Subscribe to Updates
Get the latest creative news from FooBar about art, design and business.
- ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
- ಎಫ್ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್ ನಲ್ಲಿ ಹೆಚ್ಚು ಲಾಭ?
- ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
- ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
- ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
- ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
- ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
- ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂಧರ್ಭದಲ್ಲಿ ಮಾತನಾಡುತ್ತಿದ್ದರು. ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ, ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು. ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ…
ನಾನು ಸಚಿವನಾದ ಬಳಿಕ ದೆಹಲಿಗೆ ಅಧಿಕೃತ ಭೇಟಿ ನೀಡಿದ್ದು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನೀರು ಶುದ್ದೀಕರಿಸಿ ಕೋಲಾರ ಭಾಗಕ್ಕೆ ನೀಡುತ್ತಿರುವುದನ್ನು ಪ್ರಶ್ನಿಸಿ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ. ಇದರಲ್ಲಿ ಟ್ರಿಬ್ಯೂನಲ್ ರಚನೆಗೆ ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದು, ಜುಲೈ 5ರ ಒಳಗಾಗಿ ಇದನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. ನಾನು ಈ ಹಿಂದೆ ನೀರಾವರಿ ಸಚಿವನಾಗಿ ನಂತರ ಕೊಳಚೆ ನೀರು ಶುದ್ದೀಕರಣ ಮಾಡಿ ಅದನ್ನು ಬೇರೆ ಪ್ರದೇಶಗಳಿಗೆ ನೀಡಲಾಗಿತ್ತು. ಇನ್ನು ವೃಷಭಾವತಿ ಕಲುಷಿತ ನೀರು ಪರಿಷ್ಕರಿಸಿ ಅದನ್ನು ಕೆರೆ ತುಂಬಿಸಲಾಗಿತ್ತು. ನಮ್ಮ ಈ ಕೆಲಸವನ್ನು ಕೇಂದ್ರ ಸರ್ಕಾರ ಕೂಡ ಪ್ರಶಂಸೆ ಮಾಡಿತ್ತು. ಆದರೆ ಈಗ ತಮಿಳುನಾಡು ತಕರಾರು ಎತ್ತಿದ್ದು, ಜುಲೈ 5ರ ಒಳಗಾಗಿ ನ್ಯಾಯಾಧೀಕರಣ ರಚನೆಗೆ ಆದೇಶ ನೀಡಿದೆ. ನಾವು ಈಗಾಗಲೇ 500mcft ಶೇಖರಣೆಯ ಮಾರ್ಕಂಡೇಯ ಯೋಜನೆ, ವರ್ತೂರು ಟ್ಯಾಂಕ್, ನರಸಾಪುರ ಯೋಜನೆ ಕೈಗೆತ್ತಿ ಕೊಂಡಿದ್ದೇವೆ. ಈ ವಿಚಾರವಾಗಿ…
ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ಅಧಿಕೃತ ವಿಪಕ್ಷವಾಗಿ ಕಾರ್ಯನಿರ್ವಹಣೆ ಮಾಡಬೇಕಿದ್ದು, ಇದಕ್ಕಾಗಿ ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಬಿಜೆಪಿಗೆ ನೂತನ ಶಾಸಕಾಂಗ ಪಕ್ಷದ ನಾಯಲನ ಆಯ್ಕೆಯಾಗಬೇಕಿದ್ದು, ಇದಕ್ಕಾಗಿ ಭಾನುವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಭಾನುವಾರ ರಾಜ್ಯ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ, ಎಲ್ಲಾ ಶಾಸಕರುಗಳು ಉಪಸ್ಥಿತರಿರಲಿದ್ದು, ಅಂದೇ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬೆಂಗಳೂರಿನಿಂದ ಅಥವಾ ಮೈಸೂರಿನಿಂದ ಹೊರಟಾಗ ಒಂದು ಬಾರಿ ಟೋಲ್ ಶುಲ್ಕವನ್ನು ಕಟ್ಟಿಸಿಕೊಳ್ಳಲಾಗುತ್ತಿದೆ. ಈಗ ಶ್ರೀರಂಗಪಟ್ಟಣದಲ್ಲಿಯೂ ಟೋಲ್ ಕಟ್ಟಿಸಿಕೊಳ್ಳುತ್ತಿರುವುದು ಸಾರ್ವಜನಿಕರಿಗೆ ದುಪ್ಪಟ್ಟು ಹೊರೆಯಾಗಲಿದೆ. ಅಲ್ಲದೆ, ಇನ್ನೂ ಕಾಮಗಾರಿಗಳೇ ಪೂರ್ಣಗೊಂಡಿಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಈ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು. ಸರ್ವಿಸ್ ರಸ್ತೆ ಸೇರಿದಂತೆ ಇನ್ನಿತರ ಕಾಮಗಾರಿ ಮುಗಿಯುವವರೆಗೂ ಶ್ರೀರಂಗಪಟ್ಟಣ ಟೋಲ್ ನಲ್ಲಿ ಶುಲ್ಕವನ್ನು ಸಂಗ್ರಹ ಮಾಡದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲೇನಿದೆ? ಬೆಂಗಳೂರು-ಮೈಸೂರು…
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು. ಸಂಘದ ಅಧ್ಯಕ್ಷೆ ಹೆಚ್. ಎಲ್. ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿತು. ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ‘ನನ್ನ ಕವಿತೆ-ನನ್ನ ಹಾಡು” ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ, ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು. ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ. ಎಸ್. ಆಶಾದೇವಿ, ಬಿ. ಟಿ. ಲಲಿತಾನಾಯಕ್ ಸೇರಿ ಹಲವು ಲೇಖಕಿಯರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು. ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500…
ಜ್ಞಾನ ಭಾರತಿ ಆವರಣದಲ್ಲಿ ನಡೆದಿದ್ದ ಅಪಘಾತದಲ್ಲಿ ಮೃತಪಟ್ಟ ಸ್ನಾತಕೋತ್ತರ ವಿದ್ಯಾರ್ಥಿನಿ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ವಿದ್ಯಾರ್ಥಿನಿ ಶಿಲ್ಪಾಶ್ರೀ (22) ಕಳೆದ ಅಕ್ಟೋಬರ್ ನಲ್ಲಿ ತರಗತಿಗೆ ಹೋಗುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಾಯಗೊಂಡು, ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚವನ್ನು ಭರಿಸಿದ್ದ ವಿಶ್ವವಿದ್ಯಾನಿಲಯ, ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಜೂನ್ 12ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಶಿಲ್ಪಾಶ್ರೀ ಕುಟುಂಬಕ್ಕೆ ಪರಿಹಾರ ನೀಡಲು ಒಪ್ಪಿಗೆ ಪಡೆದಿದೆ. ಘಟನೆಯ ನಂತರ ವಿಶ್ವವಿದ್ಯಾನಿಲಯ 2023-24ರ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಅಪಘಾತ ವೆಚ್ಚಕ್ಕಾಗಿ 7 5 ಲಕ್ಷ ಮೀಸಲಿಟ್ಟಿದೆ. ಅಪಘಾತದಂತಹ ಪ್ರಕರಣಗಳು ನಡೆದರೆ ತಕ್ಷಣದ ಚಿಕಿತ್ಸೆಗೆ ಮೀಸಲಿಟ್ಟಿರುವ ಹಣ ಬಳಸಲು ಅನುಮತಿ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊಳೆಗೇರಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ಭರವಸೆ ನೀಡಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಶುಕ್ರವಾರ ಕೊಳೆಗೇರಿ ವಾಸಿಗಳು, ಕೊಳೆಗೇರಿ ನಿವಾಸಿಗಳ ಪರವಾದ ಸಂಘ- ಸಂಸ್ಥೆಗಳಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಕೊಳೆಗೇರಿ ಪ್ರದೇಶಗಳಲ್ಲಿ ಹಲವು ಜನರಿಗೆ ಸೂರಿಲ್ಲ. ಹತ್ತಾರು ವರ್ಷಗಳಿಂದ ಗುಡಿಸಲು ಹಾಗೂ ಕಚ್ಛಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಕೆರೆಯಂಗಳ, ಮಳೆ ನೀರು ಹರಿಯುವ ಕಾಲುವೆ, ವಿದ್ಯುತ್ ಮಾರ್ಗ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಹಾಗಾಗಿ, ಅವರಿಗೆಲ್ಲ ಪ್ರತ್ಯೇಕ ಸ್ಥಳದಲ್ಲಿ ಶಾಶ್ವತ ನೆಲೆ ಕಲ್ಪಿಸಲಾಗುವುದು ಎಂದರು. ಕೆ. ಆರ್. ಪುರ ಹೋಬಳಿ ಬಿದರಹಳ್ಳಿಯಲ್ಲಿ ಎಂಟು ಎಕರೆ ಗುರುತಿಸಲಾಗಿದೆ. ಕಂದಾಯ ಸಚಿವರ ಜತೆ ಚರ್ಚಿಸಿ, ಭೂಮಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಎಂಜಿನಿಯರ್ ಬಾಲರಾಜು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಮತ್ತೆ ಆರಂಭವಾಗಿದೆ. ಕಳೆದ ಎರಡು ದಿನಗಳ ಅಂತರದಲ್ಲಿ 100 ರೂಪಾಯಿ ಬೆಲೆಯ ಒಟ್ಟು 30 ನೋಟುಗಳು ಪತ್ತೆಯಾಗಿವೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್ ದಾಖಲಾಗಿದೆ. ಆರ್ ಬಿಐ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ, ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಗಳು ಪ್ರತ್ಯೇಕವಾಗಿ ದೂರು ನೀಡಿದ್ದಾರೆ. ಉಡುಪಿ, ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚ್ ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿದ್ದವು. ಆರ್ ಬಿ ಐ ಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ನಕಲಿ ನೋಟು ಪತ್ತೆಯಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ನಗರದ ಕಣಬರ್ಗಿ ರಸ್ತೆಯ ಸಂಕಲ್ಪ ಗಾರ್ಡನ್ ನಲ್ಲಿ ರಾಮತೀರ್ಥ ನಗರ ರಹವಾಸಿಗಳ ಸಂಘ (ರಿ) ಹಾಗೂ ಇನ್ನುಳಿದ ಸಂಘಟನೆಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಶುಕ್ರವಾರ ಸಂಜೆ ಸನ್ಮಾನಿಸಿದರು. ನಗರ ಸೇವಕ ಹನಮಂತ ಕೊಂಗಾಲಿ, ಮಾಜಿ ಮಹಾಪೌರ ಎನ್ ಬಿ ನಿರ್ವಾಣಿ, ಕಾರ್ಪೋರೇಟರ್ ಹನುಮಂತ ದುಗ್ಗಾನಿ, ಮಾಜಿ ಕಾರ್ಪೋರೇಟರ್ ಪುಷ್ಪ ಪರ್ವತರಾವ್, ವಿ ಎ ಗಣಾಚಾರಿ, ವೈ ಪಿ ಗಡಿನಾಯ್ಕರ್, ಎಂ ಎ ಕೂರಿಶೆಟ್ಟಿ, ಎಮ್ ಟಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy