Author: admin

ಬೆಂಗಳೂರಿಗೆ ಕೇವಲ 70 ಕಿ.ಮೀ ದೂರದಲ್ಲಿದ್ದರೂ ತುಮಕೂರು ಎಷ್ಟು ಅಭಿವೃದ್ಧಿ ಆಗಬೇಕಿತ್ತು,ಆ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಿಲ್ಲ. ಡಾ. ನಂಜುಂಡಪ್ಪ ಅವರ ವರದಿ ಪ್ರಕಾರ ತುಮಕೂರಿನ 10 ತಾಲೂಕುಗಳಲ್ಲಿ 8 ತಾಲೂಕುಗಳು ಹಿಂದುಳಿದವು. ನಾವು ಅಧಿಕಾರಕ್ಕೆ ಬಂದಾಗ 2013 ರಲ್ಲಿ ತುಮಕೂರಿನ ಜನರ ತಲಾಆದಾಯ 43,687 ರೂ. ಇತ್ತು. ನಾವು ಅಧಿಕಾರದಿಂದ ಇಳಿಯುವಾಗ ತಲಾಆದಾಯ 1,74.884 ರೂ. ಆಗಿತ್ತು. ಈಗಿನ ತಲಾ ಆದಾಯ 1,84,000 ರೂ. ಇದೆ. ಕಳೆದ 5 ವರ್ಷಗಳಲ್ಲಿ 9,200 ರೂ. ಜಾಸ್ತಿಯಾಗಿದೆ. ಇದು ತುಮಕೂರು ಜಿಲ್ಲೆಗೆ ಬಿಜೆಪಿ ಸರ್ಕಾರದ ಕೊಡುಗೆ, ಈ ಅಂಕಿಅಂಶಗಳನ್ನು ರಾಜ್ಯ ಬಿಜೆಪಿ ಸರ್ಕಾರವೇ ನೀಡಿರುವುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿರುವುದಲ್ಲ, ಆಪರೇಷನ್ ಕಮಲ ಮಾಡಿ ಶಾಸಕರನ್ನು ಖರೀದಿಸಿ ಅನೈತಿಕ ಮಾರ್ಗದ ಮೂಲಕ ಸರ್ಕಾರ ರಚನೆ ಮಾಡಿರುವುದು. ಬಿಜೆಪಿ ಪಕ್ಷ ಕಳೆದ…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಸ್ಮಾಯಿಲ್ ಪಾಷಾ ಅವರಿಗೆ ಸೇರಿದ ಸ್ಟಾರ್ ಚಿಕನ್ ಸೆಂಟರ್ ಸಂಪೂರ್ಣ ಸುಟ್ಟು ಕರಕಲಾಗಿ, ಮೂರು ಲಕ್ಷ ರೂಪಾಯಿಗೂ ಹೆಚ್ಚು ನಷ್ಟವಾಗಿದೆ. ಈ ಅಂಗಡಿಯ ಅಕ್ಕಪಕ್ಕದಲ್ಲಿದ್ದ ತಿರುಮಲ ಚಿಕನ್ ಸೆಂಟರ್, ಕಾಲಭೈರವೇಶ್ವರ ಚಿಕನ್ ಸೆಂಟರ್, ಎರಡು ಅಂಗಡಿಗಳಿಗೂ ಬೆಂಕಿ ತಗುಲಿದ್ದು, ಒಟ್ಟಾರೆ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಸ್ಟಾರ್ ಚಿಕನ್ ಸೆಂಟರ್ ಅಂಗಡಿಯಲ್ಲಿದ್ದ ಸಿಲಿಂಡರ್, ಗ್ರೈಂಡರ್ ಮಿಷನ್, ಜನರೇಟರ್, ನೂರಾರು ಕೋಳಿಗಳು, ಸ್ಕೇಲ್ ಮಿಷಿನ್, ಒಟ್ಟಾರೆ ಅಂಗಡಿಯ ಒಳಗೆ ಇದ್ದ ಎಲ್ಲಾ ಉಪಕರಣಗಳು ಸುಟ್ಟು ಕರಕಲಾಗಿದೆ. ಇನ್ನು ಅಂಗಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಳಗಿನ ಜಾವ ಅಂಗಡಿಯ ಬಳಿ ಬಂದಿದ್ದ ವೇಳೆ ಬೆಂಕಿ ಉರಿಯುತ್ತಿದ್ದನ್ನು ಕಂಡು ತಕ್ಷಣ ಅಂಗಡಿಯ ಮಾಲೀಕನಿಗೆ ವಿಷಯ ಮುಟ್ಟಿಸಿದ್ದಾರೆ,   ಎಚ್ಚೆತ್ತುಕೊಂಡ ಅಂಗಡಿಯ ಮಾಲೀಕ ತಾಲೂಕಿನ ಅಗ್ನಿ ಶಾಮಕ ಕಚೇರಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ, ತಕ್ಷಣ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಸುಮಾರು ಎಂಟು ಸಿಬ್ಬಂದಿಗಳು…

Read More

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗೋ ಮೂತ್ರ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 40-45 ದಿನಗಳು ಮಾತ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತೆ. ಆಮೇಲೆ ಈ ಬಿಜೆಪಿ ಸರ್ಕಾರವನ್ನ ಜನರೇ ಕಿತ್ತೊಗೆಯಲಿದ್ದಾರೆ ಎಂದರು. ಕಾಂಗ್ರೆಸ್ 200 ಯುನಿಟ್ ವಿದ್ಯುತ್, 2 ಸಾವಿರ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದೆ. ಇದರಿಂದ ಬಿಜೆಪಿಗೆ ನಡುಕ ಶುರುವಾಗಿದೆ. ಇದರಿಂದ ಬಿಜೆಪಿಯಲ್ಲಿ ಆಂತರಿಕ ಜಗಳ ಹೆಚ್ಚಾಗಿದೆ ಎಂದರು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗೋ ಮೂತ್ರ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಟೀಮ್ ಇಂಡಿಯಾದ ಮಾಜಿ ಬೌಲರ್ ಆಶಿಶ್ ನೆಹ್ರಾ ಅವರು ಜಿಲ್ಲೆಯ ಖಾನಾಪುರದ ಬಸವೇಶ್ವರ ವೃತ್ತದಲ್ಲಿರುವ ಅಕ್ವಾ ಬ್ಲೂ ಸ್ಕೈ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸವಿದಿದ್ದಾರೆ. ತಮ್ಮ ಸಂಗಡಿಗರೊಂದಿಗೆ ರಸ್ತೆ ಮಾರ್ಗವಾಗಿ ಗೋವಾದಿಂದ ಪುಣೆಗೆ ತೆರಳುತ್ತಿದ್ದ ಅವರು ನಿನ್ನೆ ಮಾರ್ಗ ಮಧ್ಯದಲ್ಲಿ ಸಾಮಾನ್ಯ ಗ್ರಾಹಕರಂತೆ ಹೋಟೆಲ್ ಗೆ ಭೇಟಿ ನೀಡಿದ್ದರು. ಅವರನ್ನು ಗುರುತಿಸಿದ ಹೋಟೆಲ್ ಮಾಲೀಕ ಮಹಮ್ಮದ್ ನಂದಗಡಿ ಮಾತನಾಡಿಸಿದ್ದು, ವಿಷಯ ಹಬ್ಬುತ್ತಲೇ ಅಲ್ಲಿದ್ದ ಕ್ರೀಡಾ ಪ್ರೇಮಿಗಳು ಆಶಿಶ್ ನೆಹ್ರಾ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ. ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿ ಹಿರಿಯ ಉಪ ನೋಂದಣಾಧಿಕಾರಿ, ಕಚೇರಿ ಸಹಾಯಕ ಹಾಗೂ ಮಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಚಿಕ್ಕೋಡಿಯ ಹಿರಿಯ ಉಪ ನೋಂದಣಾಧಿಕಾರಿ ಜಿ.ಪಿ.ಶಿವರಾಜು, ಸಹಾಯಕ, ಕಂಪ್ಯೂಟರ್ ಆಪರೇಟರ್ ಹುಸೇನ್ ರೆಹಮಾನ್ಭಾಯಿ ಹಾಗೂ ಮಧ್ಯವರ್ತಿ ಸಂದೀಪ ಪಾಟೀಲ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಡೋಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದ ರಾಜು ಪಾಶ್ಚಾಪುರೆ ಅವರು, ನೋಂದಣಿಗೆ ಎಲ್ಲ ಹಂತದ ಸರ್ಕಾರಿ ಶುಲ್ಕ ಪಾವತಿಸಿದ್ದರೂ, ಆದರೆ ಹೆಚ್ಚುವರಿಯಾಗಿ 30 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಅಧಿಕಾರಿಗಳಿಗೆ ರಾಜು ಪಾಶ್ಚಾಪುರೆ ಅವರು ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ಕಾರ್ಯಾಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 30 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಂಗಳೂರು : ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ.ಈ ಕುರಿತು ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ವಿಧಾನಸಭಾ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಉಚಿತ ವಿದ್ಯುತ್ ಪೂರೈಕೆ, ವಿವಿಧ ಪಿಂಚಣಿ ಹೆಚ್ಚಳ, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಸಬ್ಸಿಡಿ ನೀಡುವಂತಹ ಯೋಜನೆಗಳು, ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಎಬ್ಬಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಹೇಗಾದರೂ ಮಾಡಿ ನಾವು ಬಿಜೆಪಿ ಸರ್ಕಾರ ಮಾಡ್ತಿವಿ ಬಿಡುವುದಿಲ್ಲ. ಒಂದು ಸ್ವಲ್ಪ ಕಡಿಮೆ ಸೀಟ್ ಬಂದರೂ ಏನಾದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ, ತಲೆಕೆಡಿಸಿಕೊಳ್ಳಬೇಡಿ ಮುಂದೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು. ಇನ್ನು ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಇದ್ದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಕೊರಟಗೆರೆ ತಾಲೂಕಿನ ಹುಲೀಕುಂಟೆ ಗ್ರಾಮದ ಅಲೆಮಾರಿ ಜನರು ಕುಡಿಯಲು ನೀರಿಲ್ಲದೇ ಸಂಕಷ್ಟದಲ್ಲಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್  ನವರ ನಿರ್ಲಕ್ಷ್ಯದಿಂದ ಈ ಸಮಸ್ಯೆ ಸೃಷ್ಟಿಯಾಗಿತ್ತು. ಇದೀಗ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ನಾಗವಲ್ಲಿ,ಅಮಲಾಪುರ ಮತ್ತು ಕೊರಟಗೆರೆ ತಾ ಹುಲೀಕುಂಟೆ ಗ್ರಾಮಗಳಲ್ಲಿನ ಅಲೆಮಾರಿ ಸಮುದಾಯಗಳಿಗೆ ನಿವೇಶನ ಮತ್ತು ವಸತಿಗೆ ಸಂಬಂದಿಸಿದಂತೆ ವಿಳಂಬವಾಗಿ ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂದಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕಳೆದೆರಡು ತಿಂಗಳುಗಳ ಹಿಂದೆ ನಿರ್ದೇಶನ ನೀಡಿದ್ದರು. ಸುಮಾರು 50 ಜನರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಅಂ.ಅ.ನಿಗಮದ ಜಿಲ್ಲಾ ವ್ಯವಸ್ಥಾಪಕರು,ತುಮಕೂರು ಹಾಗೂ ಕೊರಟಗೆರೆ ತಾ ಸಹಾಯಕ ನಿರ್ದೇಶಕರು ಮತ್ತು TDO ಮಹೇಂದ್ರ ಅವರೊಂದಿಗೆ ಸುದೀರ್ಘ ಮಾತುಕತೆಯ ಬಳಿಕ ಅಧಿಕಾರಿಗಳು ಸ್ಪಂದಿಸುವುದಾಗಿ ಸ್ಪಷ್ಟನೆ ನೀಡಿರುವುದ ಸಂತಸದ ವಿಚಾರವಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ. ಅದರಂತೆ ಕೊರಟಗೆರೆ…

Read More

ಇಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ಕಾಂಗ್ರೆಸ್ ಪಕ್ಷದ “ಪ್ರಜಾ ಧ್ವನಿ”ಯಾತ್ರೆಯ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುವ ಮೂಲಕ ಯಾತ್ರೆಗೆ ಇನ್ನಷ್ಟು ಮೆರುಗು ತಂದರು. ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಎ.ಐ.ಸಿ.ಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಮಯೂರ್ ಜಯಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ,  ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಜನಪ್ರಿಯ ಮಾಜಿ ಶಾಸಕರು ಆದ ಕೆ.ಎನ್.ರಾಜಣ್ಣ, ಮಾಜಿ ಉಪಮುಖ್ಯಮಂತ್ರಿ  ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಆಂಜನೇಯ, ವೆಂಕಟರವಣಪ್ಪ, ಯು.ಟಿ.ಖಾದರ್ , ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾ.ವಿ.ಸ ವಿ.ಎಸ್.ಉಗ್ರಪ್ಪನವರು,ಶಾಸಕ ರಂಗನಾಥ್  ಮೊದಲಾದವರು ಮಾತನಾಡಿದರು. ಮಾಜಿ  ಶಾಸಕರುಗಳಾದ ಕೆ.ಷಡಕ್ಷರಿ, ಷಫಿ ಅಹ್ಮದ್,  ರಫೀಕ್ ಅಹ್ಮದ್, ಮಾಜಿ ವಿ.ಪ.ಸದಸ್ಯ ಬೆಮಲ್ ಕಾಂತರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್ ನಾಥ್,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಸೇರಿದಂತೆ ಅನೇಕ ಗಣ್ಯರು, ಮುಖಂಡರು…

Read More