Author: admin

ಮುರುಳಿಧರನ್ ಆರ್.,  ಚಿತ್ರದುರ್ಗ ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್  ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ  ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ  ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್‍ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು.  ಜಿಲ್ಲಾಡಳಿತ ಕೂಡ ಈ…

Read More

ತುಮಕೂರು: ಇಂದು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲೆಯ ನಗರ ವ್ಯಾಪ್ತಿ ಕೊಳಚೆ ಪ್ರದೇಶ ನಿವಾಸಿಗಳ ಮತ್ತು ನಿವೇಶನ ರಹಿತ ಕುಂದುಕೊರತೆ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ, ಮಾರ್ಚ್ 5 -2021ರಂದು ನಡೆದ ಸಭೆಯ ಅನುಪಾಲನಾ ವರದಿ ಮೇಲೆ ಇಲಾಖೆವಾರು ತೆಗೆದುಕೊಂಡ ಪರಿಹಾರೋಪಾಯಗಳ ಮೇಲೆ ಚರ್ಚಿಸಿ ಜಿಲ್ಲೆಯಲ್ಲಿರುವ ಆಘೋಷಿತ ಸ್ಲಂಗಳನ್ನು ನಿಗದಿತ ಕಾಲಮಿತಿಯೊಳಗೆ ಸ್ಲಂ ಕಾಯಿದೆ 1973 ಮತ್ತು ಸ್ಲಂ ನೀತಿ 2016ರ ಅನ್ವಯ ಸ್ಥಳೀಯ ಸಂಸ್ಥೆಗಳು ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿ ಸ್ಲಂ ಘೋಷಣೆಗೆ ಕ್ರಮವಹಿಸಲು ಸಭೆಯಲ್ಲಿ ಸೂಚಿಸಲಾಯಿತು. ಸ್ಲಂ ಪ್ರದೇಶದ ನಿವೇಶನ ರಹಿತರಿಗೆ ಪ್ರತ್ಯೇಕವಾಗಿ ವಸತಿ ಸಮುಚ್ಛಯ ನಿರ್ಮಿಸಲು 4 ಎಕರೆ ಭೂಮಿ ಮೀಸಲು ಈ ಹಿಂದಿನ ಸಭೆಯಲ್ಲಿ ಸ್ಲಂಗಳಲ್ಲಿರುವ ನಿವೇಶನ ರಹಿತ 398 ಕುಟುಂಬಗಳಿಗೆ ಅಗತ್ಯವಿರುವ ಭೂಮಿಯ ಪ್ರಸ್ತಾವನೆ ಸಲ್ಲಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೂಚಿಸಲಾಗಿತ್ತು. ಅದರಂತೆ ದಿನಾಂಕ: 29-9-2021ರಂದು ಜಿಲ್ಲಾಧಿಕಾರಿಗಳಿಗೆ ಮಂಡಳಿಯಿಂದ ಪ್ರಸ್ತಾವನೆ ಸಲ್ಲಿಸಿ ನಗರ ಪ್ರದೇಶದಲ್ಲಿ 12 ಎಕರೆ ಅಥವಾ…

Read More

ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆ ಆವರಣದಲ್ಲಿ ತಾಲೂಕು ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಬೆಂಗಳೂರು ನಗರ ಜಯ ಕರ್ನಾಟಕ ಜನಪದ ವೇದಿಕೆ, ಆಟೋ ಘಟಕದ ಜಿಲ್ಲಾಧ್ಯಕ್ಷರಾದ ಆಟೋ ಮಿತ್ರ ಜಯರಾಮ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ದಲಿತ ನೌಕರರ ಮುಖಂಡ ನರಸಿಂಹಯ್ಯ, ತಿಪಟೂರು ಘಟಕದ ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಮಾತನಾಡಿದರು. ಹಿಂಡಿಸ್ಕೆರೆ ರವಿ, ದಲಿತ ಸಂಘಟನೆಯ ಕಲ್ಲೇಶ್, ಉಮಾಶಂಕರ್, ಉಪಾಧ್ಯಕ್ಷ ಸಿದ್ದೇಶ್, ವಿದ್ಯಾರ್ಥಿ ಘಟಕದ ಕಲಂದರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಮಂಜುಳಾ ವೀರೇಶ್ ಅವರನ್ನು ಗ್ರಾಮದ ಗ್ರಾಮಸ್ಥರು ಇಂದು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುಳಾ ವೀರೇಶ್,  ಈ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮೊದಲನೆಯದಾಗಿ ಕೋವಿಡ್ ನಿಯಂತ್ರಣಕ್ಕೆ ಒತ್ತು ಕೊಡುವುದು ಮತ್ತು ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ, ಬೆಳಕು(ವಿದ್ಯುತ್)  ಒದಗಿಸಿಕೊಡುತ್ತೇನೆ. ಸರ್ಕಾರದಿಂದ ಬರುವ  ಎಲ್ಲಾ ಮೂಲಭೂತ ಸೌಕರ್ಯಗಳನ್ನು ಎಲ್ಲ  ಗ್ರಾಮಸ್ಥರಿಗೂ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ  ಮಸ್ಕಲ್ ಗ್ರಾಮದ ಉಪಾಧ್ಯಕ್ಷರಾದ  ವೈ .ನಾಗರಾಜು ಮಾತನಾಡಿದರು. ಬಳಿಕ ಅಧ್ಯಕ್ಷೆ ಮಂಜುಳಾ ವೀರೇಶ್ ಅವರನ್ನು ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭ ಸದಸ್ಯರಾದ ಕಲಾವತಿ, ತಿಪ್ಪೇಸ್ವಾಮಿ, ಕೊಲ್ಲಮ್ಮ, ರಮ್ಯ, ಹನುಮಂತಪ್ಪ, ಗೋವಿಂದರಾಜು, ಕಲಾವತಿ, ವಿ.ಎಲ್.ಗೌಡ, ಹರೀಶ್, ಸುಜಾತ, ಪದ್ಮಾವತಿ, ಮಣಿಮೇಗಲೈ, ಗಿರಿಜಮ್ಮ, ಪದ್ಮಾವತಿ ನೂತನ ಅಧ್ಯಕ್ಷರಿಗೆ  ಅಭಿನಂದನೆಗಳನ್ನು ಸಲ್ಲಿಸಿದರು. ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ…

Read More

ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ಹಳೆಯ ಪಾದರಕ್ಷೆಗಳನ್ನು ನೀಡಿ ಹೇಳಿದ, “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯ ಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರು ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ! ಈ ವಿಚಾರವಾಗಿ…

Read More

ಕುಣಿಗಲ್: ಮನೆಯೊಂದರ ಕಾಂಪೌಂಡ್ ನಲ್ಲಿದ್ದ ಹಾವು ಹಾಗೂ ಮೊಟ್ಟೆಯನ್ನು ಉರಗತಜ್ಞ ಮಹಂತೇಶ್ ರಕ್ಷಿಸಿದ್ದಾರೆ. ಕುಣಿಗಲ್ ನ ಮಹಂತೇಶ್ ಅವರಿಗೆ ಅಗ್ರಹಾರದ ಮುಜಾಹಿದ್ ಖಾನ್ ಎಂಬವರು ಕರೆ ಮಾಡಿ ಮನೆಯ ಕಾಂಪೌಂಡ್ ನಲ್ಲಿ ಹಾವು ಇದೆ ಎಂದು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ಮನೆಯ ಕಾಂಪೌಂಡ್ ನಲ್ಲಿದ್ದ ನೀರು ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಮೊಟ್ಟೆಯಿಟ್ಟಿದ್ದು, ಮೊಟ್ಟೆ ಹಾಗೂ ಹಾವನ್ನು ಸುರಕ್ಷತೆ ಬಾಕ್ಸ್ ನಲ್ಲಿ ಹಾಕಿ ಇಟ್ಟಿದ್ದಾರೆ. ಇದೇ ವೇಳೆ ಈ ಹಾವಿನ ಬಗ್ಗೆ ವಿವರಣೆ ನೀಡಿದ ಅವರು, ಹಾವು ಮೊಟ್ಟೆ ಹಾಕಿದ ನಂತರ ಸುರಕ್ಷಿತವಾಗಿ ಮೊಟ್ಟೆಗಳನ್ನು ಮರಳಿನಲ್ಲಿ ಇಟ್ಟು ಅದಕ್ಕೆ ಬೆಚ್ಚಗಿನ ಶಾಖ ಬರುವ ಹಾಗೆ ವ್ಯವಸ್ಥೆ ಮಾಡಿ ಅಲ್ಲೇ ಮರಿ ಮಾಡಿಸಬೇಕಾಗುತ್ತದೆ. ಮೊಟ್ಟೆ ಹೊಡೆದು ಮರಿಗಳು ಹೊರಬರುವುದಕ್ಕೆ 45 ದಿನ ಆಗಬಹುದು. ತದನಂತರ ಮರಿಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅವರು ತಿಳಿಸಿದರು. ಇದುವರೆಗೂ 3 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಹಾವುಗಳನ್ನು ಸ್ನೇಕ್ ಮಹಂತೇಶ್ ರಕ್ಷಿಸಿದ್ದಾರೆ. ವರದಿ:…

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 21 ರಲ್ಲಿರುವ ಶ್ರೀ ಮುರುಗನ್ ( ಸುಬ್ರಮಣ್ಯಂ) ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಕ್ರಾಂತಿ ಸಂದರ್ಭದಲ್ಲಿ ತಮಿಳರು ಪ್ರಮುಖ ತೈಮಾಸಂ ಎಂದು ಸಂಕ್ರಾಂತಿ ಹಬ್ಬವನ್ನು  ಪೊಂಗಲ್ ಎಂದು ಆಚರಿಸುತ್ತಾರೆ. ಈ ತಿಂಗಳಲ್ಲಿ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.  ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ಈ ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟಿತು. ಪೂಜೆಯ ವೇಳೆ ಸ್ವಾಮಿ ಶ್ರೀ ಸುಬ್ರಮಣ್ಯಂ ( ಮುರುಗನ್ ) ದೇವರಿಗೆ ಹೂವಿನ ಅಲಂಕಾರ, ಕರ್ಪೂರದಾರತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ಸರಳವಾಗಿ ಆಚರಿಸಲ್ಪಟ್ಟಿತ್ತು. ಈ ಸಂದರ್ಭದಲ್ಲಿ ಸಕಲ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು .  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು, ದೇವಸ್ಥಾನದ ಅರ್ಚಕರು ಹಾಗೂ ಕುಟುಂಬಸ್ಥರು  ಸುಬ್ರಮಣ್ಯಂ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಗುಬ್ಬಿ: ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ಮಸಿಯಮ್ಮನಹಟ್ಟಿ ಗ್ರಾಮದಲ್ಲಿ ಕಾಡಾಯೋಜನೆಯಡಿ 57 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕ್ರಮವಹಿಸಿದರೂ, ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕೊರೊನಾ ಮೂರನೇ ಅಲೆ ಹರಡುತ್ತಿದ್ದು ಜನತೆ ಸಾಕಷ್ಟು ಜಾಗೃತಿ ವಹಿಸಬೇಕು ಎಂದರು. ವಿಕೇಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಸಹ ಜನತೆ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ಸಾಕಷ್ಟು ಸಾವು ಸಂಭವಿಸಿದೆ. ಜನತೆ ಈ ಬಾರಿಯೂ ಸಹ ನಿರ್ಲಕ್ಷ್ಯ ವಹಿಸಿದರೆ, ಮೊದಲಿಗಿಂತ ಹೆಚ್ಚು ಸಾವು ನೋವುಗಳು ಸಂಭಸಲಿದೆ. ಆದರಿಂದ ಜನತೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು. ವರದಿ: ಡಿ.ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಗ್ರಾ.ಪಂ. ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿ ಮಂಜುಳವೀರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್.,  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಜಗದ್ಗುರುಗಳಾಗಿದ್ದ ದಿ. ಶ್ರೀ ಪುಣ್ಯಾನಂದಪುರಿ ಮಹಾ ಸ್ವಾಮೀಜಿಗಳವರ ಪೂರ್ವಾಶ್ರಮದ ತಂದೆಯವರಾದ ರಂಗಸ್ವಾಮಿ(75) ವರ್ಷ ಇಂದು ಬಸವೇಶ್ವರ ನಗರದ ತಮ್ಮ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರ. ಇವರ ನಿಧನಕ್ಕೆ ತಾಲೂಕು ವಾಲ್ಮೀಕಿ ಸಮಾಜ ತೀವ್ರ ಸಂತಾಪ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More