Author: admin

ಮುಂಬೈ: ನಿರಂತರ ನಷ್ಟಕ್ಕೆ ಸಿಲುಕಿದ್ದ ಅದಾನಿ ಎಂಟರ್‌ಪ್ರೈಸಸ್‌ ಮತ್ತೆ ಲಾಭದತ್ತ ಹೆಜ್ಜೆ ಹಾಕಿದ್ದು ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ 820 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ. ಹೆಚ್ಚಾಗಿದ್ದು 2022-23ರ ಹಣಕಾಸು ವರ್ಷದಲ್ಲಿ ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80 ಕೋಟಿ ನಿವ್ವಳ ಲಾಭವನ್ನು ಗಳಿಸಬಹುದು ಎಂದು ಬ್ಲೂಮ್‌ಬರ್ಗ್ ಅಂದಾಜಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಯೋಜನೆ ಸಾಕಾರಗೊಳ್ಳಲು ದಿನಗಣನೆ ಆರಂಭವಾಗಿದೆ. ಬೆಳಗಾವಿ ಹೊರವಲಯದ ರಾಜಹಂಸಗಡದಲ್ಲಿ ನಿರ್ಮಾಣವಾಗಿರುವ, ರಾಷ್ಟ್ರದಲ್ಲೇ ಬೃಹತ್ ಆಗಿರುವ ಛತ್ರಪತಿ ಶಿವಾಜಿ ಮಹಾರಾಜ ಭವ್ಯ ಮೂರ್ತಿ ಅನಾವರಣಕ್ಕೆ ಮುಹೂರ್ತ ನಿಗದಿಯಾಗಿದೆ. ತನ್ನಿಮಿತ್ತ ಮಾರ್ಚ್ 4 ಮತ್ತು 5ರಂದು 2 ದಿನಗಳ ಕಾಲ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಾಜಹಂಸಗಡ ಕೋಟೆ ಆವರಣದಲ್ಲಿ ಹಬ್ಬದ ಸಂಭ್ರಮ ನಿರ್ಮಾಣವಾಗಲಿದೆ. ಮಾರ್ಚ್ 5ರಂದು ಬೆಳಗ್ಗೆ 10 ಗಂಟೆಗೆ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣಗೊಳ್ಳಲಿದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರೂ, ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ, ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಯುವರಾಜ ಸಂಭಾಜಿರಾಜೇ ಛತ್ರಪತಿ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಹಾಲಿ ವಿಧಾನಪರಿಷತ್ ಸದಸ್ಯ ಸತೇಜ್ (ಬಂಟಿ) ಪಾಟೀಲ, ಖ್ಯಾತ ಮರಾಠಿ ನಟ ಹಾಗೂ ಲೋಕಸಭಾ ಸದಸ್ಯ ಡಾ. ಅಮೋಲ್ ಕೋಲ್ಲೆ,…

Read More

ತಿಪಟೂರು: ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಿ.ಎನ್.ಪ್ರೇಮ ಮಾತನಾಡಿ, ಸಮುದಾಯದ ಯೋಗ ಕ್ಷೇಮಕ್ಕಾಗಿ ಆರೋಗ್ಯ ಅಮೃತ ಅಭಿಯಾನ ಮಾಡಲಾಗುತ್ತಿದ್ದು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಬಾಲ್ಯ ವಿವಾಹ ನಿಷೇಧ, ಮಹಿಳೆಯರ ಮತ್ತು ಮಕ್ಕಳ ಸಾಗಣೆ ತಡೆಗಟ್ಟುವಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು ತರಬೇತಿಯಲ್ಲಿ ಪ್ರೇಮ ಮಾಹಿತಿ ನೀಡಿದರು. ತರಬೇತಿಯ ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾದ ನೇತ್ರಾವತಿ ಮಾತನಾಡಿ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆರೋಗ್ಯಕ್ಕೆ ಕಿಟ್ ಬಳಸಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯತಿ ಸದಸ್ಯರುಗಳಾದ ಜ್ಯೋತಿ, ರೇಣುಕಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಪಿನಾಥ್, ಕಾರ್ಯದರ್ಶಿ ವಿಜಯಕುಮಾರ್, ಆರೋಗ್ಯ ಇಲಾಖೆಯ ಮಂಜುಳಾ, ಸೌಜನ್ಯ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತರಬೇತಿಯಲ್ಲಿ ಹಾಜರಿದ್ದರು . ಆರೋಗ್ಯ ಇಲಾಖೆಯ ಸಿಬ್ಬಂದಿ, ಆರೋಗ್ಯ ಕಿಟ್ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ವರದಿ: ಆನಂದ, ತಿಪಟೂರು ನಮ್ಮತುಮಕೂರು.ಕಾಂನ…

Read More

ಬೆಂಗಳೂರು: ಡಿಸಿಸಿ ಬ್ಯಾಂಕ್ ನೇಮಕಾತಿ ಮತ್ತು ವ್ಯವಹಾರಗಳ ಕುರಿತು ಸರಕಾರ ತನಿಖೆ ನಡೆಸುತ್ತಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಸೋಮಶೇಖರ್ ಹೇಳಿದ್ಧಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಗಳಲ್ಲಿ ನಡೆದ ಅಕ್ರಮಗಳ ತನಿಖೆಯನ್ನ ಸರ್ಕಾರ ಸಿಬಿಐಗೆ ಕೊಡಬೇಕು ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದರು. , 5 ಡಿಸಿಸಿ ಬ್ಯಾಂಕ್ ಗಳಲ್ಲಿ ಅಕ್ರಮ ಆಗಿದೆ. ಈಗಾಗಲೇ ತನಿಖೆ ನಡೆಯುತ್ತಿದೆ. ಅಕ್ರಮ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನ ವಜಾ ಮಾಡಲಾಗಿದೆ. ಅಕ್ರಮ ಮಾಡಿರೋ ಡಿಸಿಸಿ ಬ್ಯಾಂಕ್ ನಿಂದ ರಿಕವರಿ ಮಾಡೋ ಕೆಲಸ ಆಗ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪೆ.6 ರಂದು ಟರ್ಕಿ ಹಾಗೂ ಸಿರಿಯಾ ದೇಶಗಳಲ್ಲಿ ನಡೆದ ಭೂಕಂಪದಿಂದ ಎರಡು ದೇಶಗಳು ಅಕ್ಷರಶಃ ನಲುಗಿದ್ದು ಸಾವಿನ ಸಂಖ್ಯೆ 41,000 ತಲುಪಿದೆ. ಅವಶೇಷಗಳಡಿಯಿಂದ ಬದುಕುಳಿದವರ ಆಕ್ರಂದನ ಮುಗಿಲು ಮುಟ್ಟಿದೆ. ಅವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಳೆದೊಂದು ವಾರದಿಂದ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿವೆ. ನಿರಾಶ್ರಿತರು ಈಗ ಕೊರೆಯುವ ಚಳಿಯಲ್ಲಿ ಹಾಗೂ ಆಹಾರದ ಕೊರತೆಯಿಂದಾಗಿ ಹೆಣಗಾಡುತ್ತಿದ್ದಾರೆ. ನಗರವಿಡೀ ಸತ್ತ ಜನರ ವಾಸನೆ ಬರುತ್ತಿದೆ. ಅವಶೇಷಗಳಡಿ ಇನ್ನೂ ಹಲವರು ಜೀವಂತವಾಗಿರುವ ಸಾಧ್ಯತೆಯಿದ್ದು, ಎಲ್ಲರನ್ನೂ ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವೈ.ಎನ್.ಹೊಸಕೋಟೆ: ಬೆಟ್ಟಗುಡ್ಡಗಳ ಬೆಂಕಿ ಹಾಕುವುದರಿಂದ ಪರಿಸರ ನಾಶವಾಗಲಿದ್ದು, ಬೆಟ್ಟಕ್ಕೆ ಬೆಂಕಿ ಹಚ್ಚಬಾರದು ಎಂದು ಉಪಅರಣ್ಯ ವಲಯ ವಿಭಾಗಾಧಿಕಾರಿ ಬಸವರಾಜು ತಿಳಿಸಿದರು. ಪರಿಸರಪ್ರಿಯರು ಸಂಘ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ  ಹೋಬಳಿಯ ಇಂದ್ರಬೆಟ್ಟ ಮತ್ತು ಹೊಸದುರ್ಗ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಜಾಗೃತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಟ್ಟ ಗುಡ್ಡಗಳಲ್ಲಿ ಬೆಂಕಿ ಹಾಕುವುದರಿಂದ ಪ್ರಕೃತಿಯ ಜೊತೆಗೆ ಪ್ರಾಣಿ–ಪಕ್ಷಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಬೆಟ್ಟದಲ್ಲಿ ವಾಸಿಸುವ ಕರಡಿ ಚಿರತೆ ಗ್ರಾಮಗಳ ಕಡೆ ಬರುತ್ತವೆ. ಅದರಿಂದ ಬೆಟ್ಟ ಗುಡ್ಡಗಳಿಗೆ ಬೇಸಿಗೆಯಲ್ಲಿ ಅಲ್ಲಿನ ಸ್ಥಳಿಯ ಗ್ರಾಮಸ್ಥರು ರಕ್ಷಣೆ ಕೈಪಿಸಬೇಕು. ಹತ್ತು ವರ್ಷಗಳ ಕಾಲ ಬೆಟ್ಟ ಗುಡ್ಡಗಳನ್ನು ಸಂರಕ್ಷಿಸಿದರೆ ಪಾವಗಡ ತಾಲ್ಲೂಕು ಮಲೆನಾಡಾಗಿ ಮಾರ್ಪಡುತ್ತದೆ ಎಂದರು. ಬೆಕ್ಕಿ ಹಚ್ಚುವುದರಿಂದ ಮೇವು ಚಿಗುರುತ್ತದೆ ಎಂಬ ನಂಬಿಕೆ ಇದೆ. ಆದರೆ ಇದರಿಂದ ಅಲ್ಲಿ ವಾಸ ಮಾಡುತ್ತಿರುವ ಜೀವಜಂತುಗಳು ನಾಶವಾಗುತ್ತವೆ. ಆದ್ದರಿಂದ ಕನಿಷ್ಠ 2–3 ವರ್ಷಗಳ ಕಾಲ ಈ ರೀತಿಯ ಕೃತ್ಯ ಮಾಡಬೇಡಿ. ಆಗ ಇಡೀ ಪರಿಸರ ಸಂಪೂರ್ಣ ಹಸಿರುಮಯವಾಗುತ್ತದೆ. ಆಗ…

Read More

ಪಾವಗಡ: ತಾಲ್ಲೂಕಿನ್ಯಾದಂತ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಪಡಿಸಬೇಕೆಂದು ಇಂದು ಪಾವಗಡ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯನ್ನು ಉದ್ದೇಶಿಸಿ ಎನ್.ಎ.ಈರಣ್ಣ ಮಾತನಾಡಿ, ನಮ್ಮ ಮಾಜಿ ಶಾಸಕರ ತಿಮ್ಮರಾಯಪ್ಪರ ಅವಧಿಯಲ್ಲಿ ತಾಲ್ಲೂಕಿನಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿರುವುದರಿಂದ ಅಧಿವೇಶನ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಅನುಮೋದನೆ ಮಾಡಿಸಿ ಜನರಿಗೆ ಶುದ್ಧ ಕುಡಿಯುವ ನೀರನ್ನು ಕೊಡಿಸಿದ್ದರು ಎಂದರು. ತಾಲ್ಲೂಕಿಕು ಅಧ್ಯಕ್ಷರಾದ ಬಲರಾಮರೆಡ್ಡಿ ಮಾತನಾಡಿ, ನಮ್ಮ ಮಾಜಿ ಶಾಸಕರ ಅವಧಿಯಾದ ನೀರಿನ ಘಟಕಗಳು ಹಾಲಿ ಶಾಸಕರ ಅವಧಿಯಲ್ಲಿ ದುರಸ್ತಿ ಪಡಿಸಲಾಗದೆ ಕೆಟ್ಟು ನಿಂತಿವೆ ಎಂದರು. ಹಾಲಿ ಶಾಸಕರು  ಜನರಿಗೆ ಕನಿಷ್ಠ ಕುಡಿಯುವ ನೀರನ್ನು ಕೊಡಲಾಗದೆ ನಿಸ್ಸೀಮರಾಗಿದ್ದಾರೆಂದರು. ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಬಲರಾಮರೆಡ್ಡಿ, ಎನ್.ಎ. ಈರಣ್ಣ, ರಾಜಶೇಖರಪ್ಪ, ಅಕ್ಕಲಪ್ಪನಾಯ್ಡು, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಯೂನಸ್, ನಗರ ಘಟಕದ ಅಧ್ಯಕ್ಷರಾದ ಗಡ್ಡಂ ತಿಮ್ಮ, ನಲ್ಲಪ್ಪ, ಲಕ್ಷ್ಮೀ ನರಸಪ್ಪ, ಕಾವಗೇರಿ ರಾಮಾಂಜಿ, ವಸಂತ, ಮನು, ಜಿ.ಎ.ವೆಂಕಟೇಶ್,…

Read More

ಸರಗೂರು: ತಾಲೂಕಿನ ಕಂದೇಗಾಲ ಶ್ರೀ ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ  ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಕೊಂಡೋತ್ಸವ ಜರುಗಿತು. ಮಹದೇಶ್ವರ ರಥಗೆ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. ಜಾತ್ರಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನೇತೃತ್ವದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ ಮೂಲಕ ಬೆಳಗ್ಗೆ 9:15ಕ್ಕೆ ಮಹಾರಥೋತ್ಸವಕ್ಕೆ ಚಾಲನೆ ಸಿಕ್ಕಿತು. ನೂರಾರು ಭಕ್ತರು ಉಘೇ ಮಾದಪ್ಪ ಎಂಬ ಘೋಷಣೆಯೊಂದಿಗೆ ರಥವನ್ನು ಎಳೆದರು. ದೇವಾಲಯ ಆವರಣ ಸೇರಿದಂತೆ ಸುತ್ತಮುತ್ತ‌ ನೆರೆದಿದ್ದ ಸಾವಿರಾರು ಭಕ್ತರು ಮೊಳಗಿಸಿದ ‘ಉಘೇ ಮಾದಪ್ಪ, ಉಘೇ ಮಾಯ್ಕಾರ.. ಉಘೇ ಉಘೇ..’ ಎಂಬ ಉದ್ಗಾರ ಕೂಗಿ ಕೊಂಡವನ್ನು ಆದಿದರು . ಹೂವು, ಬಾಳೆ ಕಂದು, ಬಣ್ಣ ಬಣ್ಣಗಳ ವಸ್ತ್ರಗಳಿಂದ ಅಲಂಕೃತಗೊಂಡಿದ್ದ ರಥವು ದೇವಾಲಯದ ಸುತ್ತ ಒಂದು ಸುತ್ತು ಸಾಗಿತು. ರಥ ಸಾಗಿದ ಬಳಿಕ ಪಲ್ಲಕ್ಕಿ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರ ಆತ್ಮಹತ್ಯಾ ದಾಳಿಯಿಂದ 40 ಮಂದಿ ಸಿಆರ್ಪಿಎಫ್ ಯೋಧರು ಅಸುನೀಗಿ ಇಂದಿಗೆ 4 ವರ್ಷಗಳು ಗತಿಸಿದ್ದು ಪ್ರೇಮಿಗಳ ದಿನಾಚರಣೆ ದಿನವು ಭಾರತೀಯರ ಪಾಲಿಗೆ ಕಪ್ಪು ದಿನದಂತಾಗಿದೆ. ಪ್ರತಿವರ್ಷ ಈ ಘಟನೆ ನೆನಸಿಕೊಂಡು ಭಾರತೀಯರ ಆಕ್ರೋಶ ಉಕ್ಕುವುದು ಸಾಮಾನ್ಯ. 2019 ಫೆಬ್ರುವರಿ 14ರಂದು ನಡೆದ ಅಂದಿನ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದು 4 ವರ್ಷಗಳ ಹಿಂದೆ ಇದೇ ದಿನ 40 ಮಂದಿ ಸಿಆರ್ಪಿಎಫ್ ಜವಾನರನ್ನು ಬಲಿತೆಗೆದುಕೊಂಡು ಉಗ್ರ ಆತ್ಮಹತ್ಯಾ ದಾಳಿ ಘಟನೆಯನ್ನು ಎಂದಾದರೂ ಮರೆಯಲು ಸಾಧ್ಯವಾ? ಪ್ರತೀ ವರ್ಷವೂ ಇಡೀ ದೇಶ ಈ ಘಟನೆಯನ್ನು ನೆನಪಿಸಿಕೊಂಡು ಕುದಿದುಹೋಗುತ್ತದೆ., ಅಭಿವೃದ್ಧಿಯತ್ತ ದೇಶ ಸಾಗಲು ವೀರಯೋಧರ ಬಲಿದಾನ ಪ್ರೇರಣೆಯಾಗಲಿ ಎಂದಿದ್ದಾರೆ. ಪುಲ್ವಾಮದಲ್ಲಿ ಈ ದಿನ ನಾವು ಕಳೆದುಕೊಂಡ ವೀರರನ್ನು ಸ್ಮರಿಸುತ್ತಿದ್ದೇನೆ. ಅವರ ಮಹಾ ಬಲಿದಾನವನ್ನು ನಾವ್ಯಾರೂ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಎದೆಗಾರಿಕೆಯು ಪ್ರಬಲ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡುತ್ತದೆ ಎಂದು ನರೇಂದ್ರ ಮೋದಿ ಟ್ವೀಟ್…

Read More

ಆಕ್ಲೆಂಡ್: ನ್ಯೂಜಿಲೆಂಡ್ ದೇಶದಲ್ಲಿ ಗೇಬ್ರಿಯೆಲ್ ಚಂಡಮಾರುತದ ಆರ್ಭಟ ನಡೆದಿದ್ದು, ದೇಶದ ಹಲವು ಭಾಗಗಳಿಗೆ ಹಾನಿಯಾಗಿದೆ. ವಿದ್ಯುತ್ ಗ್ರಿಡ್ ವ್ಯವಸ್ಥೆ ಹಾಳಾಗಿದ್ದು ಲಕ್ಷಾಂತರ ಮನೆಗಳು ಕತ್ತಲಲ್ಲಿ ಮುಳುಗಿವೆ. ಚಂಡಮಾರುತದಿಂದ ಅತಿಹೆಚ್ಚು ಹಾನಿಯಾಗಿದೆ. ಅದರಲ್ಲೂ ಆಕ್ಲೆಂಡ್, ನಾರ್ತ್ಲ್ಯಾಂಡ್, ಕೋರೋಮಂಡೆಲ್, ಗಿಸ್ಬೋರ್ನ್, ಟೈರಾವಿಟಿ, ಹಾಕ್ಸ್ ಬೇ ಮೊದಲಾದ ಕಡೆ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಆಕ್ಲೆಂಡ್ ಮತ್ತು ನಾರ್ತ್ಲ್ಯಾಂಡ್ನಲ್ಲಿ ಪ್ರವಾಹ ಮತ್ತು ಭೂಕುಸಿತ ಘಟನೆಗಳು ಬಹಳ ವರದಿಯಾಗಿವೆ. ಆದರೆ, ಗಿಸ್ಬೋರ್ನ್, ಕೋರೋಮಂಡೆಲ್, ಹಾಕ್ಸ್ ಬೇ ಪ್ರದೇಶಗಳು ಸಂಪೂರ್ಣ ಕಟ್ ಆಫ್ ಆಗಿವೆ. ಗಾರ್ಡಿಯನ್ ವರದಿ ಪ್ರಕಾರ ಗೇಬ್ರಿಯೆಲ್ ಚಂಡಮಾರುತದ ಪರಿಣಾಮ ನ್ಯೂಜಿಲೆಂಡ್ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದು ನಾರ್ತ್ಲ್ಯಾಂಡ್, ಆಕ್ಲೆಂಡ್ ಮತ್ತು ಹಾಕ್ಸ್ಬೇ ಪ್ರದೇಶಗಳಿಂದ ಬಂದಿರುವ ಮಾಹಿತಿ. ಚಂಡಮಾರುತದಿಂದ ಬಹಳ ಹಾನಿಗೊಂಡಿರುವ ಗಿಸ್ಬೋರ್ನ್, ಟೈರಾವ್ಹಿಟಿ, ಬೇ ಆಫ್ ಪ್ಲೆಂಟಿ ಎಂಬ ಪ್ರದೇಶಗಳಲ್ಲಿ ವಿದ್ಯುತ್ ಗ್ರಿಡ್ ಕಾರ್ಯನಿರ್ವಹಣೆ ಎಷ್ಟು ಸ್ಥಗಿತಗೊಂಡಿದೆ. ನ್ಯೂಜಿಲೆಂಡ್ನಲ್ಲಿ ಗೇಬ್ರಿಯೆಲ್ ಚಂಡಮಾರು ಅಪ್ಪಳಿಸಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ರಾಷ್ಟ್ರೀಯ…

Read More