Author: admin

ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು–ಶೈಕ್ಷಣಿಕ ನೇರಸಾಲ(ಹೊಸದು–ನವೀಕರಣ), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‌ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com  ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in   ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 2ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdcl.karnataka.gov.in  ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸ. 080–22374848/ 7899899039 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ…

Read More

ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಮಂಗಳವಾರ ಹಮ್ಮಿಕೊಂಡಿದ್ದ ಸ್ನಾತಕೋತರ ವಿಭಾಗಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ನಾಲ್ಕು ಗೋಡೆಗಳಿಗೆ ಮಾತ್ರ ಸೀಮಿತವಾಗಿರದೆ ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುವಂತಿರಬೇಕು. ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಅತ್ಯವಶ್ಯಕವಾದ ದೈಹಿಕ ಚಟುವಟಿಕೆಯಾಗಿದ್ದು ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಈಗಿನ ಯುವಜನತೆಯಲ್ಲಿ ಧೈರ್ಯದ ಮನೋಭಾವ ಕಡಿಮೆಯಾಗಿದ್ದು, ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಯಾವುದಕ್ಕೂ ಎದೆಗುಂದದೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಮೋಜು–ಮಸ್ತಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ದಿಕ್ಕು ತಪ್ಪುತ್ತಿರುವ ಯುವ ಸಮೂಹ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಪರಶುರಾಮ ಕೆ. ಜಿ., ವಾಣಿಜ್ಯಶಾಸ್ತç ವಿಭಾಗದ ಅಧ್ಯಕ್ಷ ಪ್ರೊ. ಬಿ. ಶೇಖರ್,…

Read More

ತುಮಕೂರು:  ತುಮಕೂರು ನಗರದ ವ್ಯಾಪ್ತಿಯನ್ನು ವಿಸ್ತರಿಸುವ ಸಂಬಂಧ 14 ಗ್ರಾಮ ಪಂಚಾಯಿತಿಗಳನ್ನು ನಗರ ವ್ಯಾಪ್ತಿಗೆ ಒಳಪಡಿಸುವ ಚಿಂತನೆಯ ಇಂಗಿತವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ವ್ಯಕ್ತಪಡಿಸಿದರು. ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ನಗರವನ್ನು ವಿಸ್ತರಿಸುವ ಪ್ರಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸವಿರುವ ನಿವಾಸಿಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮರ್ಪಕ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರ ವಿಸ್ತರಣೀಕರಣದಿಂದ ನಾಗರಿಕರಿಗೆ ಮೂಲಭೂತ ಸೌಕರ್ಯಗಳು ತಲುಪುತ್ತವೆ ಎಂದು ತಿಳಿಸಿದರು. ಬಹು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ…

Read More

ತುಮಕೂರು: ದೃಢನಿರ್ಧಾರ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಐಎಎಸ್ ನಂತಹ ಸಂಕೀರ್ಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬಹುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಸಣ್ಣಪುಟ್ಟ ಆಕರ್ಷಣೆಗಳಿಗೆ ಒಳಗಾಗಿ ದಾರಿತಪ್ಪಬಾರದು ಎಂದು ಬೆಂಗಳೂರಿನ ಇನ್‌ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ. ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವೃತ್ತಿಮಾರ್ಗದರ್ಶನ ಮತ್ತು ನೇಮಕಾತಿ ಘಟಕವು ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನೇಕ ಗ್ರಾಮೀಣ ಯುವಕರು ಬಡತನದಲ್ಲೇ ಹುಟ್ಟಿರುತ್ತಾರೆ. ಆದರೆ ಬಡತನದಲ್ಲೇ ಜೀವನ ಕಳೆಯಬೇಕಾಗಿಲ್ಲ. ಅವರು ಐಎಎಸ್‌ನಂತಹ ಉನ್ನತ ಕನಸುಗಳನ್ನು ಕಟ್ಟಿಕೊಂಡು ನನಸಾಗಿಸಲು ದೃಢನಿರ್ಧಾರ ಮಾಡಬೇಕು. ಅಭಿವೃದ್ಧಿಶೀಲ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಬೇಕಾದರೆ ಅವರ ಕೊಡುಗೆ ಮುಖ್ಯ ಎಂದರು. ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಹಿಂದೆ ಯುವಕರು ದೆಹಲಿಯಂತಹ ದೂರದ ಪ್ರದೇಶಗಳಿಗೆ ಹೋಗಬೇಕಿತ್ತು. ಈಗ ಸಮೀಪದ ಬೆಂಗಳೂರಿನಲ್ಲೇ ಉತ್ಕೃಷ್ಟ ಸೌಲಭ್ಯಗಳಿವೆ. ಐಎಎಸ್ ಆಕಾಂಕ್ಷಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.…

Read More

ತುಮಕೂರು:  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು–ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್‌ ಎಂಎಸ್ ಅಲರ್ಟ್ ರವಾನಿಸಲಾಗುವುದು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕು.…

