Subscribe to Updates
Get the latest creative news from FooBar about art, design and business.
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
Author: admin
ನೆಲಮಂಗಲ: ನಗರಸಭೆ ವ್ಯಾಪ್ತಿಯಲ್ಲಿ ಬರುವ ಜಕ್ಕಸಂದ್ರದ ಬ್ರಾಹ್ಮಣರ ಬೀದಿಯಲ್ಲಿ ಕರ್ನಾಟಕ ರಣಧೀರ ವೇದಿಕೆಯ ನೂತನ ಕೇಂದ್ರ ಕಚೇರಿಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ನಾಡ ದೇವತೆಯಾದ ಶ್ರೀ ಭುವನೇಶ್ವರಿ ದೇವಿಗೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳೊಂದಿಗೆ ವಿವಿಧ ಹೋಮ ಹವನಗಳನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ಕರ್ನಾಟಕ ರಣಧೀರರ ವೇದಿಕೆಯ ಕಾರ್ಯಕರ್ತರು ಈ ಶುಭ ಸಂದರ್ಭದಲ್ಲಿ ಹಾಜರಾಗಿ ತಾಯಿ ಭುವನೇಶ್ವರಿ ದೇವಿಯ ಕೃಪೆಗೆ ಪಾತ್ರರಾದರು. ಕಚೇರಿ ಉದ್ಘಾಟನೆಯಾದ ನಂತರ ನೂತನವಾಗಿ ವಿಜಯಪುರ ಜಿಲ್ಲೆಯ ಜಿಲ್ಲಾ ಘಟಕವನ್ನು ಇದೆ ಸಂದರ್ಭದಲ್ಲಿ ಸ್ಥಾಪಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಮಹೇಶ್ ಆಯ್ಕೆಯಾದರು. ಕಾರ್ಯಧ್ಯಕ್ಷರಾಗಿ ಜಾವಿದ್ ಹಾಕಿಯಾದರೂ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದ ರಾಜ್ಯ ಉಸ್ತುವಾರಿಯಾಗಿ ಬಸವರಾಜ್ ರವರನ್ನು ಇದೇ ಸಂದರ್ಭದಲ್ಲಿ ರಾಜ್ಯ ಘಟಕದ ಮುಖಂಡರುಗಳ…
ಬೀದರ್: ಜಿಲ್ಲೆಯ ಔರಾದ್ ‘ಬಿ’ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಭವ್ಯವಾಗಿ ಸ್ವಾಗತ ಮಾಡಿದರು. ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ದುರಾಡಳಿತದ ವಿರುದ್ಧ ಕಿಡಿಕಾರಿದ ಅವರು, ಔರಾದ್ ಕ್ಷೇತ್ರದ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣರ ವಿರುದ್ಧ ವಾಗ್ದಾಳಿ ನಡೆಸಿದರು. ದುರಾಡಳಿತ ಮಾಡುತ್ತಿರುವ ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರುವಂತೆ ಅವರು ಮನವಿ ಮಾಡಿಕೊಂಡರು. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ತರುವ ನಿಟ್ಟಿನಲ್ಲಿ ಪ್ರಜಾ ಧ್ವನಿ ಯಾತ್ರೆಯನ್ನು ಇಡೀ ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಶ್ವರ್ ಬಿ ಖಂಡ್ರೆ ಮಾತನಾಡಿ, ಔರಾದ್ ಕ್ಷೇತ್ರದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ಅಭಿಮಾನಕ್ಕೆ ಅಭಿನಂದಿಸುವುದಾಗಿ ತಿಳಿಸಿದರು. ಕೆಪಿಸಿಸಿ ಕಾರ್ಯದರ್ಶಿಗಳಾದ ಮೀನಾಕ್ಷಿ ಸಂಗ್ರಾಮ, ಭೀಮಸೇನ್ ರಾವ್ ಶಿಂಧೆ, ಲಕ್ಷ್ಮಣ ಸೋರಲ್ಕರ್, ಸುಧಾಕರ್ ಕೊಳ್ಳುರ್, ರಾಮಣ ಒಡಿಯರ್, ಬಂಟಿ ದರ್ಬಾರೆ, ಹಾಗೂ ಬೀದರ್…
ಡ್ರಗ್ಸ್‌ನೊಂದಿಗೆ ಮತ್ತೆ ಭಾರತದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಗಳನ್ನು ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ರಾಜಸ್ಥಾನದ ಅಂತರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ನಡೆದಿದ್ದು, 6 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆಬ್ರವರಿ 4 ರ ಶನಿವಾರ ರಾತ್ರಿ ರಾಜಸ್ಥಾನದ ಶ್ರೀಗಂಗಾನಗರ ವಲಯದ ಶ್ರೀಕರನ್‌ಪುರ ಪ್ರದೇಶಕ್ಕೆ ಡ್ರೋನ್ ಆಗಮಿಸಿದೆ. ಪಾಕಿಸ್ತಾನದ ಡ್ರೋನ್ ಮತ್ತು 6 ಕೆಜಿ ತೂಕದ ಆರು ಪ್ಯಾಕೆಟ್ ಮಾದಕ ವಸ್ತುಗಳನ್ನು ಸ್ಥಳೀಯ ಪೊಲೀಸರ ಜಂಟಿ ತಂಡವು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಶುಕ್ರವಾರ ಪಂಜಾಬ್ ನಲ್ಲಿ ಐದು ಕಿಲೋಗಳಷ್ಟು ಮಾದಕ ದ್ರವ್ಯಗಳನ್ನು ಹೊತ್ತೊಯ್ಯುತ್ತಿದ್ದ ಇದೇ ರೀತಿಯ ಡ್ರೋನ್ ಅನ್ನು ಗಡಿ ಪಡೆ ಹೊಡೆದುರುಳಿಸಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ತಮಿಳುನಾಡು: ಉಚಿತ ಸೀರೆಗಾಗಿ ಮಹಿಳೆಯರು ಮುಗಿಬಿದ್ದ ಪರಿಣಾಮ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ತಿರುಪತ್ತೂರಿನ ವಾಣಿಯಂಪಾಡಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಸಂಸ್ಥೆಯೊಂದು ಉಚಿತವಾಗಿ ಸೀರೆ, ನೀಡುವುದಾಗಿ ಘೋಷಿಸಿದ್ದು, ಇದಕ್ಕಾಗಿ ಕಂಪನಿಯವರು ಹೇಳಿದ ಜಾಗಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಸಾವಿರಾರು ಜನರು ಜಮಾಯಿಸುತ್ತಿದ್ದಂತೆ, ಕಾಲ್ತುಳಿತ ಸಂಭವಿಸಿದೆ. ಅಯ್ಯಪ್ಪನ್ ಎಂಬ ವ್ಯಕ್ತಿ ತೈಪುಯಂ ಹಬ್ಬದ ಆಚರಣೆಯ ಅಂಗವಾಗಿ ಉಚಿತ ಸೀರೆ ಮತ್ತು ಉಡುಪುಗಳನ್ನು ವಿತರಿಸಿದರು. ಇದಕ್ಕೆ ಟೋಕನ್ ನೀಡುವಾಗ ಅವಘಡ ಸಂಭವಿಸಿದೆ. 100ಕ್ಕೂ ಹೆಚ್ಚು ಮಹಿಳೆಯರು ಬಟ್ಟೆ ಖರೀದಿಸಲು ಬಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು. ಅನೇಕ ಜನರು ಗಾಯಗೊಂಡರು. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಸುಪ್ರೀಂ ಕೋರ್ಟ್‌ಗೆ 5 ಹೊಸ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲ 5 ಮಂದಿಯ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದೆ. ಅನುಮೋದನೆ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದಾದ ಬಳಿಕ ಕೇಂದ್ರ ಸರ್ಕಾರ ನೇಮಕಾತಿಗೆ ಅನುಮತಿ ನೀಡಿತ್ತು. ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಶೀಘ್ರವೇ ಅಂಗೀಕರಿಸಲಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಬೆನ್ನಲ್ಲೇ ನೇಮಕಾತಿಗಳಿಗೆ ಅನುಮೋದನೆ ದೊರೆತಿದೆ. ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಾಧೀಶ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಮನೋಜ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ. ಇದರೊಂದಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ…
