂಬಾಕಿ ಪಾವತಿಸುವುದು ಕಡ್ಡಾಯಗೊಳಿಸಲಾಗಿತ್ತು. ಮೂರು ತಿಂಗಳ ಕಾಲಾವಕಾಶ ಇರುವ ಕಾರಣ ಅದರೊಳಗೆ ಹಿಂಬಾಕಿ ಪಾವತಿಸಿದ್ರೇ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ. ಗ್ರಾಹಕರು ವಿದ್ಯುತ್ ಬಿಲ್ ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ. 30 ರೊಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಕಲಿ ಲಿಂಕ್ ಹಾಗೂ ಆ್ಯಪ್ ಗಳ ಬಗ್ಗೆ ಎಚ್ಚರವಹಿಸಿ ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ನಾಗರಿಕರು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ ಸೈಬರ್ ಖದೀಮರು ಹಲವು ನಕಲಿ ಆ್ಯಪ್ ಹಾಗೂ ಲಿಂಕ್ ಗಳನ್ನು ಹರಿಯಬಿಟ್ಟು, ನಾಗರಿಕರ ಮಾಹಿತಿಗೆ ಕನ್ನ ಹಾಕುತ್ತಿದ್ದಾರೆ. ‘ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸರ್ಕಾರ ಯಾವುದೇ ಆ್ಯಪ್ ಅನ್ನು ಪರಿಚಯಿಸಿಲ್ಲ. ಆದರೆ ಹಲವು ನಕಲಿ ಆ್ಯಪ್ ಗಳು ಡೌನ್ ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಫಲಾನುಭವಿಗಳು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆ್ಯಪ್ ಗಳನ್ನು ರಿಪೋರ್ಟ್ ಮಾಡಬೇಕು. ಈ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್. ಡಿ ಶರಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು-ಧಾರವಾಡ ನಡುವೆ ಆರಂಭಗೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಯಾಣಿಕರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 8 ಕೋಚ್ ಗಳ ಈ ರೈಲಿನಲ್ಲಿ 52 ಸೀಟುಗಳು ಎಕ್ಸಿಕ್ಯುಟಿವ್ ಕ್ಲಾಸ್ ದ್ದಾಗಿವೆ. 478 ಸೀಟುಗಳು ಎಸಿ ಚೇರ್ ಕಾರ್ ಆಗಿವೆ. ಬೆಂಗಳೂರಿನಿಂದ ಬೆಳಿಗ್ಗೆ ಹೊರಟರೆ ಮಧ್ಯಾಹ್ನದೊಳಗೆ ಧಾರವಾಡಕ್ಕೆ ತಲುಪುತ್ತಿರುವುದು, ಮಧ್ಯಾಹ್ನ ಧಾರವಾಡದಿಂದ ಹೊರಟು ಸಂಜೆ ಬೆಂಗಳೂರಿಗೆ ತಲುಪುತ್ತಿರುವುದು ಪ್ರಯಾಣಿಕರ ಸ್ಪಂದನೆ ಜಾಸ್ತಿಯಾಗಲು ಕಾರಣವಾಗಿದೆ. ಇತರೇ ರೈಲುಗಳಿಗಿಂತ ದರ ಬಹಳ ಅಧಿಕವಿದ್ದರೂ ನೂಕುನುಗ್ಗಲು ಇಲ್ಲದ, ಸುಖ ಪ್ರಯಾಣಕ್ಕಾಗಿ ವಂದೇ ಭಾರತ್‌ಗೆ ಆದ್ಯತೆ ನೀಡುತ್ತಿದ್ದಾರೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯ, ವೇಗವಾದ ಪ್ರಯಾಣ ಸಿಗುತ್ತಿರುವುದರಿಂದ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಮೈಸೂರು-ಚೆನ್ನೈ ವಂದೇ ಭಾರತ್ ಯಶಸ್ವಿಯಾದಂತೆ ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಕೂಡ ಯಶಸ್ವಿಯಾಗಲಿದೆ ಎಂದು ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕಿ (ಆಡಳಿತ) ಕುಸುಮಾ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ರೈಲು ಡಿಕ್ಕಿ ಹೊಡೆದು ಸುಮಾರು 60 ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಕಾರಾಬಾದ್ ಜಿಲ್ಲೆಯ ಧಾರೂರ್ ಮಂಡಲದಲ್ಲಿರುವ ಡೋರ್ನಾಲ್ ಗ್ರಾಮದಲ್ಲಿ ಮೇಕೆಗಳು ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, ಮೇಕೆಗಳು ಕಿಷ್ಟಪ್ಪ ಎಂದು ಗುರುತಿಸಲಾದ ವ್ಯಕ್ತಿಗೆ ಸೇರಿವೆ. ತರೂರ್ ಮಂಡಲದ ಡೋರ್ನಾಲ್ ಗ್ರಾಮದಲ್ಲಿ ಇಂದು ಹಳಿ ದಾಟುತ್ತಿದ್ದ 60 ಮೇಕೆಗಳಿಗೆ ರೈಲಿಗೆ ಡಿಕ್ಕಿ ಹೊಡೆದಿದ್ದು, 60 ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. ಮೋದಿಯವರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾರ್ಯವನ್ನು ನಿರ್ವಹಿಸುವ ವಿಶೇಷ ರಕ್ಷಣಾ ತಂಡ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬ ಮಹಿಳೆಯ ಜೊತೆ ಆನ್ ಲೈನ್ ಲೈವ್ ಸೆಕ್ಸ್ ಚಾಟ್ ಮಾಡಿ 10 ಸಾವಿರ ರೂಪಾಯಿ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 38 ವರ್ಷದ ವ್ಯಕ್ತಿ ಕಾಜಲ್ ಎಂದು ಗುರುತಿಸಲಾದ ಮಹಿಳೆಯೊಂದಿಗೆ 10 ನಿಮಿಷಗಳ ಕಾಲ ಸೆಕ್ಸ್ ಚಾಟ್ ಮಾಡಿದ್ದು, ಫೋನ್ ಕರೆ ಕಟ್ ಮಾಡುವಾಗ ಮಹಿಳೆಯು ಸಂತ್ರಸ್ತನ ಎಲ್ಲಾ ಸಂಪರ್ಕ ವಿವರಗಳನ್ನು ಪಡೆದಿದ್ದಳು. ಸ್ವಲ್ಪ ಸಮಯದ ನಂತರ, ಅವಳು ಮತ್ತೆ ಅವನಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಳು, ಹಣ ನೀಡದಿದ್ದರೇ ಅವಳು ವೀಡಿಯೊವನ್ನು ಫೇಸ್ ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಳು. ಆರೋಪಿಯನ್ನು ಸುಮಾರು 12 ಗಂಟೆಗಳ ಕಾಲ ಬ್ಲಾಕ್ ಮೇಲ್ ಮಾಡಿ ಆಕೆ ನೀಡಿದ ಖಾತೆಗೆ ಹಣ ಕಳುಹಿಸುವಂತೆ ಮಾಡಲಾಗಿತ್ತು. ಮತ್ತೆ ಮತ್ತೆ ಆಕೆ ಹಣಕ್ಕಾಗಿ ಪೀಡಿಸಲು ಆರಂಭಿಸಿದಾಗ, ಸಂತ್ರಸ್ತ ವೈಟ್ ಫೀಲ್ಡ್ ವಿಭಾಗದ ಬೆಳ್ಳಂದೂರು ಪೊಲೀಸರನ್ನು ಸಂಪರ್ಕಿಸಿ ಆಕೆಯ ವಿರುದ್ಧ ದೂರು ದಾಖಲಿಸಿದರು. ಸಂತ್ರಸ್ತ ವ್ಯಕ್ತಿ…
ಮಂಡ್ಯ: ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮದ್ದೂರಮ್ಮ ದೇವಾಲಯದ ಕೊಳದಲ್ಲಿ ನಡೆದಿದೆ 16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ ಸಿಪಿಯ ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ರಮೇಶ್ ಬೈಸ್ ಪ್ರಮಾಣವಚನ ಬೋದಿಸಿದರು. ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA