Author: admin

ಇಸ್ಲಾಮಾಬಾದ್: ದಿನದಿಂದ ದಿನಕ್ಕೆ ಆರ್ಥಿಕವಾಗಿ ದಿವಾಳಿಯಾಗುತ್ತಿರುವ ಪಾಕಿಸ್ಥಾನಕ್ಕೆ ಬೆಲೆಯ ಏರಿಕೆ ನೋವಿನ ಮೇಲೆ ಬರೆ ಎಳೆದಂತಾಗುತ್ತದೆ. ಬುಧವಾರ ರಾತ್ರೋ ರಾತ್ರಿ ತೈಲ ಬೆಲೆ ಗಗನಕ್ಕೇರಿದ್ದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಷರತ್ತುಗಳ ಮೇರೆಗೆ ಬೆಲೆ ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅತ್ಯಂತ ಗರಿಷ್ಠ ಮಟ್ಟಕ್ಕೆ ಹೆಚ್ಚಾಗಿದ್ದು ಪೆಟ್ರೋಲ್ ಬೆಲೆ 22.20 ರೂ. ಮತ್ತು ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಠ 272 ರೂ.ಗಳಿಗೆ ತಲುಪಿದೆ. ಹೈಸ್ಪೀಡ್ ಡೀಸೆಲ್ (Diesel) ಬೆಲೆ 17.20 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 280 ರೂ.ಗೆ ಹೆಚ್ಚಳವಾಗಿದೆ. ಸೀಮೆ ಎಣ್ಣೆ ಬೆಲೆ 12.90 ರೂ. ಹೆಚ್ಚಿಸಿದ್ದು ಪ್ರತಿ ಲೀಟರ್‌ಗೆ 202.73 ರೂ.ಗಳಿಗೆ ಮಾರಾಟವಾಗುತ್ತಿದೆ. ಜೊತೆಗೆ ಲಘು ಡೀಸೆಲ್ ಬೆಲೆ 9.68 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ 196.68 ರೂ.ಗಳಿಗೆ ಮಾರಾಟವಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಜನೆತಯು ಬಿಜೆಪಿ ಆಡಳಿತವನ್ನುಮೆಚ್ಚಿಕೊಂಡಿದ್ದು ಅವರ ಒಲವು ನಮ್ಮ ಪಕ್ಷದತ್ತಿದೆ ಈ ಭಾರಿಯು ಬಿಜೆಪಿ ಅಧಿಕಾರವನ್ನು ಪಡೆದುಕೊಳ್ಳವುದು ಖಚಿತವಾಗಿದೆ ಎಂದು  ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ.ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ರಾಜ್ಯದಲ್ಲಿ ಅಧಿವೇಶನ ಪ್ರಾರಂಭವಾಗಿದ್ದು ಆರೋಪ ಪ್ರತ್ಯಾರೋಪಗಳ ಪಟ್ಟಿ ಬೆಳೆಯುತ್ತಲೇ ಇದೆ. ಬಿಜೆಪಿ ಸರಕಾರದ ವಿರುದ್ಧ ಸರ್ಕಾರ ಧಾವಂತದಲ್ಲಿ ಟೆಂಡರ್ ಗಳನ್ನು ಕರೆದು ಅಲಾಟ್ ಮಾಡಿದೆ ಎಂದು ಬಿಜೆಪಿ ಶಾಸಕರೇ ಆಗಿರುವ ಗೂಳಿಹಟ್ಟಿ ಶೇಖರ್ ದಾಖಲೆ ಸಮೇತ ಅರೋಪ ಮಾಡಿರುವುದನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಗುತ್ತಿಗೆ ವಿಷಯದಲ್ಲಿ ಬಿಜೆಪಿಯು ಕಮಿಷನ್ ಸರಕಾರ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಈ ವಿವಾಧವು ಅಸ್ತ್ರವಾಗಿ ಪರಿಣಮಿಸಿದೆ. ಈ ವಿಷಯದ ಕುರಿತು ಮಾತನಾಡಿದ ಬಿಜೆಪಿ ಶಾಸಕ ಸಿಟಿ ರವಿ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಅಲ್ಲಗಳೆದಿದ್ದಾರೆ. ವಿಧಾನ ಸೌಧದ ಬಳಿ ಮಾಧ್ಯಮಗಳೊಡನೆ ಮಾತಾಡಿದ ಬಿಜೆಪಿ ಅವರು ಕಾಂಗ್ರೆಸ್ ಆಧಾರವಿಲ್ಲದೆ ಆರೋಪ ಮಾಡುವುದನ್ನು ಕರಗತ ಮಾಡಿಕೊಂಡಿದೆ. ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ವಿಧಾನ ಸಭೆಯಲ್ಲಿ ವಾದ ವಿವಾಧಕ್ಕಿಂತ ಹೆಚ್ಚಾಗಿ ಪ್ರತಿಭಟನೆ, ಆಕ್ರೋಷ ವ್ಯಕ್ತಪಡಿಸುವ ಘಟನೆಗಳೆ ಹೆಚ್ಚಾಗಿ ಕಂಡು ಬರುತ್ತಿದ್ದು ಸಚಿವರು ಉತ್ತರಕ್ಕಾಗಿ ಸಮಯ ಕೇಳಿದ್ದಕ್ಕೆ ಅವರ ವಿರುದ್ಧ ವಿಪಕ್ಷ ಸದಸ್ಯರು ಗಲಾಟೆ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ ನಡೆಯಿತು. ಅಧಿವೇಶನ ಪ್ರಾರಂಭ ಆಗುತ್ತಲೇ, ಗೋವಾಕ್ಕೆ ಎಷ್ಟು ದನ, ಎಮ್ಮೆ ಮಾಂಸ ರಫ್ತಾಗುತ್ತೆ ಅಂತ ಕಾಂಗ್ರೆಸ್ ಸದಸ್ಯ ಹರೀಶ್ ಕುಮಾರ್ ಪ್ರಶ್ನೆ ಕೇಳಿದರು. ಇದಕ್ಕೆ ಸಮಯ ಬೇಕು ಅಂತ ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿದರು. ಸಚಿವರ ವರ್ತನೆಗೆ ವಿಪಕ್ಷ ಸದಸ್ಯರು ಕಿಡಿಕಾರಿದರು. ಸಚಿವರು ಹೀಗೆ ಅಂದ್ರೆ ಹೇಗೆ. ಮಾಂಸ ರಪ್ತು ಎಷ್ಟು ಆಗುತ್ತದೆ ಅಂತ ಹೇಳಿಲ್ಲ ಅಂದ್ರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಚಿವ ಪ್ರಭು ಚೌಹಾಣ್ ಎರಡು, ಮೂರು ಇಲಾಖೆಯಿಂದ ಮಾಹಿತಿ ತರಿಸಬೇಕು. ಹೀಗಾಗಿ ತಡ ಆಗಿದೆ. ಆದಷ್ಟು ಬೇಗ ಉತ್ತರ ಕೊಡಿಸುವುದಾಗಿ ತಿಳಿಸಿದರು. ಬಳಿಕ ಜೆಡಿಎಸ್ ತಿಪ್ಪೇಸ್ವಾಮಿ ಪ್ರಶ್ನೆಗೂ ಸಚಿವರು ಸಮಯ ಕೇಳಿದರು. ಇದಕ್ಕೆ…