ಬೆಳಗಾವಿ: “ಎಲ್ಲ ಧರ್ಮ, ಧರ್ಮೀಯರನ್ನು ಪ್ರೀತಿಸಿ ಯಾವುದೇ ಭೇದಭಾವ ಮಾಡದೇ ಸೋದರತ್ವದಿಂದ ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆಯೊಂದಿಗೆ ನಡೆದುಕೊಂಡು ಹೋದಾಗ ಜೀವನ ಪಾವನವಾಗುತ್ತದೆ,” ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಖಾನಾಪುರ ತಾಲೂಕಿನ ಸುಕ್ಷೇತ್ರ ಚಿಕ್ಕಮುನವಳ್ಳಿಯ ಆರೂಢ ಮಠದಲ್ಲಿ ಜರುಗಿದ ಸರ್ವ ಧರ್ಮ ಭಾವೈಕ್ಯತೆಯ ಸಮ್ಮೇಳನದಲ್ಲಿ ಭಾಗಿಯಾಗಿ, ಎಲ್ಲ ಮಠಾಧೀಶರ ಆಶೀರ್ವಾದ ಪಡೆದು, ಸಮ್ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ವ ಜನಾಂಗದ ಶಾಂತಿಯ ತೋಟದಂತೆ ಇಂದು ಮಠಮಾನ್ಯಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ರವಾನಿಸುತ್ತಿವೆ. ಹಬ್ಬ ಮತ್ತು ಆಚರಣೆಗಳು ಸದಾಕಾಲವೂ ಭಾವೈಕ್ಯತೆಯ ಸಂಕೇತವಾಗಿ ಹೊರಹೊಮ್ಮುತ್ತಿವೆ. ಯುಗಾದಿಯ ಹೋಳಿಗೆಯ ಹೂರಣ, ಕ್ರಿಸ್ಮಸ್ ನ ಉಡುಗೊರೆಗಳು ಮತ್ತು ರಂಜಾನ್ ಖೀರನ್ನು ವಿನಿಮಯ ಮಾಡಿಕೊಳ್ಳುವ ಎಷ್ಟೋ ಕುಟುಂಬಗಳನ್ನು ನಾನು ನೋಡಿದ್ದೇನೆ, ಹಲವು ಬಾರಿ ನಾನೂ ಕೂಡ ಭಾಗವಹಿಸಿದ್ದೇನೆ,” ಎಂದು ಅವರು ತಮ್ಮ ಅನುಭವ ಹಂಚಿಕೊಂಡರು. ಈ ಸಂದರ್ಭದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು, ಚಿಕ್ಕಮುನವಳ್ಳಿಯ ಶ್ರೀ ದಿವ್ಯಚೇತನ ಶಿವಪುತ್ರ ಮಹಾಸ್ವಾಮಿಗಳು,…
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರ ನಿಧಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ 50 ಹಳ್ಳಿಗಳಿಗೆ ಇದೇ ವರ್ಷ ಜಿಮ್ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದ್ದು, ಈಗಾಗಲೆ 20 ಹಳ್ಳಿಗಳಿಗೆ ವಿತರಣೆ ಪೂರ್ಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ. ಶನಿವಾರ ಶಾಸಕ ಗೃಹ ಕಚೇರಿಯಲ್ಲಿ 10 ಗ್ರಾಮಗಳಿಗೆ ಜಿಮ್ ಹಾಗೂ ಕ್ರೀಡಾ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿ ಸಿಗುವ ಸೌಲಭ್ಯಗಳು ಗ್ರಾಮೀಣ ಪ್ರದೇಶದ ಯುವಕರಿಗೆ, ಮಕ್ಕಳಿಗೆ ಸಿಗಬೇಕೆನ್ನುವ ಉದ್ದೇಶದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಈ ಯೋಜನೆ ಹಾಕಿಕೊಂಡಿದ್ದಾರೆ. ತನ್ಮೂಲಕ ಗ್ರಾಮೀಣ ಜನತೆಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದರು. ಕ್ಷೇತ್ರದಲ್ಲಿ ನಾಗರಿಕ ಸೌಲಭ್ಯಗಳ ಅಭಿವೃದ್ಧಿಯ ಜೊತೆಗೆ, ಕ್ರೀಡೆ, ಶಿಕ್ಷಣ ಸೇರಿದಂತೆ ಸರ್ವ ಎಲ್ಲ ವಿಧದಲ್ಲೂ ಕ್ಷೇತ್ರ ಮುಂದೆ ಬರಬೆಕೆನ್ನುವ ಧ್ಯೇಯ ಇಟ್ಟುಕೊಂಡು ಲಕ್ಷ್ಮೀ ಹೆಬ್ಬಾಳಕರ್ ಅವರು ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಹ ಜನರು…
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ ಮಂತ್ರಿ ಸ್ಥಾನ ಬೇಡ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ, ಕೆ.ಎಸ್ ಈಶ್ವರಪ್ಪರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕಟ್ಟಿದ ಹಿರಿಯ ನಾಯಕರಲ್ಲಿ ಈಶ್ವರಪ್ಪ ಅವರು ಒಬ್ಬರು. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತು ಆಗಿದೆ. ಹೀಗಾಗಿ ಸಚಿವ ಸ್ಥಾನ ನೀಡಬೇಕಿತ್ತು. ಈಗ ಸಚಿವ ಸ್ಥಾನ ಕೇಳೋದು ತಪ್ಪಲ್ಲ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮೀಸಲಾತಿ ಹೆಚ್ಚಳ ಮಾಡುತ್ತೇವೆಂದು ದಲಿತರಿಗೆ ಮೋಸ ಮಾಡಿದ್ದರು. ಈಗ ಎಸ್.ಸಿ ಎಸ್ ಟಿ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇದು ಬಹಿರಂಗ ಸತ್ಯ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತಮಿಳಿನ ಖ್ಯಾತ ನಿರ್ದೇಶಕ ಹಾಗೂ ಹಾಸ್ಯ ನಟ ಡಿಪಿ ಗಜೇಂದ್ರನ್ (68) ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಲ್ಲ ಕಾಲಂ ಪೊರಂಥಾಚು, ಪಾಂಡಿ ನಟುತ್ ತಂಗಂ, ಬಜೆಟ್ ಪದ್ಮನಾಭನ್, ಮಿಡಲ್ ಕ್ಲಾಸ್ ಮಾಧವನ್, ಸೀನಾ ಥಾನಾ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಜತೆಗೆ ಪ್ರಿಯಮುದನ್, ಪಿತಾಮಗನ್, ಪೆರಳಗನ್, ವಿಲ್ಲು, ವೇಲಾಯುತಂ, ಚಂದ್ರಮುಖಿ ಸೇರಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ತಮಿಳು ಅಭಿಮಾನಿಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಹಾಸ್ಯ ನಟನೆ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. 2021 ರಲ್ಲಿ ಕೋವಿಡ್ ಸಹ ಬಂದಿತ್ತು ಇವರಿಗೆ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದರು. ತಮಿಳು ಚಿತ್ರರಂಗಕ್ಕೆ ಇದು ಒಂದು ತುಂಬಲಾರದ ನಷ್ಟ ಭಗವಂತ ಇವರ ಆತ್ಮಕ್ಕೆ ಶಾಂತಿ ನೀಡಲಿ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಅನೇಕ ನಟರು, ಅಭಿಮಾನಿಗಳು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಅಸ್ಸಾಂ ಸರ್ಕಾರ ಬಾಲ್ಯ ವಿವಾಹದ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಇದುವರೆಗೆ 4074 ಪ್ರಕರಣಗಳಲ್ಲಿ 2258 ಜನರನ್ನು ಬಂಧಿಸಲಾಗಿದೆ. ಎರಡು ವಾರಗಳಲ್ಲಿ ಬಾಲ್ಯವಿವಾಹ ಪ್ರಕರಣಗಳಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. 14 ವರ್ಷದೊಳಗಿನ ಮಕ್ಕಳನ್ನು ಮದುವೆಯಾಗುವ ಪುರುಷರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮತ್ತು 14–18 ವರ್ಷದೊಳಗಿನ ಮಕ್ಕಳನ್ನು ಮದುವೆಯಾಗುವ ಪುರುಷರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಆದರೆ ಸರ್ಕಾರದ ಸಾಮೂಹಿಕ ಕ್ರಮದ ವಿರುದ್ಧ ಪ್ರತಿಭಟನೆ ಬಲವಾಗಿತ್ತು. ಬಂಧನದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಬಂಧನಕ್ಕೊಳಗಾದವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಬಂಧಿಕರು ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿ, ಬಾಲ್ಯ ವಿವಾಹದ ವಿರುದ್ಧದ ಕ್ರಮವು ಜಾತ್ಯತೀತವಾಗಿರುತ್ತದೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧುಬ್ರಿ ಜಿಲ್ಲೆಯ ತಮರ್‌ಹತ್‌ನಲ್ಲಿ 200ಕ್ಕೂ ಹೆಚ್ಚು ಮಹಿಳೆಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಬಾಲ್ಯವಿವಾಹದ ಆರೋಪದ ಮೇಲೆ ಪುರುಷನನ್ನು…