Subscribe to Updates
Get the latest creative news from FooBar about art, design and business.
- ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
- ಎಫ್ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್ ನಲ್ಲಿ ಹೆಚ್ಚು ಲಾಭ?
- ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
- ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
- ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
- ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
- ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
- ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ಬೆಳಗಾವಿ: ಮಾರಿಹಾಳ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದ 2 ಮನೆಗಳು ಸುಟ್ಟು ಹೋಗಿದ್ದು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಕ್ಷಣ ಸ್ಪಂದಿಸಿ, ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ. ಗುರುಪುತ್ರ ಹಿರವಣ್ಣವರ ಹಾಗೂ ಸಿದ್ದಪ್ಪ ಹಿರವಣ್ಣವರ ಇವರ ಮನೆಗಳು ಆಕಸ್ಮಿಕ ಬೆಂಕಿ ಅನಾಹುತದಿಂದ ಸುಟ್ಟು, ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು, ಬಂಗಾರ, ಬೆಳ್ಳಿ ಧವಸ ಧಾನ್ಯಗಳು, ಕಾಗದ ಪತ್ರಗಳು ಸುಟ್ಟು ಹೋಗಿವೆ. ಸುದ್ದಿ ತಿಳಿದ ಕೂಡಲೇ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಸ್ಥಳಕ್ಕೆ ಕಳಿಸಿದ ಲಕ್ಷ್ಮೀ ಹೆಬ್ಬಾಳಕರ್, ಸಾಂತ್ವನ ಹೇಳಿದ್ದಲ್ಲದೆ ವಯಕ್ತಿಕವಾಗಿ ಹಾಗೂ ಸರಕಾರದಿಂದ ತಕ್ಷಣ ನೆರವು ನೀಡುವ ಭರವಸೆ ನೀಡಿದರು. ಈ ಸಮಯದಲ್ಲಿ ಬಸವರಾಜ ಮ್ಯಾಗೋಟಿ, ಯುವರಾಜ ಕದಂ, ಈರಣ್ಣ ಹಿರವಣ್ಣವರ, ಗುಡದಪ್ಪ ಗೊರವ್, ಶಂಕರಗೌಡ ನಿರವಾಣಿ, ಗಿರಿಜಾ ಪಾಟೀಲ, ಗುರು ಅಕ್ಕತಂಗೇರಹಾಳ, ಬಾಳೇಶ್ ಕರವಿನಕೊಪ್ಪ, ಅಶೋಕ ಸಾಳುಂಕೆ, ಬಸವರಾಜ ಚೌಗುಲಾ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಗೆ ವಾರಂಟಿಯಿಲ್ಲ, ಈಗಾಗಲೇ ಕಾಂಗ್ರೆಸ್ ವಾಂತಿ ಮಾಡಿಕೊಳ್ಳುವ ಸ್ಥಿತಿಗೆ ಬಂದು ನಿಂತಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯ, ಹಣಕಾಸಿನ ಮುಗ್ಗಟ್ಟಿನಲ್ಲಿದೆ ಈಗಾಗಲೇ ಅರ್ಧ ದಿವಾಳಿಯಾಗಿದೆ. ಮುಂದೆ ಸಂಬಳ ನೀಡಲು ಸಹ ಸರ್ಕಾರ ಬ್ಯಾಂಕ್ ನಿಂದ ಸಾಲ ಮಾಡಬೇಕು, ಬ್ಯಾಂಕ್ ಕೂಡ ಸಾಲ ಕೊಡಲ್ಲ. ನೀವು ಗ್ಯಾರಂಟಿ ಕೊಡ್ತಿವಿ ಅಂದಿದ್ದು, ಅದನ್ನ ನೀವು ಎಲ್ಲಿಂದಲಾದರೂ ತಂದು ಕೊಡಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಡಾ ಜಿ ಪರಮೇಶ್ವರ ಅವರು ಗೃಹ ಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ನಳೀನ್ ಕಟೀಲ್ಲೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎಂದು ಹರಿಹಾಯ್ದಿದೆ. ಈ ವಿಚಾರವಾಗಿ ಟ್ವಿಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು’ ಎಂದು ವಾಗ್ದಾಳಿ ನಡೆಸಿದೆ. ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ, ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಪ್ರಿಯಾಂಕ್ ಖರ್ಗೆ ಅವರು ಕಲಬುರ್ಗಿಯ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸುವುದು ಅವರ ಹೊಣೆಗಾರಿಕೆ, ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು…
ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಪ್ರಿಯಾಂಕ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಗೃಹ ಸಚಿವರಾದ ಪರಮೇಶ್ವರ್ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ?ಅಥವಾ ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ. ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ ಖರ್ಗೆ ಅವರಿಗೆ ಲೀಸ್‌ಗೆ ಕೊಟ್ಟಿದ್ದಾರೋ. ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಿಯಾಂಕ ಖರ್ಗೆ ಅವರೇ ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ ಎಂದು ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ…
ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್. ಟಿ & ಎಸ್. ಸಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು ಎರಡು ಲಕ್ಷದ ಐವತ್ತು ಸಾವಿರ (2, 50, 000) ಮಕ್ಕಳ ಊಟಕ್ಕೆ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ, ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು. ವಿಕಾಸಸೌಧದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ 2023 -24 ನೇ ಸಾಲಿನ ಎಸ್. ಸಿ. ಎಸ್. ಪಿ & ಟಿ. ಎಸ್. ಪಿ ಆಯವ್ಯಯ ಹಂಚಿಕೆಯ ಬಗ್ಗೆ ನೋಡಲ್ ಏಜೆನ್ಸಿ ಸಭೆಯಲ್ಲಿ ಉಭಯ ಸಚಿವರು ವಿಶೇಷವಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ವ್ಯವಸ್ಥೆಯ ಚರ್ಚೆ ಮಾಡಿದರು. ರಾಜ್ಯದಲ್ಲಿ ಆಯಾ ವಲಯವಾರು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಊಟದ ವ್ಯವಸ್ಥೆ ಮಾಡಲಾಗಿದ್ದು ಆದರೆ…
ರಾಜಧಾನಿ ಬೆಂಗಳೂರಿನ ಹಲವು ಏರಿಯಾ ಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಸಿದೆ. ಮಂಜುನಾಥನಗರ, ಪ್ರಕಾಶ್ ನಗರ, ಸುಬ್ರಹ್ಮಣ್ಯನಗರ, ವಿಜಯನಗರ, ರಾಜಾಜಿನಗರ 2ನೇ ಬ್ಲಾಕ್ ಮತ್ತು 6ನೇ ಬ್ಲಾಕ್, ಅಮರಜ್ಯೋತಿ ನಗರ, ಸರಸ್ವತಿ ನಗರ, ವಿನಾಯಕ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಾತಾ ಫಿಡೆಲಿಟಿ, ಐಬಿಎಂ, ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, ಬಿಟಿಎಸ್ ಲೂಸೆಟ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ನೋಕಿಯಾ ಬ್ಲಾಕ್, ಮಧುವನ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, ಎಸ್ಎಎನ್ಎನ್ ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತೀಮಾ ಲೇಔಟ್, ಮರಿಕೊಪ್ಪಾ ಪಾಲಯ್ಯ, ತಾಳಿಕೊಪ್ಪ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಮ್ಮತುಮಕೂರು.ಕಾಂನ…
ತುಮಕೂರು: ಠಾಣೆಗೆ ಭೇಟಿ ನೀಡಿ, ನೇರವಾಗಿ ದೂರುದಾರರಿಗೆ ಫೋನ್ ಮಾಡಿದ ಗೃಹ ಸಚಿವ ಪರಮೇಶ್ವರ ಅವರು, ಪೊಲೀಸರು ನಿಮ್ಮ ದೂರಿಗೆ ಹೇಗೆ ಸ್ಪಂದಿಸಿದ್ದಾರೆ ಎಂದು ನೇರವಾಗಿ ಮಾಹಿತಿ ಪಡೆದ ಘಟನೆ ಪಾವಗಡ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ಮೂಲಕ ಪೊಲೀಸ್ ಠಾಣೆಯಲ್ಲಿನ ಪೊಲೀಸರ ಕಾರ್ಯವೈಖರಿ ಪರಿಶೀಲಿಸಿದ್ದು, ಸಚಿವರ ನಡೆಯಿಂದ ಪೊಲೀಸ್ ಸಿಬ್ಬಂದಿ ಕ್ಷಣ ಕಾಲ ಗಲಿಬಿಲಿಗೊಂಡರು. ಪಾವಗಡ ಪೊಲೀಸ್ ಠಾಣೆಗೆ ಏಕಾಏಕಿ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ ಠಾಣೆಯಲ್ಲಿದ್ದ ವಿಸೀಟರ್ ಪುಸ್ತಕ ತೆಗೆದು ನೇರವಾಗಿ ದೂರುದಾರನಿಗೆ ಕರೆ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಪೊಲೀಸ್ ಠಾಣೆಗೆ ಬಂದು ದೂರುದಾರನು ದೂರು ಕೊಟ್ಟಿದ್ದನು. ಪುಸ್ತಕದಲ್ಲಿದ್ದ ಆತನ ಮೊಬೈಲ್ ನಂಬರ್ ಅನ್ನು ಪರಿಶೀಲಿಸಿದ ಪರಮೇಶ್ವರ್ ಅವರು ಆತನಿಗೆ ನೇರವಾಗಿ ಕರೆ ಮಾಡಿ ಪೊಲೀಸರು ಸ್ಪಂದಿಸಿದ ರೀತಿ ಬಗ್ಗೆ ಮಾಹಿತಿ ಪಡೆದರು. ಪಾವಗಡ ತಿರುಮಣಿ ಸೋಲಾರ್ ಪಾರ್ಕ್ ಗೆ ಭೇಟಿ ನೀಡಿದ್ದ ಗೃಹ ಸಚಿವ ಪರಮೇಶ್ವರ ಅವರು ಬಳಿಕ ಪಾವಗಡ ಪೊಲೀಸ್ ಠಾಣೆ…
ತುಮಕೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು ಜನರಿಗೆ ಟೋಪಿ ಹಾಕಿ ದ್ರೋಹ ಮಾಡಿ ಅಧಿಕಾರಕ್ಕೆ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಈಗ ಹಲವು ಷರತ್ತು ಹಾಕಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದೇ ರೀತಿಯ ದ್ರೋಹ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಮೋಸದ ವಿರುದ್ದ ಸದನದ ಹೊರಗೆ ಒಳಗೆ ನಾವು ಹೋರಾಟ ಮಾಡುತ್ತೇವೆ ಎಂದರು. ಅಧಿವೇಶನ ಆರಂಭದಿಂದ ಮುಗಿಯುವವರೆಗೂ ಧರಣಿ ಮಾಡುತ್ತೇವೆ. ರಾಜ್ಯದ ಎಲ್ಲಾ ಕಡೆಯಿಂದ ಬಂದು ಪ್ರತಿಭಟನೆ ಮಾಡಲಿದ್ದೇವೆ. ಸರ್ಕಾರದ ಕೊಟ್ಟ ಯೋಜನೆ ಜಾರಿ ಮಾಡಬೇಕು, ಇಲ್ಲವಾದ್ರೆ ಅಧಿಕಾರಾದಲ್ಲಿ ಒಂದು ನಿಮಿಷನೂ ಅವರು ಇರಬಾರದು. ಅಧಿವೇಶನಕ್ಕೆ ಮುಂಚೆ ವಿಪಕ್ಷನಾಯಕರ ಆಯ್ಕೆ ಮಾಡುತ್ತೇವೆ. ನನಗೆ 81 ವರ್ಷ ಆದರೂ ನಾನು ಹೋರಾಟ ಮಾಡುತ್ತೇನೆ ಎಂದರು. ಪ್ರಧಾನಿ ಮೋದಿಗೆ ವಿಶ್ವದಲ್ಲಿ ಗೌರವ ಸಿಗುತ್ತಿದೆ. ಈ ಬಾರಿ ಕಳೆದ ಬಾರಿಯಂತೆ ಲೋಕಸಭೆಯಲ್ಲಿ ಕರ್ನಾಟದಲ್ಲಿ ಹೆಚ್ಚು ಸ್ಥಾನ ಪಡೆಯುತ್ತೇವೆ. ನನ್ನನ್ನು…
ಕೊರಟಗೆರೆ: ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗದ ವಾಸದ ಸ್ಥಳಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಭೇಟಿ ನೀಡಿ ಅಲೆಮಾರಿ ಜನಾಂಗದ ವಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಕೊಟ್ಟ ಮಾತಿನಂತೆ ಮಾಶಾಸನದ ಆದೇಶ ಪತ್ರವನ್ನು ಕೇವಲ 24 ಗಂಟೆ ಒಳಗೆ ವಿತರಿಸಿದ್ದಾರೆ. ಅಲೆಮಾರಿ ಜನಾಂಗದ ಬಡ ಜನರಿಗೆ ಬೇಕಾಗಿರುವಂತಹ ಎಲ್ಲಾ ಮೂಲಭೂತ ಸೌಕರ್ಯಗಳ ಬಗ್ಗೆ ಸ್ಥಳದಲ್ಲೇ ಎಲ್ಲಾ ಇಲಾಖೆಯ ಅಧಿಕಾರದೊಂದಿಗೆ ಚರ್ಚಿಸಿ ಶೀಘ್ರವೇ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು,ವಿದ್ಯುತ್, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾದ ರಸ್ತೆ, ಚರಂಡಿ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಅಧಿಕಾರಿಗಳು ಮುಂದಾಗಿದ್ದಾರೆ. 24 ಹೆಚ್ಚು ಅಲೆಮಾರಿ ಜನಾಂಗಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ನಿವೇಶನ ಆದೇಶ ಪ್ರತಿಯನ್ನು ವಿತರಿಸುವದಷ್ಟೇ ಬಾಕಿ ಇದೆ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿರವರು ಶೀಘ್ರದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಅಲೆಮಾರಿ ಜನಾಂಗದವರ ಕೊಟ್ಟಿಗೆ ನಮ್ಮ ತಾಲೂಕು ಆಡಳಿತ ಸದಾಕಾಲ…
ಬಿಬಿಎಂಪಿ ವತಿಯಿಂದ ನಡೆಯುವ ನಾಡಪ್ರಭು ಕೆಂಪೇಗೌಡ ದಿಣಾಚರಣೆಯ ಪ್ರಯುಕ್ತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಾಂಕ: 28-06-2023 ರಿಂದ 05-07-2023 ರೊಳಗೆ ಬೇರೆಬೇರೆ ದಿನಗಳಂದು ಕೆಂಪೇಗೌಡ ದಿನಾಚರಣೆ ಹಾಗೂ ಜುಲೈ 9 ರಂದು ಸಮಾರೋಪ ಸಮಾರಂಭವನ್ನು ವಿಧಾನಸೌಧದ ಭವ್ಯ ಮೆಟ್ಟಿಲು ಮೇಲೆ ಆಚರಿಸಲಿದ್ದು, ಅದಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ನಡೆದ ರವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜುಲೈ 9 ರಂದು ಪಾಲಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಲಾಗುವುದು. ಅದಕ್ಕಾಗಿ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಪಾಲಿಕೆಯ 198 ವರ್ ಗಳಲ್ಲಿಯೂ ವಿವಿಧ ಸೇವೆಗಳಲ್ಲಿ ಸಾಧನೆ ಮಾಡಿರುವಂತಹ ಒಬ್ಬರನ್ನು ಗುರುತಿಸಿ, 198 ಕೆಂಪೇಗೌಡ ಪ್ರಶಸ್ತಿಗಳನ್ನು ವಿತರಣೆ ಮಾಡಲಾಗುವುದು. ಅದಕ್ಕಾಗಿ ಮಾನ್ಯ…