Subscribe to Updates
Get the latest creative news from FooBar about art, design and business.
- ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
- ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
- ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
- ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
- ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
Author: admin
ಕಳೆದ ತಿಂಗಳು 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದೇಶದ ನೂತನ ಸಂಸತ್ ಭವನದಲ್ಲಿ ಹಾಸಿದ ಕಾರ್ಪೆಟ್ ಗಳನ್ನು ತಯಾರಿಸಲು ನ್ಯೂಜಿಲೆಂಡ್ ನಿಂದ 20000 ಕೆಜಿ ಉಣ್ಣೆಯ ನೂಲನ್ನು ಆಮದು ಮಾಡಿಕೊಳ್ಳಲಾಗಿತ್ತು. ಯೋಜನೆಯ ಹಿಂದೆ ಕೆಲಸ ಮಾಡಿದ ಒಬಿಟಿ ಕಾರ್ಪೆಟ್ಸ್‌ನ ಉನ್ನತ ಅಧಿಕಾರಿಗಳು ಈ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. ಒಬಿಟಿ ಕಾರ್ಪೆಟ್ಸ್‌ನ ಉತ್ಪಾದನಾ ಮುಖ್ಯಸ್ಥ ಸುಧೀರ್ ರೈ ಮಾತನಾಡಿ, ನ್ಯೂಜಿಲೆಂಡ್‌ನ ಉತ್ತರ ಮತ್ತು ದಕ್ಷಿಣದಿಂದ ಸಂಗ್ರಹಿಸಲಾದ ಅತ್ಯುತ್ತಮ ಉಣ್ಣೆಯನ್ನು ಕಾರ್ಪೆಟ್ ಗಳನ್ನು ತಯಾರಿಸಲು ಬಳಸಲಾಗುತ್ತದೆ. ಉತ್ತಮ ಹೊಳಪು ಮತ್ತು ದೀರ್ಘಕಾಲ ಬಾಳಿಕೆ ಗುಣಮಟ್ಟದ ಉಣ್ಣೆಯ ನೂಲುಗಳನ್ನು ನ್ಯೂಜಿಲೆಂಡ್‌ನಿಂದ ತರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಬಿಕಾನೇರ್ ನಲ್ಲಿರುವ ನೂಲುವ ಗಿರಣಿಯಲ್ಲಿ ಅವರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಪ್ರತಿಯೊಂದು ಎಳೆಯನ್ನು ತಯಾರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ರಾಜ್ಯಸಭೆ ಮತ್ತು ಲೋಕಸಭೆಯ ಕಾರ್ಪೆಟ್‌ಗಳ ಮೇಲೆ ವಿಭಿನ್ನ ವಿನ್ಯಾಸಗಳನ್ನು ನೀಡಲಾಗಿದೆ. ಲೋಕಸಭೆಯಲ್ಲಿ ಹಾಸಿದ ಕಾರ್ಪೆಟ್ ಮೇಲೆ ನವಿಲು ಮಾದರಿಯಲ್ಲಿ 38 ಬಣ್ಣಗಳನ್ನು ಬಳಸಲಾಗಿದೆ. ರಾಜ್ಯಸಭೆಯ ರತ್ನಗಂಬಳಿಗಳ ಮೇಲೆ ಕಮಲದ…
ಮಂಗಳೂರು: ಫಲಿತಾಂಶ ಬಂದ 24 ಗಂಟೆ ಒಳಗಡೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡೋದಾಗಿ ಹೇಳಿ ಇದೀಗ ತಡವಾಗಿ ಆದರೂ ಘೋಷಣೆ ಮಾಡಿರೋದನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಗ್ಯಾರಂಟಿ ಈಡೇರಿಸಲು ಕಾಂಗ್ರೆಸ್ ಸರ್ಕಾರ ಹಣದ ಕ್ರೋಢೀಕರಣ ಹೇಗೆ ಮಾಡುತ್ತೆ? ಈ ಗ್ಯಾರಂಟಿ ಎಷ್ಟು ವರ್ಷ ಇರುತ್ತೆ? ಎನ್ನುವುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ. ನಿರುದ್ಯೋಗ ಭತ್ಯೆಗೆ ಮೊದಲು ಮಾನದಂಡ ಹೇಳದೆ ಈಗ ಮಾನದಂಡ ಹಾಕಿದ್ದಾರೆ. ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನು? ರಾಜ್ಯದ ಬೊಕ್ಕಸದ ಹಣದ ಗತಿ ಏನು? ಯಾರಿಗೂ ಹೊರೆ ಆಗದಂತೆ ಹೇಗೆ ನಿಯಂತ್ರಿಸುತ್ತಾರೆ? ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಸ್ಥಿತಿ ಕುಸಿಯಬಾರದು. ಅವರು ಆದಷ್ಟು ಬೇಗ ಈ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದಿದ್ದಾರೆ. ಇದೊಂದು ಚುನಾವಣಾ ಗಿಮಿಕ್ ಆಗಬಾರದು. ಜನರಿಗೆ ಹೊರೆಯಾಗದಂತೆ ಜಾರಿಯಾಗಲಿ. ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಜನರು ಏನು ಮಾಡಬೇಕು…
ನಟಿ ಅನ್ನಾ ಬೆನ್ ಯುಎಇ ಗೋಲ್ಡನ್ ವೀಸಾ ಸಿಕ್ಕಿದೆ. ಅನ್ನಾ ಬೆನ್ ಅವರು ತಮ್ಮ ಯುಎಇ ಗೋಲ್ಡನ್ ವೀಸಾವನ್ನು ಸಿಇಒ ಇಕ್ಬಾಲ್ ಮಾರ್ಕೋನಿ ಅವರಿಂದ ದುಬೈನಲ್ಲಿ ಪ್ರಮುಖ ಸರ್ಕಾರಿ ಸೇವಾ ಪೂರೈಕೆದಾರರಾದ ECCH ಡಿಜಿಟಲ್‌ನ ಪ್ರಧಾನ ಕಛೇರಿಯಲ್ಲಿ ಪಡೆದರು. ಕುಂಬಳಂಗಿ ನೈಟ್ಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗ ಪ್ರವೇಶಿಸಿದ ನಟಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನ್ನಾ ಬೆನ್ ನಟಿ ಅನ್ನಾ ಬೆನ್ ಮಲಯಾಳಂ ಚಿತ್ರರಂಗದ ಖ್ಯಾತ ಚಿತ್ರಕಥೆಗಾರ ಬೆನ್ನಿ ಪಿ ನಾಯರಂಬಲಂ ಅವರ ಮಗಳು, ಅನ್ನಾ ಬೆನ್ ಅವರ ಇತ್ತೀಚಿನ ಚಿತ್ರ ಅರ್ಜುನ್ ಅಶೋಕನ್ ಅಭಿನಯದ ತ್ರಿಶಂಕು. ಈ ಹಿಂದೆ, ಮಲಯಾಳಂ ಸೇರಿದಂತೆ ಅನೇಕ ಚಲನಚಿತ್ರ ತಾರೆಯರಿಗೆ ದುಬೈನಲ್ಲಿ ECCH ಡಿಜಿಟಲ್ ಮೂಲಕ ಯುಎಇ ಗೋಲ್ಡನ್ ವೀಸಾ ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಗರದ ಆಸ್ಪತ್ರೆಗಳಲ್ಲಿ ಕೋವಿಡ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಚೇತರಿಸಿಕೊಂಡಿದ್ದಾರೆ. ಹಲವು ತಿಂಗಳ ಬಳಿಕ ಇಲ್ಲಿನ ಎಲ್ಲಾ ಆಸ್ಪತ್ರೆಗಳು ಕೋವಿಡ್ ಮುಕ್ತವಾಗಿವೆ. ಆಸ್ಪತ್ರೆಗಳಲ್ಲಿನ ಅಷ್ಟೂ ಹಾಸಿಗೆಗಳನ್ನು ಈಗ ಕೋವಿಡೇತರ ಚಿಕಿತ್ಸೆಗಳಿಗೆ ಬಳಸಿಕೊಳ್ಳಲಾಗಿದೆ. ಕೊರೊನಾ ಸೋಂಕಿತರ ಆಸ್ಪತ್ರೆ ದಾಖಲಾತಿ ಕಳೆದ ವಾರ ಒಂದಂಕಿಗೆ ಇಳಿಕೆಯಾಗಿತ್ತು. ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕಿತರಾದವರೂ ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಈ ವರ್ಷ ಇದೇ ಮೊದಲ ಬಾರಿ ನಗರದ ಆಸ್ಪತ್ರೆಗಳಲ್ಲಕೋವಿಡ್ ದಾಖಲಾತಿ ಶೂನ್ಯಕ್ಕೆ ಇಳಿದಿದೆ. ಕೆಲ ದಿನಗಳ ಹಿಂದೆ ವಿಶ್ವ ಆರೋಗ್ಯ ಸಂಸ್ಥೆಯು ‘ಕೋವಿಡ್‌ಗೆ ಸಂಬಂಧಿಸಿದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಗೊಂಡಿದೆ’ ಎಂದು ಘೋಷಿಸಿತ್ತು. ಬಳಿಕ ಆಸ್ಪತ್ರೆ ಚಿಕಿತ್ಸೆ ಅಗತ್ಯ ಇರುವವರನ್ನು ಮಾತ್ರ ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿತ್ತು. ಇದರಿಂದಾಗಿ ಆಸ್ಪತ್ರೆ ದಾಖಲಾತಿ ಇಳಿಮುಖ ಮಾಡಿತ್ತು. ಹೊಸ ಪ್ರಕರಣಗಳೂ ಇಳಿಕೆಯಾಗಿ, ಸಕ್ರಿಯ ಪ್ರಕರಣಗಳ ಸಂಖ್ಯೆ 50ರ ಆಸುಪಾಸಿನಲ್ಲಿದೆ. 2022ರ ಡಿಸೆಂಬರ್‌ನಲ್ಲಿ ಇಲ್ಲಿನ ಆಸ್ಪತ್ರೆಗಳು ಕೋವಿಡ್ ಮುಕ್ತವಾಗಿದ್ದವು. ಬಳಿಕ ಮತ್ತೆ ದಾಖಲಾತಿ ಎರಡಂಕಿ ತಲುಪಿತ್ತು.…
ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ, ಶಿವಮೊಗ್ಗ ಇವರು ಸಂಯುಕ್ತಾಶ್ರಯದಲ್ಲಿ ದಿನಾಂಕ 02.06.2023 ರಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪಾಥ್‌ವೇಸ್ ಸಭಾಂಗಣದಲ್ಲಿ “ಮಳೆನೀರು ಸಂರಕ್ಷಣೆ ಮತ್ತು ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಚನ್ನಬಸಪ್ಪರವರು ನೆರವೇರಿಸಿ ಮಾತನಾಡಿ, ಈಗಿನ ಯುವಕ, ಯುವತಿಯರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೋರಿಸಬೇಕು ಎಂದ ಅವರು ನೀರಿನ ಮಹತ್ವದ ಬಗ್ಗೆ, ಮಳೆ ನೀರಿನ ಕೊಯ್ತುನಿಂದ ಆಗುವ ಪ್ರಯೋಜನೆ, ಪರಿಸರ ಸಂರಕ್ಷಣೆ ಕುರಿತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ರಾಜೇಶ್ವರಿ.ಎನ್.ಮಾತನಾತಿ ಮಳೆ ನೀರನ್ನು ಹೇಗೆ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಶಿವಮೊಗ್ಗ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ, ಕೆ. ತೊದಲಬಾಗಿಯವರು ಜಾತಿ,…
ಮಂಗಳೂರು ನಗರದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಒಬ್ಬ ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಉಳ್ಳಾಲ ಠಾಣೆಗೆ ಭೇಟಿ ನೀಡಿ, ವಸ್ತುಸ್ಥಿತಿ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನೈತಿಕ ಪೊಲೀಸ್ ಗಿರಿ ನಡೆಸಿದವರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನ ರಚಿಸಿದ್ದೆವು. ಈಗಾಗಲೇ ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ತಲಪಾಡಿಯ ಸಚಿನ್, ತಲಪಾಡಿ ನಿವಾಸಿಗಳಾದ ಸುಹೇನ್ ,ಅಖಿಲ್ ಮತ್ತು ಓರ್ವ ಅಪ್ರಾಪ್ತನನ್ನ ಬಂಧಿಸಲಾಗಿದೆ. ಇದೇ ವೇಳೆ ಠಾಣೆಗೆ ಹಿಂದೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಅಮಾಯಕರನ್ನ ಬಂಧಿಸದಂತೆ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ವೇಳೆ ಕೇರಳ ಮೂಲದ ಆರು ಮಂದಿ ವಿಹಾರಕ್ಕೆಂದು ಬಂದಿದ್ದರು.ಇವರಲ್ಲಿ ಮೂವರು ಯುವತಿಯರ ಜತೆ ಇದ್ದ ಯುವಕರು ಮುಸ್ಲಿಂ…
ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ: ಎಸ್‌ಎಸ್ಎಲ್‌ಸಿ ಆಗಿದ್ದರೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ದಿನಗಳವರೆಗೆ ಅರ್ಜಿ ಹಾಕಬಹುದು. ಒಟ್ಟು 96 ಸ್ಟೇಷನ್ ಕಂಟ್ರೋಲರ್/ ಟೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಹುದ್ದೆ ಸ್ಟೇಷನ್ ಕಂಟ್ರೋಲರ್/ ಟೈನ್ ಆಪರೇಟರ್ ಒಟ್ಟು ಹುದ್ದೆ 96 ವಿದ್ಯಾರ್ಹತೆ 10ನೇ ತರಗತಿ, ಡಿಪ್ಲೊಮಾ ವೇತನಮಾಸಿಕ * 35,000-82,660 ಉದ್ಯೋಗದ ಸ್ಥಳ ಬೆಂಗಳೂರು ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 7, 2023 ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸೈಕೋಮೆಟ್ರಿಕ್ ಟೆಸ್ಟ್ ಸಿಲ್ಕ್ ಟೆಸ್ಟ್ ಸಂದರ್ಶನ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಜನರಲ್ ಮ್ಯಾನೇಜರ್ (HR) ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್…
ಒಡಿಶಾದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ತಲುಪಿದೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐದು ರಕ್ಷಣಾ ತಂಡಗಳನ್ನು ಬಾಲಸೂರ್ ಗೆ ಕಳುಹಿಸಿದ್ದಾರೆ. ದುರಂತದ ನಂತರ, ಒಡಿಶಾ ಸರ್ಕಾರ ಅಧಿಕೃತ ಶೋಕಾಚರಣೆಯ ದಿನವನ್ನು ಘೋಷಿಸಿತು. ರೈಲ್ವೆ ಸಚಿವ ಅಶ್ವನಿ ವೈಷ್ಣಂ ಮತ್ತು ತಮಿಳುನಾಡು ಸಾರಿಗೆ ಸಚಿವ ಎಸ್ ಎಸ್ ಶಿವಶಂಕರ್ ಇಂದು ಒಡಿಶಾಗೆ ಆಗಮಿಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಡಿಶಾ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ. ಕೆಲವೇ ನಿಮಿಷಗಳಲ್ಲಿ 2 ರೈಲು ಅಪಘಾತಗಳು ಹಲವಾರು ಜನರ ಸಾವಿಗೆ ಕಾರಣವಾಗಿವೆ. ಒಟ್ಟು ಮೂರು ರೈಲುಗಳು ಅಪಘಾತಕ್ಕೀಡಾಗಿವೆ. ಶಾಲಿಮಾರ್‌ನಿಂದ ಚೆನ್ನೈಗೆ ಹೋಗುತ್ತಿದ್ದ ಕೋಲ್ಕತ್ತಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮೊದಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್‌ನ 15 ಬೋಗಿಗಳು ಹಳಿತಪ್ಪಿವೆ. ಹಳಿ ತಪ್ಪಿದ ಬೋಗಿಗಳಿಗೆ ಸಮೀಪದ ಹಳಿಯಲ್ಲಿದ್ದ ಹೌರಾ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಾಗ…
ತುಮಕೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಚಾಲಕ ಮೃತಪಟ್ಟ ದಾರುಣ ಘಟನೆ ತುಮಕೂರಿನ ಹೊರವಲಯದ ಗೂಳೂರಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೆಬ್ಬೂರು ಹೋಬಳಿಯ ಕಾಳಿಂಗಯ್ಯನ ಪಾಳ್ಯದ ಯೋಗೀಶ್(34) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದ್ದು, ಇವರು ತುಮಕೂರಿನ ವಿಪ್ರೋ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮಾರ್ನಿಂಗ್ ಶಿಫ್ಟ್ ನಲ್ಲಿ ಕೆಲಸ ಮಾಡಲು ಯೋಗೀಶ್ ಅವರು ಎಂದಿನಂತೆಯೇ ಹೊರಟಿದ್ದರು. ಈ ವೇಳೆ ಗೂಳೂರಿನಲ್ಲಿ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣಾ ಪಿಎಸ್ ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತ್ತು ಅದಕ್ಕೂ ಮುಂಚಿತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ನಾನು ಮತ್ತು ಪಕ್ಷದ ಅಧ್ಯಕ್ಷರು ರುಜು ಮಾಡಿದ ಗ್ಯಾರಂಟಿ ಕಾರ್ಡುಗಳನ್ನು ಕನ್ನಡ ನಾಡಿನ ಪ್ರತಿ ಮನೆಗೂ ತಲುಪಿಸಿದ್ದೆವು. ಅದರಂತೆಯೇ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಯೋಜನೆಗಳ ಅನುಷ್ಠಾನ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಯಾವುದೇ ಜಾತಿ-ಧರ್ಮ-ಲಿಂಗ-ಭಾಷೆಯ ಬೇಲಿ ಇಲ್ಲದೆ ಸಮಸ್ತ ಕನ್ನಡಿಗರಿಗೆ ಈ ಯೋಜನೆಗಳನ್ನು ರೂಪಿಸಲಾಗಿದೆ ಎಂದರು. ಸರ್ಕಾರ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ…