Subscribe to Updates
Get the latest creative news from FooBar about art, design and business.
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
Author: admin
ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿನೋದ್ ಕಾಂಬ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದ್ಯದ ಅಮಲಿನಲ್ಲಿದ್ದ ಪತ್ನಿಯ ಮೇಲೆ ಕಾಂಬ್ಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾಂಬ್ಳಿ ವಿರುದ್ಧ ಪತ್ನಿಯೇ ದೂರು ಸಲ್ಲಿಸಿದ್ದಾರೆ. ಬಾಂದ್ರಾ ಪೊಲೀಸರ ಪ್ರಕಾರ ಕಾಂಬ್ಳಿ ವಿರುದ್ಧ ಐಪಿಸಿಯ ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಗಾಯಗೊಳಿಸುವುದು) ಮತ್ತು 504 (ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಮಹಿಳೆಯರ ಪರವಾದ ಸರ್ಕಾರ ಬರಬೇಕಿದೆ. ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಡಿರುವ ಆರೋಪಗಳಿಗೆ ಹಾಗೂ ಸಿಡಿ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು. 3 ತಿಂಗಳು ಕೆಟ್ಟದ್ದನ್ನು ನೋಡಲ್ಲ, ಕೆಟ್ಟದ್ದನ್ನು ಕೇಳಲ್ಲ, ಕೆಟ್ಟದ್ದನ್ನು ಮಾಡಲ್ಲ. ನಾನು ಮಾಡಿದ ಅಭಿವೃದ್ಧಿ ಕೆಲಸದಿಂದ ಚುನಾವಣೆಯಲ್ಲಿ ಗೆಲ್ಲಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಹಾಗಾಗಿ ಮೂರು ತಿಂಗಳು ಬಹಳ ತಾಳ್ಮೆಯಿಂದ ಇರಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು. ರಾಜಕಾರಣದಲ್ಲಿ ಮಹಿಳೆಯರು ಪ್ರತಿ ಹಂತದಲ್ಲೂ ಅಗ್ನಿ ಪರೀಕ್ಷೆಯನ್ನು ಎದುರಿಸಬೇಕು. ರಾಜಕಾರಣ ಎಂದರೆ ಮಹಿಳೆಯರಿಗೆ ಸುಲಭವಲ್ಲ. ಬಹಳ ಕಷ್ಟ, ಇಲ್ಲಿ ಪ್ರತಿ ಕ್ಷಣ ಅಗ್ನಿಪರೀಕ್ಷೆಗಳೇ. ಸೀತಾ ಮಾತೆ ಕೂಡ ಅಗ್ನಿ ಪರೀಕ್ಷೆಯನ್ನು ತಪ್ಪಿಸಿಕೊಳ್ಳಲಾಗಿಲ್ಲ. ಹೀಗಿರುವಾಗ ಲಕ್ಷ್ಮಿ ಹೆಬ್ಬಾಳ್ಕರ್…
ಬೆಂಗಳೂರಿನಲ್ಲಿ ನಡೆಯಲಿರುವ ಏರೊ-ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಅತ್ಯಾಧುನಿಕ ವಿಮಾನಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಅಮೆರಿಕದ ಲಾಕ್‌ಹೀಡ್ ಮಾರ್ಟಿನ್ ಕಂಪನಿಯು ಎಫ್-21 ಯುದ್ಧ ವಿಮಾನ, ಎಸ್-92 ಬಹುಪಯೋಗಿ ಹೆಲಿಕಾಪ್ಟರ್, ಎಂಎಚ್ -60 ಆರ್ ಮಲ್ಟಿ ಮಿಷನ್ ವಿಮಾನ ಸೇರಿದಂತೆ ಅತ್ಯಾಧುನಿಕ ವಿಮಾನಗಳನ್ನು ಪ್ರದರ್ಶಿಸಲಾಗುತ್ತದೆ. ಯಲಹಂಕದಲ್ಲಿರುವ ವಾಯುನೆಲೆಯ ಆವರಣದಲ್ಲಿ ಫೆ. 13ರಿಂದ 17ರ ವರೆಗೆ 14ನೇ ಏರೊ-ಇಂಡಿಯಾ ಪ್ರದರ್ಶನ ನಡೆಯಲಿದೆ. ‘ಅತ್ಯಾಧುನಿಕ ಸಾಮರ್ಥ್ಯವನ್ನು ಪ್ರದರ್ಶಿಸಲು ಏರೊ-ಇಂಡಿಯಾ 2023ರಲ್ಲಿ ಪಾಲ್ಗೊಳ್ಳಲು ನಾವು ಉತ್ಸುಕರಾಗಿದ್ದೇವೆ’ ಎಂದು ಲಾಕ್‌ಹೀಡ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ವಿಲಿಯಮ್ ಬ್ಲೇರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಾಸಕರ ನಿಧಿ ಹಾಗೂ ನಗರಾಭಿವೃದ್ಧಿ ನಿಧಿ ಒಟ್ಟು 10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ರೂಪಕಗಳ ಹಾಗೂ ಧ್ವನಿವರ್ಧಕ ಹಾಗೂ ಬೆಳಕಿನ ರೂಪಕ 40 ನಿಮಿಷಗಳ ಸಮಯದ ರೂಪಕ ಇದು ಕನ್ನಡ ಹಾಗೂ ಮರಾಠಿ ಭಾಷೆಗಳಲ್ಲಿ ಮೂಡಿಬರಲಿದೆ. ಸ್ಮಾರಕ ಫೆಬ್ರುವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ದಿನದಂದು ಸ್ಮಾರಕ ಉದ್ಘಾಟನೆಗೊಳ್ಳಲಿದೆ ಅದರ ಅಂಗವಾಗಿ ಇಂದು ಶಾಸಕ ಅಭಯ ಪಾಟೀಲ್ ಕಾಮಗಾರಿಯನ್ನು ಪರಿಶೀಲಿಸಿ ಫೆಬ್ರವರಿ 19ರ ಒಳಗೆ ಸಂಪೂರ್ಣ ಕಾಮಗಾರಿ ಮುಗಿಯಲಿದೆ. ಈ ಸ್ಮಾರಕ ಶಾಲಾ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಪ್ರವೇಶ ನೀಡಲಾಗುವುದು ಆದರೆ ಯಾವ ರೀತಿ ಶಾಲಾ ಮಕ್ಕಳಿಗೆ ಶಿವಪ್ರೇಮಿಗಳಿಗೆ ಇದನ್ನು ನೋಡಲು ಅವಕಾಶ ಮಾಡಿಕೊಡುವುದು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಬೆಳಗಾವಿ ದಕ್ಷಿಣ ಭಾಗದಲ್ಲಿರುವ ಶಿವಾಜಿ ಗಾರ್ಡನ್ ಹತ್ತಿರ ಈ ಸ್ಮಾರಕ ನಿರ್ಮಾಣಗೊಂಡಿದ್ದು ಈ ಸ್ಮಾರಕ ಉದ್ಘಾಟನೆಯ ಸಲುವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಯೋಗಿ ಆದಿತ್ಯನಾಥ್ ಹಾಗೂ ಆಸ್ಸಾಂ ಮುಖ್ಯಮಂತ್ರಿ ಅವರನ್ನುಆಹ್ವಾನಿಸಲಾಗಿದೆ.…
ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಎಸ್‌ಪಿಪಿ, ರೇಖಾ ಕೋಟೆಗೌಡರು ಪೋಕ್ಸೋ ಪ್ರಕರಣದ (POCSO Case) ಆರೋಪಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೋ ಪ್ರಕರಣದ ಆರೋಪಿ ಬಳಿ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಮನೆಯಲ್ಲಿ 1 ಲಕ್ಷದ 87 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ. ಮಧುಸೂಧನ್ ಕಿತ್ತೂರು ಎಂಬುವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ರೇಖಾ ಅವರನ್ನು ಬಲೆಗೆ ಕೆಡವಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಕಾರ್ಮಿಕರು. ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಎಸ್ ಟಿಪಿ ಸಂಪ್ ಬಳಿ ಕೆಲಸ ಮಾಡುತ್ತಿದ್ದರು. ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಮನಗರ: ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಸುದೇವಪುರ ಗ್ರಾಮದಲ್ಲಿ ಯುವಕನೊಬ್ಬ ತಮ್ಮ ಮನೆಯಲ್ಲಿರುವ ದೇವರ ಕೋಣೆಯಲ್ಲಿ ಕುಳಿತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ ಶಿವರಾಜ್ (35) ಎಂದು ತಿಳಿದು ಬಂದಿದೆ. ಈತ ತನ್ನ ಮನೆಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ದಿನಗಳ ಬಳಿಕ ಆತ ಮಾಡಿದ್ದ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಶಿವರಾಜ್ ತನ್ನ ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದನು. ಒಟ್ಟು 40 ಸಾವಿರ ಹಣ ಸಾಲ ಪಡೆದಿದ್ದು, ಸಾಲದ ಹಣ ಮರಳಿ ಕೊಡದ ಕಾರಣ ಶಿವರಾಜ್ ಗೆ ಕಿರುಕುಳ ನೀಡಿದ್ದಾರೆ. ನನ್ನ ಸ್ನೇಹಿತರು ಇಸ್ಪೀಟ್ ಸೇರಿ ಹಲವು ದುಶ್ಚಟಗಳನ್ನು ಕಲಿಸಿ ಸುಮಾರು 8 ಲಕ್ಷ ರೂ. ನಷ್ಟಕ್ಕೆ ಕಾರಣವಾಗಿದ್ದಾರೆ. ಆದರೆ, ನನ್ನ ಮನೆಯವರು ನನ್ನ ಸಾವಿಗೆ ಕಾರಣವಲ್ಲ.…
ತುರುವೇಕೆರೆ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಲಾವಿದ ಮೂರ್ತಿ ಸಿ (43) ಅವರ ಮನೆಗೆ ತುರುವೇಕೆರೆ ತಾಲೂಕು ಆದಿ ಜಾಂಬವ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕರು ಮಾಜಿ ಜಿಲ್ಲಾ ಪರಿಷತ್ತಿನ ಸದಸ್ಯರಾಗಿದ್ದ ಹೊನ್ನಯ್ಯನವರ ಮೊಮ್ಮಗ ಸಿ.ಎಸ್.ಮೂರ್ತಿರವರು ಭೇಟಿ ನೀಡಿ ಸಾಂತ್ವನವನ್ನು ಹೇಳಿ ಆರ್ಥಿಕ ನೆರವನ್ನು ನೀಡಿದ್ದಾರೆ. ಮೃತ ವ್ಯಕ್ತಿ ಮೂರ್ತಿ ಸಿ ಅವರು ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಇವರ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ತನ್ನ ಕೈಲಾದ ಸಹಾಯವನ್ನು ಮಾಡುವುದಾಗಿ ಸಿ.ಎಸ್.ಮೂರ್ತಿ ಅವರು ಇದೇ ವೇಳೆ ಭರವಸೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇನ್ನೂ ದಲಿತ ಜನಾಂಗದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರಿಗೆ ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಹಾಯ ಮಾಡುವುದಾಗಿ ಇದೇ ವೇಳೆ ಸಿ.ಎಸ್.ಮೂರ್ತಿ ಘೋಷಿಸಿದರು. ಈ ಸಂದರ್ಭದಲ್ಲಿ ಆದಿಜಾಂಭವ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಾಯಸಂದ್ರ ಎಂ.ಎನ್.ಸುಬ್ರಮಣ್ಯ, ದಲಿತ ಮುಖಂಡರಾದ ಟಿ.ಹೆಚ್.ಗುರುದತ್, ಮಾಜಿ ತಾಲೂಕು ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ, ಬಾಣಸಂದ್ರ ಕೃಷ್ಣ ಮಾದಿಗ,…
ತುರುವೇಕೆರೆ: ಸರ್ಕಾರದಿಂದ ಆಟೋ ಚಾಲಕರಿಗೆ ಸಿಗುವ ಸವಲತ್ತುಗಳನ್ನು ನಿಮಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಮಸಾಲಾ ಜಯರಾಮ್ ತಿಳಿಸಿದರು. ತಾಲ್ಲೂಕಿನ ಲೈಸೆನ್ಸ್ ಇಲ್ಲದ ಆಟೋ ಚಾಲಕರಿಗೆ ಲೈಸೆನ್ಸ್ ಮತ್ತು ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ಈಗ ನನ್ನ ಸ್ವಂತ ಖರ್ಚಿನಿಂದ 53 ಚಾಲಕರಿಗೆ ಲೈಸೆನ್ಸ್ ಮತ್ತು 80 ಚಾಲಕರಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ. ನಿಮ್ಮ ಆಟೋಗಳಿಗೆ ಕಡ್ಡಾಯವಾಗಿ ಇನ್ಸೂರೆನ್ಸ್ ಮಾಡಿಸಿ, ನಿಮ್ಮ ಕಷ್ಟಗಳ ಬಗ್ಗೆ ನನಗೆ ಅರಿವಿದೆ, ನಿಮ್ಮ ಜೊತೆ ನಾನಿರುತ್ತೇನೆ ಎಂದು ಧೈರ್ಯ ಹೇಳಿದರು. ನಿಮ್ಮ ಬಳಿ ಅಗತ್ಯ ಪರವಾನಗಿ ಮತ್ತು ದಾಖಲೆಗಳನ್ನು ಹೊಂದಿ, ಪೊಲೀಸರಿಂದ ಬೀಳುವ ಫೈನ್ ಗಳಿಂದ ದೂರವಿರಿ. ಯಾವುದೇ ತರನಾದ ದಂಡವನ್ನು ಕಟ್ಟದ ರೀತಿಯಲ್ಲಿ ಅಗತ್ಯ ಧಾಖಲೆ ಇಟ್ಟುಕೊಳ್ಳಿ. ಇನ್ಸೂರೆನ್ಸ್ ಅನ್ನು ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಸರ್ಕಾರದಿಂದ ಮತ್ತು ನಿಗಮದಿಂದ ಬರುವ ಸವಲತ್ತುಗಳನ್ನು ತಲುಪಿಸಲಾಗುವುದು. ಈಗ ಸರ್ಕಾರದಿಂದ ಎರಡು ಆಟೋಗಳನ್ನೂ ಕೊಡಲು ವ್ಯವಸ್ಥೆ ಮಾಡಿದ್ದೇನೆ. ನಾನು ಸುಳ್ಳು ಆಶ್ವಾಸನೆ ಕೊಡುವುದಿಲ್ಲ, ನಿವೇಶನಗಳನ್ನು…
ತುರುವೇಕೆರೆ: ತಾಲೂಕು ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೀಯ ಚುನಾವಣೆಯಲ್ಲಿ ನೂರ್ ಆಯಿಷಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ 15 ದಿನಗಳಿಂದ ಹಿಂದಿನ ಉಪಾಧ್ಯಕ್ಷೆಯಾದ ‘ ಗೀತಾ ಹೆಚ್ಎಸ್ ‘ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಗ್ರಾಮ ಪಂಚಾಯಿತಿಯು 16 ಜನ ಸದಸ್ಯ ಬಲ ಹೊಂದಿರುವ ಪಂಚಾಯತಿ ಆಗಿದ್ದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ, ನೂರ್ ಆಯಿಷಾ ಒಬ್ಬರೇ ಸಲ್ಲಿಸಿದ್ದು. ಕೊನೆಯ ಘಳಿಗೆಯವರೆಗೂ ಯಾರೊಬ್ಬರೂ ಇವರ ವಿರುದ್ಧ ನಾಮಪತ್ರ ಸಲ್ಲಿಸಲಿಲ್ಲ. ಆದ ಕಾರಣ ಅಂತಿಮವಾಗಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತುರುವೇಕೆರೆ ತಾಲೂಕು ದಂಡಾಧಿಕಾರಿಗಳಾದ ವೈ ಎಂ ರೇಣು ಕುಮಾರ್ ರವರು ನೂರ್ ಆಯುಷಾ ರವರನ್ನು ಅವಿರೋಧ ಆಯ್ಕೆ ಉಪಾಧ್ಯಕ್ಷೆ ಎಂದು ಘೋಷಿಸಿದರು. ಆಯ್ಕೆಯಾದ ತಕ್ಷಣ ನೂತನ ಉಪಾಧ್ಯಕ್ಷೆಯ ಬೆಂಬಲಿಗರು ಹಾಗೂ ಅಭಿಮಾನಿಗಳು ಪಂಚಾಯಿತಿಯ ಹೊರಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ಹಂಚಿದರು. ಪುಷ್ಪಮಾಲೆಯನ್ನು ಹಾಕಿ ಅಭಿನಂದನೆಯನ್ನು ಸಲ್ಲಿಸಿದರು. ಈ ಚುನಾವಣೆಯಲ್ಲಿ …