Subscribe to Updates
Get the latest creative news from FooBar about art, design and business.
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
Author: admin
ಭಾರತದ ಎಲ್ಲ ನಗರ ಮತ್ತು ಪಟ್ಟಣಗಳು ಸಂಪೂರ್ಣವಾಗಿ ತೆರೆದ ಚರಂಡಿಗಳು ಹಾಗೂ ಮಲಗುಂಡಿಗಳಿಂದ ಮುಕ್ತವಾಗಲು ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹೇಳಿದರು. ಕೇಂದ್ರ ಬಜೆಟ್—2023ನಲ್ಲಿ ಈ ವಿಚಾರ ತಿಳಿಸಿದ ಅವರು, ನಗರದಲ್ಲಿ ಮ್ಯಾನ್ ಹೋಲ್ ಮತ್ತು ಮಿಷನ್ ಹೋಲ್ ಮಾದರಿಗಳು ಬರಬೇಕು, ಇದಕ್ಕಾಗಿ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಘೋಷಿಸಿದರು. ರಾಸಾಯನಿಕ ಮುಕ್ತ ಕೃಷಿ: ಕೃಷಿ ಪದ್ಧತಿಗೆ ಅಗತ್ಯ ಬೆಂಬಲ ಒದಗಿಸಲು ಪರಿಣಿತರ ಸಮಿತಿಯನ್ನು ರೂಪಿಸಲಾಗುವುದು. ಸಹಜ/ಸಾವಯವ ಕೃಷಿಗೆ ಮರಳುವ 1 ಕೋಟಿ ರೈತರಿಗೆ ಸರ್ಕಾರದ ನೆರವು ಸಿಗಲಿದೆ ಎಂದು ಸಚಿವರು ಘೋಷಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲಿಸುತ್ತಾರೆ. ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬ ಬಗ್ಗೆ ಕುತೂಹಲವಿದೆ. ಈ ಮಧ್ಯೆ ಸುಮಲತಾ ಅವರು ನಮ್ಮ ಪಕ್ಷಕ್ಕೆ ಸೇರಿದರೇ ಅವರಿಗೆ ಒಳ್ಳೆಯದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಅವರಿಗೂ ಒಳ್ಳೆಯದಾಗುತ್ತದೆ. ಇಬ್ಬರಿಗೂ ಗೆಲ್ಲುವ ಅವಕಾಶ ಹೆಚ್ಚಿರುತ್ತದೆ. ಮಂಡ್ಯದಲ್ಲಿ ಬಿಜೆಪಿಗೆ ಶಕ್ತಿ ಬರುತ್ತೆ. ಸುಮಲತಾ ಅವರನ್ನ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಸಚಿವ ಆರ್ ಅಶೋಕ್ ಅವರು ಸುಮಲತಾ ಅವರ ಜೊತೆ ಸಂಪರ್ಕದಲ್ಲಿದ್ದು ಮಾತುಕತೆ ನಡೆಸಿದ್ದಾರೆ. ಈ ಹಿಂದೆ ನಾನೂ ಕೂಡ ಅವರ ಬಳಿ ಚರ್ಚಿಸಿದ್ದೆ. ಭವಿಷ್ಯದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಬರುವ ವಿಶ್ವಾಸವಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ನಿನ್ನೆ (ಜ.31) ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2022-23 ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಿದರು. ಇನ್ನು ಈ ವರ್ಷ ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಚುನಾವಣಾ ರಾಜ್ಯಗಳಿಗೆ ಹಲವು ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಇರುವುದರಿಂದ ಜನರಿಂದ ಹೆಚ್ಚಿನ ನಿರೀಕ್ಷೆ ಇದ್ದು, ಎಂದಿನಂತೆ ಮಧ್ಯಮ ವರ್ಗದ ಜನತೆ ತೆರಿಗೆ ವಿನಾಯಿತಿಗೆ ಕಾಯುತ್ತಿದ್ದಾರೆ. ಇದೀಗ ಕೇಂದ್ರ ಬಜೆಟ್ ಅಂಕಿತ ಪಡೆದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನದತ್ತ ತೆರಳಿದ್ದು ಕೆಲವೇ ಕ್ಷಣಗಳಲ್ಲಿ ಕೇಂದ್ರ ಸಂಪುಟ ಸಭೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಬ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರು ಹಲವಾರು ಫಲಾನುಭವಿಗಳಿಗೆ ಸಹಾಯಧನ ವಿತರಿಸಿದರು. ಇನ್ನೂ ಇದೇ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿ ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ನಲ್ಲಿ ಮಾತನಾಡಿದರು ಎನ್ನಲಾಗಿದೆ. ಇನ್ನೂ ಈ ಕುರಿತು ವಿಚಾರಣೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ದೇವನಹಳ್ಳಿಯ ವಿಜಿಪುರ ಗ್ರಾಮದ ಮಾಧುರಿ (26)ಎಂಬ ಮಹಿಳೆ ವರದಕ್ಷಿಣೆ ಕಿರುಕುಳ ತಾಳದೇ ರಾಸಾಯನಿಕ ಕುಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈಕೆ ಬೆಂಗಳೂರಿನ ತೂಬರಹಳ್ಳಿಯ ನಿವಾಸಿ ಗುರುಪ್ರಸಾದ್ ಜತೆ 2016ರಲ್ಲಿ ಮದುವೆಯಾಗಿದ್ದಳು. ಈ ದಂಪತಿಗೆ ಆರು ವರ್ಷದ ಒಬ್ಬ ಪುತ್ರ ಕೂಡ ಇದ್ದಾನೆ. ವೃತ್ತಿಯಲ್ಲಿ ಪತಿ ಗುರುಪ್ರಸಾದ್ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮಾಧುರಿ ಗರ್ಭಿಣಿಯಾದಾಗಿನಿಂದ ಗುರುಪ್ರಸಾದ್ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಆತನಿಗೆ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಜನವರಿ 25ರಂದು ಮಾಧುರಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಮನೆಯವರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇನ್ನೂ ಈ ಬಗ್ಗೆ ಪೊಲೀಸರು ಮಾಧುರಿಯಿಂದ ಜನವರಿ 26ರಂದು ಹೇಳಿಕೆ ಪಡೆದುಕೊಂಡಿದ್ದರು. ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತಳ ದೂರಿನ ಹಿನ್ನೆಲೆಯಲ್ಲಿ ವರ್ತೂರು ಠಾಣೆಯಲ್ಲಿ ಗುರುಪ್ರಸಾದ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಮೂರು ತಿಂಗಳುಗಳಲ್ಲಿ ಚುನಾವಣೆ ಬರುತ್ತಿದ್ದು ವೈಯಕ್ತಿಕ ಟೀಕೆಗಳಿಂದ ಕುಟುಂಬದ ಗೌರವಕ್ಕೆ ದಕ್ಕೆ ತರುವುದನ್ನು ಬಿಟ್ಟು ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಕೆಶಿ ರಾಜಕೀಯ ಹೋರಾಟ ಮಾಡಲಿ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಜಾರಕಿಹೊಳಿ, ಹೆಬ್ಬಾಳ್ಕರ್ ಮತ್ತು ಡಿಕೆಶಿ ಕುಟುಂಬಗಳು ರಾಜಕೀಯದಲ್ಲಿ ತಮ್ಮದೆಯಾದ ಸಾಮ್ರಾಜ್ಯ ಕಟ್ಟಿಕೊಂಡ ಕುಟುಂಬಗಳಾಗಿದ್ದು ಇದೀಗ ವೈಯಕ್ತಿಕ ಟೀಕೆ ಮತ್ತು ದ್ವೇಷ ಭಾವನೆಯಿಂದ ಗೌರವಕ್ಕೆ ದಕ್ಕೆ ಬರುವಂತೆ ಮಾಡುತ್ತಿದ್ದು ಸಿಡಿ ಪ್ರಕರಣಗಳ ಬಗ್ಗೆ ಮಾತನಾಡವುದನ್ನು ಬಿಟ್ಟು ರಾಜಕೀಯ ಹೋರಾಟ ಮಾಡುವುದರತ್ತ ಗಮನ ನೀಡಲಿ ಎಂದರು. ವೈಯಕ್ತಿಕ ಟೀಕೆಗಳಿಂದ ತಮಗಷ್ಟೇ ಅಲ್ಲದೆ ತಮ್ಮ ಕುಟುಂಬಗಳಿಗೆ ಮತ್ತು ಕ್ಷೇತ್ರದಲ್ಲಿರುವ ಜನತೆಗೂ ಡ್ಯಾಮೆಜ್ ಗಳಾಗುತ್ತಿದ್ದು ಅದನ್ನು ಅರ್ಥ ಮಾಡಿಕೊಳ್ಳುವ ಕೆಲಸ ಮಾಡಬೇಕು. ಈಗಾಗಲೆ ಬೆಳೆದು ನಿಂತಿರುವ ಈ ಕುಟುಂಬಗಳು ಮತ್ತಷ್ಟು ಉತ್ತಮ ಕೆಲಸಗಳನ್ನು ಮಾಡುವುದರ ಮೂಲಕ ಹೆಸರು ಮಾಡಲಿ. ಚುನಾವಣೆಯಲ್ಲಿ ನಮ್ಮನ್ನು ಅವರು ಸೋಲಿಸಲಿ ಇಲ್ಲವೆ ಅವರನ್ನು ನಾವು…
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆಗೆ ಅಂಕಿತ ಪಡೆದುಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯ ಕೊನೆಯ ಬಜೆಟ್ ಇದಾಗಿದ್ದು, ಈ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿದೆ. ಕೇಂದ್ರ ಸರ್ಕಾರ ದೇಶದ ಜನತೆಯ ಮೇಲಿರುವ ತೆರಿಗೆ ಹೊರೆ ಸೇರಿದಂತೆ ಹಲವು ರೀತಿಯ ಬೆಲೆ ಏರಿಕೆಗಳನ್ನು ಇಳಿಸುವ ನಿರೀಕ್ಷೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ರಾಜ್ಯಾಧ್ಯಕ್ಷರು ಮತ್ತು ಚುನಾವಣೆ ಸಮಿತಿಇರುತ್ತದೆ ಯಾರು ಪಕ್ಷದಿಂದ ಸ್ಪರ್ಧಿಸಬೇಕೆಂದು ಅವರೇ ನಿರ್ಧರಿಸುತ್ತಾರೆ. ಆದರೆ ಅನಿತಾ ಕುಮಾರಸ್ವಾಮಿಯವರ ಮಗ ನಿಖಿಲ್ ಅಭ್ಯರ್ಥಿಯೆಂದು ಘೋಷಣೆ, ಭವಾನಿ ರೇವಣ್ಣ ನಾನೇ ಅಭ್ಯರ್ಥಿಯೆಂದು ಘೋಷಣೆ, ಸಿದ್ದು ಕೋಲಾರಕ್ಕೆ ನಾನೇ ಅಭ್ಯರ್ಥಿ ಘೋಷಣೆ ಎಂದು ಹೇಳಿಕೊಳ್ಳೂತ್ತಿದ್ದಾರೆ. ಅವರಿಗೆ ಪಕ್ಷ, ಚುನಾವಣೆ ಸಮಿತಿ ಇಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಅಂತ ಮಾತನಾಡುವ ವ್ಯಕ್ತಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪಕ್ಷ ನೋಡಿದರೆ ಗೊತ್ತಾಗುತ್ತದೆ ಎಂದರು. ರಮೇಶ್ ಜಾರಳಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿಯವರೆಗೆ ಡಿ.ಕೆ. ಶಿವಕುಮಾರ್ ಯಾವುದೇ ಉತ್ತರ ಕೊಟ್ಟಿಲ್ಲ. ತಲೆಹರಟೆ ಮಾತು ಏನೇನೋ ಹೇಳುತ್ತಿದ್ದಾರೆ. ಆ ಆಡಿಯೋ ಕುರಿತು ಉತ್ತರ ಏನು? ಆಡಿಯೋದಲ್ಲಿ ಡಿ.ಕೆ. ಶಿವಕುಮಾರ್ ಅವರು 40…
ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ(ದ.ರಾ.ಬೇಂದ್ರೆ) ಅವರು 1896ನೇ ಇಸವಿಯ ಜನವರಿ 31ರಂದು ಜನಿಸಿದರು. ಅವರ ಜನ್ಮ ದಿನಾಚರಣೆಯಾದ ಈ ದಿನ ಅವರ ಕುರಿತು ಕೆಲವೊಂದು ವಿಚಾರಗಳನ್ನು ತಿಳಿದುಕೊಳ್ಳೋಣ… ದ.ರಾ.ಬೇಂದ್ರೆ ಅವರು ರಾಮಚಂದ್ರ ಭಟ್ಟ, ಅಂಬಿಕೆ ದಂಪತಿಯ ಪುತ್ರರಾಗಿದ್ದಾರೆ. 1973ರಲ್ಲಿ ಬೇಂದ್ರೆಯವರ ಕವನ ಸಂಕಲನವಾದ ‘ನಾಕುತಂತಿ’ಗಾಗಿ ಅವರು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದುಕೊಂಡರು. ಇದಲ್ಲದೇ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದ ಅವರ ಮೊದಲ ಸಾಹಿತ್ಯ ರಚನೆ ‘ಒಲವು’. 1918ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. 1921ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.…
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಫೆಬ್ರವರಿ 3ರಂದು ಬೆಳಗ್ಗೆ 10.30 ಕ್ಕೆ ಜೆಡಿಎಸ್ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಕೆ.ಟಿ.ಶಾಂತಕುಮಾರ್ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಕೆ.ಟಿ.ಶಾಂತಕುಮಾರ್ ಅವರನ್ನು ಜೆಡಿಎಸ್ ಗೆ ಬರ ಮಾಡಿಕೊಳ್ಳಲು ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಈ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದ್ದು, ತಾಲೂಕಿನಲ್ಲಿ ಜೆಡಿಎಸ್ ಗೆ ನಾಯಕತ್ವದ ಕೊರತೆ ಇದ್ದು, ಈ ಕೊರತೆಯನ್ನು ಕೆ.ಟಿ.ಶಾಂತಕುಮಾರ್ ತುಂಬಲಿದ್ದಾರೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದೇನೆ. ಕಾರ್ಯಕ್ರಮದ ದಿನದಂದು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಿ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಕಲ್ಪತರು ಕ್ರೀಡಾಂಗಣದ ವೇದಿಕೆಗೆ ಕರೆತರಲಾಗುವುದು, ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಸಮಾವೇಶವನ್ನು ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ತುಮಕೂರು ಜಿಲ್ಲೆಯ ಶಾಸಕರಾದ ಗೌರಿಶಂಕರ್, ಸಿ.ಎನ್ .ಬಾಲಕೃಷ್ಣ ,ವೀರಭದ್ರಯ್ಯ, ಸುಧಾಕರ್ ಲಾಲ್, ಚಿಕ್ಕನಾಯಕನಹಳ್ಳಿಯ…