Author: admin

ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಮನೆಮನೆಗಳಲ್ಲಿ ಬಿಸಿನೀರಿಗಾಗಿ ವಾಟರ್ ಹೀಟರ್ ಅಥವಾ ಇಮ್ಮರ್ಶನ್ ರಾಡ್‌ಗಳ ಬಳಕೆ ಸಾಮಾನ್ಯ. ಆದರೆ, ಸಣ್ಣ ನಿರ್ಲಕ್ಷ್ಯವೂ ದೊಡ್ಡ ದುರಂತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚೆಗೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ಏನಿದು ಘಟನೆ? ಮುಜಫರ್ ನಗರದ ನಿಧಿ (21) ಮತ್ತು ಲಕ್ಷ್ಮಿ (19) ಎಂಬ ಇಬ್ಬರು ಸಹೋದರಿಯರು ಸ್ನಾನಕ್ಕಾಗಿ ನೀರು ಕಾಯಿಸಲು ವಾಟರ್ ಹೀಟರ್ ಬಳಸಿದ್ದರು. ಬಕೆಟ್‌ನಿಂದ ಹೊಗೆ ಬರುತ್ತಿರುವುದನ್ನು ಕಂಡು, ಗಾಬರಿಯಿಂದ ಹೀಟರ್ ಹೊರತೆಗೆಯಲು ಹೋದ ನಿಧಿಗೆ ವಿದ್ಯುತ್ ಆಘಾತ (Electric Shock) ಉಂಟಾಗಿದೆ. ಆಕೆಯನ್ನು ರಕ್ಷಿಸಲು ಹೋದ ಸಹೋದರಿ ಲಕ್ಷ್ಮಿ ಕೂಡ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮನಕಲಕುವ ಘಟನೆ ವಾಟರ್ ಹೀಟರ್ ಬಳಸುವಾಗ ಎಷ್ಟು ಜಾಗರೂಕರಾಗಿರಬೇಕು ಎಂಬುದನ್ನು ನೆನಪಿಸಿದೆ. ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ: ಪ್ಲಾಸ್ಟಿಕ್ ಬಕೆಟ್ ಬಳಸಿ: ನೀರು ಕಾಯಿಸಲು ಯಾವಾಗಲೂ ಪ್ಲಾಸ್ಟಿಕ್ ಬಕೆಟ್ ಮಾತ್ರ ಬಳಸಿ. ಲೋಹದ (ಸ್ಟೀಲ್ ಅಥವಾ ಅಲ್ಯೂಮಿನಿಯಂ) ಬಕೆಟ್‌ ಗಳನ್ನು…

Read More

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಯಶ್ ಅವರ ಜನ್ಮದಿನದ ಅಂಗವಾಗಿ ಜನವರಿ 8ರಂದು ಬಿಡುಗಡೆಯಾದ ಈ ಟೀಸರ್, ಕೇವಲ 21 ಗಂಟೆಗಳಲ್ಲಿ 4.7 ಕೋಟಿ (47 Million) ವೀಕ್ಷಣೆಗಳನ್ನು ಪಡೆಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಹಾಲಿವುಡ್ ಶೈಲಿಯ ಮೇಕಿಂಗ್: ಟೀಸರ್‌ ನಲ್ಲಿ ಯಶ್ ಅವರ ‘ರಾ’ ಗ್ಯಾಂಗ್‌ ಸ್ಟರ್ ಲುಕ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಟೀಸರ್‌ ನ ಮೇಕಿಂಗ್ ಕ್ವಾಲಿಟಿ ಹಾಲಿವುಡ್ ಚಿತ್ರಗಳ ಮಟ್ಟದಲ್ಲಿದ್ದು, ಯಶ್ ಅವರ ‘ರಾಯ’ ಎಂಬ ಪಾತ್ರದ ಪರಿಚಯ ಭಾರಿ ಕುತೂಹಲ ಕೆರಳಿಸಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ಮಟ್ಟದ ವೀಕ್ಷಣೆ ಪಡೆದ ಟೀಸರ್ ಇದೇ ಮೊದಲು ಎನ್ನಲಾಗುತ್ತಿದೆ. ನಿರ್ದೇಶನ: ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ತಾರಾಗಣ: ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಡುಗಡೆ ದಿನಾಂಕ:…

