Author: admin

ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬೆಂಗಳೂರು: ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಲು ಹಾಗೂ ಕನ್ನಡ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ. ಅವರು ಇಂದು ಕನ್ನಡ ಭವನದಲ್ಲಿರುವ ಅಂತರಂಗ ಸಭಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರ ವ್ಯಾಪ್ತಿಗೆ ಬರುವ ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ವಿಧಾನಮಂಡಲದಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಸೂಚಿಸಿದರು. ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಆಯೋಜಿಸುತ್ತಿರುವ ವಿವಿಧ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಆಯೋಜಿಸಲು ರೂಪುರೇಷೆ ಸಿದ್ಧಪಡಿಸಬೇಕೆಂದು ಹೇಳಿದರು.…

Read More

ತುರುವೇಕೆರೆ: ತಾಲೂಕಿನ ದಂಡಿನ ಶಿವರ ಹೋಬಳಿಯ ಕುರುಬರಹಳ್ಳಿ ಕೊಪ್ಪ ಗ್ರಾಮದ ನಿವಾಸಿಯಾದ   ಪಂಕಜ ಕೋಂ ಲೇಟ್ ಸಿದ್ದರಾಮಯ್ಯ ಎಂಬ ಮಹಿಳೆಯ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಒಂಟಿ ಮಹಿಳೆಯ ಮೇಲೆ ದ್ವಿಚಕ್ರ ವಾಹನ ಸಮೇತ  ನೆಲಕ್ಕೆ ಕೆಡವಿ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಶಿವಣ್ಣ, ಚಂದ್ರು.  ಮಂಗಳ ಗೌರಮ್ಮ, ಜಯಂತ್, ಪೂಜಾ ಹಾಗೂ ರವಿ ಇವರು ಪಂಕಜ ಎಂಬವರ ಮೇಲೆ  ಹಲ್ಲೆ ಮಾಡಿರುವ ವ್ಯಕ್ತಿಗಳು ಎನ್ನಲಾಗಿದೆ.  ಸದ್ಯ  ಹಲ್ಲೆಗೊಳಗಾದ ಮಹಿಳೆಯು ತುರುವೇಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಚಾಮರಾಜನಗರ: ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ. ಇದೊಂದು ತರಬೇತಿ ವಿಮಾನವಾಗಿದ್ದು ಭೂಮಿಕಾ ಹಾಗೂ ತೇಜ್ ಪಾಲ್ ಎಂಬವರು ಈ ವಿಮಾನವನ್ನು ಚಲಾಯಿಸುತ್ತಿದ್ದರು. ಪ್ಯಾರಚೂಟ್ ಮೂಲಕ ಇಬ್ಬರೂ ತಮ್ಮನ್ನು ಬಚಾವ್ ಮಾಡಿಕೊಂಡಿದ್ದು ವಿಮಾನ ಪತನಗೊಂಡ 2 ಕಿಮಿ ದೂರದಲ್ಲಿ ಇಬ್ಬರು ಬಿದ್ದಿದ್ದರು. ಸದ್ಯ, ಇಬ್ಬರನ್ನು  ವಾಯುಸೇನೆಯವರು ಪತ್ತೆಹಚ್ಚಿ ರಕ್ಷಣೆ ಮಾಡಿದ್ದು ಬೆಂಗಳೂರಿಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಕರೆದೊಯ್ದಿದ್ದಾರೆ. ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಜಿಲ್ಲಾ ವಕೀಲರ ಸಂಘ ಇಲ್ಲಿ 2023—24, 2024—25ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ ಗುರುವಾರ ನಡೆಯಿತು. ಈ ಚುನಾವಣೆಯಲ್ಲಿ  ಕಾರ್ಯಕಾರಣಿ ಮಂಡಳಿ ಸದಸ್ಯ (ಮಹಿಳಾ ಮೀಸಲು) ಸ್ಥಾನಕ್ಕೆ ಮಂಜುಳ ಹೆಚ್.ಎನ್. ಅವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಣಿ ಮಂಡಳಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುಳ ಹೆಚ್.ಎನ್.ಅವರು ಮಾತ್ರವೇ ಉಮೇದುವಾರರಾಗಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು. ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ, ಅದರಲ್ಲಿ ಎರಡನೇ ಮಾತಿಲ್ಲ. 5 ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ನೀಡುವಂತೆ ಮನವಿ ಮಾಡ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಕೊಡದಿದ್ರೆ ಟೆಂಡರ್ ಕರೆಯುತ್ತೇವೆ. ನಾವೇ ಟೆಂಡರ್ ಮೂಲಕ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೇವರ ವಿಗ್ರಹಗಳನ್ನು ತಂದು ವಿಶೇಷ ಪೂಜೆ ಹಾಗೂ ಎಡೆಸೇವೆ ಸಲ್ಲಿಸಲಾಗಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಿಪಟೂರು ಪಟ್ಟಣದ ಶ್ರೀ ಭೂತ ರಾಯ ಸ್ವಾಮಿ, ಕೆಂಪಮ್ಮ ದೇವಿ ಮತ್ತು ಚಿಕ್ಕಮ್ಮ ದೇವಿ ದೇವರುಗಳನ್ನು ಮೆರವಣಿಗೆಯಲ್ಲಿ ಕರೆತಂದು ಪೊಲೀಸರು ಠಾಣೆಯಲ್ಲಿಯೇ ವಿಶೇಷ ಪೂಜೆಯನ್ನು ಸಲ್ಲಿಸಿದರು ಅದರಲ್ಲೂ ಮಹಿಳಾ ಪೊಲೀಸರಂತು ಆರತಿ ಬೆಳಗಿ ಪ್ರತಿಯೊಬ್ಬರಿಗೂ ಪ್ರಸಾದವನ್ನು ಹಂಚಿದರು. ಇನ್ನು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಎಲ್ಲಾ ಸಿಬ್ಬಂದಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಲಂಚ ಪಡೆದಿದ್ದ ಗುಬ್ಬಿ ತಾಲೂಕು, ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಲಾಗಿದೆ. ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಹಿನ್ನೆಲೆ. ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು.ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಮುದ್ರಾಂಕ ಇಲಾಖೆ ಆಯುಕ್ತರು ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆಗಾಲದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ತೆಗೆದುಕೊಳ್ಳಬೇಕಾಗಿರುವ ಯಂತ್ರೋಪಕರಣಗಳನ್ನು ಶಾಸಕ ಸತೀಶ್ ರೆಡ್ಡಿ ಪರಿಶೀಲಿಸಿದರು. ಮಳೆಯಾದ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಮುಂದಿನ ದಿನಗಳಲ್ಲಿ ಮಳೆಯಿಂದ ಯಾವುದೇ ಅನಾಹುತ ಜರುಗದಂತೆ ಕ್ರಮವಹಿಸಲು ಈಗಾಗಲೇ ಅಧಿಕಾರಿಗಳೊಂದಿಗೆ ಸಹ ಸಭೆ ನಡೆಸಿ ತಿಳಿಸಲಾಗಿದೆ ಮತ್ತು ಮುಂಜಾಗ್ರತೆಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More