Author: admin

ವಂಚನೆಯನ್ನು ರಾಷ್ಟ್ರೀಯತೆ ಅಥವಾ ಆರೋಪಗಳಿಗೆ ತಿರಸ್ಕರಿಸುವ ಪ್ರತಿಕ್ರಿಯೆಗಳಿಂದ ಮರೆಮಾಚಲಾಗುವುದಿಲ್ಲ ಎಂದು ಅದಾನಿಗೆ ಹಿಂಡೆನ್‌ಬರ್ಗ್‌ನ ಉತ್ತರ. ಅಮೆರಿಕದ ಹಣಕಾಸು ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ವರದಿಯಲ್ಲಿರುವ ಎಲ್ಲಾ ಮಾಹಿತಿಗಳು ಭಾರತ ಮತ್ತು ಭಾರತೀಯ ಸಂಸ್ಥೆಗಳ ಮೇಲಿನ ದಾಳಿಯಾಗಿದೆ ಎಂದು ಅದಾನಿ ಗ್ರೂಪ್ ಪ್ರತಿಕ್ರಿಯಿಸಿದೆ. ಇದಾದ ಬಳಿಕ ಮತ್ತೆ ಅದಾನಿ ವಿರುದ್ಧ ಹಿಂಡೆನ್ ಬರ್ಗ್ ಪ್ರತಿಕ್ರಿಯಿಸಿದ್ದಾರೆ. ಹಿಂಡೆನ್‌ಬರ್ಗ್ ಅದಾನಿಯನ್ನು ಪ್ರಮುಖ ವಿಷಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಿದ್ದಾರೆ ಮತ್ತು ಆರೋಪಗಳಿಗೆ ರಾಷ್ಟ್ರೀಯತೆಯ ಮುಖವನ್ನು ನೀಡಿದ್ದಾರೆ ಎಂದು ಟೀಕಿಸಿದರು. ಮಾಡಿದ ಎಲ್ಲಾ ಪ್ರಮುಖ ಆರೋಪಗಳನ್ನು ನಿರ್ಲಕ್ಷಿಸುವಂತೆ ಪ್ರತಿಕ್ರಿಯೆ ನೀಡಲಾಯಿತು. ಯಾವುದೂ ವಂಚನೆಯನ್ನು ತೊಡೆದುಹಾಕಲು ಸಾಧ್ಯವಿಲ್ಲ. ಅದಾನಿ ಗ್ರೂಪ್ ಮತ್ತು ಗೌತಮ್ ಅದಾನಿ ಆಸ್ತಿಯನ್ನು ಭಾರತಕ್ಕೆ ಸೇರುವಂತೆ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ. ಅದಾನಿ ಸಮೂಹವೇ ‘ಭಾರತದ ಧ್ವಜದಲ್ಲಿ ಸುತ್ತಿ’ ಭಾರತದ ಭವಿಷ್ಯವನ್ನು ಹಿಂದಕ್ಕೆ ತಳ್ಳುತ್ತಿದೆ.ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಮಾಡಿದರೂ ವಂಚನೆಯೇ ವಂಚನೆ. ಹಿಂಡೆನ್‌ಬರ್ಗ್  ಪ್ರತಿಕ್ರಿಯಿಸಿದರು. ಅಂಕಿಅಂಶಗಳು ಉತ್ಪ್ರೇಕ್ಷಿತವಾಗಿವೆ ಎಂದು ಹಿಂಡೆನ್‌ಬರ್ಗ್ ವರದಿಯ ದಿನಗಳ ನಂತರ ಅದಾನಿ ಗ್ರೂಪ್ ಪ್ರತಿಕ್ರಿಯಿಸಿದೆ.…

Read More

ಮಹಾತ್ಮ ಗಾಂಧಿಯವರ ಹುತಾತ್ಮ ದಿನದಂದು ಅವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಆಳವಾದ ಚಿಂತನೆಗಳನ್ನು ಸ್ಮರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಮನಗಳು. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಅವರ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು. ದೇಶೀಯತೆ ಮತ್ತು ಸ್ವಾವಲಂಬನೆಯ ಮಾರ್ಗವನ್ನು ಅನುಸರಿಸುವ ಮೂಲಕ ದೇಶವನ್ನು ಸ್ವಾವಲಂಬಿಯಾಗಲು ಪ್ರೇರೇಪಿಸಿದ ಮಹಾತ್ಮ ಗಾಂಧಿಯನ್ನು ಸ್ಮರಿಸುತ್ತೇನೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಇದೇ ವೇಳೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಶ್ವಶಾಂತಿಗಾಗಿ ಮಹಾತ್ಮ ಗಾಂಧೀಜಿಯವರು ತೋರಿಸಿದ ಹಾದಿ ಇಂದಿಗೂ ಪ್ರಸ್ತುತವಾಗಿದೆ.ಅವರ ಪ್ರೇರಣೆಯಿಂದ ಇಂದು ನವ ಮತ್ತು ಸ್ವಾವಲಂಬಿ ಭಾರತ ನಿರ್ಮಾಣ ಪ್ರಗತಿಯಲ್ಲಿದೆ ಎಂದರು. ಮಹಾತ್ಮರು ಸತ್ಯ ಮತ್ತು ಅಹಿಂಸೆಯ ಮೂಲಕ ಮನುಕುಲದ ಶಾಂತಿ ಮತ್ತು ಕಲ್ಯಾಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೆನಪಿಸಿದರು. ನಿಮ್ಮ ಆದರ್ಶ ಜೀವನ…

Read More

ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಜಯರಾಮ್ ಚಿರತೆ ದಾಳಿಗೆ ತುತ್ತಾದವರು. ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಜಯರಾಮ್ ಮೇಲೆ ಚಿರತೆ ದಾಳಿ ನಡೆಸಿದ್ದು, ಈ ವೇಳೆ ಜಯರಾಮ್ ಗಂಭೀರ ಗಾಯಗೊಂಡಿದ್ದಾರೆ. ನಂತರ ಜಯರಾಮ್ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ರಾಯಸಮುದ್ರ ಗ್ರಾಮದ ಜನರಿಗೆ ಆತಂಕ ಎದುರಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಂಸತ್ತಿನ ಅಧಿವೇಶನವನ್ನು ಸುಗಮವಾಗಿ ನಡೆಸಲು ಸರ್ಕಾರವು ಎಲ್ಲಾ ಪಕ್ಷಗಳಿಂದ ಸಹಕಾರವನ್ನು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 1 ರಂದು 2024 ರ ಲೋಕಸಭೆ ಚುನಾವಣೆಗೆ ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಲು ಸಿದ್ಧವಾಗಿದೆ. ಬಜೆಟ್ ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿರೋದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. 545 ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ ನೇಮಕಾತಿಯನ್ನೇ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸೋದಾಗಿಯೂ ಹೇಳಿತ್ತು. ಈ ಕುರಿತಂತೆ ಟ್ವಿಟ್ ಮಾಡಿರುವ ಪ್ರವೀಣ್ ಸೂದ್, ಆರ್ ಎಸ್‌ಐ ( ಸಿಎಆರ್ ಮತ್ತು ಡಿಎಆರ್ ), ವಿಶೇಷ ಆರ್ ಎಸ್‌ಐ ( ಕೆ ಎಸ್ ಆರ್ ಪಿ ) ಹಾಗೂ ಪಿಎಸ್‌ಎ ( ರಾಜ್ಯ ಕೈಗಾರಿಕಾ ಭದ್ರತಾ ಪಡೆ)ಗಳಿಗೆ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 545 ಪಿಎಸ್‌ಐ ನೇಮಕಾತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಎಂದು ಪ್ರವೀಣ್  ಸೂದ್  ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರು ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ಕಟ್ಟಬೇಕಾಗುತ್ತದೆ  ಎಂದು ಪೊಲೀಸರು ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಹಾಫ್ ಹೆಲ್ಮೆಟ್ ಧರಿಸಿದವರೂ ಸೇರಿದಂತೆ ಹೆಲ್ಮೆಟ್ ಧರಿಸದ ಸವಾರರ ವಿರುದ್ಧ 13 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿನ್ನೆ ಉದ್ಘಾಟನೆಯಾಗಿದೆ.70ರ ದಶಕದಲ್ಲಿ ನಾಗರಹಾವು ಚಿತ್ರದ ಅದ್ಭುತ ಯಶಸ್ಸಿನ ಮೂಲಕ ರಾಷ್ಟ್ರಮಟ್ಟದಲ್ಲಿ ಬಹು ದೊಡ್ಡ ಕ್ರಾಂತಿ ಹಾಗೂ ಸಂಚಲನವನ್ನು ಸೃಷ್ಟಿ ಮಾಡಿದಂತಹ ಹೆಗ್ಗಳಿಕೆಗೆ ಪಾತ್ರವಾದವರು ಡಾ.ವಿಷ್ಣುವರ್ಧನ್. ಸುಮಾರು ನಾಲ್ಕು ದಶಕಗಳ ಕಾಲ, ನಿರಂತರವಾಗಿ 200ಕ್ಕೂ ಹೆಚ್ಚು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸುವ ಮೂಲಕ, ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸರ್ಕಾರವು ಸ್ಮಾರಕ ನಿರ್ಮಾಣಕ್ಕಾಗಿ ಹೆಚ್,ಡಿ.ಕೋಟೆ ರಸ್ತೆ, ಉದ್ದೂರು ಕ್ರಾಸ್, ಹಾಲಾಳು ಗ್ರಾಮ, ಮೈಸೂರು ತಾಲ್ಲೂಕು, ಮೈಸೂರು ಜಿಲ್ಲೆಯಲ್ಲಿ 5 ಎಕರೆ ಜಾಗವನ್ನು ನಿಗದಿಪಡಿಸಿ 110 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣವನ್ನು ಮಾಡಲಾಗಿರುತ್ತದೆ. ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪೋಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದವರ ಮೂಲಕ ಸ್ಮಾರಕ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸಿರುತ್ತಾರೆ. ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಟಿಸಿರುವ ಚಲನಚಿತ್ರ ಹಾಗೂ ಅವರ ಜೀವನ ಚರಿತ್ರೆಯ ಸುಮರು 676…