Read More

ತುಮಕೂರು:  ಹೇಮಾವತಿ ಹೋರಾಟರರಿಗೆ ಜೈಲಿನಿಂದ‌ ಬಿಡುಗಡೆ ಭಾಗ್ಯ ದೊರಕಿದ್ದು, ಐವರ ಪೈಕಿ ನಾಲ್ವರಿಗೆ ಗುಬ್ಬಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಎಚ್.ಬಿ.ನವಚೇತನ್, ಬೆಣಚಿಕೆರೆ ಲೋಕೇಶ್, ಎಚ್.ಎನ್.ಚೇತನ್, ಬಿ.ವಿ.ಆನಂದ್ ಅವರಿಗೆ ಜಾಮೀನು ದೊರಕಿದೆ.  ಹೋರಾಟಗಾರರ ಪರ ಉಚಿತವಾಗಿ ತುಮಕೂರು ಜಿಲ್ಲಾ ವಕೀಲರ‌ ಸಂಘದ ಅಧ್ಯಕ್ಷ ಕೆಂಪರಾಜು‌ ವಾದ ಮಂಡನೆ ಮಾಡಿದರು. ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.  ಈ‌ ವೇಳೆ ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರು  ಸೇರಿದಂತೆ  13 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಪೊಲೀಸರು ಹಲವರನ್ನ ಬಂಧಿಸಿದ್ದರು. ಜೂನ್ 2 ರಂದು ಐವರನ್ನ ಬಂಧಿಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಹೋರಾಟಗಾರರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆ ಬುಧವಾರ ಜೈಲಿನಿಂದ ಬಿಡುಗಡೆಯಾಗುವ‌ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯುಪಿಎಸ್‌ ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗದ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಪದವಿ ಪಡೆದಿದ್ದು, ಕುಟುಂಬದ ವಾರ್ಷಿಕ ಆದಾಯ ಮಿತಿ 5 ಲಕ್ಷ ರೂ.ಗಳಾಗಿರಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕ, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.Karnataka.gov.in  ಅಥವಾ Sevasindhuservices.Karnataka.gov.in  ಅಥವಾ ಸಹಾಯವಾಣಿ ಸಂಖ್ಯೆ 8050370006ನ್ನು ಸಂಪರ್ಕಿಸಬಹುದೆAದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸುಂಕಾಪುರಕ್ಕೆ ನಾಳೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ   ತುರುವೇಕೆರೆಯಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ  ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ‌ ನಾನು ಕೂಡಾ ಅಲ್ಲಿಗೆ ಬರ್ತಿನಿ. ಹೋರಾಟಕ್ಕೆ ಯಾರೆಲ್ಲಾ ಸಹಕಾರ ಕೊಟ್ಟಿದ್ರು ಅವರೆಲ್ಲರೂ ನಾನು ಕೃತಜ್ಞತೆ ಹೇಳ್ತಿನಿ.  ಹೋರಾಟಗಾರರ ಮೇಲೆ ಈಗ 13 ಎಫ್ ಐಆರ್ ಹಾಕಿದ್ದಾರೆ. 100 ಎಫ್ ಐಆರ್ ಗೆ ಇನ್ನು 87 ಖಾಲಿ ಇದೆ. ಹಾಕಿಕೊಳ್ಳಲಿ ಬಿಡಿ ನಾನು ಏನು ಬೇಡ ಅಂತೀನಾ ಎಂದರು. ಮೊನ್ನೆ ಎಸ್ ಪಿ, ಐಜಿ ಮುಂದೆ ಹೇಳಿದ್ದೇವೆ.  ರೈತರದ್ದು, ಹಾಗೂ ಸ್ವಾಮೀಜಿಗಳ ಮೇಲೆ‌ ಹಾಕಿರುವ ಎಫ್ ಐಆರ್ ತೆಗಿರಿ ಅಂತ.  ನಮ್ಮದು ತೆಗಿರಿ ಅಂತ ನಾವು ಹೇಳಿಲ್ಲ, ನಾವು ಕೇಳೋದು ಇಲ್ಲ. ಸ್ವಾಮೀಜಿಗಳದ್ದನ್ನ ತೆಗಿತೀವಿ ಅಂತ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಅದಕ್ಕೆ ಧನ್ಯವಾದ ಹೇಳ್ತಿನಿ ಎಂದರಲ್ಲದೇ  ನಮ್ಮ ಮೇಲೆ ಎಷ್ಟು ಕೇಸ್ ಬೇಕಾದ್ರು ಹಾಕಿಕೊಳ್ಳಲಿ,  ನಮ್ಮ ಹೋರಾಟ ನಿರಂತರವಾಗಿ…

Read More

ತುಮಕೂರು:  ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ(PMKSY) ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತು ಪಡಿಸಿ ಇತರೆ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಸಹಾಯಧನ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಿದೆ. ಸದರಿ ಯೋಜನೆಯಡಿ ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿರುತ್ತದೆ. ಹನಿ ನೀರಾವರಿ ಅಳವಡಿಕೆಗೆ ಪ್ರತೀ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತಿದ್ದು, ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಇತರೆ ವರ್ಗದ ರೈತರಿಗೆ(ಸಾಮಾನ್ಯ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವರ್ಗದ ರೈತರಿಗೆ(RD ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ) ಶೇ.90ರಷ್ಟು ಮತ್ತು ನಂತರದ 3 ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ…

Read More

ತುಮಕೂರು:  ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 11, 12, 13, 15ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್‌ಆರ್ ಪಾಳ್ಯ, ಕುಪ್ಪೂರು ಹಾಗೂ ಹೊಸಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More