Subscribe to Updates
Get the latest creative news from FooBar about art, design and business.
- ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
- ಎಫ್ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್ ನಲ್ಲಿ ಹೆಚ್ಚು ಲಾಭ?
- ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
- ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
- ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
- ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
- ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
- ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ನಮ್ಮತುಮಕೂರು/ವಿಶೇಷ ವರದಿ: ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿದು ಹೋಗಿದ್ದು ಇದರಿಂದ ನಲುಗಿ ಹೋಗಿರುವ ಬೆಳೆಗಾರರಿಗೆ ಇದೀಗ ಬೆಂಬಲ ಬೆಲೆ ಖರೀದಿ ಮಾಡುತ್ತಿರುವ ಸಂದರ್ಭದಲ್ಲಿಯೂ ಗುಣಮಟ್ಟ ಪರೀಕ್ಷೆ ಎಂಬ ನೆಪದಲ್ಲಿ ಕೊಬ್ಬರಿ ದಾಸ್ತಾನನ್ನು ತಿರಸ್ಕಾರ ಮಾಡುತ್ತಿರುವುದು ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೌದು..! ಜಿಲ್ಲೆಯ ತಿಪಟೂರು ಹಾಗೂ ತುರುವೇಕೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಫೇಡ್ ನಲ್ಲಿ ಕೊಬ್ಬರಿ ಖರೀದಿ ವೇಳೆ ಗುಣಮಟ್ಟದಿಂದ ಕೂಡಿಲ್ಲ ಎಂದು ಸಾಕಷ್ಟು ಕೊಬ್ಬರಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಕಂಗಾಲಾಗಿರುವ ಬೆಳೆಗಾರರು ಮಾರುಕಟ್ಟೆಯಲ್ಲಿ ಹೊರಗಡೆ ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಫೆಡ್ ಖರೀದಿಸುತ್ತಿರುವ ಅದರ ಮಾನದಂಡ ಪ್ರಕಾರ ಕೊಬ್ಬರಿಯು ಸ್ಪಷ್ಟವಾದ ಗಾತ್ರದಲ್ಲಿರಬೇಕು ಹೀಗಿದ್ದರೆ ಮಾತ್ರ ಅದನ್ನು ಖರೀದಿಸಲಾಗುವುದು ಅಲ್ಲದೆ ಉಷ್ಣಾಂಶ (ಮಾಯಿಶ್ಚರೈಸರ್) ಇರುವಂತಹ ಕೊಬ್ಬರಿಯನ್ನು ಖರೀದಿಸಲು ನೆಫೆಡ್ ಹಿಂದೆಟು ಹಾಕುತ್ತಿದೆ. ಇದು ಕೊಬ್ಬರಿ ಬೆಳೆಗಾರರಿಗೆ ಸಾಕಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಕೆಡಿಪಿ ಸಭೆಯಲ್ಲಿ ಪ್ರಾತ್ಯಕ್ಷಿತೆ ನೀಡಿರುವ ಕೊಬ್ಬರಿ ಖರೀದಿಯಲ್ಲಿ ಆಗುತ್ತಿರುವ ಅನ್ಯಾಯ ವಿವರಿಸಿದ ಶಾಸಕ ಎಂ…
ತುಮಕೂರು: ಮುಕ್ತ—ಸಂವಾದ ವೇದಿಕೆ ಕರ್ನಾಟಕ ಇದರ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಬುದ್ಧ ಬೆಳದಿಂಗಳು ಕಾರ್ಯಕ್ರಮವನ್ನು ಜುಲೈ 2ರಂದು ತುಮಕೂರಿನ ಗೆದ್ದಲಹಳ್ಳಿಯ ಧಮ್ಮ ಲೋಕ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚಾಮರಾಜನಗರ ಉದ್ದೇಶಿತ ನಳಂದ ಬೌದ್ಧ ವಿಶ್ವವಿದ್ಯಾಲಯದ ಪೂಜ್ಯ ಬೋಧಿದತ್ತ ಥೇರ ಬಂತೇಜಿ ಧಮ್ಮ ಜ್ಯೋತಿ ಮತ್ತು ಧಮ್ಮನುಡಿಗಳನ್ನಾಡಲಿದ್ದಾರೆ. ತುಮಕೂರು ಧಮ್ಮಲೋಕ ಬುದ್ಧವಿಹಾರದ ಅಧ್ಯಕ್ಷರಾದ ಹನುವಂತರಾಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕ ಸುಭಾಷ್ ಚಂದ್ರ ಅವರು ಸ್ವಾಗತಿಸಲಿದ್ದಾರೆ. ಮಂಡ್ಯ ಮುಕ್ತ ಸಂವಾದ ವೇದಿಕೆ ಆಯೋಜಕರಾದ ಚೌಡೇಶ್ ಅವರು ಸಂವಿಧಾನದ ಪೀಠಿಕೆ ಓದಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ತುಮಕೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಪ್ರಭಾವತಿ ಸುದೇಶ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಕೆ.ಸಿ.ನರಸಿಂಹಮೂರ್ತಿ, ತುಮಕೂರು ಮುಕ್ತ ಸಂವಾದ ವೇದಿಕೆಯ ಅಧ್ಯಕ್ಷರಾದ ಎಸ್.ಆರ್.ಚಿಕ್ಕಣ್ಣ, ಬಾನುಲಿ ಪತ್ರಿಕೆ ಸಂಪಾದಕರು ಮತ್ತು ಸಾಮಾಜಿಕ ಹೋರಾಟಗಾರರಾದ ಭಾನುಪ್ರಕಾಶ್ ಭಾಗವಹಿಸಲಿದ್ದಾರೆ. ಉಪನ್ಯಾಸ ಕಾರ್ಯಕ್ರಮ: ಶಿಕ್ಷಕರಾದ ಜಿತೇಂದ್ರ ತಳವಾರ್ ಡಾ.ಬಿ,ಆರ್,ಅಂಬೇಡ್ಕರ್ ಅವರ…
ಇಂಪಾಲ: ಹಿಂಸಾಪೀಡಿತ ಮಣಿಪುರದಲ್ಲಿ ಗಲಭೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ವರದಿಗಳು ಪ್ರಕಟವಾಗಿತ್ತು. ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಮಣಿಪುರ ಸರ್ಕಾರದ ವಕ್ತಾರರು ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ರಾಜೀನಾಮೆ ಸಲ್ಲಿಸಲು ಬಿರೇನ್ ಸಿಂಗ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ್ದರು. ಆ ಸಮಯದಲ್ಲಿ ಅವರ ರಾಜೀನಾಮೆ ಪತ್ರವನ್ನು ಬೆಂಬಲಿಗರು ಹರಿದುಹಾಕಿದ್ದಾರೆ.ಮುಖ್ಯಮಂತ್ರಿಯವರು ಅಧಿಕಾರದಿಂದ ಕೆಳಗಿಳಿಯಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸದೇ ಇರಲು ನಿರ್ಧಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಲೀಮಾಖೋಂಗ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯ ಹಿನ್ನಲೆಯಲ್ಲಿ ನಿನ್ನೆ ಸಂಜೆ ಮೈತೆಯ್ ಬುಡಕಟ್ಟು ಸಮುದಾಯಕ್ಕೆಸೇರಿದ ವ್ಯಕ್ತಿಯ ಶವವನ್ನು ಇಂಫಾಲ್ಗೆ ಕರೆತರಲಾಯಿತು.ಈ ವೇಳೆ ಮೃತದೇಹಕ್ಕೆ ಗೌರವ ಸಲ್ಲಿಸಲು ನೆರೆದಿದ್ದ ಜನರು ಪ್ರತಿಭಟಿಸಿದ್ದು ಆ ಸಮಯದಲ್ಲಿ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ, ಪ್ರತಿಭಟನಾಕಾರರು ಮೇಲೆ ಮಣಿಪುರ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿದರು. ‘ನಿನ್ನೆಯ ಘಟನೆಯ…
ಜೈಪುರ: ಕಳೆದ ವರ್ಷ ಜೂನ್ 28ರಂದು ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಕನ್ಹಯ್ಯ ಲಾಲ್ ಅವರನ್ನುಅವರದ್ದೇ ಅಂಗಡಿಯಲ್ಲಿ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಿದ್ದರೆ ಈ ವೇಳೆಗೆ ಆರೋಪಿಗಳನ್ನು ಬಂಧಿಸಿ ನೇಣಿಗೆ ಹಾಕಬಹುದಾಗಿತ್ತು ಎಂದು ಅವರು ಹೇಳಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳ ಅನಾವರಣ ಉದ್ದೇಶದಿಂದ ಉದಯಪುರದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಶಾ, ‘ರಾಜಸ್ಥಾನ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಲಿಲ್ಲ. ಇಲ್ಲದಿದ್ದರೆ, ಇಷ್ಟೊತ್ತಿಗೆ ಕೊಲೆಗಾರರು ಗಲ್ಲಿಗೇರುತ್ತಿದ್ದರು’ ಎಂದು ಅವರು ಹೇಳಿದರು. ಜನರು ತಮಗೆ ನೀಡುತ್ತಿರುವ ಬೆಂಬಲವನ್ನು ನೋಡಿದರೆ 2024ರಲ್ಲಿ 300 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದ್ದು ಚುರಚಂದಪುರ ನಿರಾಶ್ರಿತರ ಶಿಬಿರಕ್ಕೆತೆರಳಿ ಅಲ್ಲಿನ ಮಕ್ಕಳೊಂದಿಗೆ ಊಟವನ್ನು ಮಾಡಿ ಕೆಲಕಾಲ ಅವರೊಂದಿಗೆ ಕಳೆದಿದ್ದಾರೆ. ರಾಹುಲ್ ಗಾಂಧಿಯವರು ಎರಡು ದಿನಗಳ ಪ್ರವಾಸ ಕೈಗೊಂಡಿದ್ದು ಇಂದು ಮೊಯಿರಾಂಗ್ ಗೆ ತೆರಳಿದ ಅವರು, ಹಿಂಸಾಚಾರದಿಂದ ತೊಂದರೆಗೀಡಾದ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಜನಾಂಗೀಯ ಹಿಂಸೆ ಹೆಚ್ಚಾಗುತ್ತಿದ್ದಂತೆ ಆ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಅವರು, ಸದ್ಯ ಮಣಿಪುರಕ್ಕೆ ಚಿಕಿತ್ಸೆ ಬೇಕಿದೆ. ಅಲ್ಲಿ ಹಿಂಸೆ, ಹೋರಾಟಕ್ಕೆ ಬದಲಾಗಿ ಶಾಂತಿಗೆ ಮಾತ್ರ ಆದ್ಯತೆ ನೀಡಬೇಕಿದೆ ಎಂದು ಹೇಳಿದ್ದರು.ಇದೀಗ ಮಣಿಪುರದ ನನ್ನ ಎಲ್ಲಾ ಸಹೋದರ ಸಹೋದರಿಯರ ಅಳಲು ಕೇಳಲು ಬಂದಿದ್ದೇನೆ. ಎಲ್ಲ ಸಮುದಾಯಗಳ ಜನರು ಮನಃಸ್ಪೂರ್ವಕವಾಗಿ ಸ್ವಾಗತಿಸಿದ್ದಾರೆ, ಪ್ರೀತಿ ತೋರುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ನನ್ನ ಭೇಟಿ ತಡೆಯಲು ಯತ್ನಿಸುತ್ತಿರುವ ಸರ್ಕಾರ ನಡೆ ವಿಷಾಧನೀಯ ಎಂದು ರಾಹುಲ್ ಗಾಂದಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