Read More

ಚಳಿಗಾಲ ಆರಂಭವಾಗುತ್ತಿದ್ದಂತೆ ನಮಗೆ ಬಿಸಿಬಿಸಿಯಾದ ಮತ್ತು ಸಿಹಿಯಾದ ಆಹಾರಗಳನ್ನು ಸೇವಿಸುವ ಹಂಬಲ ಹೆಚ್ಚಾಗುತ್ತದೆ. ಸಾಮಾನ್ಯವಾಗಿ ನಾವು ಕ್ಯಾರೆಟ್ ಹಲ್ವಾ ಅಥವಾ ಇತರೆ ಸಿಹಿ ಪದಾರ್ಥಗಳನ್ನು ಇಷ್ಟಪಡುತ್ತೇವೆ. ಆದರೆ, ಈ ಬಾರಿ ನಿಮ್ಮ ಚಳಿಗಾಲದ ಮೆನುವಿನಲ್ಲಿ ‘ಬೀಟ್‌ರೂಟ್ ಹಲ್ವಾ’ ಸೇರಿಸಿಕೊಳ್ಳುವುದು ಕೇವಲ ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ ಎನ್ನುತ್ತಾರೆ ಆಹಾರ ತಜ್ಞರು. ಬೀಟ್‌ರೂಟ್ ಹಲ್ವಾ ಚಳಿಗಾಲದ ಅತ್ಯುತ್ತಮ ಡೆಸರ್ಟ್ (Dessert) ಆಗಿದೆ. ಇದು ದೈಹಿಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ದೇಹವನ್ನು ಬೆಚ್ಚಗಿಡಲು ಸಹಕಾರಿ. ಬೀಟ್‌ ರೂಟ್ ಹಲ್ವಾದ ಆರೋಗ್ಯ ಪ್ರಯೋಜನಗಳು: ರಕ್ತದ ಗುಣಮಟ್ಟ ಸುಧಾರಣೆ: ಬೀಟ್‌ರೂಟ್‌ನಲ್ಲಿ ಕಬ್ಬಿಣಾಂಶ (Iron) ಹೇರಳವಾಗಿದ್ದು, ಇದು ರಕ್ತಹೀನತೆ (Anemia) ತಡೆಗಟ್ಟಲು ಮತ್ತು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೈಸರ್ಗಿಕ ಶಕ್ತಿವರ್ಧಕ: ಇದರಲ್ಲಿರುವ ನೈಸರ್ಗಿಕ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ಗಳು ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತವೆ. ರೋಗನಿರೋಧಕ ಶಕ್ತಿ: ಬೀಟ್‌ರೂಟ್‌ನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಚಳಿಗಾಲದಲ್ಲಿ ಕಾಡುವ ಸಣ್ಣಪುಟ್ಟ ಸೋಂಕುಗಳ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಪೋಷಕಾಂಶಗಳ ಗಣಿ: ಹಾಲು…

Read More

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌–ಗ್ರಾಮೀಣ’ (ವಿಬಿ-–ಜಿ ರಾಮ್‌ ಜಿ) ಯೋಜನೆ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದ್ದಾರೆ. ಗುರುವಾರ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಸ್ವರಾಜ್ಯದ ಕನಸು ಕಂಡಿದ್ದರು. ಉದ್ಯೋಗ ಖಾತ್ರಿ ಯೋಜನೆಗೆ ಎರಡು ದಶಕಗಳು ಕಳೆದಿದ್ದು, ಕಾಲಕ್ಕೆ ತಕ್ಕಂತೆ ಬದಲಾವಣೆ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಾಂಧಿ ಹೆಸರಿನ ಬದಲಿಗೆ ‘ರಾಮ್ ಜಿ’ ಹೆಸರು ಸೇರಿಸಲಾಗಿದೆ  ಎಂದು ಸಮರ್ಥಿಸಿಕೊಂಡರು. ಅನುದಾನ ಹಂಚಿಕೆ: ಈ ಹಿಂದೆ ಕೇಂದ್ರ ಸರ್ಕಾರವೇ ಈ ಯೋಜನೆಗೆ ಪೂರ್ಣ ಅನುದಾನ ನೀಡುತ್ತಿತ್ತು. ಆದರೆ ಹೊಸ ಬದಲಾವಣೆಯಂತೆ ಕೇಂದ್ರ ಶೇ.60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ಹಣವನ್ನು ಭರಿಸಬೇಕಿದೆ. ಇದು ರಾಜ್ಯದ ಹೊಣೆಗಾರಿಕೆಯನ್ನು ಹೆಚ್ಚಿಸಲಿದೆ ಎಂದು ಅವರು ತಿಳಿಸಿದರು. ಹೆಚ್ಚುವರಿ ಉದ್ಯೋಗ ದಿನಗಳು: ಉದ್ಯೋಗ ಖಾತರಿಯ ದಿನಗಳನ್ನು 100ರಿಂದ…

