Author: admin

ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದ ಪಂಚರತ್ನಯಾತ್ರೆಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾನು ನೀಡಿದ ಭರವಸೆ ಈಡೇರಿಸಲು ಆಗದಿದ್ದರೇ ಜೆಡಿಎಸ್ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ. ಮುಂದೆ ಎಂದಿಗೂ ಮತ ಕೇಳಲು ನಿಮ್ಮ ಬಳಿ ಬರಲ್ಲ. ನನ್ನ ಪರ ಜೈಕಾರ ಹಾಕ್ತಿರಿ.ಆದರೆ ಮತ ಹಾಕಲ್ಲ. ಇದರಲ್ಲಿ ನಮ್ಮದೂ ಕೂಡ ತಪ್ಪಿದೆ. ಅಭ್ಯರ್ಥಿ ಹಾಕೋದರಲ್ಲಿ ಎಡವಿದ್ದೇವೆ ಎಂದರು. ಬಿಜೆಪಿಯವರು ಮೈತ್ರಿ ಸರ್ಕಾರ ತೆಗೆದರು. ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಅಂತ ಹೆಸರಿಟ್ಟರು. ನಾನು ಸಿಎಂ ಆಗಿದ್ದಾಗ ಮರುನಾಮಕರಣಕ್ಕೆ ಕಲಬುರ್ಗಿ ಶಾಸಕರೊಬ್ಬರು ಮನವಿ ಮಾಡಿದ್ದರು. ರೈತರ ಬಡವರ ಕಲ್ಯಾಣವಾದ ಬಳಿಕ ಹೆಸರಿಡಲು ಚಿಂತನೆ ನಡೆಸಲಾಗಿತ್ತು. ನಂತರ ಬಿಜೆಪಿ ಸರ್ಕಾರದವರು ಕಲ್ಯಾಣ ಕರ್ನಾಟಕ ಅಮತಾ ಹೆಸರಿಟ್ಟರು ಎಂದರು. ಕನಕಗಿರಿ ಕ್ಷೇತ್ರದ ಬಗ್ಗೆ ಕುಷ್ಟಗಿ ಸಮಾವೇಶ ವೇದಿಕೆಯಲ್ಲಿಅಸಮಾಧಾನ ವ್ಯಕ್ತಪಡಿಸಿದ ಹೆಚ್.ಡಿ ಕುಮಾರಸ್ವಾಮಿ, ತುಕರಾಮ್ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದರೆ ಅಶೋಕ್( ಜೆಡಿಎಸ್ ನಿಯೋಜಿತ ಅಭ್ಯರ್ಥಿ) ಕೆಲಸದ ಬಗ್ಗೆ ಸಮಾಧಾನವಿಲ್ಲ. ಅಶೋಕ್ ಕೆಲಸದ ಬಗ್ಗೆ ಅಸಮಾಧಾನವಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಅಯೋಧ್ಯಾ: ಭಾರತೀಯ ಹಿಂದುಗಳ ಬಹುನಿರಿಕ್ಷಿತ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಮುಂದಿನ ವರ್ಷಾರಂಭದಲ್ಲಿ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ದೇಗುಲ ತಲೆಯೆತ್ತಲಿದೆ. ಮಂದಿರದಲ್ಲಿ ಪ್ರತಿಷ್ಟಾಪಿಸಲಿರುವ ಶ್ರೀರಾಮ ಮತ್ತು ಸೀತೆಯ ಮೂರ್ತಿ ಪ್ರತಿಷ್ಠಾಪನೆಗೆ ನೇಪಾಳದ ಕಾಳಿಗಂಡಕಿ ನದಿಯಲ್ಲಿ ಸಿಗುವ ಸಾಲಿಗ್ರಾಮ ಶಿಲೆಯನ್ನು ಬಳಸಿಕೊಳ್ಳಲಾಗುತ್ತಿದೆ. ತಲಾ 25 ಮತ್ತು 15 ಟನ್‌ ತೂಕವಿರುವ ಈ ಕಲ್ಲುಗಳನ್ನು ಜ.30ರಂದು ನೇಪಾಳದಿಂದ ಭಾರತಕ್ಕೆ ಕಳುಹಿಸಲಾಗಿದೆ. ನೇಪಾಳ ಸರ್ಕಾರ ಸ್ವತಃ ಆಸಕ್ತಿ ವಹಿಸಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದೆ. ಶ್ರೀರಾಮ ವಿಷ್ಣುವಿನ ಅವತಾರ. ಗಂಡಕಿ ನದಿಯಲ್ಲಿ ಸಿಗುವ ಸಾಲಿಗ್ರಾಮವನ್ನು ವಿಷ್ಣುವೆಂದೇ ಭಾವಿಸಿ ಪೂಜಿಸಲಾಗುತ್ತದೆ. ಹೀಗಾಗಿ ಈ ನದಿಯ ಶಿಲೆಯನ್ನು ಬಳಸಲು ನಿರ್ಧರಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ.ವಿಜಯಾ ದಬ್ಬೆ ಅವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ಮತ್ತು ಕಥಾ ಸ್ಪರ್ಧೆ-2023 ಯನ್ನು ಆಯೋಜಿಸಿದೆ. ಸ್ಪರ್ಧೆಯ ನಿಯಮಗಳು: ಮಹಿಳಾ ಕೇಂದ್ರಿತ ವಸ್ತು ವಿಷಯವನ್ನು ನಿಗದಿಪಡಿಸಲಾಗಿದೆ. ಕವನ ಸ್ಪರ್ಧೆ ಗೆ ಎರಡು ಕವನ. ಕಥಾ ಸ್ಪರ್ಧೆ ಗೆ ಒಂದು ಕಥೆ. ಈ ಮೊದಲು ಎಲ್ಲಿಯೂ ಪ್ರಸಾರ/ ಪ್ರಕಟ ಆಗಿರಬಾರದು. ಕಥೆಗೆ ಗರಿಷ್ಠ ಪದಮಿತಿ 2500 ಪದಗಳು. ವಯಸ್ಸಿನ ಗರಿಷ್ಠ ಮಿತಿ 26. ಕಥೆ, ಕವನವನ್ನು ಹಾಳೆಯ ಒಂದು ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ನುಡಿ/ಬರಹ/ಯುನಿಕೋಡ್ ನಲ್ಲಿ ಟೈಪ್ ಮಾಡಿರಬೇಕು. ಹೆಸರು ,ವಿಳಾಸ,ಫೋನ್ ಸಂಖ್ಯೆ ಮತ್ತು ಈ -ಮೇಲ್ ವಿವರವನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು, ತಮ್ಮ ಕಾಲೇಜು/ ವಿಶ್ವವಿದ್ಯಾನಿಲಯದ ಮುಖ್ಯಸ್ಥರಿಂದ ದೃಢೀಕರಿಸಿ ಕಳುಹಿಸಬೇಕು. ಕೊನೆಯ ದಿನಾಂಕ: 28.02.2023. ಬಹುಮಾನ ಮೊತ್ತ: ಪ್ರಥಮ ರೂ. 5 ಸಾವಿರ , ದ್ವಿತೀಯ ರೂ. 3 ಸಾವಿರ, ತೃತೀಯ 2…

Read More

ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಟೀಕೆ ಟಿಪ್ಪಣಿ ಆದರೆ ಸಚಿವ ನಾರಾಯಣಗೌಡ ಅವರು ಮಾತ್ರ ಸಿದ್ಧರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಕೆ.ಆರ್ ಪೇಟೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಮಾತನಾಡಿರುವ ಸಚಿವ ನಾರಾಯಣಗೌಡ , ಕೆ.ಆರ್ ಪೇಟೆಗೆ ಸಿದ್ಧರಾಮಯ್ಯ ಹಲವಾರು ಕೊಡುಗೆ ನೀಡಿದ್ದಾರೆ. ಸಿದ್ಧರಾಮಯ್ಯ ಬಗ್ಗೆ ನನಗೆ ಗೌರವವಿದೆ. ಕೆ.