Subscribe to Updates
Get the latest creative news from FooBar about art, design and business.
- ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ: ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
- ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
- ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
- ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
Author: admin
ಶಿವಮೊಗ್ಗ: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು. ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂಬರ್ 1 ಆರ್ ಸಿಬಿ ಅಲ್ಲ. ಆರ್‌ಸಿಬಿ ಕೆಎಸಿಎ, ಡಿಎನ್‍ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3; ನಂತರದ ಹೊಣೆಗಾರರು ಆರ್‌ಸಿಬಿ, ಕೆಎಸಿಎ, ಡಿಎನ್ ಎ ಎಂದು ತಿಳಿಸಿದರು. ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ…
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ವೇಳೆ, ಅಡ್ವೊಕೇಟ್ ಜನರಲ್ ಶೆಟ್ಟಿ, ‘ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ ಸಲ್ಲಿಸಿಲ್ಲ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಅದು ವರದಿ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ವಾದಿಸಿದರು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯೂ ಇಂದೇ ನಡೆಯಲಿದ್ದು, ಸೂಕ್ಷ್ಮ ಮಾಹಿತಿಯನ್ನು ಅರ್ಜಿದಾರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಮುಚ್ಚಿದ ಲಕೋಟೆಯಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಅನುಮತಿ ಕೇಳಿದರು. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ…
ತುಮಕೂರು: ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು, ಕಿರಿಯ ವಕೀಲರಿಗೆ ನ್ಯಾಯಾಧೀಶರು ಸೂಕ್ತ ಕಾನೂನು ತಿಳುವಳಿಕೆ ನೀಡಿ ತಮ್ಮ ವೃತ್ತಿ ಪಥದಲ್ಲಿ ಯಶಸ್ವಿ ವಕೀಲರಾಗಿ ಬೆಳೆಯಲು ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು, ಇಂದು ಜಿಲ್ಲಾ ನ್ಯಾಯಾಲಯದಲ್ಲಿ 1,900 ಜನ ವಕೀಲರಿದ್ದೇವೆ ದಿನೇ ದಿನೇ ವಕೀಲರ ಸಂಖ್ಯೆ,ನ್ಯಾಯಾಲಯಗಳ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ಕೇಸುಗಳ ಸಂಖ್ಯೆಯು ಹೆಚ್ಚುತ್ತಿದೆ ಇದಕ್ಕೆ ಸೂಕ್ತ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳು ಬೇಕು,ಇನ್ನು ಕೆಲವೇ ದಿನಗಳಲ್ಲಿ ವಕೀಲರ ಸಂಘದ 3ನೇ ಮಹಡಿಗೆ ಶಂಕುಸ್ಥಾಪನೆ ಆಗಲಿದೆ, ಹೊಸ ನ್ಯಾಯಾಲಯ ಕಟ್ಟಲು ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಕನಿಷ್ಠ 25 ಎಕರೆ ಜಮೀನು ನೀಡಲು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ,ಇದರ ಬಗ್ಗೆ ಲೋಕಾಯುಕ್ತರಲ್ಲಿ ಸಹ ಮನವಿ ಮಾಡಿದ್ದು ಅದಕ್ಕೆ ಜಿಲ್ಲಾಡಳಿತ ಸ್ಪಂದಿಸುವ ಭರವಸೆ ಇದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ತಿಳಿಸಿದರು. ಅವರು ಇಂದು ಜಿಲ್ಲಾ ವಕೀಲರ ಸಂಘದಲ್ಲಿ ನಡೆದ…
ತುಮಕೂರು: ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಿನಾಂಕ: 11.06.2025 ರಿಂದ 14.06.2025ರವರೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ 64.5 ರಿಂದ 204. 5ಮಿಮೀ ನಷ್ಟು ಭಾರಿ ಪ್ರಮಾಣದಲ್ಲಿ ಗುಡುಗು–ಸಿಡಿಲು ಸಹಿತ ಗಾಳಿ–ಮಳೆ ಇರುವ ಸಾಧ್ಯತೆಯಿರುವುದರಿಂದ ಜಿಲ್ಲೆಗೆ “ಆರೆಂಜ್ ಮತ್ತು ಯೆಲ್ಲೋ ಅಲರ್ಟ್” ಘೋಷಿಸಲಾಗಿದೆ. ಅದರಂತೆ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ತುಮಕೂರು ರವರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲು ಈ ಕೆಳಗಿನಂತೆ ಸೂಚಿಸಿರುತ್ತಾರೆ. ಸಾರ್ವಜನಿಕ ಮನವಿ: ಸಿಡಿಲು ಸಹಿತ ಮಳೆಯಾಗುವುದರಿಂದ, ರಾಜ್ಯದಿಂದ ಸಿಡಿಲು ಬಡಿಯುವ ಪ್ರದೇಶದ ಸಾರ್ವಜನಿಕರಿಗೆ ಮುಂಚಿತವಾಗಿ ರವಾನಿಸುವ SMS Alert ನಂತೆ ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶದಲ್ಲಿರುವುದು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಹೊಂದಿರುವ ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರುವುದು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸದಿರಿ ಮಿಂಚು…
ತುಮಕೂರು: ತುಮಕೂರು ಉಪ ವಿಭಾಗದಲ್ಲಿಂದು NCPCR pan India child labour rescue and rehabilitation campaign ಅಡಿಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರುಗಳೊಂದಿಗೆ ನಡೆಸಿದ ದಾಳಿಯಲ್ಲಿ ನಗರದ ಗುಬ್ಬಿ ಗೇಟ್ ರಿಂಗ್ ರೋಡ್ ರಸ್ತೆಯ ಗ್ಯಾರೇಜ್‌ಗಳಲ್ಲಿ ಮಹಮ್ಮದ್ ಮಾಸ್ ಮತ್ತು ನಿರಜ್ ಕುಮಾರ್ ಬೋಟಿ ಎಂಬ ಕಿಶೋರ ಕಾರ್ಮಿಕರನ್ನು ರಕ್ಷಿಸಿ ಬಾಲ ಮಂದಿರಕ್ಕೆ ಸೇರಿಸಲಾಯಿತು. ಈ ದಾಳಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹಾಗೂ ತುಮಕೂರು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಹರ್ಷ, ಕಾರ್ಮಿಕ ಅಧಿಕಾರಿ ಕೆ. ತೇಜಾವತಿ ಹಾಗೂ ಸೆಕ್ಷನ್ 17 ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ನಮ್ಮತುಮಕೂರು ಸುದ್ದಿ, ಮಾಹಿತಿ: ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರು ತಾಲ್ಲೂಕಿನ 4 ಹಾಗೂ ಕೊರಟಗೆರೆ ತಾಲ್ಲೂಕಿನ 5 ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 7, 8 ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತುಮಕೂರು ತಾಲ್ಲೂಕಿನ ವಸತಿ ಶಾಲೆಗಳು : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ತಿಮ್ಮಸಂದ್ರ, ಹೆಬ್ಬೂರು(ಪ್ರಾಂಶುಪಾಲರ ಮೊ.ಸಂ.9880056870); ಮೊರಾರ್ಜಿ ದೇಸಾಯಿ ವಸತಿ ಶಾಲೆ, ನರಸಾಪುರ, ಹೆಬ್ಬೂರು(7676672510); ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಕೋರಾ(ದೇವರಾಯಪಟ್ಟಣ), ಮೊ.ಸಂ.9901606460); ಕಿತ್ತೂರು ರಣಿ ಚೆನ್ನಮ್ಮ ವಸತಿ ಶಾಲೆ, ಗೂಳೂರು(ಬಡ್ಡಿಹಳ್ಳಿ) ಮೊ.ಸಂ.9591049218). ಕೊರಟಗೆರೆ ತಾಲ್ಲೂಕಿನ ವಸತಿ ಶಾಲೆಗಳು : ಮೊರಾರ್ಜಿ ದೇಸಾಯಿ ವಸತಿ ಶಾಲೆ, ರೆಡ್ಡಿಕಟ್ಟೆ ಭಾರೆ(ಮೊ.ಸಂ.9743579508); ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೈಚಾಪುರ(ಮೊ.ಸಂ.9164997010); ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಹೂಲಿಕುಂಟೆ(ಮೊ.ಸಂ.8762639916); ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದರಬೆಟ್ಟ(ಮೊ.ಸಂ.9972645217); ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಕೋಳಾಲ(ಮೊ.ಸಂ.9449239585). ವಿದ್ಯಾಥಿಗಳು ತುಮಕೂರು ಜಿಲ್ಲೆಯವರಾಗಿರಬೇಕು.…
ಗ್ಯಾಂಗ್ ಟಾಕ್: ಜೂನ್ 1 ಉತ್ತರ ಸಿಕ್ಕಿಂನ ಚಾಟೆನ್‌ನ ಸೇನಾ ಶಿಬಿರದಲ್ಲಿ ಭೂಕುಸಿತ ಸಂಭವಿಸಿದ ನಂತರ ನಾಪತ್ತೆಯಾಗಿದ್ದ ಆರು ಸೇನಾ ಸಿಬ್ಬಂದಿಯ ಪೈಕಿ ಒಬ್ಬ ಸಿಬ್ಬಂದಿಯ ಮೃತದೇಹವನ್ನು ಸೋಮವಾರ ಮಂಗನ್ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹುತಾತ್ಮ ಯೋಧನನ್ನು ಸೈನುದ್ಧೀನ್ ಪಿಕೆ ಎಂದು ಗುರುತಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾಣೆಯಾದ ಇತರ ಸೇನಾ ಸಿಬ್ಬಂದಿಯನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಸೋನಮ್ ಡೆಟ್ಚು ಭುಟಿಯಾ ಅವರು ತಿಳಿಸಿದ್ದಾರೆ. “ಜೂನ್ 1 ರಂದು ಚಾಟೆನ್ ನಲ್ಲಿರುವ ಸೇನಾ ಶಿಬಿರದಲ್ಲಿ ಸಂಭವಿಸಿದ ಭೂಕುಸಿತದ ನಂತರ ಕಾಣೆಯಾದ ಆರು ಸಿಬ್ಬಂದಿಗಳಲ್ಲಿ ಒಬ್ಬರಾದ ಸೇನಾ ಸಿಬ್ಬಂದಿ ಸೈನುಧೀನ್ ಪಿಕೆ ಅವರ ಮೃತದೇಹವನ್ನು ರಕ್ಷಣಾ ತಂಡಗಳು ವಶಪಡಿಸಿಕೊಂಡಿವೆ” ಎಂದು ಎಸ್ ಪಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಮುಂಬೈ: ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ನಿವಾರಿಸಲು ಚುನಾವಣಾ ಆಯೋಗ, ಆಡಳಿತಾರೂಢ ಬಿಜೆಪಿ ಜತೆ “ಒಪ್ಪಂದ” ಮಾಡಿಕೊಂಡಿದೆಯೇ? ಎಂದು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ಮ್ಯಾಚ್ ಫಿಕ್ಸಿಂಗ್” ಮತ್ತು “ರಿಗ್ಗಿಂಗ್” ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪವನ್ನು ಪ್ರಶ್ನಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಪತ್ರಿಕೆಯಲ್ಲಿ ಲೇಖನ ಬರೆದ ನಂತರ ಸಂಜಯ್ ರಾವತ್ ಈ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಫಡ್ನವೀಸ್ ತಮ್ಮ ಲೇಖನದಲ್ಲಿ, ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಜನಾದೇಶವನ್ನು ನಿರಂತರವಾಗಿ “ಅವಮಾನಿಸುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿ ಅವರು ಬಿಜೆಪಿಗೆ ಪ್ರಶ್ನೆಗಳನ್ನು ಕೇಳಿಲ್ಲ, ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ದೇವೇಂದ್ರ ಫಡ್ನವಿಸ್ ಏಕೆ ಪ್ರತಿಕ್ರಿಯಿಸಬೇಕು? ಚುನಾವಣಾ ಆಯೋಗವು, ಬಿಜೆಪಿಗೆ ತನ್ನ ಮುಖದ ಮೇಲಿನ ಧೂಳನ್ನು ಒರೆಸಲು ಮತ್ತು ಅದರ ಕಾರ್ಯನಿರ್ವಹಣೆಯ ಬಗ್ಗೆ ಇರುವ ಅನುಮಾನಗಳನ್ನು ನಿವಾರಿಸಲು…
ಬೆಂಗಳೂರು: ತನ್ನಿಂದ ಅಂತರ ಕಾಯ್ದುಕೊಂಡ ಪ್ರಿಯತಮೆಯನ್ನು ಪ್ರಿಯಕರ ಹೊಟೇಲ್ ಗೆ ಕರೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಗರದ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ನಡೆದಿದೆ. 36 ವರ್ಷದ ಮಹಿಳೆ ಹರಿಣಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. 25 ವರ್ಷದ ಆರೋಪಿ ಯಶಸ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಶುಕ್ರವಾರ ರಾತ್ರಿ OYO ಹೋಟೆಲ್ ನಲ್ಲಿ ಯಶಸ್ ಹರಿಣಿಯನ್ನು ಹತ್ಯೆ ಮಾಡಿದ್ದಾನೆ. ಇವರಿಬ್ಬರೂ ಕೆಂಗೇರಿ ನಿವಾಸಿಗಳು ಎಂಬುದು ತಿಳಿದುಬಂದಿದೆ. ವರ್ಷಗಳಿಂದ ಇಬ್ಬರಿಗೂ ಪರಸ್ಪರ ಸ್ನೇಹ, ಸಲುಗೆ ಇತ್ತು. ಕಳೆದ ಎರಡು ತಿಂಗಳಿಂದ ಹರಿಣಿ ಮಾತನಾಡದೆ ಟೆಕ್ಕಿಯಿಂದ ದೂರ ಉಳಿದಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಆಕ್ರೋಶಗೊಂಡ ಟೆಕ್ಕಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಮುಂಬೈ: ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಲ್ಲಿ ನಡೆದಿದೆ. ವರದಿಗಳ ಪ್ರಕಾರ ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ರೈಲಿನೊಳಗಿನ ಅತಿಯಾದ ಜನಸಂದಣಿಯಿಂದಾಗಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ರೈಲಿನ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW