Subscribe to Updates
Get the latest creative news from FooBar about art, design and business.
- ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
- ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
- ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
- ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
- ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
- ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
Author: admin
ಬೆಂಗಳೂರು : ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಎಫೆಕ್ಟ್ ರಾಜ್ಯದ 9 ಜಿಲ್ಲೆಗಳಿಗೆ ತಟ್ಟಲಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ…
ಕುಣಿಗಲ್: ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಭಾನುವಾರ ಬೆಳಗ್ಗೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ಅವರು ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಪುಪ್ಪ ಮಾಲೆಹಾಕಿ ಅಭಿನಂದಿಸಿ, ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದರು. ಈ ಸಂದರ್ಭ ಸಚಿವ ರಾಜಣ್ಣ ಧರಿಸಿದ ಕನ್ನಡಕ ತೆಗೆಯುವುದು ಹಾಗೂ ಪಟಾಕಿ ಸಿಡಿಯುವುದು ಒಂದೇ ಸಮಯವಾಗಿತ್ತು. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ಬಂದು ಸಿಡಿಯಿತು. ತಕ್ಷದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಬಳಿಕ ಹಾಸನಕ್ಕೆ ತೆರಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ಇಂದು ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದ್ದು, ಬಾಲಕಿಯರು, ಯುವತಿಯರು ಸೇರಿದಂತೆ ಜಿಲ್ಲೆಯ ಸುಮಾರು 14 ಲಕ್ಷ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿರುವ 7 ಕೆ ಎಸ್ ಆರ್ ಟಿ ಸಿ ಸಾರಿಗೆ ಘಟಕಗಳಿಂದ ನಿತ್ಯ 560 ಬಸ್ಸುಗಳು ಸಂಚರಿಸಲಿದ್ದು, ಪ್ರತಿನಿತ್ಯ 1 ಲಕ್ಷ ಮಹಿಳಾ ಪ್ರಯಾಣಿಕರು ಒಡಾಡುವರು. ತುಮಕೂರು ಜಿಲ್ಲಾಡಳಿದಿಂದ ಯೋಜನೆಗೆ ಅಧಿಕೃತವಾಗಿ ಜಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ಬಸ್ ನಿಲ್ದಾಣದಲ್ಲಿ ಉಸ್ತುವಾರಿ ಸಚಿವ ಜಿ.ಪರಮೇಶ್ವರರಿಂದ ಚಾಲನೆ ನೀಡುವರು. ಮಹಿಳೆಯರಿಗೆ ಶೂನ್ಯ ಟಿಕೆಟ್ ಕೊಡುವ ಮೂಲಕ ಚಾಲನೆ ನೀಡುವರು. ಈಗಾಗಲೇ ಈ ಯೋಜನೆ ಕುರಿತು ಖಾಸಗಿ ಬಸ್ ಮಾಲೀಕರು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್ ಗಳನ್ನು ಜಿಲ್ಲೆಯಲ್ಲಿ ಓಡಾಡಿಸುವುದು ತೊಂದರೆ ಆಗಲಿದೆ ಮಹಿಳಾ ಪ್ರಯಾಣಿಕರು ಹೆಚ್ಚಾಗಿ ಓಡಾಡಲು ಮುಂದಾಗಲಿದ್ದಾರೆ. ಇದರಿಂದ ಬಸ್ ವ್ಯವಹಾರವನ್ನೆ ಸ್ಥಗಿತಗೊಳಿಸುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಕಂಗಾಲಾಗಿದ್ದಾರೆ. ಹೀಗಾಗಿ ನಮ್ಮ ಹೀನಾಯ ಸ್ಥಿತಿಯನ್ನು ಅವಲೋಕಿಸಿ ಸರ್ಕಾರ ನಮಗೂ ಪರಿಹಾರ…
ಬೆಂಗಳೂರು: ವರನಟ ದಿ.ಡಾ.ರಾಜ್‌ಕುಮಾರ್ ಅವರ ಕುಟುಂಬ ಶನಿವಾರ ಡಿಸಿಎಂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ನಟ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಡಿಕೆಶಿ ದಂಪತಿಯನ್ನು ಭೇಟಿ ಮಾಡಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಗೀತಾ ಶಿವರಾಜ್‌ಕುಮಾರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವರಾಜ್‌ಕುಮಾರ್ ದಂಪತಿ ಪ್ರಚಾರ ಸಹ ನಡೆಸಿದ್ದರು. ಚುನಾವಣೆ ಮುಕ್ತಾಯಗೊಂಡ ನಂತರ ಇದೇ ಮೊದಲ ಬಾರಿಗೆ ಡಾ.ರಾಜ್ ಕುಟುಂಬ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಮಾಡಿದ್ದು ವಿಶೇಷ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು…
ಜಾರ್ಖಂಡ್‌ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಸಾವಿಗೀಡಾದವರ ಸಂಖ್ಯೆ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಅಭಿಷೇಕ್ ಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ಸಹೋದರರನ್ನು ಕೂಡ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದಲ್ಲಿ ನಡೆದಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದ ಸತೀಶ್ (32) ಪ್ರಸನ್ನ (29) ಎಂದು ಗುರುತಿಸಲಾಗಿದೆ. ಮೇಕೆಗೆ ಸೊಪ್ಪು ತರಲು ಹೋದ ಸತೀಶ್ ಮರದಿಂದ ಆಯಾ ತಪ್ಪಿ ಬಾವಿಗೆ ಬಿದ್ದಿದ್ದಾನೆ. ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ಸಹೋದರ ಸಹ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ. ಪುನೀತ್ ಹೆಸರಿನಲ್ಲಿ ಸ್ಕಾಲರ್ಶಿಪ್ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಾ.ರಾಜ್ ಕುಮಾರ್ IAS ಅಕಾಡೆಮಿಯಲ್ಲಿ ಪೃಥ್ವಿ ಸ್ಕಾಲರ್ಶಿಪ್ ಲಾಂಛನದ ಮೇಲೆ ಸಹಿ ಹಾಕಿದ ನಂತರ UPSC ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಕೆಲಸ ದೇವರ ಕೆಲಸವೆಂದು ಭಾವಿಸಿ ಕೆಲಸ ಮಾಡಿ. ನೀವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಿ ಎಂದು ಸಲಹೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಮನೆಗೆ ನುಗ್ಗಿ ಯುವತಿಯೊಬ್ಬಳನ್ನು ಯುವಕನೊಬ್ಬ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದೆ. ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ವೀಣಾಳ ಪ್ರಿಯಕರನೆ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ವೀಣಾ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸ ಮಾಡುತ್ತಿದ್ದಳು. ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕಚೇರಿಗೆ ಹೋಗುವ ಮುನ್ನ ವೀಣಾ ವಾಸವಾಗಿದ್ದ ಮನೆಗೆ ನುಗ್ಗಿ ಆರೋಪಿ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆಯ ಪ್ರಾಥಮಿಕ ಹಂತಗಳು ಆರಂಭಗೊಂಡಿವೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿ ಮತದಾರರ ಪಟ್ಟಿಯನ್ನು ಸಂಗ್ರಹಿಸಿದೆ. ತಾತ್ಕಾಲಿಕ ಸಮಿತಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿದ ನಂತರ, ಚುನಾವಣಾ ಪ್ರಕ್ರಿಯೆ ತಕ್ಷಣ ಪ್ರಾರಂಭವಾಗಲಿದೆ. ಭಾರತ ಕುಸ್ತಿ ಒಕ್ಕೂಟದ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಮುಷ್ಕರ ನಿರತ ಕುಸ್ತಿಪಟುಗಳು ಸರ್ಕಾರವನ್ನು ಒತ್ತಾಯಿಸಿದರು. ಇದೇ ತಿಂಗಳ 30ರೊಳಗೆ ಚುನಾವಣೆ ನಡೆಯಲಿದೆ ಎಂದು ಆಟಗಾರರಿಗೆ ಕೇಂದ್ರ ಕ್ರೀಡಾ ಸಚಿವರು ಭರವಸೆ ನೀಡಿದ್ದರು.ಬ್ರಿಜ್ ಭೂಷಣ್ ಅಥವಾ ಅವರ ಸಹಚರರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ದಿನನಿತ್ಯದ ಕರ್ತವ್ಯಕ್ಕಾಗಿ ಸರ್ಕಾರ ನೇಮಿಸಿರುವ ತಾತ್ಕಾಲಿಕ ಸಮಿತಿಯ ಕಾರ್ಯಾದೇಶ ಇದೇ 17ಕ್ಕೆ ಕೊನೆಗೊಳ್ಳಲಿದೆ. ಭಾರತದ ಕುಸ್ತಿ ಒಕ್ಕೂಟದ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ 50 ಮತಗಳನ್ನು ಒಳಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…