Read More

ತಿಪಟೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಪಟೂರು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರದ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲೂಕುಗಳ ‘ವಿಪತ್ತು ನಿರ್ವಹಣಾ ಪ್ರಾಧಿಕಾರ’ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಿಗಳ ಹಾವಳಿ ಮತ್ತು ಸ್ವಚ್ಛತೆ: ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಅಂತಾ ಸೂಚನೆ ನೀಡಿದರು. ದಂಡ ಪ್ರಯೋಗ: ರಸ್ತೆ ಬದಿಗಳಲ್ಲಿ ಕಸ ಹಾಕುವವರಿಗೆ ಮೊದಲು ತಿಳಿವಳಿಕೆ ನೀಡಬೇಕು. ನಿಯಮ ಉಲ್ಲಂಘನೆ ಮುಂದುವರಿಸಿದರೆ ದಂಡ ವಿಧಿಸಿ, ನಂತರವೂ ಕೇಳದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಗುಣಮಟ್ಟ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. “ನಾನು ಯಾವತ್ತೂ ಅಧಿಕಾರವನ್ನು ಹುಡುಕಿಕೊಂಡು ಹೋದವನಲ್ಲ. ಸಚಿವನಾಗಿದ್ದಾಗಲೇ ನನಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿ ಪದವಿ ಬಿಡಲು ಸಿದ್ಧ ಎಂದು ಹೇಳಿದ್ದೆ. ಈಗ ನನ್ನ ಬಳಿ ಬಿಡಲು ಯಾವುದೇ ಅಧಿಕಾರವಿಲ್ಲ. ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುತ್ತೇನೆ” ಎಂದು ತಿಳಿಸಿದರು. ಈಗಾಗಲೇ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿರುವುದಾಗಿ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆಯಾದಲ್ಲಿ ಸಚಿವರಾಗುವ ಆಸೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಚಿವನಾದರೂ ಅಥವಾ ಇಲ್ಲದಿದ್ದರೂ ನಾನು ಸದಾ ಜನರ ಜೊತೆಗೇ ಇರುತ್ತೇನೆ. ನನ್ನ ಕಾರ್ಯವೈಖರಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದರು.…

Read More

ಕೊರಟಗೆರೆ: ತಾಲ್ಲೂಕಿನ ಬಜ್ಜನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪೋಷಕರು ಮತ್ತು ಎಸ್ ಡಿ ಎಂ ಸಿ ಸದಸ್ಯರ ಸಹಕಾರದಿಂದ ಶಾಲಾ ಎಲ್ಲಾ  ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ ಮಾಡಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ತಿಮ್ಮರಾಜು ಮಾತನಾಡಿ, ಸರ್ಕಾರದಿಂದ  ಮಕ್ಕಳಿಗೆ ಶಿಕ್ಷಣದ ಎಲ್ಲಾ ಸವಲತ್ತುಗಳು ಲಭ್ಯವಾಗುತ್ತಿದ್ದು,  ಗ್ರಾಮೀಣ ಮಟ್ಟದ ಮಕ್ಕಳು ಓದುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಚೆನ್ನಾಗಿ ಓದಿ ಉನ್ನತ ಮಟ್ಟದ ಅಧಿಕಾರ ಪಡೆದುಕೊಂಡು ಶಾಲೆಗೆ , ಗ್ರಾಮಕ್ಕೆ ತಂದೆ ತಾಯಿಗಳಿಗೆ ಗೌರವ ತರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಸನ್ನ ಕುಮಾರ್, ಸಹ ಶಿಕ್ಷಕರಾದ ವೇಣು ಗೋಪಾಲ್, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ವೇತ, ಸದಸ್ಯರಾದ ಶ್ರೀನಿವಾಸ್ , ಚಂದ್ರಶೇಖರ್, ಕೆ.ತಿಮ್ಮರಾಜು ಹಾಗೂ ಪೋಷಕರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ಸಂಭ್ರಮದಿಂದ ಮರಳುತ್ತಿದ್ದ ಭಕ್ತರ ತಂಡವೊಂದು ಭೀಕರ ರಸ್ತೆ ಅಪಘಾತಕ್ಕೆ ಈಡಾಗಿದ್ದು, ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಕೋರಾ ಸಮೀಪ ನಡೆದಿದೆ. ಅಪಘಾತ ನಡೆದದ್ದು ಹೇಗೆ? ಶಬರಿಮಲೆಯಿಂದ ಕೊಪ್ಪಳ ಜಿಲ್ಲೆಯ ಯಲಬುರ್ಗಾಕ್ಕೆ ಹಿಂತಿರುಗುತ್ತಿದ್ದ ಭಕ್ತರಿದ್ದ ಕ್ರೂಸರ್ ವಾಹನವು, ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣ ಅಪ್ಪಚ್ಚಿಯಾಗಿದೆ. ಭೀಕರ ಅಪಘಾತದಲ್ಲಿ  ಸಾಕ್ಷಿ (7 ವರ್ಷ),  ವೆಂಕಟೇಶಪ್ಪ (30 ವರ್ಷ), ಮಾರತಪ್ಪ (35 ವರ್ಷ), ಗವಿಸಿದ್ದಪ್ಪ (40 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ಇತರ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಯ ಕಣ್ಣೀರು: ಅಪಘಾತದಲ್ಲಿ ಗಾಯಗೊಂಡಿರುವ ಮೃತ ಬಾಲಕಿ ಸಾಕ್ಷಿಯ ತಂದೆ ಉಲಗಪ್ಪ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ತುಮಕೂರು: ತುಮಕೂರು ನಗರದಲ್ಲಿ 2026 ಜನವರಿ 16 ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ 2025–26 ನಡೆಯಲಿದೆ. ತುಮಕೂರು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟ ತುಮಕೂರು ಇತಿಹಾಸದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಯುವ ಜನರಿಗೆ ಇದು ಸ್ಪೂರ್ತಿಯಾಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅಧಿಕೃತ ಪತ್ರ ಬರೆದಿರುವ ಅವರು, ಈ ಕ್ರೀಡಾಕೂಟದಲ್ಲಿ ವಿವಿಧ 27 ಕ್ರೀಡೆಗಳು ನಡೆಯುತ್ತಿದ್ದು, ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ಸುಮಾರು 9,000 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಒಲಿಂಪಿಕ್ ಸಂಸ್ಥೆ ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ಕರ್ನಾಟಕ ಕ್ರೀಡಾಕೂಟವನ್ನು ಆಯೋಜಿಸುತ್ತಾ ಬಂದಿದ್ದು, ಪ್ರಸಕ್ತ ಸಾಲಿನ ಕ್ರೀಡಾಕೂಟದ ಆತಿಥ್ಯ ವಹಿಸುವ ಅವಕಾಶವನ್ನು ತುಮಕೂರು ಜಿಲ್ಲೆಗೆ ನೀಡಿರುವುದು ನಮ್ಮೆಲ್ಲ ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ ಹಾಗೂ ನಾಗರಿಕರಿಗೆ ಹೆಮ್ಮೆಯ ವಿಷಯವಾಗಿದೆ…

Read More

ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸತ್ಯ ಸಿ.ಎ., ಅಲಿಯಾಸ್ ಮೊಟ್ಟೆ (28) ಎಂಬಾತನಿಗೆ ಪೋಕ್ಸೋ 1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ. ಅಪರಾಧಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ನಿವಾಸಿ. ಬಾಲಕಿ ರೈಲಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದು, ಇದೇ ರೈಲಿನಲ್ಲಿ ಅಪರಾಧಿ ಸತ್ಯ ಕೂಡಾ ಪ್ರಯಾಣಿಸುತ್ತಿದ್ದ. ರೈಲಿನಲ್ಲಿಯೇ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ಮೇಲೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮೈಸೂರು ವೃತ್ತದ ರೈಲ್ವೆ ಇನ್ಸ್‌ಪೆಕ್ಟರ್ ಎಲ್. ಶ್ರೀನಿವಾಸ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೋಕ್ಸೋ 1 ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಎಸ್.ಹೆಳವರ ಅವರು ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ 53 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಸರ್ಕಾರದ…

Read More