Subscribe to Updates
Get the latest creative news from FooBar about art, design and business.
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
Author: admin
ಜಗತ್ತಿನಾದ್ಯಂತ ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲದ ಹೇಳಿಕೆಯೊಂದಿಗೆ US. ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ನೆಡ್ ಪ್ರೈಸ್ ಅವರು ಈ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಭಾರತದಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದನ್ನು ಪತ್ರಿಕಾ ಸ್ವಾತಂತ್ರ್ಯದ ಸಮಸ್ಯೆ ಎಂದು ಯುಎಸ್ ಪರಿಗಣಿಸಿದೆಯೇ ಎಂಬ ಪ್ರಶ್ನೆಯಾಗಿತ್ತು. ಯುಎಸ್ ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಬೆಂಬಲಿಸುವ ದೇಶವಾಗಿದೆ. ನಮ್ಮ ಪ್ರಜಾಪ್ರಭುತ್ವವು ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮದ ಸ್ವಾತಂತ್ರ್ಯ, ನಂಬಿಕೆಯ ಸ್ವಾತಂತ್ರ್ಯ ಮುಂತಾದ ಪ್ರಜಾಸತ್ತಾತ್ಮಕ ತತ್ವಗಳಿಂದ ಬಲಗೊಂಡಿದೆ. ಭಾರತ ಸೇರಿದಂತೆ ನಮ್ಮ ಸಂಬಂಧಗಳಲ್ಲಿ ಇದನ್ನು ಹೈಲೈಟ್ ಮಾಡಲು ನಾವು ಪ್ರಯತ್ನಿಸುತ್ತೇವೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ಹೇಳಿದ್ದಾರೆ. ಆ ಸಾಕ್ಷ್ಯಚಿತ್ರವನ್ನು ನೋಡಿಲ್ಲ. ಸಾಕ್ಷ್ಯಚಿತ್ರದ ಮೇಲಿನ ಭಾರತದ ನಿಷೇಧವು ಪತ್ರಿಕಾ ಸ್ವಾತಂತ್ರ್ಯದ ಸಮಸ್ಯೆಯಾಗಿದೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಪರಸ್ಪರ ಹಂಚಿಕೊಳ್ಳುವ ಮೌಲ್ಯಗಳನ್ನು ಯುಎಸ್ ಹಂಚಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ನೆಡ್ ಪ್ರೈಸ್ ಹೇಳಿದ್ದಾರೆ.…
ಇಂದು ಭಾರತದ 74ನೇ ಗಣರಾಜ್ಯೋತ್ಸವ. ದೇಶಕ್ಕೆ ಬಲಿಷ್ಠ ಸಂವಿಧಾನ ಮತ್ತು ಸುಸಜ್ಜಿತ ಸ್ವ-ಆಡಳಿತ ವ್ಯವಸ್ಥೆ ದೊರೆತ ದಿನ. ಇಂದು ಪೂರ್ಣ ಸ್ವರಾಜ್ಯ ಸಾಧ್ಯವಾದ ದಿನದ ಆಚರಣೆಗೆ ದೇಶ ಸಜ್ಜಾಗಿದೆ. ದೆಹಲಿಯಲ್ಲಿ ವರ್ಣರಂಜಿತ ಸಮಾರಂಭಗಳು ಸಿದ್ಧವಾಗಿವೆ. ಇಂದು ರಾಷ್ಟ್ರ ರಾಜಧಾನಿಯಲ್ಲೂ ಕಟ್ಟುನಿಟ್ಟಿನ ಭದ್ರತಾ ತಪಾಸಣೆ ನಡೆಸಲಾಗುವುದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಈ ವರ್ಷದ ಗಣರಾಜ್ಯೋತ್ಸವದ ಸಂದೇಶವು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಸ್ಮರಿಸುವುದಾಗಿದೆ.ಭಾರತ ಏಕತೆಗೆ ಪರಿಪೂರ್ಣ ಉದಾಹರಣೆಯಾಗಿದೆ ದೇಶ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು. ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗೆ ನಡೆಯುವ ಹೆಮ್ಮೆಯ ಪರೇಡ್. ಬೆಳಗ್ಗೆ ರಾಷ್ಟ್ರಪತಿಗಳು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಎಲ್ಲರೂ ಏಕಮನಸ್ಸಿನಿಂದ ಜನಗಮನ ಪಠಣ ಮಾಡುವರು. ಬಳಿಕ ಸಶಸ್ತ್ರ ಸೇನಾ ರೆಜಿಮೆಂಟ್ ನ 21 ಗನ್ ಸೆಲ್ಯೂಟ್ ನಡೆಯಲಿದೆ. ನೌಕಾಪಡೆ ಮತ್ತು ವಾಯುಸೇನೆ ಬಲಿಷ್ಠವಾಗಲಿದೆ. 74ನೇ ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಅದ್ದೂರಿ ಆಚರಣೆಗಳು ನಡೆಯಲಿವೆ. ತಿರುವನಂತಪುರಂ ಸೆಂಟ್ರಲ್ ಸ್ಟೇಡಿಯಂನಲ್ಲಿ…
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ರಾಷ್ಟ್ರರಾಜಧಾನಿ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣದಲ್ಲಿ ಮುಖ್ಯ ಅತಿಥಿ ಈಜಿಫ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ , ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾದರು. ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಪತಿಗಳಿಗೆ ಮೂರು ಸೇನಾಪಡೆಗಳಿಂದ ಗೌರವವಂದನೆ ಸಲ್ಲಿಸಲಾಯಿತು. ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ಇದೇ ಮೊದಲ ಬಾರಿಗೆ ಈಜಿಪ್ಟ್ ನ 144 ಯೋಧರು ಪರೇಡ್ ನಲ್ಲಿ ಪಾಲ್ಗೊಂಡಿದ್ದರು. 61 ಅಶ್ವದಳಗಳು , ಐದು ರೆಜಿಮೆಂಟ್ ನಿಂದ ಪಥ ಸಂಚಲನ ನಡೆಯಿತು. ಪಂಜಾಬ್ ರೆಜಿಮೆಂಟ್ ಬಿಹಾರ ರೆಜಿಮೆಂಟ್ ಗೋರ್ಖಾ ರೆಜಿಮೆಂಟ್, ಏರ್ ಮಿಸೈಲ್, ಆಕಾಶ್ ಮಿಸೈಲ್ ತಂಡ ಸೇರಿ ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾದವು. 23 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಕ್ಸಮರ ನಡೆದಿದೆ. ತಮ್ಮ ಮೇಲೆ ಸಿಬಿಐ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿಗೆ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?, ನಮ್ಮ ಕಾಂಗ್ರೆಸ್ ಪಕ್ಷ ಬೀಳಲು ಅವನೇ ಕಾರಣ, ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಬೀಳಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ.ಸಿಎಂ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಸಿಡಿ ಪ್ರಕರಣದಲ್ಲಿ ಮಹಾನಾಯಕನ ಕೈವಾಡದ ಸಾಕ್ಷ್ಯ ಇದ್ದು, ಶೀಘ್ರದಲ್ಲಿಯೇ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೆ ನನ್ನ ಹೆದರಿಕೆ ಇದೆ. ಇಂತಹ ನೂರು ಸಿಡಿ ಬರಲಿ ನಾನು ಗಟ್ಟಿ ಇದ್ದೇನೆ. ನನ್ನ ಕೇಸ್ ಬಿಡುವುದಿಲ್ಲ ಸಿಬಿಐಗೆ ಕೊಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಡಿ ಕೇಸ್ನಲ್ಲಿ ಮಹಾನಾಯಕನ ಕೈವಾಡ ಇರುವ ಸಾಕ್ಷ್ಯ ಇದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ. ಸಿಡಿ ಕೇಸ್ನ ಇಬ್ಬರು ಆರೋಪಿಗಳು ಶಿರಾ, ದೇವನಹಳ್ಳಿಯವರು. ದೇವನಹಳ್ಳಿಯವನ ಮನೆ ಮೇಲೆ ದಾಳಿಯಾದಾಗ 100 ಕ್ಕೂ ಹೆಚ್ಚು ಸಿಡಿಗಳು ಸಿಕ್ಕಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಕುಡಿದ ಮತ್ತಿನಲ್ಲಿ ತಮ್ಮ ತನ್ನ ಅಣ್ಣನನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಗೋಕಾಕ್ ತಾಲೂಕಿನ ವಾಲ್ಮೀಕಿ ನಗರದಲ್ಲಿ ನಡೆದಿದೆ. ಚೇತನ ರಮೇಶ್ ಪರಮಾರ್ (25) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಚೇತನ ದೊಡ್ಡಪ್ಪನ ಮಗ ತಿಲಕ ಪರಮಾರ್ (19) ಎಂಬಾತನೇ ಕೊಲೆಗಾರ. ಚೇತನ ಪರಮಾರ್ ಮತ್ತು ತಿಲಕ ಪರಮಾರ್ ವಾಲ್ಮೀಕಿ ನಗರದ ಒಂದೇ ಮನೆಯಲ್ಲಿ ವಾಸವಿದ್ದರು. ಆದರೆ, ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಮಧ್ಯೆ ವಾಗ್ವಾದ ಶುರುವಾಗಿ, ಅದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಗೋಕಾಕ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ನಗರದಲ್ಲಿ ಆಯೋಜಿಸಲಾಗಿದ್ದ ಗಣರಾಜೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ನಿಮಿಷ ತಡವಾಗಿ ಆಗಮಿಸಿದ ಘಟನೆ ನಡೆದಿದೆ. ಸಾಮಾನ್ಯವಾಗಿ ಬೆಳಗ್ಗೆ 19 ಗಂಟೆಗೆ ಧ್ವಜಾರೋಹಣ ನಡೆಸಲಾಗುತ್ತಿದೆ. ಆದರೆ ಸಚಿವರು 5 ನಿಮಿಷ ತಡವಾಗಿ ಬಂದಿದ್ದು, ಬಳಿಕ ಗಡಿಬಿಡಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 9 ಗಂಟೆಗೆ ಧ್ವಜಾರೋಹಣ ನಡೆಯಬೇಕಿತ್ತು. ಸಚಿವರು 5 ನಿಮಿಷ ತಡವಾಗಿ ಆಗಮಿಸಿ ಬಳಿಕ ತರಾತುರಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಬೆಳಗಾವಿ : ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು. ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ “13ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಮತದಾರರ ನೋಂದಣಿ , ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ವಿವಿಧ…
ಚಿಕ್ಕನಾಯಕನಹಳ್ಳಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರ ಕುರಿತು ಲಘುವಾಗಿ ಮಾತನಾಡುವುದನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ನಿಲ್ಲಿಸದಿದ್ದರೆ, ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಾಲ್ಲೂಕು ಒಕ್ಕಲಿಗ ಸಮುದಾಯ ಎಚ್ಚರಿಕೆ ನೀಡಿದೆ. ಪಟ್ಟಣದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಮಾಜದ ಅಧ್ಯಕ್ಷ ಹರ್ಷ ದೇವೇಗೌಡರು ದೇಶದ ಪ್ರಧಾನಿ ಹುದ್ದೆ ಏರಿ ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ದೇವೇಗೌಡರ ಕುಟುಂಬ ಲೂಟಿ ಹೊಡೆದಿದ್ದರೆ, ಅಧಿಕಾರದಲ್ಲಿದ್ದರೂ ಯಾಕೆ ಬಿಜೆಪಿ ಸರ್ಕಾರ ತನಿಖೆ ನಡೆಸಿ ಶಿಸ್ತು ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಅವರನ್ನು ಇಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಮಾಧುಸ್ವಾಮಿ ಅವರು ಯಾರನ್ನೂ ಬೆಳೆಸಿಲ್ಲ, ಹೇಳಿದನ್ನು ಕೇಳುವವರನ್ನು ಜೊತೆಗೆ ಇಟ್ಟುಕೊಂಡಿದ್ದಾರೆ. ವಿದ್ಯಾವಂತರು ಅವರ ಜೊತೆಯಲ್ಲಿಲ್ಲ ಒಕ್ಕಲಿಗರು 40 ಸಾವಿರ ಜನ ಸಂಖ್ಯೆ ಕ್ಷೇತ್ರದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮಾಧುಸ್ವಾಮಿಯನ್ನು 3ನೇ ಸ್ಥಾನಕ್ಕೆ ಇಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು.…
ತಿಪಟೂರು: ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ವೇಲೂರಿನ ರವಿ ಹಾಗೂ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ನಾಗರಾಜು(45) ಎಂಬವರು ಮೃತಪಟ್ಟ ಕಾರ್ಮಿಕರು ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಇಲ್ಲಿನ ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1