ಆರ್ ಪೇಟೆ ತಾಲ್ಲೂಕಿಗೆ ಮೊರಾರ್ಜಿ ವಸತಿ ಶಾಲೆಗಳನ್ನ ನೀಡಿದ್ದಾರೆ. ಸಿದ್ಧರಾಮಯ್ಯ ಸಿಎಂ ಆಗಿದ್ದಾಗ 40 ಕೋಟಿ ಅನುದಾನ ನೀಡಿದ್ದರು. ಸಿದ್ಧರಾಮಯ್ಯ ಬಗ್ಗೆ ಗೌರವವಿದೆ ಅವರ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು  ಸಚಿವ ನಾರಾಯಣಗೌಡ  ಗುಣಗಾನ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು. ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಜೆಡಿಎಸ್ ಮುಖಂಡ ಕೋನಪ್ಪರೆಡ್ಡಿ, ಚಿಂತಾಮಣಿ ಕ್ಷೇತ್ರದ ಜಿ.ಎನ್. ವೇಣುಗೋಪಾಲ್, ವಾಣಿ ಕೃಷ್ಣಾರೆಡ್ಡಿ, ಬಮೂಲ್ ನಿರ್ದೇಶಕ ಶ್ರೀನಿವಾಸ್, ಜಿ.ಪಂ. ಮಾಜಿ ಸದಸ್ಯ ಪಿ.ಎಸ್. ಸುಬ್ಬಾರೆಡ್ಡಿ ಅವರು ಇಂದು ಬಿಜೆಪಿ ಸೇರ್ಪಡೆಯಾದರು. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಒಂದು ಕುಟುಂಬ ಇದ್ದ ಹಾಗೆ. ಇಂದು ಪಕ್ಷಕ್ಕೆ ಸೇರಿದ ಎಲ್ಲರನ್ನೂ ಇಲ್ಲಿ ಗೌರವದಿಂದ ನೋಡಿಕೊಳ್ಳುತ್ತೇವೆ. ಎಲ್ಲಾ ರಾಜ್ಯಗಳಲ್ಲಿ ಸದೃಢವಾಗಿರುವ, ಭವಿಷ್ಯವಿರುವ ಪಕ್ಷ ಬಿಜೆಪಿ. ಬಿಜೆಪಿಗೆ ಬರುವವರ ಭವಿಷ್ಯವೂ ಉತ್ತಮವಾಗುತ್ತದೆ ಎಂದರು. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಅಭಿವೃದ್ಧಿ ಆಗುತ್ತಿವೆ. ಈ ಎರಡೂ ಕಡೆಯೂ ನಾವೇ ಪ್ರಬಲರು ಅಂತ ಕಾಂಗ್ರೆಸ್, ಜೆಡಿಎಸ್ ಅಂದುಕೊಂಡಿದ್ದಾರೆ. ಎರಡೂ ಜಿಲ್ಲೆಗಳಲ್ಲೂ ರಾಜಕೀಯವಾಗಿ ದೊಡ್ಡ ಬದಲಾವಣೆ ಆಗುತ್ತಿದೆ. 2023 ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನವರು ಹತಾಶೆಯಾಗಿ ಏನೇನೋ ಭರವಸೆ…

Read More

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹಸಚಿವ ಅಮಿತ್ ಶಾ ಮಾರ್ಗದರ್ಶನದಂತೆ ರಣತಂತ್ರ ರೂಪಿಸಲಾಗಿದೆ. 140 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬಜೆಟ್ ಅಧಿವೇಶನ ನಂತರ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳುತ್ತೇವೆ. ಮಂಡ್ಯದಲ್ಲಿ ಅಮಿತ್ ಶಾ ಪ್ರವಾಸದ ಬಳಿಕ ಬಿಜೆಪಿ ಅಲೆ ಹೆಚ್ಚಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು. ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಸುಮಲತಾ ಅಂಬರೀಶ್ ಬೆಂಬಲಿಗರು ಬಿಜೆಪಿ ಸೇರುತ್ತಿದ್ದಾರೆ. ಸುಮಲತಾ ಅಂಬರೀಶ್ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು 13 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಕಂಡಂತಿದೆ. ಕಾರ್ತಿಕ್ ರೆಡ್ಡಿ- ರಾಮನಗರ ಪೊಲೀಸ್ ವರಿಷ್ಠಾಧಿಕಾರಿ, ವಿನಾಯಕ ಪಾಟೀಲ್- ಎಐಜಿಪಿ ಬೆಂಗಳೂರು, ದೇವರಾಜ್ -ಡಿಸಿಪಿ ಬೆಂಗಳೂರು ಉತ್ತರ, ಸಿರಿಗೌರಿ- ಎಸ್ ಪಿ ಇಂಟರ್ನಲ್ ಸೆಕ್ಯೂರಿಟಿ ಡಿವಿಜನ್, ಟಿಪಿ ಶಿವಕುಮಾರ್ -ಎಸ್ ಪಿ ಕೆಪಿಟಿಸಿಎಲ್, ಹೆಚ್ ಶೇಖರ್ -ಡಿಸಿಪಿ ಕಾನೂನು ಸುವ್ಯವಸ್ಥೆ ಬೆಳಗಾವಿ ನಗರ, ಪದ್ಮಿನಿ ಸಾಹೋ -ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ, ಎಂ.ಎಸ್ ಗೀತಾ -ಎಸ್ಪಿ ಪೊಲೀಸ್ ತರಬೇತಿ ಶಾಲೆ, ಮೈಸೂರು. ರಾಮರಾಜನ್ –ಪೊಲೀಸ್ ವರಿಷ್ಠಾಧಿಕಾರಿ ಕೊಡಗು, ರವೀಂದ್ರ ಕಾಶಿನಾಥ್ -ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು. ಎಂ.ಎ ಅಯ್ಯಪ್ಪ -ಎಸ್ ಪಿ ಗುಪ್ತಚರ ಇಲಾಖೆ. ಸಂತೋಷ್ ಬಾಬು -ಎಸ್ ಪಿ ಇಂಟಲಿಜೆನ್ಸ್ ಪ್ರದೀಪ್ ಗುಂಟಿ- ಎಸ್ ಪಿ ಕಾರಾಗೃಹ ಇಲಾಖೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಪತಿಯ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಹತ್ವದ ಆದೇಶ ಹೊರಡಿಸಿದೆ. ನೇಮಕಾತಿಗೆ ತಂದೆ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣಿಸಬೇಕು. ಆದರೆ ಪತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಶಿಕ್ಷಣ ಇಲಾಖೆಯ ನಿಯಮ ಕಾನೂನು ಬಾಹಿರವೆಂದು ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ಇದೀಗ ಶಿಕ್ಷಣ ಇಲಾಖೆಯ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅಭ್ಯರ್ಥಿಗಳ ತಂದೆಯ ಜಾತಿ ಆದಾಯ ಪ್ರಮಾಣ ಪತ್ರ ಆಧರಿಸಿ ಹೊಸದಾಗಿ ಆಯ್ಕೆಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೆಂಗಳೂರು: ಸಂಪಂಗಿರಾಮನಗರ ಐಡಿಬಿಐ ಬ್ಯಾಂಕ್‌ನ ಮಿಷನ್‌ ರಸ್ತೆ ಶಾಖೆಯ ಗ್ರಾಹಕ ಸಂಪರ್ಕ ವ್ಯವಸ್ಥಾಪಕಿ ಗ್ರಾಹಕರ ಬ್ಯಾಂಕ್‌ ಖಾತೆಗಳಿಂದ ಬೇರೆ ಬೇರೆ ಬ್ಯಾಂಕ್‌ ಖಾತೆಗಳು ಹಾಗೂ ಎಲ್‌ಐಸಿ ಬಾಂಡ್‌ಗಳಿಗೆ (LIC Bond) ₹4.92 ಕೋಟಿ ಹಣವನ್ನು ವರ್ಗಾವಣೆ ಮಾಡಿ ವಂಚಿಸಿದ್ದ ಕಾರಣ  ಸಜೀಲಾ ಗುರುಮೂರ್ತಿ (34) ಅವರನ್ನು ಸಂಪಂಗಿರಾಮನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈಕೆ ಮಿಷನ್ ರಸ್ತೆಯ ಐಡಿಬಿಐ ಬ್ಯಾಂಕ್​ನ ಮ್ಯಾನೇಜರ್ ಆಗಿದ್ದಳು. ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವಳಾದ ಈಕೆ ಹುನಸೆಮಾರೇನಹಳ್ಳಿಯ ಭಾರತಿನಗರದಲ್ಲಿ ವಾಸವಾಗಿದ್ದಳು. ಪೊಲೀಸರು ಆರೋಪಿ ಕೆಲಸ ಮಾಡುತ್ತಿದ್ದ ಮಿಷನ್ ರಸ್ತೆಯ ಶಾಖೆಯ ಕಂಪ್ಯೂಟರ್ ಹಾಗೂ 23 ಲಕ್ಷ ಮೊತ್ತ ಒಂದು ಬಾಂಡ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಹುದ್ದೆಯ ಲಾಭವನ್ನು ಬಳಸಿಕೊಂಡು ಗ್ರಾಹಕರ ಅನುಮತಿ ಇಲ್ಲದೆ 4.92 ಕೋಟಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ (Transfer) ಮಾಡಿದ್ದಾಳೆ‌ ಎನ್ನಲಾಗಿದೆ. ಆರೋಪಿತೆ ಗ್ರಾಹಕರ ಅನುಮತಿ ಇಲ್ಲದೆ, ಅವರ ಖಾತೆಯಿಂದ ಹಣ ತೆಗೆದು ವಿಮಾ ಬಾಂಡ್​ಗಳ‌ ಮೇಲೆ ಹೂಡಿದ್ದಾರೆ. ಆರೋಪಿತೆ…

Read More

ಬೆಳ್ತಂಗಡಿ:  ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ಎಂಬ ವಿದ್ಯಾರ್ಥಿ ವೈರಲ್ ವಿಡಿಯೋಗೆ ಹೆದರಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷಿತ್ ನಿಗೆ ಇನ್ಸ್ಟಾಗ್ರಾಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪರಿಚಯವಾಗಿದ್ದನು. ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್ಸ್ಟಾಗ್ರಾಂ ಮೂಲಕ ಚಾಟ್ ಮಾಡಿಕೊಂಡಿದ್ದನು. ನಂತರ ಆ ವ್ಯಕ್ತಿ ವಿಡಿಯೋ ಕಾಲ್ ನಲ್ಲಿ ನಿನ್ನ ಖಾಸಗಿ ವಿಡಿಯೋ ನನ್ನ ಬಳಿಯಿದೆ. ಅದನ್ನು ವೈರಲ್ ಮಾಡಬಾರದು ಎಂದರೆ ನನಗೆ 11,000 ರೂ ಹಣ ನೀಡಬೇಕೆಂದು ಬೇಡಿಕೆಯಿಟ್ಟಿದ್ದನು. ಹಣ ಹೊಂದಿಸಲು ಸಾಧ್ಯವಾಗದ ಹರ್ಷಿತ್ ವಿಡಿಯೋ ವೈರಲ್ ಆದರೆ ನನ್ನ ಮಾನ ಹೋಗುತ್ತೆಂದು ಹೆದರಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯ ವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More