Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತುಮಕೂರು: ಜಿಲ್ಲೆಯಲ್ಲಿ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಇತರೆ ಜನಾಂಗದವರು ಸುಳ್ಳು ದಾಖಲಾತಿಗಳನ್ನು ನೀಡಿ, ಅಕ್ರಮವಾಗಿ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿದ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡು ಹಂದಿಜೋಗಿಸ್ ಜನಾಂಗಕ್ಕೆ ಸೇರಬೇಕಾದ ಸರ್ಕಾರದ ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ‍್ದಾರೆ ಇದರಿಂದ ನಿಜವಾದ ಹಂದಿಜೋಗಿಸ್ ಜನಾಂಗದವರಿಗೆ ತೊಂದರೆಯಾಗುತ್ತಿದೆ ಎಂದು ತುಮಕೂರು ಜಿಲ್ಲಾ ಹಂದಿಜೋಗಿಸ್ ಸಂಘ ಜಂಟಿ ನಿರ್ದೇಶಕರು ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಮನವಿ ಸಲ್ಲಿಸಿದ್ದಾರೆ. ನಿಜವಾದ ಹಂದಿಜೋಗಿಸ್ ಜನಾಂಗದವರ ಅನಕ್ಷರತೆ, ಬಡತನ ಮತ್ತು ತಮ್ಮ ಜನಾಂಗದ ಬಗ್ಗೆ ಧ್ವನಿ ಎತ್ತದ ನಾಯಕರಿಲ್ಲದ ಕಾರಣ ಕಳೆದ 08 ವರ್ಷಗಳಿಂದ ತುಮಕೂರು ಜಿಲ್ಲೆಯಲ್ಲಿ ಇತರೆ ಜನಾಂಗದವರು ಅಂದರೆ ಅತಿ ಹೆಚ್ಚಾಗಿ ಹೇಳವ ಜನಾಂಗದವರು ಹಂದಿ ಸಾಕುವ ಮತ್ತು ಹಂದಿ ಮಾರಾಟ ಮಾಡುವ ಹೆಸರಿನಲ್ಲಿ ನಾವೇ ಹಂದಿಜೋಗಿಸ್ ಗಳೆಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ನಿಜವಾದ ಹಂದಿಜೋಗಿಸ್ ಜನಾಂಗದವರ ಮೇಲೆ ದೌರ್ಜನ್ಯಗಳನ್ನು ಮಾಡುತ್ತಿದ್ದು ನಿಜವಾದ ಅಲೆಮಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.…
ಕೊರಟಗೆರೆ : ಸತತ 16 ವರ್ಷಗಳ ನನ್ನ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇವೆ, ನನ್ನ ಸಂಘ ಒಂದು ಕುಟುಂಬದಂತೆ ನಾನು ಮುನ್ನಡೆಸಿಕೊಂಡು ಬಂದಿದ್ದೇನೆ, ಅಷ್ಟು ವರ್ಷಗಳ ಕಾಲ ನನ್ನ ಜೊತೆಗೆ ಆತ್ಮೀಯವಾಗಿದ್ದ ಎಲ್ಲಾ ನನ್ನ ಹಿರಿಯ ಹಾಗೂ ಕಿರಿಯ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತಾ,ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಬೆಳೆವಣಿಗೆ ಅತ್ಯಂತ ಪ್ರಾಮುಖ್ಯತೆ ವಹಿಸುತ್ತವೆ, ನಮ್ಮ ಸಂಘ ಹೀಗೆ ಇಡೀ ರಾಜ್ಯಕ್ಕೆ ಮಾದರಿಯಾಗಲಿ ಎಂದು ಮಾಜಿ ಅಧ್ಯಕ್ಷ, ಜಿಲ್ಲಾ ನಿರ್ದೇಶಕ ಕೆ.ವಿ ಪುರುಷೋತ್ತಮ್ ಆಶಿಸಿದರು. ಕೊರಟಗೆರೆ ಪಟ್ಟಣದ ಸಂಘದ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಎನ್. ಮೂರ್ತಿ(ವಿ.ಕೆ.ಮೂರ್ತಿ)ಯವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು. ಪತ್ರಿಕಾರಂಗ ಈ ಸಮಾಜದಲ್ಲಿ ತನ್ನದೇ ಆದ ಗೌರವವನ್ನು ಉಳಿಸಿಕೊಂಡು ಬಂದಿದೆ ಹಾಗೇಯೆ ಸಂಘದ ಯುವ ಸಮೂಹ ತಾಳ್ಮೆಯಿಂದ ಎಚ್ಚರವಹಿಸಿ ಕೆಲಸ ಮಾಡುವಂತಹ ಕೆಲಸವಾಗಬೇಕು, ಸದಾ ನಿಮ್ಮೊಟ್ಟಿ ಸಲಹೆ ಸೂಚನೆಗಳನ್ನು ನೀಡುತ್ತಾ ನಮ್ಮ ಸಂಘವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ನಡೆಸೋಣ, ನೂತನವಾಗಿ ಅಧ್ಯಕ್ಷ ಸ್ಥಾನವಹಿಸುವವರ ಜೊತೆ ಎಲ್ಲಾರೂ ಹೊಂದಾಣಿಕೆಯಿಂದ ಸಾಗೋಣ…
ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ ಪ್ರಕಾರ ಮನೆಯಲ್ಲಿ ಬೈದರು ಎಂದು ನೊಂದುಕೊಂಡಿದ್ದ ಬಾಲಕ ಟ್ಯೂಷನ್ ಗೆಂದು ಮನೆಯಿಂದ ಹೊರಟ ನಂತರ ತನ್ನ ಸೈಕಲ್ ನ್ನು ಬೇರೆ ಸ್ಥಳದಲ್ಲಿ ನಿಲ್ಲಿಸಿ, ರೈಲಿನ ಮೂಲಕ ಬೆಂಗಳೂರು ರೈಲು ಹತ್ತಿದ್ದಾನೆ. ನಂತರ ಆತನಿಗೆ ಅಲ್ಲಿ ಏನೂ ಗೊತ್ತಾಗದ ಕಾರಣ, ವಾಪಸ್ ಬಂದಿದ್ದು ತಾಯಿಯ ಮಡಿಲು ಸೇರಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಬಾಲಕ ನಾಪತ್ತೆಯಾದ ಬೆನ್ನಲ್ಲೇ ನಮ್ಮ ತುಮಕೂರು ವರದಿ ಮಾಡಿತ್ತು. ವರದಿಯ ಬೆನ್ನಲ್ಲೇ ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡು ಬಾಲಕನನ್ನು ಹುಡುಕುವ ಪ್ರಯತ್ನಕ್ಕೆ ಕೈಜೋಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಲಕನ ನಾಪತ್ತೆಯಿಂದ ಕಂಗಾಲಾಗಿದ್ದ ಪೋಷಕರು, ಇದೀಗ ಬಾಲಕ ಪತ್ತೆಯಾದ ಬೆನ್ನಲ್ಲೇ ನಿರಾಳರಾಗಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಪೊಲೋ ಫಾರ್ಮಸಿ, ಇಂಡ್‌ಆಟೋ ಫಿಲ್ಟರ್ಸ್, ಪಿಟ್ಟಿ ಇನ್ಸ್‌ಡಸ್ಟೀಸ್ ಪ್ರೈ. ಲಿ. ವಾಹಿನಿ ಪೈಪ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಜನವರಿ 16ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ, ಡಿಪ್ಲೊಮಾ(ಮೆಕ್ಯಾನಿಕಲ್), ಡಿ.ಫಾರ್ಮ ಹಾಗೂ ಬಿ.ಫಾರ್ಮ, ಬಿ.ಇ.(ಮೆಕ್ಯಾನಿಕಲ್) ಹಾಗೂ ಬಿ.ಇ(ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಕನಿಷ್ಠ 5 ವರ್ಷ ಅನುಭವ) ಪಾಸಾದ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಜನವರಿ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102 ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ‘ತ್ರಿವಿಧ ದಾಸೋಹಿ’, ‘ಕರ್ನಾಟಕ ರತ್ನ’, ಸಿದ್ದಗಂಗಾ ಮಠದ ಲಿಂಗೈಕ್ಯ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ 7ನೇ ವರ್ಷದ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವು ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿದೆ. ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ದಿವ್ಯ ನೇತೃತ್ವದಲ್ಲಿ ಈ ಸಮಾರಂಭ ಜರುಗಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲದ ಸದ್ಗುರು ಶ್ರೀ ಮಧುಸೂದನ ಸಾಯಿ ಹಾಗೂ ಸಿದ್ದಗಂಗಾ ಮಠದ ಉತ್ತರಾಧಿಕಾರಿಗಳಾದ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಗಣ್ಯರ ಉಪಸ್ಥಿತಿ: ಪುಣ್ಯ ಸ್ಮರಣೋತ್ಸವವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಉದ್ಘಾಟಿಸಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ. ಸಿದ್ಧತಾ ಸಭೆ: ಕಾರ್ಯಕ್ರಮದ ಯಶಸ್ಸಿಗಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಅವರ ನೇತೃತ್ವದಲ್ಲಿ ಮಠದ ಆಡಳಿತ…
ನೊಣವಿನಕೆರೆ: ಇಲ್ಲಿನ ಪಿಎಂಶ್ರೀ — ಕೆ ಪಿ ಎಸ್ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಹಳ್ಳಿಯ ಸೊಗಡನ್ನು ಮರುಸೃಷ್ಟಿಸುವ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ಆಚರಿಸಲಾಯಿತು. ಹಟ್ಟಿಯ ಗೌಡರಾಗಿ ಮಿಂಚಿದ ಮುಖ್ಯಶಿಕ್ಷಕರು: ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುರೇಶ್ ಅವರು ಉದ್ಘಾಟಿಸಿದರು. ವಿಶೇಷವಾಗಿ ಅವರು ‘ಪಿ ಎಂ ಶ್ರೀ ಹಟ್ಟಿಯ ಗೌಡರಾಗಿ’ ಸಂಕ್ರಾಂತಿ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶಾಲಾ ಚಿತ್ರಕಲಾ ಶಿಕ್ಷಕರು ರಚಿಸಿದ ವರ್ಲಿ ಚಿತ್ರಕಲಾಕೃತಿಯನ್ನು ಅನಾವರಣಗೊಳಿಸಲಾಯಿತು. ಈ ಕಲಾಕೃತಿಯಲ್ಲಿ ಹಳ್ಳಿಯ ಜೀವನ ಶೈಲಿ ಮತ್ತು ಸಂಕ್ರಾಂತಿಯ ಸಂಭ್ರಮವನ್ನು ಅದ್ಭುತವಾಗಿ ಚಿತ್ರಿಸಲಾಗಿದ್ದು, ಮುಖ್ಯಶಿಕ್ಷಕರು ಇದನ್ನು ಲೋಕಾರ್ಪಣೆ ಮಾಡಿದರು. ಹಬ್ಬದ ಪ್ರಯುಕ್ತ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬಣ್ಣ ಬಣ್ಣದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಂಭ್ರಮಿಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ (SDMC)…
ತುರುವೇಕೆರೆ. ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಧ್ಯಕ್ಷರಾದ ಎನ್.ವಿ.ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯನ್ನು ನಡೆಸಲಾಯಿತು. ಇದೇ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರಿಗೆ ಸಿಗುವಂತಹ 5% ಅನುದಾನ ಕುರಿತು ಮಾಹಿತಿ ನೀಡಿ ವಿಕಲಚೇತನರಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಬೇಕಿದ್ದರೆ, ನೇರವಾಗಿ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದರು. ಬಳಿಕ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಹೇಮಂತ ಕುಮಾರಿ ಮಾತನಾಡಿ, ವಿಕಲಚೇತನರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸುಮಾರು ಹದಿಮೂರು ಯೋಜನೆಗಳು ಲಭ್ಯವಿದ್ದು, ಅದರ ಅನುಸಾರವಾಗಿ ನಿರಾಮಯ ಆರೈಕೆದಾರದ ಮಾಹಿತಿ ಜೊತೆಗೆ ಅಂದ ಮಹಿಳೆಯರ ಮಕ್ಕಳ ಪೋಷಣ ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ಟಾಪ್, ತ್ರಿಚಕ್ರ ವಾಹನ, ಹಾಗೂ ವಿಕಲಚೇತನರಿಗೆ ಸಂಬಂಧಪಟ್ಟಂತೆ ಇನ್ನೂ ಹಲವು ಮಾಹಿತಿ ನೀಡಿ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು. ಇದೇ…
ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಲೋಚನೆಗಳು ಹಾಗೂ ಮಹಾತ್ಮ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರ ಸಂಕಿರಣ ನಡೆಯಿತು. ವಿಚಾರ ಸಂಕಿರಣದ ಮುಖ್ಯ ವಿಷಯವಾಗಿ “ಒಳ ಮೀಸಲಾತಿಯ ಒಳಸುಳಿ ಹಾಗೂ ಮೀಸಲಾತಿಯ ಮುನ್ನೋಟ” ಕುರಿತು ವಿಸ್ತೃತ ಮತ್ತು ಗಂಭೀರ ಚರ್ಚೆಗಳು ನಡೆಯುವ ಮೂಲಕ ಸಾಮಾಜಿಕ ನ್ಯಾಯದ ವಿವಿಧ ಆಯಾಮಗಳನ್ನು ಅನಾವರಣಗೊಳಿಸಲಾಯಿತು. ಪ್ರೊ. ಶ್ರೀನಿವಾಸ್ ಜಿ. ಪ್ರಾಸ್ತಾವಿಕವಾಗಿ ಮಾತಾಡಿ, ಒಳಮೀಸಲಾತಿ ಸಾಮಾಜಿಕ ನ್ಯಾಯದ ಅನಿವಾರ್ಯ ಹಂತ ಎಂದು ಅಭಿಪ್ರಾಯಪಟ್ಟರು. ಅಲೆಮಾರಿ ಸಮುದಾಯಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡಬೇಕು ಎಂಬ ಸ್ಪಷ್ಟ ಬೇಡಿಕೆಯನ್ನು ಮುಂದಿಟ್ಟ ಅವರು, ನೂರು ಬಿಂದುಗಳ ರೋಸ್ಟರ್ ವ್ಯವಸ್ಥೆಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿಗಳಿಗೆ ಕ್ರಮಬದ್ಧವಾಗಿ ಅವಕಾಶ ಕಲ್ಪಿಸುವಂತೆ ರೋಸ್ಟರ್‌ನಲ್ಲಿ ಸ್ಪಷ್ಟ ಹೆಸರೀಕರಣ ಮಾಡಬೇಕೆಂದು ಒತ್ತಾಯಿಸಿದರು. ರೋಸ್ಟರ್ ವ್ಯವಸ್ಥೆ ಪಾರದರ್ಶಕವಾಗಿರದೆ ಹೋದರೆ ಮೀಸಲಾತಿಯ…
ಸರಗೂರು: ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ , ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢ ರಾಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ದಂದು ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭ ಪಂದ್ಯಾವಳಿಯಲ್ಲಿ ಮಾತನಾಡಿದರು. ಪಂದ್ಯಾಟದಲ್ಲಿ ಯಾವುದಾದರೂ ಒಂದು ತಂಡ ಗೆಲ್ಲಲೇ ಬೇಕು.ಇನ್ನೊಂದು ತಂಡ ಸೋಲಬೇಕು. ಇಂದಿನ ಪಂದ್ಯಾವಳಿ ಅತ್ಯಂತ ಶಿಸ್ತಿನಿಂದ ನಡೆದಿದೆ ಎಂದು ಅಭಿನಂದಿಸಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ತಲೆಮಾರಿನಿಂದ ವಾಲಿಬಾಲ್ ಆಟಗಾರರು ಇದ್ದಾರೆ. ಸರಗೂರಿನಲ್ಲಿ ವಾಲಿಬಾಲ್ ಪ್ರಸಿದ್ಧವಾದ ಆಟ. ಜಾತ್ರಾ ಹಾಗೂ ಜಯಂತಿ ಆಚರಣೆ ಮಾಡುವ ಸಮಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ಯುವಕರು ಕ್ಲಬ್ ಮಾಡಿ ಉತ್ತಮ ಸಾಮಾಜಿಕ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕಿನಲ್ಲಿ…
ಸರಗೂರು: ಶಿಥಿಲಗೊಂಡಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಶೀಘ್ರ‍್ರದಲ್ಲೇ ಕೆಡವಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನೂತನ ಅಧ್ಯಕ್ಷೆ ಚೈತ್ರಾಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಹೃದಯ ಭಾಗದಲ್ಲಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡವನ್ನು ನಿರ್ಮಿಸಬೇಕು. ಇದಕ್ಕಾಗಿ ೫೦ ಲಕ್ಷ ರೂ. ಅನುದಾನ ಇದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರಕಾರದೊಂದಿಗೆ ಚರ್ಚಿಸಿ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಸಿದ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್‌ಕುಮಾರ್, ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ಕಟ್ಟಡ ಸಮಸ್ಯೆಯಿದ್ದು, ಕಟ್ಟಡ ಗುರುತಿಸಿದ ಕೂಡಲೇ ಸ್ಥಳಾಂತರಗೊಂಡು ಪಂಚಾಯಿತಿ ಕಚೇರಿ ಕೆಡವಿ ನೂತನ ಕಟ್ಟಡ ನಿರ್ಮಾಣ ಮುಂದಾಗಲಾಗುವುದು. ಹೆಚ್ಚುವರಿಯಾಗಿ ಸರಕಾರಕ್ಕೆ ೫ ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಜಂಗಲ್ ತೆರವು ೭ ದಿನ ಗಡುವು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ…