Author: admin

ತುಮಕೂರು:  ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರು—ಕೊರಟಗೆರೆ ರಸ್ತೆಯ ಜೆಟ್ಟಿ ಅಗ್ರಹಾರದ ಬಳಿ ಬುಧವಾರ ಸಂಭವಿಸಿದೆ. ಮಧುಗಿರಿ ತಾಲ್ಲೂಕಿನ ಕೊಡಗಾರಹಳ್ಳಿಯ ಗುಲ್ಶೀರ್(50) ಹಾಗೂ ಮಧುಗಿರಿ ಪಟ್ಟಣದ ಜರೀನಾ(42) ಎಂಬವರು ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ, ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ವಿವಾದದ ನಡುವೆಯೇ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ಮೋದಿ ಪ್ರಶ್ನೆ’ಯ ಎರಡನೇ ಭಾಗ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರದ ಆಕ್ಷೇಪಗಳನ್ನು ಮೆಟ್ಟಿನಿಂತು ಬಿಬಿಸಿ ಎರಡನೇ ಭಾಗವನ್ನು ಬಿಡುಗಡೆ ಮಾಡುತ್ತಿದೆ. 2019 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಾದಾತ್ಮಕ ನೀತಿಗಳನ್ನು ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಸಂವಿಧಾನದ 370 ನೇ ವಿಧಿಯಡಿಯಲ್ಲಿ ಖಾತರಿಪಡಿಸಲಾದ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವುದು, ಪೌರತ್ವ ಕಾಯಿದೆ ಮತ್ತು ಗುಂಪು ದಾಳಿಯ ವರದಿಗಳನ್ನು ಎರಡನೇ ಭಾಗದಲ್ಲಿ ಉಲ್ಲೇಖಿಸಲಾಗಿದೆ.ಗುಜರಾತ್ ಗಲಭೆಗಳನ್ನು ವಿವರಿಸುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಮೊದಲ ಭಾಗ, ದೇಶದಲ್ಲಿ ಭಾರೀ ಚರ್ಚೆ ಮತ್ತು ಪ್ರತಿಭಟನೆಗಳಿಗೆ ಕಾರಣವಾಯಿತು.ಇದರ ಮಧ್ಯೆ, ಎರಡನೇ ಭಾಗವನ್ನು ಬಿಬಿಸಿ ಪ್ರಸಾರ ಮಾಡಿದೆ. ಸಾಕ್ಷ್ಯಚಿತ್ರ ಬಿಡುಗಡೆಯಾದಾಗಿನಿಂದ ಬ್ರಿಟಿಷ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಜ್ಯಾಕ್ ಸ್ಟ್ರಾ ತಮ್ಮ ಸ್ಥಾನಕ್ಕೆ ನಿಂತಿದ್ದಾರೆ. ಸಾಕ್ಷ್ಯಚಿತ್ರವನ್ನು ಹಿಂಪಡೆಯುವುದಿಲ್ಲ ಎಂಬ ನಿಲುವನ್ನು ಬಿಬಿಸಿ ಸಹ ಹೊಂದಿದೆ.ಮೊದಲ ಭಾಗದ ವಿರುದ್ಧ ಕೇಂದ್ರ ಸರ್ಕಾರವು ದನಿಗೂಡಿಸಿತು ಮತ್ತು ನಂತರ ಯೂಟ್ಯೂಬ್ ಮತ್ತು…

Read More

ನಾಳೆ ಗಣರಾಜ್ಯೋತ್ಸವ ಆಚರಿಸಲು ದೇಶ ಸಜ್ಜಾಗಿದೆ. ಈ ಬಾರಿ ದೇಶವು ಒಂದು ವಾರದ ಗಣರಾಜ್ಯೋತ್ಸವಕ್ಕೆ ಸಾಕ್ಷಿಯಾಗಿದೆ. ಆದರೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ ಹುಡುಗಿಯರು ರಾಷ್ಟ್ರಧ್ವಜವನ್ನು ಸಿದ್ಧಪಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಇದರ ಭಾಗವಾಗಿ ಕುಪ್ವಾರ ಜಿಲ್ಲೆಯ 20 ಬಾಲಕಿಯರು ಸ್ವಯಂಪ್ರೇರಿತರಾಗಿ ರಾಷ್ಟ್ರಧ್ವಜ ಸಿದ್ಧಪಡಿಸಿದರು. ಭಾರತೀಯ ಸೇನೆ ಇದಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ಖಚಿತಪಡಿಸಿದೆ.ಇದೇ ವೇಳೆ ಹರ್ ಘರ್ ತಿರಂಗಾ ಅಭಿಯಾನದ ನಂತರ ಇಲ್ಲಿನ ಮಹಿಳೆಯರು ಮತ್ತು ಮಕ್ಕಳು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಸ್ವಾಗತಿಸುತ್ತಿದ್ದಾರೆ.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ರ ಸುಮಾರಿಗೆ ಗಣರಾಜ್ಯೋತ್ಸವ ಆಚರಣೆಗಳು ಪ್ರಾರಂಭವಾದವು. ಆಚರಣೆಗಳು ಜನವರಿ 30 ರಂದು ಕೊನೆಗೊಳ್ಳುತ್ತವೆ, ಇದನ್ನು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆಸ್ಟ್ರೇಲಿಯನ್ ಓಪನ್ ಟೆನಿಸ್ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ. ಸ್ವಲ್ಪ ಸಮಯದ ಹಿಂದೆ ನಡೆದ ಮಿಶ್ರ ಡಬಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಜೋಡಿ ಬ್ರಿಟನ್‌ನ ನೀಲ್ ಸ್ಕುಪ್‌ಸ್ಕಿ ಮತ್ತು ಯುಎಸ್‌ಎಯ ಡಿಸೈರಿ ಕ್ರಾವ್ಜಿಕ್ ವಿರುದ್ಧ ನೇರ ಸೆಟ್‌ಗಳಿಂದ ರೋಚಕ ಜಯ ಸಾಧಿಸಿತು. ಪಂದ್ಯವು ಸೂಪರ್ ಟೈ ಬ್ರೇಕರ್‌ನತ್ತ ಸಾಗಿತು ಆದರೆ ಭಾರತ ಒಕ್ಕೂಟವು ಬಿಟ್ಟುಕೊಡಲಿಲ್ಲ. ಸ್ಕೋರ್ 7-6, 6-7 (10-6). ಇದೇ ತಿಂಗಳ 14 ರಂದು ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾಗೆ ಆಸ್ಟ್ರೇಲಿಯನ್ ಓಪನ್ ಕೊನೆಯ ಗ್ರ್ಯಾಂಡ್ ಸ್ಲಾಮ್ ಟೂರ್ನಿಯಾಗಿದೆ. ಸಾನಿಯಾ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ ಆರು ಗ್ರ್ಯಾನ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಮುಂದಿನ ತಿಂಗಳು 19 ರಂದು ನಡೆಯಲಿರುವ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಲು ಸ್ಟಾರ್ ನಿರ್ಧರಿಸಿದ್ದಾರೆ. 2022ರ ಋತುವಿನ ನಂತರ ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಘೋಷಿಸಿದ್ದ ಸಾನಿಯಾ, ಈ ನಿರ್ಧಾರವನ್ನು ಹಿಂತೆಗೆದುಕೊಂಡು ಮತ್ತೆ ಸ್ಪರ್ಧಿಸಿದರು. ಆಸ್ಟ್ರೇಲಿಯನ್ ಓಪನ್ ಮಹಿಳೆಯರ…

Read More

ಪಿಎಸ್ ಐ ಹಗರಣದಲ್ಲಿ ಆರೋಪಿಗಳಿಂದ 76 ಲಕ್ಷ ರೂ. ವಸೂಲಿ ಆಗಿದೆ. ಇದರಲ್ಲಿ ಸರ್ಕಾರದ ಎಲ್ಲರೂ ಶಾಮಿಲಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ. ಶಿವಕುಮಾರ್, ಇಂದು ರಾಷ್ಟ್ರೀಯ ಮತದಾರರ ದಿನ. ಹಾಗಾಗಿ ಇಂದು ದೂರು ನೀಡುತ್ತಿದ್ದೇವೆ. ಬಿಜೆಪಿ ಅಕ್ರಮ ತಡೆಗಟ್ಟಬೇಕು. ನಾಳೆ ಮೀಟಿಂಗ್ ಇಟ್ಟುಕೊಂಡಿದ್ದೇವೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತಕ್ಕೆ ನಾವು ದೂರು ನೀಡಿದ್ದೇವೆ. ಮಾಗಡಿಯಲ್ಲಿ ಮಂತ್ರಿ ಕಡೆಯಿಂದ ದುಡ್ಡು ಕೊಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಚಿವ ಅಶ್ವಥ್ ನಾರಾಯಣ್ ಹೆಸರು ಪ್ರಸ್ತಾಪಿಸಿದರು. ಹಾಗೆಯೇ ಪಿಎಸ್ ಐ ಹಗರಣ ಕೂಡ ತನಿಖೆಯಾಗಬೇಕು ಎಂದು ಡಿ.ಕೆ.ಶಿ ಒತ್ತಾಯ ಮಾಡಿದರು. ಇನ್ನು ಸಿಡಿ ಕೇಸ್ ನಲ್ಲಿ ತಮ್ಮ ಕೈವಾಡವಿದೆ ಎಂಬ ಆರೋಪ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಡಿ.ಕೆ .ಶಿವಕುಮಾರ್, ಕಾಂಗ್ರೆಸ್ ಪಕ್ಷವನ್ನ ಹಾಳು ಮಾಡಿದ್ದೇ ರಮೇಶ್ ಜಾರಕಿಹೊಳಿ. ಅಪರೇಷನ್ ಕಮಲ ಮಾಡಿ…

Read More

ಕೊರೋನಾ ವೇಳೆ 3 ಸಾವಿರ ಕೋಟಿ ರೂ. ಲಂಚ ಪಡೆದಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ನಾನು ಹಗರಣ ಮಾಡಿದ್ದರೇ ನೇಣಿಗೆ ಹಾಕಿ. ಪಿನ್ ಟು ಪಿನ್ ಲೆಕ್ಕ ಕೊಡುತ್ತೇನೆ. ಹಗರಣ ಆಗಿದ್ರೆ ಸಾರ್ವಜನಿಕವಾಗಿ ನನ್ನನ್ನ ನೇಣಿಗೆ ಹಾಕಿ ಎಂದು ಕಿಡಿಕಾರಿದರು. ನಾನು ಮೂರು ಬಾರಿ ಗೆದ್ದಿದ್ದೀನಿ. ಜನರ ಮೇಲೆ ನಂಬಿಕೆ ಇಟ್ಟಿದ್ದಿನಿ. ಚಿಕ್ಕಬಳ್ಳಾಪುರದಲ್ಲಿ ನನ್ನನ್ನ ಸೋಲಿಸುತ್ತೀವಿ ಅಂತಿದ್ದಾರೆ. ನಾನು ಒಳ್ಳೆಯ ಬ್ಯಾಟ್ಸಮನ್ ಸಣ್ಣಮಗು ಅಲ್ಲ ಹೇಗೆ ಬೌಲಿಂಗ್ ಎದುರಿಸಬೇಕು ಎಂದು ಗೊತ್ತಿದೆ ಎಂದು ಸುಧಾಕರ್ ಟಾಂಗ್ ನೀಡಿದರು. ನಾನು ಬಿಜೆಪಿಗೆ ಹೋಗಿದ್ದು ಸಿದ್ಧರಾಮಯ್ಯಗೆ ಗೊತ್ತು. ಜೆಡಿಎಸ್ ಜೊತೆ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದವು. ಹಾಗಾಗಿ ಹೋಗಿದ್ದವು. ಹಣಕ್ಕಾಗಿ ಬಿಜೆಪಿಗೆ ಹೋಗಿಲ್ಲ ಎಂದ ಅವರು, ನಾವು ಸಿದ್ಧರಾಮಯ್ಯರಷ್ಟು ಬುದ್ಧಿವಂತರಲ್ಲ ನಾವು ಅಷ್ಟೋ ಇಷ್ಟೋ ಬುದ್ದಿವಂತರಿದ್ದೀವಿ. ಇಡೀ ಜೀವನ ಕಾಂಗ್ರೆಸ್ ಬೈದುಕೊಂಡು ಬಂದರು ಆದರೆ…

Read More

ಕೊರಟಗೆರೆ: ತಾಲೂಕಿನ ಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ ಅಭಿಯಾನದಲ್ಲಿ ಅಡಿಯಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ಪರಿವಾರದ ಕಾಳಜಿ ಬಗ್ಗೆ ಹೇಗೆ ಇರಬೇಕು ಎನ್ನುವುದರ ಬಗ್ಗೆ ಕೊರಟಗೆರೆ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಂಜುಳಾ ಎಂ.ಎನ್. ವಿದ್ಯಾರ್ಥಿಗಳಿಗೆ ಜಾಗೃತಿಯ ಬಗ್ಗೆ ಮಾಹಿತಿ ತಿಳಿಸಿದರು. ನಂತರ ಎ ಎಸ್ ಐ ಮಂಜುನಾಥ್ ಮಾತನಾಡಿ, ಶಾಲೆಗೆ ಬರುವಾಗ ಹಾಗೂ ಶಾಲೆಯಿಂದ ಹೊರಡುವಾಗ ಪಕ್ಕದಲ್ಲಿ ನಿರ್ಮಿಸಿರುವ ಫುಟ್ಪಾತ್ ಮೇಲೆ ವಿದ್ಯಾರ್ಥಿಗಳಾಗಲಿ ಸಾರ್ವಜನಿಕರಾಗಲಿ ಸಂಚರಿಸಬೇಕು. ಅದನ್ನು ಬಿಟ್ಟು ರಸ್ತೆಗೆ ಇಳಿಯುವುದು ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಹೋಗುವುದು, ಶಾಲೆ ಬಿಟ್ಟ ತಕ್ಷಣ ರಸ್ತೆಗೆ ಓಡುವುದು ಯಾವುದನ್ನು ಮಾಡಬಾರದು. ಫುಟ್ಪಾತ್ ಮೇಲೆ ನಡೆದುಕೊಂಡು ತಮ್ಮ ಮನೆಗಳಿಗೆ ತೆರಳಬೇಕು ಇವೆಲ್ಲವೂ ಕೂಡ ತಮ್ಮ ಸುರಕ್ಷತೆಗಾಗಿ ಕಾನೂನು ನಿಯಮಗಳನ್ನ ಪಾಲಿಸಬೇಕು. ತಮ್ಮ ಜೀವವನ್ನು ಉಳಿಸಿಕೊಂಡು ಇತರರ ಜೀವವನ್ನು ಕಾಪಾಡುವುದೇ ನಮ್ಮ ನಿಮ್ಮೆಲ್ಲರ ಕರ್ತವ್ಯ ಇದುವೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಭಿಯಾನದ ಮುಖ್ಯ ಉದ್ದೇಶ ಎಂದು…

Read More

ಕೊರಟಗೆರೆ: ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸ್ವೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಜ.27 ರಂದು ಶುಕ್ರವಾರ ಬೆಂಗಳೂರಿನ ಗಾಂಧಿನಗರದ ಪ್ರೀಡಂ ಪಾರ್ಕ್ನಲ್ಲಿ ನಡೆಯುವ ಬೃಹತ್ ಸಂಕಲ್ಪ ಪ್ರತಿಭಟನೆ ಕಾರ್ಯಕ್ರಮದಲ್ಲಿ ತಾಲೂಕಿನ ಬಲಿಜ ಸಮುದಾಯದ ಪ್ರತಿಯೊಬ್ಬರು ಭಾಗವಹಿಸುವಂತೆ ತಾಲೂಕು ಬಲಿಜ ಸಂಘದ ಅಧ್ಯಕ್ಷ ಎನ್.ಪದ್ಮನಾಭ್ ಮನವಿ ಮಾಡಿದ್ದಾರೆ. ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪುರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದ ಬಲಿಜ ಸಮುದಾಯ ಶೇ. 28% ರಷ್ಟು ಇದ್ದ ವೀಸಲಾತಿಯನ್ನು 1994 ರಲ್ಲಿ ಯಾವುದೇ ಸೂಚನೆ ಹಾಗೂ ಸಮಿತಿಯ ವರದಿಯ ಶಿಫಾರಸ್ಸು ಇಲ್ಲದೆ ತೆಗೆದು ರಾಜಕೀಯ ಮತ್ತು ಉದ್ಯೋಗಕ್ಕೆ ಕೇವಲ ಶೇ. 4% ರಷ್ಟು ಮೀಸಲಾತಿ ಇರುವ 3ಎ ಗೆ ಸೇರಿಸಿದ್ದು, ಇದನ್ನು ಪ್ರತಿಭಟಿಸಿ ಕಳೆದ 28 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಮೀಸಲಾತಿ ನೀಡದೆ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ, ಸತತ ಹೋಟದ ಫಲವಾಗಿ ಕೇವಲ ವಿದ್ಯಾಬ್ಯಾಸಕ್ಕಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ 2ಎ ಮೀಸಲಾತಿ ಸೌಲಭ್ಯ ನೀಡಲಾಗಿದೆ ಅದರೆ ಪೂರ್ಣಪ್ರಮಾಣದ…

Read More

ಬಿಜೆಪಿ ಒಂದು ಕೋಮುವಾದಿ ಪಕ್ಷ, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ರನ್ನು ಪರಸ್ಪರ ಎತ್ತಿಕಟ್ಟಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್, ಹಲಾಲ್ ಇವೆಲ್ಲ ವಿವಾದವಾಗಿಸುವುದು ಜನರಿಗೆ ಬೇಕಿತ್ತಾ? ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ಜನರಿಗೆ ವ್ಯಾಪಾರ ನಿರ್ಬಂಧ ಮಾಡುವಂತ ಕೀಳು ಮಟ್ಟಕ್ಕೆ ಇಳಿದ ಬಿಜೆಪಿಗೆ ನಾಚಿಕೆಯಾಗಬೇಕು. ಅಂಬೇಡ್ಕರರ ಸಂವಿಧಾನದ ಆಶಯ ಏನು? ಎಲ್ಲರಿಗೂ ಸಮಪಾಲು, ಸಮಬಾಳು,ಸಹಿಷ್ಣುತೆ,ಸಹಬಾಳ್ವೆಯಲ್ಲಿನಂಬಿಕೆಯಿಟ್ಟುಕೊಂಡವರು ನಾವು, ಮನುಷ್ಯತ್ವಕ್ಕೆ ವಿರುದ್ಧ ಇರುವವರು ಬಿಜೆಪಿಯವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾಡಿದರು. ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಕುವೆಂಪು ಅವರು ನಾಡನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದರು, ರಾಷ್ಟ್ರಗೀತೆಯನ್ನು ಹಾಡುತ್ತಲೇ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಜಗತ್ತಿನ ಯಾವ ಧರ್ಮವೂ ಬೇರೆಯವರನ್ನು ಕೊಲ್ಲು ಎಂದು ಹೇಳುವುದಿಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸು ಎಂದು ಎಲ್ಲ ಧರ್ಮಗಳು ಹೇಳುತ್ತವೆ. ಬಿಜೆಪಿ ಅಧಿಕಾರಕ್ಕೆ ಬಂದು ಜನ ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಜನ ನೆಮ್ಮದಿಯಿಂದ ಬದುಕಬೇಕು…

Read More

ತುಮಕೂರು: ನರೇಂದ್ರ ಮೋದಿ ಹೇಳುವ ಸಬ್ ಕ ಸಾಥ್ ಸಬ್ ಕ ವಿಕಾಸ್ ನಲ್ಲಿ ಮಕ್ಕಳು, ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಯುವಕರನ್ನು ಹೊರಗಿಟ್ಟಿದ್ದಾರೆ. ಮೋದಿಜೀ ಯಾಕ್ರೀ ಇಂಥಾ ಸುಳ್ಳುಗಳನ್ನು ಹೇಳುತ್ತೀರಿ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರು ಈ ದೇಶವನ್ನು ಸಾಲಗಾರರ ದೇಶವಾಗಿ ಮಾಡಿದ್ದಾರೆ. ಸ್ವಾತಂತ್ರ್ಯ ನಂತರದಿಂದ ಮನಮೋಹನ್ ಸಿಂಗ್ ಅವರ ಸರ್ಕಾರದ ಕೊನೆಯವರೆಗೆ ದೇಶದ ಒಟ್ಟು ಸಾಲ ಇದ್ದದ್ದು 53 ಲಕ್ಷ ಕೋಟಿ. ಈ ವರ್ಷದ ಮಾರ್ಚ್ ಅಂತ್ಯಕ್ಕೆ ದೇಶದ ಒಟ್ಟು ಸಾಲ 153 ಲಕ್ಷ ಕೋಟಿಗೆ ತಲುಪಲಿದೆ. 9 ವರ್ಷದಲ್ಲಿ ಮೋದಿ ಅವರು 100 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದರು. ಮೋದಿ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು, ಮಾಡಿದ್ದಾರ? ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ಅಕ್ಕಿ, ಗೋದಿ, ಕಬ್ಬು, ಅಡುಗೆ ಎಣ್ಣೆ ಬೆಲೆಗಳು ಎಷ್ಟಿತ್ತು ಎಂದು…

Read More