Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಇದೀಗ ಕಾಂಗ್ರೆಸ್ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ. ಜಿ.ಪರಮೇಶ್ವರ್: ಗೃಹ ಹೆಚ್ ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ ಕೆ.ಹೆಚ್.ಮುನಿಯಪ್ಪ: ಆಹಾರ & ನಾಗರಿಕ ಸರಬರಾಜು ವ್ಯವಹಾರ ರಾಮಲಿಂಗರೆಡ್ಡಿ: ಸಾರಿಗೆ & ಮುಜರಾಯಿ ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಕೆ.ಜೆ.ಜಾರ್ಜ್: ಇಂಧನ ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಕೃಷ್ಣ ಬೈರೇಗೌಡ: ಕಂದಾಯ ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಶಿವಾನಂದ ಪಾಟೀಲ್: ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ ಜಮೀರ್ ಅಹಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು ಶರಣುಬಸಪ್ಪ ದರ್ಶನಾಪುರ್: ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು…
ಶಾಸಕನಾಗಿ ಅಧಿಕಾರ ವಹಿಸಿಕೊಂಡು ಕೇವಲ 16 ದಿನಗಳು ಆಗಿದ್ದು ಮುಂದಿನ ದಿನದಲ್ಲಿ ಸರ್ವ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ ಎಂದು ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ತುರುವೇಕೆರೆ ಕ್ಷೇತ್ರ ವ್ಯಾಪ್ತಿಯ ಕಲ್ಲೂರು ಚಿಕ್ಕ ಕಲ್ಲೂರು ಗ್ರಾಮದ ಶಿಂಷಾ ನದಿಗೆ ಸೇತುವೆ ನಿರ್ಮಣ ಕ್ಕೆ ಚಾಲನೆ ನೀಡಿದ ಮಾತನಾಡಿದರು ಸಾಕಷ್ಟು ಭಾಗದಲ್ಲಿ ಸಮಸ್ಯೆಗಳು ಇದ್ದು ಅವೆಲ್ಲವನ್ನು ಸರಿಪಡಿಸುತ್ತೇವೆ ಗುಬ್ಬಿ ಹಾಗೂ ತುರುವೇಕೆರೆ ತಾಲೂಕಿಗೆ ಬೃಹತ್ ಕೈಗಾರಿಕೆಗಳ ಅವಶ್ಯಕತೆ ಇಲ್ಲ ಇದರ ಬದಲಿಗೆ ತೆಂಗು ಹಾಗೂ ಅಡಿಕೆಗೆ ಸಂಬಂಧಪಟ್ಟಂತೆ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರೈತರಹಿತವನ್ನು ಕಾಯುತ್ತೇವೆ ಎಂದರು. ಕಾಂಗ್ರೆಸ್ ಸರ್ಕಾರದದಲ್ಲಿರುವ ಮುಖ್ಯಮಂತ್ರಿಗಳು ಸಚಿವರು ನಮ್ಮ ಪಕ್ಷದದಲ್ಲಿ ಇದ್ದವರು ಹಾಗಾಗಿ ತುರುವೇಕೆರೆ ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಯಾವುದೆ ತೊಂದರೆ ಇಲ್ಲ ಎಂದರು. ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಪ್ರಣಾಳಿಕೆಗಳನ್ನು ಸರಿಯಾದ ರೀತಿಯಲ್ಲಿ ಜಾರಿಗೆ ತರಲಿಲ್ಲವೆಂದರೆ ಹೋರಾಟ ಅನಿವಾರ್ಯವಾಗಿರುತ್ತದೆ ಎಂದು ತಿಳಿಸಿದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ವೈ.ಎನ್.ಹೊಸಕೋಟೆ: ಗ್ರಾಮದ ಆರ್.ವಿ.ಪಿ ಪ್ರೌಢಶಾಲಾ ಆವರಣದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಜನ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಸಿಪಿಐ ಕಾಂತರೆಡ್ಡಿಯವರು ಈ ಸಭೆಯನ್ನು ಆಯೋಜಿಸುವ ಉದ್ದೇಶ ಜನರು ಪೋಲಿಸರು ಹಾಗೂ ಪೋಲಿಸ್ ಸ್ಟೆಷನ್ ಗಳನ್ನು ನೋಡಿ ಭಯಪಡುವ ಅಗತ್ಯ ಇಲ್ಲ ಯಾವುದೆ ದಲ್ಲಾಳಿಗಳು ಇಲ್ಲದೆ ಜನರು ನಮ್ಮ ಬಳಿ ಬಂದು ನಿಮ್ಮ ಸಮಸ್ಯೆಗಳನ್ನು ಹೇಳಬಹುದು ಎಂದು ತಿಳಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಿಟ್ ವ್ಯವಸ್ಥೆ ಇಲ್ಲವಾಗಿದೆ ಎಂದು ಆರೋಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಪಿಐರವರು ಈಗ ಪ್ರತಿ ಐದು ಹಳ್ಳಿಗೆ ಇಬ್ಬರು ಪೋಲಿಸರನ್ನು ಬಿಟ್ ವ್ಯವಸ್ಥೆಗೆ ಆಯೋಜಿಸಲಾಗಿದೆ ಯಾರು ಸಹ ಸುಳ್ಳು ಹೇಳುವುದಕ್ಕೆ ಆಗುವುದಿಲ್ಲ ಎಲ್ಲವು ಸಹ ಕಂಪ್ಯೂಟರ್ ನಲ್ಲಿ ದಾಖಲಾಗುತ್ತದೆ ನಾನು ಸಹ ಪ್ರತಿ ಹದಿನೈದು ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತೆನೆ ಎಂದು ಹೇಳಿದರು ಈ ವೇಳೆ ನೆರೆದಿದ್ದ ಯುವಕರು ಹಾಗು ಗ್ರಾಮಸ್ಥರು ನಮ್ಮ ಗ್ರಾಮದಲ್ಲಿ ದಿನೆ ದಿನೆ ಟ್ರಾಫಿಕ್ ಸಮಸ್ಯೆ…
ತುಮಕೂರು: ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮ ಪಂಚಾಯತ್ ನ ಕಚೇರಿ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಪಂ ಕಚೇರಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು, ದಾಖಲೆಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮದ ದಳ ಭೇಟಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು ಜಿಲ್ಲೆಯಲ್ಲಿ ಜಿ.ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರಿಗೆ ಸಚಿವ ಸ್ಥಾನ ದೊರೆಯುತ್ತಿದ್ದಂತೆ ಇನ್ನೊಂದೆಡೆ ಸಚಿವ ಸ್ಥಾನ ದೊರೆಯಲಿದೆ ಎಂಬ ಅಪಾರ ವಿಶ್ವಾಸ ಹೊಂದಿದ್ದ ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ದೊರೆಯದೆ ಇರುವುದು ಪಕ್ಷದಲ್ಲಿ ಕೆಲ ಮುಖಂಡರಲ್ಲಿ ಜಯಚಂದ್ರ ಅವರ ಕುಟುಂಬದಲ್ಲಿ ನಿರಾಸೆ ಮೂಡಿದೆ. ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ತನ್ನ ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಮೊಮ್ಮಗಳಾದ ಆರನಾ ಸಂದೀಪ್ ರಿಂದ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ. ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ ಅವರು ಹಾರ್ಡ್ ವರ್ಕ್’ರ್ ಅವರಿಗೆ ಸಚಿವ ಸ್ಥಾನ ನೀಡಿ, ಜನರಿಗೆ ತುಂಬಾ ಪ್ರೀತಿ ಕೊಟ್ಟು,ಸಹಾಯ ಮಾಡ್ತಾರೆ ಎಂದಿದ್ದಾಳೆ. ಟಿಬಿ ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಿದ್ದಾಳೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತುಮಕೂರು: ನೂತನ ಸಚಿವ ಕೆ.ಎನ್.ರಾಜಣ್ಣ ತುಮಕೂರು ನಗರಕ್ಕೆ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಅಭಿಮಾನಿ ಹಾಗೂ ನೂರಾರು ಕಾರ್ಯಕರ್ತರಿಂದ ಕ್ಯಾತ್ಸಂದ್ರ ಟೋಲ್ ನಿಂದ ತುಮಕೂರು ನಗರದ ಕಾಂಗ್ರೆಸ್ ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ಅದ್ದೂರಿಯಾಗಿ ಸ್ವಾಗತಿಸಿದರು. ಜೈಕಾರ ಹಾಕಿ , ಪಟಾಕಿಸಿಡಿಸಿ, ತಮಟೆ ವಾದ್ಯದೊಂದಿಗೆ ತೆರದ ವಾಹನದಲ್ಲಿ ಯಾರ್ಲಿ ಮೂಲಕ ಕೆ.ಎನ್.ರಾಜಣ್ಣಗೆ ಸ್ವಾಗತ ನೀಡಲಾಯಿತು. ಬಳಿಕ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ ಎನ್ ರಾಜಣ್ಣ, ಪಕ್ಷಾತೀತ ಮತ್ತು ಜಾತ್ಯತೀತವಾಗಿ ಸ್ವಾಗತ ಮಾಡಿದ್ದಾರೆ. ಎಲ್ಲಾರಿಗೂ ವೈಯಕ್ತಿಯವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯ ಎಲ್ಲಾ ಸಹಕಾರಿಗಳು, ಧ್ವನಿ ಇಲ್ಲದ ಸಮುದಾಯಗಳ ಪ್ರತಿನಿಧಿಯಾಗಿ ನನ್ನ ಆಯ್ಕೆ ಮಾಡಿದ್ದಾರೆ ಎಂದರು. ತಳ ಸಮುದಾಯದಿಂದ ಬಂದವರು ರಾಜಕೀಯದಲ್ಲಿ ಮೇಲೆ ಬರುವುದು ಕಷ್ಟ. ಜಿಲ್ಲೆಯ ಎಲ್ಲಾ ಸಹಕಾರಿ, ಬಡವರ ಆಶೀರ್ವಾದದಿಂದ ಗೆದ್ದಿದ್ದೇನೆ. ನನ್ನದು ಬಡವರ ಜಾತಿ, ಕಾಂಗ್ರೆಸ್ ಪಕ್ಷವೊಂದೆ ಬಡವರನ್ನು ಚೆನ್ನಾಗಿ ನೋಡಿಕೊಳ್ಳುವುದು ಎಂದು ಹೇಳಿದರು. ಮುಂದಿನ ದಿನದಲ್ಲಿ ಹೆಚ್ಚು ಶಕ್ತಿಯುತವಾಗಿ ಬೆಳೆಸಬೇಕು. ಚುನಾವಣೆಯಲ್ಲಿ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು. ಸಾಕ್ಷ್ಯಚಿತ್ರದಲ್ಲಿ ನೂತನ ಸಂಸತ್ ಭವನ ನಿರ್ಮಾಣ, ಸಿಂಗೋಲ್ ನಿರ್ಮಾಣದ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭವಿಷ್ಯದಲ್ಲಿ ಸಂಸದರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಆ ವೇಳೆ ಎಲ್ಲರೂ ಕುಳಿತುಕೊಳ್ಳಲು ಸ್ಥಳಾವಕಾಶ ಇಲ್ಲದಿರುವುದರಿಂದ ಹೊಸ ಸಂಸತ್ ಭವನದ ಆವಶ್ಯಕತೆ ಇತ್ತು. ಅದನ್ನು ನಿರ್ಮಾಣ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ಸುಮಾರು 25 ರಾಜಕೀಯ ಪಕ್ಷಗಳ ಸದಸ್ಯರು ಭಾಗವಹಿಸಿದ್ದಾರೆ. ಮತ್ತೊಂದೆಡೆ, ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಇತರ 19 ಸಮಾನ ಮನಸ್ಕ ವಿರೋಧ ಪಕ್ಷಗಳು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…
ಸೆಂಟ್ರಲ್ ರಿಸರ್ವ್ ಟ್ರೈನಿಂಗ್ ಕಾಲೇಜಿನಲ್ಲಿ ಸಿಆರ್‌ಪಿಎಫ್ ಯೋಧ ಶವವಾಗಿ ಪತ್ತೆಯಾಗಿದ್ದಾನೆ. ಜಗನ್ (32) ಮೃತರು. ಇದು ಸ್ವಯಂ ಪ್ರೇರಿತ ಗುಂಡೇಟಿನಿಂದ ಆದ ಗಾಯ ಎಂದು ಪ್ರಾಥಮಿಕ ಅಂದಾಜಿಸಲಾಗಿದೆ. ತಮಿಳುನಾಡಿನ ತೊಡಿಯಲೂರಿನ ತರಬೇತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಾವಲು ಕಾಯುತ್ತಿದ್ದ ಜಗನ್ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತೀರ್ಮಾನಿಸಲಾಗಿದೆ. ಗುಂಡಿನ ಸದ್ದು ಕೇಳಿ ಓಡಿ ಬಂದವರಿಗೆ ಜಗನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಜಗನ್ ಪಕ್ಕದಲ್ಲಿ ರೈಫಲ್ ಬಿದ್ದಿತ್ತು. ವರದಿಗಳ ಪ್ರಕಾರ ಅವರು ಕೌಟುಂಬಿಕ ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗಿದ್ದರು. ತುಟಿಯಲೂರು ಪೊಲೀಸರು ಜಗನ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಜಗನ್ ಸಿಆರ್‌ಪಿಎಫ್‌ನ 77ನೇ ಬೆಟಾಲಿಯನ್‌ನ ಸದಸ್ಯರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಡ್ -19 ಜಾಗತಿಕ ತುರ್ತುಸ್ಥಿತಿಯ ಅಂತ್ಯದ ನಂತರ ಮುಂಬರುವ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಿಕೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಸಿದ್ಧರಾಗುವಂತೆ ವಿಶ್ವದ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮನುಕುಲಕ್ಕೆ ತಿಳಿದಿಲ್ಲದ ಸೂಕ್ಷ್ಮಾಣುಜೀವಿಗಳಿಂದ ಉಂಟಾಗುವ ಕಾಯಿಲೆಗೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಹೆಸರು ಡಿಸೀಸ್ ಎಕ್ಸ್. ಈ ಹೆಸರನ್ನು 2018 ರಲ್ಲಿ ರಚಿಸಲಾಗಿದೆ. ರೋಗ X ಕೋವಿಡ್‌ಗಿಂತ ಹೆಚ್ಚು ಮಾರಣಾಂತಿಕವಾಗಿದೆ ಎಂದು ಅಂದಾಜಿಸಲಾಗಿದೆ. 2017 ರಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತು ಎದುರಿಸುತ್ತಿರುವ ಸಾಂಕ್ರಾಮಿಕ ರೋಗಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇವುಗಳಲ್ಲಿ ಕೋವಿಡ್-19, ಎಬೋಲಾ, ಮಾರ್ಬರ್ಗ್, ಲಸ್ಸಾ ಜ್ವರ, MERS, SARS, Nipah ಮತ್ತು Zika ಸೇರಿವೆ. ರೋಗ X ಎಂಬುದು ಒಳಗೊಂಡಿರುವ ಕೊನೆಯ ಕಾಯಿಲೆಯಾಗಿದೆ.ಈಗಿನ ಅಂದಾಜಿನ ಪ್ರಕಾರ X ರೋಗವು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮತ್ತು ವೈಜ್ಞಾನಿಕ ಜಗತ್ತು ಜೊಂಬಿ ವೈರಸ್ ಬಗ್ಗೆ ಚಿಂತಿತವಾಗಿದೆ.…
ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ಟೆಂಪಲ್ಸ್ ಮಹಾರಾಷ್ಟ್ರದ ನಾಗ್ಪುರದ ನಾಲ್ಕು ದೇವಾಲಯಗಳಲ್ಲಿ ‘ವಸ್ತ್ರ ಸಂಹಿತಾ’ ಅಥವಾ ‘ಡ್ರೆಸ್ ಕೋಡ್’ ಅನ್ನು ಪರಿಚಯಿಸಿದೆ. ಮಹಾರಾಷ್ಟ್ರ ಮಂದಿರ ಮಹಾಸಂಘ ಎಂಬ ಸಂಘಟನೆ ರಾಜ್ಯಾದ್ಯಂತ ಇರುವ ದೇವಸ್ಥಾನಗಳಿಗೆ ‘ವಸ್ತ್ರ ಸಂಹಿತೆ’ ಹೊರಡಿಸಿರುವುದಾಗಿ ಪ್ರಕಟಿಸಿದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮಹಾರಾಷ್ಟ್ರ ಮಂದಿರ ಮಹಾ ಸಂಘವು ಶೀಘ್ರದಲ್ಲೇ ರಾಜ್ಯದ ಎಲ್ಲಾ ದೇವಾಲಯಗಳಿಗೆ ವಿಸ್ತರಿಸಲಾಗುವುದು ಎಂದು ಘೋಷಿಸಿದೆ. ರಾಜ್ಯದಲ್ಲಿ ಪೂಜಾ ಸ್ಥಳಗಳಲ್ಲಿ ಉಡುಗೆ ತೊಡುಗೆಗಳ ಬಗ್ಗೆ ಹಲವು ಚರ್ಚೆಗಳು ನಡೆದವು. ಇದರ ಬೆನ್ನಲ್ಲೇ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರಲು ದೇವಸ್ಥಾನದ ಸಂಘಟನೆಗಳು ನಿರ್ಧರಿಸಿವೆ. ಪ್ರಸ್ತುತ, ಗೋಪಾಲಕೃಷ್ಣ ದೇವಾಲಯ, ಪಂಚಮುಖಿ ಹನುಮಾನ್ ದೇವಾಲಯ, ಬೃಹಸ್ಪತಿ ದೇವಾಲಯ ಮತ್ತು ಧಂತೋಲಿಯ ದುರ್ಗಾ ಮಾತಾ ಎಂಬ ನಾಲ್ಕು ದೇವಾಲಯಗಳಲ್ಲಿ ಡ್ರೆಸ್ ಕೋಡ್ ಹೇರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…