Read More

ಬೆಳಗಾವಿ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಹೊರಗಿನ ಪ್ರಪಂಚಕ್ಕೆ ಪರಿಚಯಿಸುವುದಕ್ಕೆ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬುಧವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕಲಿಕಾ ಹಬ್ಬ 2023ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಾಲಕರು ಅತ್ಯಂತ ಕಾಳಜಿಯಿಂದ ಮಕ್ಕಳನ್ನು ಬೆಳೆಸುತ್ತಾರೆ. ಶಿಕ್ಷಕರು ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡುತ್ತಾರೆ. ವಿವಿಧ ಕಾರ್ಯಕ್ರಮಗಳನ್ನು ಹಾಗೂ ಸ್ಫರ್ಧೆಗಳನ್ನು ಏರ್ಪಡಿಸುವ ಮೂಲಕ ಪ್ರತಿಭೆಗಳು ಹೊರಗೆ ಬರಲು ಮತ್ತು ಬೆಳೆಯಲು ಅವಕಾಶವಾಗುತ್ತದೆ. ಪಾಲಕರು ಮತ್ತು ಶಿಕ್ಷಕರು ಇಬ್ಬರೂ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಕಾಳಜಿಯಿಂದ ಮಾಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ್ಯಾಂತ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ, ಹಳೆಯ ಶಾಲೆಗಳ ದುರಸ್ತಿ, ಶಾಲೆಗಳಿಗೆ…

Read More

ಹುಬ್ಬಳ್ಳಿ: ಕಳೆದ ಹಲವು ವರ್ಷಗಳಿಂದ ಕನ್ನಡದ ಶ್ರೇಷ್ಠ ಕೃತಿಗಳಿಗೆ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ನಿಂದ ಮೂರು ವಿಧದ ಕೃತಿಗಳಿಗೆ ಪುಸ್ತಕ ಪ್ರಶಸ್ತಿಗಳನ್ನು ನೀಡುತ್ತ ಬಂದಿದ್ದು, ಈ ಸಾಲಿಗೆ ಪುಸ್ತಕ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ ನೀಡಲಾಗಿದೆ. ಜಾನಪದಕ್ಕೆ ಸಂಬಂಧಿಸಿದಂತೆ ಕೃತಿಗೆ ಜಾನಪದ ಸಿರಿ ಪ್ರಶಸ್ತಿ, ಮಹಿಳೆಯರು ರಚಿಸಿದ ಯಾವುದೇ ಪ್ರಕಾರದ ಸಾಹಿತ್ಯ ಕೃತಿಗೆ ಅಕ್ಕ ಪ್ರಶಸ್ತಿ ಹಾಗೂ 18 ವರ್ಷದೊಳಗಿನ ಮಕ್ಕಳು ರಚಿಸಿದ ಕೃತಿಗೆ ಅರಳು ಮೊಗ್ಗು ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರತಿಯೊಂದು ಪ್ರಶಸ್ತಿಗೂ 25 ಸಾವಿರ ರೂ.ನಗದು, ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಜನವರಿ 2020 ರಿಂದ ಡಿಸೆಂಬರ್ 2022ರ ಅವಧಿಯಲ್ಲಿ ಪ್ರಥಮ ಬಾರಿಗೆ ಮುದ್ರಣಗೊಂಡ ಕೃತಿಗಳನ್ನು ರಚಿಸಿದ ಲೇಖಕರು ತಮ್ಮ ಕೃತಿಯ 3 ಪ್ರತಿಗಳನ್ನು ಇದೇ ಮಾರ್ಚ್ 10ರೊಳಗಡೆ ಚಂದ್ರಶೇಖರ್ ವಸ್ತ್ರದ, ಬೆಳಗು, ಆನಂದ ಆಶ್ರಮ ರಸ್ತೆ, ಪಂಚಾಕ್ಷರಿ ನಗರ, ಗದಗ. ದೂರುವಾಣಿ 9448677434 ಈ ವಿಳಾಸಕ್ಕೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ಪಡೆದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಹೊಳಲ್ಕೆರೆ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದು, ಸತೀಶ್ ರೆಡ್ಡಿ ಹತ್ಯೆಗೆ 2ಕೋಟಿ ರೂ. ಸುಪಾರಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಟೀಮ್ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸ್ಕೆಚ್ ಹಾಕಿತ್ತು ಎನ್ನಲಾಗಿದೆ. ಹಲವು ದಿನಗಳಿಂದ ಶಾಸಕ ಸತೀಶ್ ರೆಡ್ಡಿ ಅವರನ್ನ ಇಬ್ಬರು ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಇದೀಗ ಇಬ್ಬರನ್ನ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸತೀಶ್ ರೆಡ್ಡಿ, ‘ರಾಜಕೀಯ ಕಾರಣಕ್ಕಾಗಿ ಕೊಲೆಗೆ ಸುಪಾರಿ ನೀಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಇಂತಹ ಹತ್ಯೆ ಸ್ಕೆಚ್​ಗಳಿಗೆ ನಾನು ಭಯಪಡಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನಗೆ ಯಾವುದೇ ಬೆದರಿಕೆ ಕರೆ…

Read More

ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದರು. ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ. ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ ಆಧಾರದಲ್ಲಿ ಚುನಾವಣೆಗಳು ನಡೆಯುವುದಾದರೆ ಸುರೇಶಗೌಡ ಅವರು ಸೋಲುವುದಿಲ್ಲ. ರಾಜಕೀಯದಲ್ಲಿ ಏರುಪೇರುಗಳಾಗುತ್ತವೆ. ಈ ಬಾರಿ ಚುನಾವಣೆಯಲ್ಲಿ ಸುರೇಶ್ ಗೌಡ ಅವರು ಗೆಲ್ಲುತ್ತಾರೆ ಎಂಬ ವರದಿಗಳಿವೆ. ಎಲ್ಲರೂ ಸೇರಿ ಅವರನ್ನು ಗೆಲ್ಲಿಸುವಂತೆ ಸೂಚಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆ.ಆರ್.ಪೇಟೆ: ಕೆ.ಆರ್.ಪೇಟೆಯಲ್ಲಿ ಕ್ಷೇತ್ರದಲ್ಲಿ ಈಗ ಇರುವ ಸರ್ಕಾರ ಯಾವುದೆ ಅಭಿವೃದ್ದಿ ಕೆಲಸ ಮಾಡಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿಖಿಲ್, ಕೆ.ಆರ್.ಪೇಟೆ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ ಮತ್ತು ಜೆಡಿಎಸ್ ಪಕ್ಷ ನನಗೆ ತಾಯಿ ಇದ್ದಂತೆ. ತಾಯಿ ದ್ರೋಹ ಮಾಡಿ ಹೋದ ಹಾಲಿ ಶಾಸಕ ಹಾಗೂ ಮಂತ್ರಿ ಅಗಿರುವವರು ಯಾವುದೆ ಕೆಲಸ ಮಾಡಿಲ್ಲ ಎಂದರು. ಈ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದ ವೇಳೆ ಅಕ್ಕಿಹೆಬ್ಬಾಳು ಹೋಬಳಿ ಮಟ್ಟದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದರು. ನಂತರ ರೋಡ್ ಶೋ ಮುಖಾಂತರ ವೇದಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಚ್.ಟಿ.ಮಂಜು, ಎ.ಆರ್.ರಘು, ಶ್ರೀನಿವಾಸ್, ಜಮೀರ್ ಅಹಮ್ಮದ್ ಮತ್ತು ಹೋಬಳಿಯ ಮಟ್ಟದ ಜೆಡಿಎಸ್ ನ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕಾಂತಾರ ಚಿತ್ರದ ಮೂಲಕ ಪಿಲ್ಮ ಇಂಡಸ್ಟ್ರಿಯಲ್ಲೇ ದಾಖಲೆ ಬರೆಯುವುದರ ಮೂಲಕ ಸ್ಯಾಂಡಲ್ ವುಡ್ ಖ್ಯಾತಿಯನ್ನು ಜಾಗತಿಕವಾಗಿ ಹೆಚ್ಚಿಸಿದ ಯಶಸ್ಸು ನಟ ರಿಷಬ್ ಶೆಟ್ಟಿಗೆ ಸಲ್ಲುತ್ತದೆ. ಕರಾವಳಿ ತೀರದ ಕಥೆಹೊತ್ತು ಬಂದಿದ್ದ ಕಾಂತಾರವು 400 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ರಿಷಬ್ ಶೆಟ್ಟಿ ಅವರ ಕೆಲಸದ ಬಗ್ಗೆ ಮೆಚ್ಚುಗೆಯನ್ನು ಹೆಚ್ಚಿಸಿತ್ತು. ಇದರಿಂದ ರಿಷಬ್ ಶೆಟ್ಟಿ ಅವರಿಗೆ ಈಗ ‘ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ಈ ಸಮಾರಂಭ ನಡೆಯಲಿದೆ. ಈ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಮೂಲಕ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More