Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಹೇಳಿದರು. ತಾಲೂಕಿನ ಬಿ ಮಟಕೆರಿ ಗ್ರಾಪಂಯ ವಿ ಎಸ್ ಎಸ್ ಎನ್ ಸಮುದಾಯ ಭವನದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆಯನ್ನು ತಾಲ್ಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಮತ್ತು ಸರಕಾರದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜೀತ ಪದ್ಧತಿಯ ನಿರ್ಮೂಲನೆ ಮತ್ತು ಹೇಗೆ ಗುರುತಿಸುವುದು ಕುರಿತು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ಉದ್ಘಾಟಿಸಿ ಮಾತನಾಡಿದರು. ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ…
ಮೈಸೂರು: ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳ ಬೆನ್ನಲ್ಲೆ ಅವರ ಪುತ್ರ ಡಾ.ಯತಿಂದ್ರ ವರುಣಾ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದು ಅಲ್ಲಿಂದ ಸ್ಪರ್ಧೆಗಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ತಂದೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು ಕಾಂಗ್ರೆಸ್ ಭದ್ರಕೋಟೆಯಾದ ವರುಣಾ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸಲಿದ್ದೇನೆ ಎಂದಿದ್ದಾರೆ. ಡಾ. ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಚುರುಕಿನಿಂದ ಸುತ್ತಾಟ ನಡೆಸುತ್ತಿದ್ದು ಬೈಕ್ನಲ್ಲಿ ಸಂಚಾರ ನಡೆಸಿ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರು ಅಂತಿಮವಾಗಿ ವರುಣಾದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಕೇವಲ 18 ತಿಂಗಳುಗಳಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿ ನಿಂತಿದ್ದು ಇದೀಗ ಅದಕ್ಕೆ ಹೆಸರೇನಿಡಬೇಕು ಎಂಬುವುದೇ ಭಾರಿ ಚರ್ಚೆಯಲ್ಲಿದ್ದು ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನು ಇಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆ ಕಳಿಸುತ್ತೇವೆ. ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ, ಯಡಿಯೂರಪ್ಪ ಅವರು ಅದಕ್ಕೆ ತಡೆಯೊಡ್ಡಿದ್ದರು. ಆದರೂ ಸಹ ಜನರ ಪ್ರೀತಿಗೆ ಬಗ್ಗಲೇಬೇಕು. 2006 ಮತ್ತು ಈಗಿನ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಅಜಗಜಾಂತರ ವ್ಯತ್ಯಾಸವಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳ ಕುರಿತು ಜಂಟಿ ಸಭೆ ಕರೆಯಲು ಒಪ್ಪಿಗೆ ನೀಡಲಾಯಿತು. ಕೇಂದ್ರವು ರಬ್ಬರ್ ಬೋರ್ಡ್ ಪ್ರತಿನಿಧಿಗಳು ಮತ್ತು ಸಂಸದರು ಭಾಗವಹಿಸುವ ಸಭೆಯನ್ನು ಕರೆಯಲಾತ್ತದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಸಂಸದರು ನಡೆಸಿದ ಚರ್ಚೆಯ ನಂತರ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವರು ಮಿಶ್ರ ರಬ್ಬರ್ ಮೇಲಿನ ಆಮದು ಸುಂಕ ಹೆಚ್ಚಿಸಿ ಘೋಷಣೆ ಮಾಡಿರುವುದು ರಬ್ಬರ್ ರೈತರಿಗೆ ಯಾವುದೇ ರೀತಿಯ ಪರಿಹಾರ ನೀಡದ ಕ್ರಮವಾಗಿದೆ ಎಂದು ಆರೋಪಿಸಲಾಗಿದೆ. ರಬ್ಬರ್ ಮಂಡಳಿ ಪ್ರತಿನಿಧಿಗಳು ಹಾಗೂ ಸಂಸದರ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸೂಚಿಸಲಾಗಿದೆ. ನೈಸರ್ಗಿಕ ರಬ್ಬರ್ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಸಹ ಚರ್ಚಿಸಲಾಗುವುದು. ಆಸಿಯಾನ್ ರಾಷ್ಟ್ರಗಳಿಗೆ ಸಂಯುಕ್ತ ರಬ್ಬರ್ ಆಮದು ಸುಂಕವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಅನ್ವಯಿಸದಿರುವುದು ದೊಡ್ಡ ತಪ್ಪು ಎಂದು ಡಾ. ಜಾನ್ ಬ್ರಿಟಾಸ್ ಸಂಸದರು ಇತರ ದಿನ ಗಮನಸೆಳೆದರು. ಜಾನ್ ಬ್ರಿಟಾಸ್…
ಆಂಧ್ರಪ್ರದೇಶದ ಕಾಕಿನಾಡದ ಜೀರಂಗಾಪೇಟೆಯಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಆಯಿಲ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಎಲ್ಲಿಂದ ಬಂದವರು ಎಂಬುದು ಸೇರಿದಂತೆ ಯಾವುದೇ ಮಾಹಿತಿ ಇದುವರೆಗೆ ಹೊರಬಿದ್ದಿಲ್ಲ. ಕಾರ್ಮಿಕರು ಮತ್ತು ಭದ್ರತಾ ಪಡೆಗಳು ಆಗಮಿಸಿ ಅವರನ್ನು ಹೊರಕ್ಕೆ ಕರೆದೊಯ್ದರು. ತೈಲ ಕಾರ್ಖಾನೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಸುರಕ್ಷಿತ ರೀತಿಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಕಾರ್ಖಾನೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತೈಲ ಕಾರ್ಖಾನೆಯಿಂದ ಬೇರೆ ಯಾವುದೇ ವಿವರಣೆ ಬಂದಿಲ್ಲ. ಇಂತಹ ಪ್ರಕರಣಗಳಲ್ಲಿ ಕಾರ್ಮಿಕರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸರಕಾರ ನಿರ್ದೇಶನ ನೀಡಿರುವಾಗಲೇ ಈ ದಾರುಣ ಘಟನೆ ನಡೆದಿದೆ. ಮೊದಲ ಹಂತದಲ್ಲಿ ಮೂರು ಜನ ಎಣ್ಣೆ ಕಾರ್ಖಾನೆಯ ತ್ಯಾಜ್ಯ ತೊಟ್ಟಿಗೆ ಇಳಿದರು. ಅವರಿಗೆ ದೈಹಿಕ ಸಮಸ್ಯೆ ಎದುರಾದಾಗ ಇತರ ಕೆಲಸಗಾರರೂ ಅವರನ್ನು ಹೊರಗೆ ಕರೆದುಕೊಂಡು ಹೋಗಲು ಒಳಗೆ ಹೋದರು. ಹೀಗಾಗಿ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕಾಶ್ಮೀರ ಶ್ರೀನಗರದಲ್ಲಿರುವ ಚಿತ್ರಮಂದಿರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಭರ್ತಿಯಾಗಿವೆ ಎಂದು ಮೋದಿ ಹೇಳಿದರು. ಕಳೆದ ದಿನ ಲೋಕಸಭೆಯಲ್ಲಿ ಮಾತನಾಡುವಾಗ ಹೊಗಳಿದ್ದರು. ಆದರೆ ಸಂಸತ್ತಿನಲ್ಲಿ ‘ಪಠಾಣ್’ ಬಗ್ಗೆ ನಿರ್ದಿಷ್ಟವಾಗಿ ಪ್ರಸ್ತಾಪಿಸದ ಪ್ರಧಾನಿ, 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಅವರು ತಿಳಿಸಿದರು. ಪಠಾಣ್ ವಿರುದ್ಧದ ಬಹಿಷ್ಕಾರ ಕರೆಗಳು ಮತ್ತು ಪ್ರತಿಭಟನೆಗಳಿಗೆ ಪ್ರಧಾನಿ ಈ ಹಿಂದೆ ಪ್ರತಿಕ್ರಿಯಿಸಿದ್ದರು. ಆಗ ನರೇಂದ್ರ ಮೋದಿ ಅವರು