Read More

BBC ಸಾಕ್ಷ್ಯಚಿತ್ರದ ವಿರುದ್ಧ ಬ್ರಿಟನ್ ನಲ್ಲಿ 300ಕ್ಕೂ ಹೆಚ್ಚು ಭಾರತೀಯ ವಲಸಿಗರು ಬಿಬಿಸಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಾಕ್ಷ್ಯಚಿತ್ರ ಪಕ್ಷಪಾತಿಯಾಗಿದೆ ಎಂದು ದೂರಿದರು. ‘ಮೋದಿ ದಿ ಇಂಡಿಯಾ ಕ್ವೆಶ್ಶನ್’ ಸಾಕ್ಷ್ಯಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲಾಯಿತು. ಮೊದಲ ಭಾಗ ಗುಜರಾತ್ ನರಮೇಧದ ಕುರಿತಾಗಿತ್ತು. ಎರಡನೆಯದರಲ್ಲಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾದ ನಂತರದ ಬೆಳವಣಿಗೆಗಳನ್ನು ವಿವರಿಸಿದರು. ನಿನ್ನೆ ದೆಹಲಿ ಬಿಬಿಸಿ ಕಚೇರಿ ಎದುರು ಹಿಂದೂ ಸೇನೆ ಪ್ರತಿಭಟನೆ ಕೂಡ ನಡೆಸಿತ್ತು. ಬಿಬಿಸಿ ದೇಶದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ. ಹಿಂದೂ ಸೇನಾ ಕೂಡ ಬಿಬಿಸಿಯನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿತು. ದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿಗಳ ಮುಂದೆ ಬೋರ್ಡ್‌ಗಳು ಕಾಣಿಸಿಕೊಂಡವು. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಳು ಮಾಡಲು ಬಿಬಿಸಿ ಅಂತಾರಾಷ್ಟ್ರೀಯ ಪಿತೂರಿ ನಡೆಸುತ್ತಿದೆ ಎಂದು ಹಿಂದೂಸೇನೆ ಆರೋಪಿಸಿದೆ. ಬಿಬಿಸಿ ದೇಶದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ. ಬಿಬಿಸಿಯನ್ನು ತಕ್ಷಣವೇ ನಿಷೇಧಿಸಬೇಕು” – ಹಿಂದೂ ಸೇನಾ…

Read More

ಪಾವಗಡ: ಬೆಂಗಳೂರಿನ ತ್ರಿಪುರ ವಾಸಿನಿಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ನಿಡಗಲ್ಲು ಹೋಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಗುಜ್ಜನಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಶಾಲೆಯ ವಿದ್ಯಾರ್ಥಿಗಳಾದ ಮೋಹನ್ ಕುಮಾರ್, ಚರಣ್ ಎ ಯು, ಅನಿತಾ ಆರ್, ನಿಸರ್ಗ ಪ್ರಿಯಾ, ಬಿಂದುಶ್ರೀ ಇವರು ವಿಜ್ಞಾನ ಮೇಳದಲ್ಲಿ ಮಾಡಿದ ಸಾಧನೆಗೆ 5 ಲಕ್ಷ ಬಹುಮಾನವನ್ನನ್ನು ಶಾಲೆ ಪಡೆದುಕೊಂಡಿದೆ. ಇದು ಪಾವಗಡ ತಾಲೂಕಿಗೆ ಮತ್ತೊಂದು ಹಿರಿಮೆಯ ಸಂಗತಿಯಾಗಿದೆ ಎಂದು ಪ್ರಾಂಶುಪಾಲರಾದ ಮಾರುತಿ, ಜಿಲ್ಲಾ ಮಾಹಿತಿ ಸಹಾಯಕ ಸಿ.ಟಿ.ಶ್ರೀನಿವಾಸ್, ವಿಜ್ಞಾನ ಶಿಕ್ಷಕ ಶಿವಕುಮಾರ್ ಕೆ.ಎನ್, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರಗೂರು: ಜಗತ್ತಿನಲ್ಲಿಯೇ ಭಾರತಕ್ಕೆ ದೊಡ್ಡ ಸಂವಿಧಾನ ರಚಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರು ವ್ಯಕ್ತಿಯಲ್ಲ. ಅವರೊಂದು ದೊಡ್ಡ ಶಕ್ತಿ ಎಂದು ಮಾಜಿ ಸಚಿವರು ಎಚ್.ಸಿ.ಮಹಾದೇವಪ್ಪ ಹೇಳಿದರು. ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ ಅವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ದೇವರಂತೆ ಕಂಡು ದಿನನಿತ್ಯ ಪೂಜಿಸುವಂತೆ ಅವರು ಎಲ್ಲಾ ಸಮುದಾಯಕ್ಕೆ ಕರೆ ನೀಡಿದರು. ಭಾರತವು ಶಕ್ತಿಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಅಂಬೇಡ್ಕರ ಅವರು ಕಾರಣರು. ಇಡೀ ವಿಶ್ವವೇ ಬೆರಗಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದರು. ಅವರ ಪರಿಕಲ್ಪನೆಯಿಂದಾಗಿ ನಾವಿಂದು ಅಧಿಕಾರ ಅನುಭವಿಸುತ್ತಿದ್ದೇವೆ. ಶೋಷಿತ ವರ್ಗದವರ ಧ್ವನಿಯಾಗಿದ್ದ ಅಂಬೇಡ್ಕರ ಭಾರತದ ಅಮೂಲ್ಯ ಆಸ್ತಿ ಎಂದು ಬಣ್ಣಿಸಿದರು. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದ ವಿಶ್ವಕ್ಕೇ ಮಾದರಿಯಾದ ಬೃಹತ್ ಲಿಖಿತ ಸಂವಿಧಾನ ಜಾರಿಯಾಗಿದೆ. ಇದರಿಂದ ಎಲ್ಲಾ ಸಮುದಾಯಗಳಿಗೆ ಶಿಕ್ಷಣ, ಸಮಾನತೆ, ಲಭಿಸಿದೆ ಎಂದು ಸಂದೇಶ ನೀಡಿದರು. ಸಂವಿಧಾನ ರಚಿಸಲು ಬಾಬಾ ಸಾಹೇಬರ ನೇತೃತ್ವದಲ್ಲಿ 389…

Read More