2020-22 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ಶ್ರೀಮತಿ ಗಂಗಮ್ಮಾ ಸೋಮಪ್ಪಾ ಬೊಮ್ಮಾಯಿ ಪ್ರಶಸ್ತಿ ಪ್ರಕಟಿಸಲಾಗಿದೆ. ಶ್ರೀಮತಿ ಗಂಗಮ್ಮ ಸೋಮಪ್ಪಾ ಬೊಮ್ಮಾಯಿ ಎಜುಕೇಶನಲ್ ಅಂಡ್ ವೆಲ್ ಫೇರ್ ಫೌಂಡೇಶನ್ ವತಿಯಿಂದ ನೀಡುವ ಪ್ರಶ್ನೆಗಳನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಅಕ್ಕ ಪ್ರಶಸ್ತಿಗೆ ಡಾ. ಹೇಮಾ ಪಟ್ಟಣಶೆಟ್ಟಿ ಅವರ ಅಕ್ಕರದ ಸುಯಿಧಾನ ಕೃತಿ, ಜಾನಪದ ಸಿರಿ ಪ್ರಶಸ್ತಿಗೆ ಹೊರೆಯಾಲ ದೊರೆಸ್ವಾಮಿ ಅವರ ಜಾನಪದ ನಡೆನುಡಿ ಕೃತಿ ಆಯ್ಕೆಯಾಗಿದೆ. ಅರಳು ಮೊಗ್ಗು ಪ್ರಶಸ್ತಿಗೆ ಕುಮಾರಿ ನೇಹಾ ರಾಮಪುರ್ ಅವರ ಮ್ಯಾಜಿಕ್ ಪೆನ್ಸಿಲ್ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಪ್ರತಿಯೊಂದು ಕೃತಿಗಳಿಗೆ ತಲಾ 25000 ರೂ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…
ರಾಜ್ಯದಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಜೂನ್ 11ರಿಂದ ಆರಂಭಗೊಂಡ ಯೋಜನೆಯಡಿ ಬರೋಬ್ಬರಿ 9,46, 35, 508 ಮಂದಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆ ಆರಂಭವಾದಂತ ಜೂನ್. 11ರಿಂದ ಇಲ್ಲಿಯವರೆಗೆ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ 2, 77, 78, 007, ಬಿಎಂಟಿಸಿ 3, 12, 41, 235, ವಾಕರಸಾ ಸಂಸ್ಥೆಯ ಬಸ್ಸುಗಳಲ್ಲಿ 2,29,36, 330 ಹಾಗೂ ಕೆಕೆ ಆರ್ ಟಿಸಿ ಬಸ್ಸುಗಳಲ್ಲಿ 1, 26, 79, 936 ಮಂದಿ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟು 9, 46, 35, 508 ಮಹಿಳೆಯರು ಉಚಿತವಾಗಿ ಸಂಚರಿಸಿದ್ದಾರೆ. ಅಂದ ಹಾಗೇ ಈವರೆಗೆ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ರೂ. 222, 00, 79, 232 ಆಗಿದೆ ಎಂದು ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬಿಜೆಪಿ ಮುಖಂಡರ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಪಕ್ಷದ ವಿರೋಧಿ ಹೇಳಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೊಟೀಸ್ ಜಾರಿ ಮಾಡಿದ್ದಾರೆ. ಈ ನೋಟಿಸ್ನಲ್ಲಿ ” ಪಕ್ಷದ ವಿರೋಧಿ 11 ಹೇಳಿಕೆ ನೀಡಿರುವ ಕಾರಣ ತಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಒಂದು ವಾರದೊಳಗಾಗಿ ಲಿಖಿತ ಉತ್ತರ ನೀಡಬೇಕು ” ಎಂದು ಸೂಚಿಸಲಾಗಿದೆ. ಪಕ್ಷವು ಹಲವು ಬಾರಿ ತಿಳಿ ಹೇಳಿದರೂ ಸಹ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣ ನೀಡುವಂತೆ ” ನೊಟೀಸ್ನಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್ ಹಾಗೂ ಎನ್ ಸಿಸಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಜ. 10ರಂದು ನಡೆದಿದ್ದ ಘಟನೆಯಲ್ಲಿ ತೇಜಸ್ವಿನಿ ಸುಲಾಖೆ (28) ಹಾಗೂ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಿದ ಗೋವಿಂದಪುರ ಠಾಣೆ ಪೊಲೀಸರು ಅಧಿಕಾರಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ‘ಬಿಎಂಆರ್ ಸಿಎಲ್ ಮುಖ್ಯ ಎಂಜಿನಿಯರ್ ಸಿ.ಎಂ. ರಂಗನಾಥ್, ಉಪ ಮುಖ್ಯ ಎಂಜಿನಿಯರ್ ಡಿ. ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಮುಖ್ಯ ಎಂಜಿನಿಯರ್ ಮಹೇಶ್, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್, ಸಹಾಯಕ ಎಂಜಿನಿಯರ್ ಜೀವನ್ಕುಮಾರ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ನ (ಎನ್ಸಿಸಿ) ಯೋಜನಾ ವ್ಯವಸ್ಥಾಪಕ ವಿಕಾಸ್ ಕುಮಾ ಸಿಂಗ್, ಹಿರಿಯ ಯೋಜನಾ ವ್ಯವಸ್ಥಾಪಕ ಎ. ಮಾತಯ್ಯ, ಸಹಾಯಕ ಎಂಜಿನಿಯರ್ ಪ್ರಭಾಕರ್ ಮಾಳಿ, ಸುರಕ್ಷತಾ ಮೇಲ್ವಿಚಾರಕ ಭರತೇಶ್ ಸತ್ತಿಗೇರಿ ಹಾಗೂ ಮೇಲ್ವಿಚಾರಕ ಕೆ. ಲಕ್ಷ್ಮಿಪತಿ ರಾಜು ವಿರುದ್ಧ ದೋಷಾರೋಪ ಪಟ್ಟಿ…
ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಳಿಂದ ವಾಸಿ ಮಾಡಲಾಗದ ನೋವುಗಳ ಶಮನಕ್ಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ‘ನೋವು ನಿರ್ವಹಣಾ ಕ್ಲಿನಿಕ್’ ಪ್ರಾರಂಭಿಸಲಾಗುತ್ತಿದೆ. ಸರ್ಕಾರಿ ವ್ಯವಸ್ಥೆಯಡಿ ನಗರದಲ್ಲಿ ಪ್ರಾರಂಭವಾಗುತ್ತಿರುವ ಪ್ರಥಮ ಕ್ಲಿನಿಕ್ ಇದಾಗಲಿದೆ. ಈ ಕ್ಲಿನಿಕ್ ನಲ್ಲಿ ಸೇವೆ ನೀಡುವ ಸಂಬಂಧ ಈಗಾಗಲೇ ಅರಿವಳಿಕೆ ತಜ್ಞರು ತರಬೇತಿ ಪಡೆದಿದ್ದಾರೆ. ಕ್ಯಾನ್ಸರ್, ಸಂಧಿವಾತ ಸೇರಿ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರ ಚಿಕಿತ್ಸೆಯ ನಂತರವೂ ನೋವು ಕಡಿಮೆಯಾಗದಿದ್ದಲ್ಲಿ ಈ ಕ್ಲಿನಿಕ್ ಗೆ ಶಿಫಾರಸು ಮಾಡಲಾಗುತ್ತದೆ. ಎಲ್ಲ ವಯೋಮಾನದವರಿಗೂ ಈ ಕ್ಲಿನಿಕ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ನೋವು ಶಮನ ಮಾಡಲು ಇದು ಅಂತಿಮ ಆಯ್ಕೆಯಾಗಿದ್ದು, ಈಗಾಗಲೇ ಆಸ್ಪತ್ರೆಯ ಮಾಸ್ಟರ್ ಪ್ಲಾನ್ ಬಿಲ್ಡಿಂಗ್ನಲ್ಲಿ ಕೇಂದ್ರವನ್ನು ರೂಪಿಸಲಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ಅಡಿ ವಿಕ್ಟೋರಿಯಾ, ವಾಣಿವಿಲಾಸ, ಮಿಂಟೊ, ಟ್ರಾಮಾ ಕೇರ್ ಕೇಂದ್ರ, ನೆಫ್ರ-ಯೂರಾಲಜಿ ಸಂಸ್ಥೆ, ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್ಎಸ್ವೈ) ಆಸ್ಪತ್ರೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್ಪ್ಲಾಂಟ್ ಆಸ್ಪತ್ರೆಗಳು…