ಬಾಲಿವುಡ್ ಮತ್ತು ಬಾಲಿವುಡ್ ತಾರೆಯರ ಬಗ್ಗೆ ಅನಗತ್ಯ ಕಾಮೆಂಟ್ ಮಾಡಬಾರದು ಎಂದು ಹೇಳಿದರು. ಅದೇ ಸಮಯದಲ್ಲಿ, ಪಠಾಣ್ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಖ್ಯಾತಿಯನ್ನು ಸಹ ಹೊಂದಿದೆ. ಇಲ್ಲಿಯವರೆಗೆ ವಿಶ್ವದಾದ್ಯಂತ 865 ಕೋಟಿ ಅಧ್ಯಯನ ಮಾಡಲಾಗಿದೆ. ಜನವರಿ 25 ರಂದು ಬಿಡುಗಡೆಯಾದ ಈ ಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ. ಇದೆ ಸಮಯದಲ್ಲಿ ಚಿತ್ರತಂಡ ಹಾಗೂ ನಟ ಶಾರುಖ್…
ಪ್ರೇಮಿಗಳ ದಿನದಂದು ವಿಚಿತ್ರ ಉತ್ತರ ನೀಡಿದ ಕೇಂದ್ರ ಪ್ರಾಣಿ ಕಲ್ಯಾಣ ಇಲಾಖೆ. ಪ್ರೇಮಿಗಳ ದಿನವನ್ನು ‘ ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಆದೇಶವಾಗಿದೆ. ಈ ಕುರಿತು ಕೇಂದ್ರ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದ್ದು, ಗೋವು ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ತಿಳಿಸಿದ್ದಾರೆ. ಇಂತಹ ಆಂದೋಲನದ ಉದ್ದೇಶ ಜನರಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿಯನ್ನು ಬೆಳೆಸುವುದು. ಸಾರ್ವಜನಿಕರು ಗೋವಿನ ಗುಣಗಳನ್ನು ತಿಳಿದುಕೊಳ್ಳಲು ಪ್ರೋತ್ಸಾಹಿಸಬೇಕು. ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಜನರು ನಿಧಾನವಾಗಿ ನಮ್ಮ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದಾರೆ. ಪಶು ಕಲ್ಯಾಣ ಇಲಾಖೆಯು ಹಸುವಿನ ನರ್ತನ ದಿನವನ್ನು ಯೋಗ ದಿನದಂತೆ ಆಚರಿಸಲು ಕರೆ ನೀಡುತ್ತಿದೆ’ – ಪ್ರಾಣಿ ಕಲ್ಯಾಣ ಮಂಡಳಿಯ ಕಾನೂನು ಸಲಹೆಗಾರ ಬಿಕ್ರಮ್ ಚಂದ್ರವರ್ಷಿ ಇಂಡಿಯಾ ಟುಡೇಗೆ ತಿಳಿಸಿದರು. ಅರಣ್ಯ ಇಲಾಖೆಯ ಪ್ರಕಾರ ಗೋವು ಭಾರತೀಯ ಸಂಸ್ಕೃತಿಯ ಬೆನ್ನೆಲುಬು. ಹಸುವು ನಮ್ಮನ್ನು ತಾಯಿಯಂತೆ ನೋಡಿಕೊಳ್ಳುವುದರಿಂದ ಅದನ್ನು ‘ಕಾಮಧೇನು’ ಮತ್ತು ‘ಗೋಮಾತೆ’ ಎಂದು ಕರೆಯುತ್ತಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಸಿರಿಯಾ : ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಸಂಭವಿಸಿ ನರಕಯಾತನೆ ಶುರುವಾಗಿದ್ದು ಸಾವು ನೋವುಗಳು ನೋಡುಗರನ್ನು ಬೆಚ್ಚಿಬೀಳಿಸುತ್ತಿವೆ. ಸುಮಾರು 9 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15 ರಿಂದ 20 ಸಾವಿರಕ್ಕೂ ಹೆಚ್ಚು ಮಂದಿ ದುರಂತದಲ್ಲಿ ಗಾಯಗೊಂಡಿದ್ದು ಪ್ರತಿಯೊಂದು ದೃಷ್ಯಗಳು ಮನಕಲುಕುತ್ತಿದ್ದು ಇಬ್ಬರು ಕಂದಮ್ಮಗಳ ನರಳಾಟ ನೋಡುಗರ ಮನ ಕರಗುವಂತೆ ಮಾಡಿದೆ. ಸಿರಿಯಾದಲ್ಲಿ ಭೂಕಂಪದ ಸಂಭವಿಸಿ ಹಲವು ಕಟ್ಟಡಗಳು ಕುಸಿದಿವೆ. ಈ ಪುಟಾಣಿಗಳು ಆ ಕಟ್ಟಡಗಳ ಕೆಳಗೆ ಬರೋಬ್ಬರಿ 17 ಗಂಟೆಗಳ ಕಾಲ ಸಿಲುಕಿ ಒದ್ದಾಡಿವೆ. ನೀರು, ಆಹಾರ ಇಲ್ಲದ ಈ ಇಬ್ಬರೂ ಮಕ್ಕಳು ಅವಶೇಷಗಳಡಿಯಲ್ಲಿ 17 ಗಂಟೆ ಕಳೆದು ತನ್ನನ್ನು ಮತ್ತು ತನ್ನ ತಮ್ಮನ್ನು