Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಉಡುಪಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12 ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿ ಕಾರ್ಯಕರ್ತರು ಸಲ್ಲಿಸಿದ ವರದಿ ಬಳಿಕ ಅಂತಿಮವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.ಕ್ಷೇತ್ರಕ್ಕೆ 7-8 ಬಾರಿ ಭೇಟಿ ನೀಡಿದ್ದೇನೆ. ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ನಾನು ಬಿಜೆಪಿ ಸಿದ್ಧಾಂತ ವಿರೋಧಿ ಅಲ್ಲ. ಬಿಜೆಪಿಯ ಕೆಲ ವ್ಯಕ್ತಿಗಳು, ಅವರ ತತ್ವ, ಸಿದ್ಧಾಂತದ ವಿರುದ್ಧ ಹೋರಾಟ. ಹಿಂದುತ್ವದ ಪ್ರಮಾಣಿಕತೆ ಇದ್ದರೆ ಬಿಜೆಪಿಯಿಂದ ನನಗೆ ಬೆಂಬಲಿಸಲಿ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಹೋರಾತ್ರಿ ಚಳಿಯಲ್ಲಿ ರಸ್ತೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಸಿಐಟಿಯು ಸಂಘಟನೆಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ಮುಂದುವರೆದಿದೆ. ಬೇಡಿಕೆ ಈಡೇರಿಸುವವರೆಗೂ ಫ್ರೀಡಂ ಪಾರ್ಕ್ ನಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯದಲ್ಲಿ ಸ್ಪರ್ಧಿಸುತ್ತಾರೋ ಬೆಂಗಳೂರಿನಲ್ಲಿ ಸ್ಪರ್ಧಿಸುತ್ತಾರೂ ಎಂದು ತಮ್ಮನ್ನ ಟೀಕಿಸಿದ್ದ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ಓರ್ವ ಅಪ್ರಬುದ್ಧ ರಾಜಕಾರಣಿ. ಮೊನ್ನೆಯಷ್ಟೆ ಮಂಡ್ಯದಲ್ಲಿ ಚುನಾವಣೆ ನಿಲ್ಲುತ್ತೇನೆ ಎಂದಿದ್ದರು. ಈಗ ರಾಮನಗರದಲ್ಲಿ ನಿಲ್ಲುತ್ತಿರುವವರು ಯಾರು…? ಎಂದು ಪ್ರಶ್ನಿಸಿದರು. ಜೆಡಿಎಸ್ ನಾಯಕರು ಯಾವಾಗಲೂ ಮಾತಿನ ಮೇಲೆ ನಿಲ್ಲುವವರಲ್ಲ. ಜೆಡಿಎಸ್ ನವರು ಪದೇ ಪದೇ ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ . ಬೆಂಗಳೂರಿನಲ್ಲಿ ಸ್ಪರ್ಧಿಸಿ ಅಂತಾ ಆಫರ್ ನೀಡಿದ್ದಾಗಲೇ ತಿರಸ್ಕರಿಸಿದ್ದೆ. ಯಾರ ಬೆಂಬಲವೂ ಇಲ್ಲದಿದ್ದಾಗ ಮಂಡ್ಯದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದೆ ಎಂದು ಸುಮಲತಾ ಅಂಬರೀಶ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆ ಮುಚ್ಚದಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದಾರೆ. ಈ ಕುರಿತು ಮೋದಿಗೆ ಪತ್ರ ಬರದಿರುವ ಹೆಚ್.ಡಿ ದೇವೇಗೌಡರು, ಭಧ್ರಾವತಿಯ ವಿಐಎಸ್ ಎಲ್ ಕಾರ್ಖಾನೆ ಮುಚ್ಚಬಾರದು. ಕಾರ್ಖಾನೆಯನ್ನ ಮರು ಆರಂಭ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ 20 ಸಾವಿರ ಕುಟುಂಬ ಅವಲಂಭಿತರಾಗಿದ್ದು, ರಕ್ಷಣಾ ವಲಯ ನ್ಯೂಕ್ಲಿಯರ್, ರೈಲ್ವೆ ಮುಂತಾದ ವಿಭಾಗಕ್ಕೆ ಕಾರ್ಖಾನೆಯಿಂದ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ವಿಐಎಸ್ ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋಲಾರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಕೋಲಾರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರೈತರ ಸಾಲ ಮನ್ನಾ ಮಾಡಿಲ್ಲ, ಅಂಬಾನಿ, ಅದಾನಿಯಂತಹ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಿದರು. ಆದರೆ ರೈತರ ಸಾಲ ಮನ್ನಾ ಮಾಡಿಲ್ಲ. ನಾವು ನುಡಿದಂತೆ ನಡೆಯುತ್ತೇವೆ, ಹೈನುಗಾರಿಕೆಗೆ, ರೈತರಿಗೆ ಹೆಚ್ಚು ಸಹಾಯ ಧನ ಕೊಡುತ್ತೇವೆ ಎಂದರು.ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಸಿದ್ದರಾಮಯ್ಯ ಕೋಲಾರದಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಲ್ಲಿ ಸಿದ್ದರಾಮಯ್ಯ ನಿಂತರೆ ಸೋಲು ಎಂಬುದು ನಿಶ್ಚಿತ, ಕೋಲಾರದಲ್ಲಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ನಿಲ್ಲಲ್ಲ, ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ, ಎರಡ್ಮೂರು ದಿನಗಳಲ್ಲಿ ಪ್ರವಾಸ ಮಾಡುತ್ತೇನೆ,ಆಗ ಜನರ ಬೆಂಬಲ ಎಷ್ಟಿದೆ ಎಂದು ಗೊತ್ತಾಗುತ್ತದೆ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಲಂಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. 2006-2007 ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿಂದೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: 2023 ನೇ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ” ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ.26 ಹಾಗೂ 27 ರಂದು ಎರಡು ದಿನಗಳ ಕಾಲ ಸಿರಿಧಾನ್ಯ ಮತ್ತು ಸಾವಯುವ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.23) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ಆಶ್ರಯದಲ್ಲಿ ಬೆಳಗಾವಿ ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ಜ.26 ಹಾಗೂ 27 ರಂದು ಸಿರಿಧಾನ್ಯ ಮೇಳ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜ.26 ರಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ ಹಾಗೂ ಸಾವಯವ ಮೇಳವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ್ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು. ಸಿರಿಧಾನ್ಯ ಕುರಿತು ಜಾಗೃತಿ: ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಸೇವನೆಯಿಂದಾಗಿ ಜನರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸಿರಿಧಾನ್ಯಗಳಾದ ನವಣೆ,…
ಮಧುಗಿರಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಗಳಿಸಬಹುದು. ಪದವಿಯ ಜೊತೆಗೆ ಹಲವಾರು ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಜೀವನದಲ್ಲಿ ಬರುವ ಹಲವಾರು ಅಡೆತಡೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಸದೃಢ ಜೀವನ ಕಟ್ಟಿಕೊಳ್ಳಬೇಕು. ಜೀವನದಲ್ಲಿ ಅವಕಾಶವಂಚಿತರಾಗಿ ಹತಾಶರಾಗುವ ಬದಲು, ಸಾಧನೆಗೆ ಹಾತೊರೆಯಬೇಕು. ಭವಿಷ್ಯದ ಬಗ್ಗೆ ಆಶಾವಾದಿಯಾಗಿರಬೇಕೆಂದು ಬೆಂಗಳೂರಿನ ಪ್ರತಿಷ್ಟಿತ ಸರ್ಕಾರಿ ಆರ್.ಸಿ.ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಜಯಲಕ್ಷ್ಮಮ್ಮ ಕರೆನೀಡಿದರು. ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯೆಂಟೇಶನ್ ಮತ್ತು ವಿಶೇಷ ಉಪನ್ಯಾಸ ಮತ್ತು ಸ್ವಾಗತ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದ ಅವರು, ಆಳವಾದ ಅಧ್ಯಯನ, ಸತತ ಪರಿಶ್ರಮದಿಂದ ಯಶಸ್ಸಿನ ಮಂತ್ರ ಅಡಗಿದೆ. ಪ್ರಸಕ್ತ ದಿನಗಳಲ್ಲಿ ಯುಜಿಸಿ, ಐ.ಸಿ.ಎಸ್.ಎಸ್.ಆರ್ ಮತ್ತು ಸರ್ಕಾರಿ ಮತ್ತು ಖಾಸಗೀ ಸಂಶೋಧನಾ ಕೇಂದ್ರಗಳು ಸಂಶೋಧನೆಗೆ ಒತ್ತು ನೀಡಿದ್ದು, ಸ್ನಾತಕೋತ್ತರ ಪದವಿ ಅಧ್ಯಯನ ಜೊತೆಗೆ ಕಿರು ಸಂಶೋಧನೆ ಕೈಗೊಳ್ಳಬೇಕು. ಪದವಿ ಜೊತೆಗೆ ಡ್ಯುಯಲ್ ಡಿಗ್ರಿ ಮಾಡುವ ಅವಕಾಶವಿದೆ. ಸ್ವಯಂ,…
ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಮಾದಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಬಿ ಜೆ ಪಿ ಪಕ್ಷದ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿತ್ತು . ಈ ಅಭಿಯಾನದಲ್ಲಿ ಬಿಜೆಪಿ ಪಕ್ಷಕ್ಕೆ ನೋಂದಣಿಯನ್ನು ಮಾಡಿಕೊಳ್ಳಲಾಯಿತು ಮತ್ತು ನೋಂದಣಿಯಾದ ಸದಸ್ಯರುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನ ಮುದ್ರಿತ ಕರಪತ್ರಗಳನ್ನು ಹಂಚಲಾಯಿತು ಹಾಗೂ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಮುದ್ರಿತ ಪ್ರತಿಗಳನ್ನು ನೀಡಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಎಂ.ಡಿ.ಲಕ್ಷ್ಮೀನಾರಾಯಣ್, ತುರುವೇಕೆರೆ ಮಂಡಲದ ಅಧ್ಯಕ್ಷರಾದ ಶ್ರೀ ಮೃತ್ಯುಂಜಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯಶಸ್, ಮಾದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್, ಹಾಗೂ ಎಲ್ಲಾ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು. ವರದಿ: ಸುರೇಶ್ ಬಾಬು ಎಂ, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1