ಕಾಪಾಡುವಂತೆ ಬೇಡಿ ಕೊಳ್ಳುತ್ತಿರುವ ಘಟನೆ ಮನಕಲುಕುವಂತಿದೆ. ಈ ಏಳು ವರ್ಷದ ಬಾಲಕಿ ಹಾಗೂ ಆಕೆಯ ಕಿರಿಯ ಸಹೋದರ ಕೂಡ ಸಿಲುಕಿದ್ದಾರೆ. ಆದರೆ ಇಂತಹ ಕಷ್ಟದ ಸಂದರ್ಭದಲ್ಲೂ ತಮ್ಮನ ಜವಾಬ್ದಾರಿ ತೆಗೆದುಕೊಂಡಿರುವ ಬಾಲಕಿ, ಪುಟ್ಟ ಮಗುವಿನ ತಲೆಯನ್ನು ತನ್ನ ಕೈಯಲ್ಲಿ ಹಿಡಿಕೊಂಡು ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾಳೆ.…
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಿದ್ದು ಪೆ.10 ರಿಂದ ಅಧಿವೇಶನ ನಡೆಯಲಿದೆ. ಇದು ಕೊನೆಯ ಅಧಿವೇಶನವಾಗಿದ್ದು ಎಲ್ಲ ಶಾಸಕರುಗಳು ಇದರಲ್ಲಿ ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸ್ಪೀಕರ್ ಕಾಗೇರಿ ಅವರು ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಕಳೆದ ಅಧಿವೇಶನ ನಡೆದಿತ್ತು. ಅದಾದ ಬಳಿಕ ಈಗ ವಿಧಾನಸೌಧದಲ್ಲಿ ಸೇರುತ್ತಿದ್ದೇವೆ. ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುವ ಸದನ ಇದು. ಈ ವಿಧಾನಸಭೆಯ 15ನೆಯ ಅಧಿವೇಶನವಾಗಿದ್ದು ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಯಸುವುದಾಗಿ ಹೇಳಿದರು. ಫೆ. 10 ರಿಂದ ಫೆ. 24ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನವಾಗಿದ್ದು ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ನಾಳೆ 11 ಗಂಟೆಗೆ ರಾಜ್ಯಪಾಲರು ಬೃಹತ್ ಮೆಟ್ಟಿಲುಗಳ ಮೂಲಕ ವಿಧಾನಸಭೆಗೆ ಆಗಿಸಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೀದರ್: ನೂತನ ಅಂಗನವಾಡಿ ಕೇಂದ್ರದ ಕಟ್ಟಡದ ಮುಂದೆ ನಿರ್ಮಿಸಲಾಗಿರುವ ಸೇಫ್ಟಿ ಟ್ಯಾಂಕ್ ಗೆ ಬಿದ್ದು 3 ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದ್ದು, ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಔರಾದ ಪಟ್ಟಣದ ಅಂಬಿಕಾ ಕಾಲೋನಿಯಲ್ಲಿ ಅಂಗನವಾಡಿ ಕೇಂದ್ರದ ಸಮೀಪವಿರುವ ಸೇಫ್ಟಿ ಟ್ಯಾಂಗ್ ಗುಂಡಿ ಮುಚ್ಚದ ಕಾರಣ, ಮುಂಜಾನೆ ಅಂಗನವಾಡಿ ಕೇಂದ್ರಕ್ಕೆ ಮಗು ತೆರಳಿದ ವೇಳೆ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದೆ. ಟ್ಯಾಂಕ್ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದರಿಂದಾಗಿ ಮಗು ಸಾವನ್ನಪ್ಪಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಹೋ ರಾತ್ರಿ ಧರಣಿ ನಡೆಸಿದರು. ಸಚಿವ ಪ್ರಭು ಚೌವ್ಹಾಣ್ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಇಕಳಗಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತನಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಔರಾದ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ…