Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ತುರುವೇಕೆರೆ: ಪಟ್ಟಣದ ಬಾಣಸಂದ್ರ ವೃತ್ತದಲ್ಲಿ ಶಾಸಕ ಮಸಾಲ ಜಯರಾಮ್ ರವರು ಎಂಎಂಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ ಇಂದು ಪಟ್ಟಣಕ್ಕೆ ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದಲೂ ನೂರಾರು ಕಾರ್ಯಕರ್ತರು ಹಾರ ತುರಾಯಿಗಳನ್ನು ಹಿಡಿದು ತಮ್ಮ ನೆಚ್ಚಿನ ನಾಯಕನ ಬರುವಿಕೆಯನ್ನು ಕಾಯುತ್ತಾ ಜಮಾವಣೆಗೊಂಡಿದ್ದರು. ಪಟ್ಟಣಕ್ಕೆ ಸರ್ಕಾರಿ ವಾಹನದಲ್ಲಿ ಆಗಮಿಸಿದ ಶಾಸಕರನ್ನು ತಾವು ತಂದಿದ್ದ ಹಾರಗಳನ್ನು ಹಾಕುವ ಮೂಲಕ ತಮ್ಮ ತಮ್ಮ ನೆಚ್ಚಿನ ನಾಯಕರನ್ನು ಸ್ವಾಗತಿಸಿ. ಜೈಕಾರ ಕೂಗಿದರು ಮತ್ತು ತೆರೆದ ವಾಹನದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಬಿಜೆಪಿ ಬಾವುಟವನ್ನು ಹಾರಾಟ ಮಾಡಿ, ಪಟಾಕಿ ಸಿಡಿಸಿ ರಸ್ತೆ ಉದ್ದಕ್ಕೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಅದ್ದೂರಿ ಭವ್ಯ ಸ್ವಾಗತವನ್ನು ಕೋರಿದರು. ಈ ಸಂದರ್ಭದಲ್ಲಿ ಕೊಂಡಜ್ಜಿ ವಿಶ್ವನಾಥ್, ವಿ ಬಿ ಸುರೇಶ್ ,ನಾಗಲಾಪುರ ಮಂಜುನಾಥ್, ಇನ್ನು ಹಲವಾರು ಮುಖಂಡರುಗಳು ಹಾಗೂ ಪಕ್ಷದ ಬೆಂಬಲಿಗರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಕೊಡಿ ನಾಗಸಂದ್ರ ಟಿ.ಬಿ.ಕ್ರಾಸ್ ನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಕಲಿಕಾ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ನೂರಾರು ವಿದ್ಯಾರ್ಥಿಗಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಪಥಸಂಚಲನದೊಂದಿಗೆ ಸಂಚರಿಸಿ ಪುನಃ ಶಾಲಾ ಆವರಣಕ್ಕೆ ಆಗಮಿಸಿ ಶಾಲಾ ಆವರಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.. ಇನ್ನು ಈ ಕಾರ್ಯಕ್ರಮವನ್ನು ಸೊರವನಹಳ್ಳಿ ಕ್ಲಸ್ಟರ್ ಸಿ.ಆರ್.ಪಿ .ಕಂಬಯ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು ಇವರ ಜೊತೆಗೆ ಸುರೇಶ್ ಹಾಗೂ ವಿದ್ಯಾರ್ಥಿಗಳು ಜೊತೆಗೂಡಿದರು ಈ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಹನ್ನೊಂದು ಶಾಲೆಗಳು ಅದರಲ್ಲಿ ಎಂಟು ಕಿರಿಯ ಪ್ರಾಥಮಿಕ ಶಾಲೆ ಎರಡು ಹಿರಿಯ ಪ್ರಾಥಮಿಕ ಶಾಲೆ ಒಂದು ಉರ್ದು ಮಾಧ್ಯಮ ಶಾಲೆ ಭಾಗವಹಿಸಿದ್ದರು ನೂರಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿ ಆರ್ ಪಿ ಕಂಬಯ್ಯ, ಕಲಿಕಾ ಹಬ್ಬವನ್ನು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ…
ಪಾವಗಡ: ಕಳೆದ 11 ದಿನಗಳಿಂದ ಪಾವಗಡ ವ್ಯಾಪ್ತಿಯ ವಿವಿಧ ಕಡೆ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಶಾಲಾ ಕಾಲೇಜು, ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪಾವಗಡ ಸಿ.ಐ.ಅಜಯ್ ಸಾರಥಿ ತಿಳಿಸಿದರು. ಪಾವಗಡ ಪೊಲೀಸ್ ಇಲಾಖೆ ವತಿಯಿಂದ ಇಂದು ಪಟ್ಟಣದ ಶನಿಮಹಾತ್ಮಾ ವೃತ್ತ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ರಸ್ತೆಯ ನಿಯಮಗಳನ್ನು ಎಲ್ಲರೂ ಪಾಲಿಸುವ ಮೂಲಕ ಅಮೂಲ್ಯ ಜೀವ ಉಳಿಸಿಕೊಳ್ಳುವಂತೆ ಅವರು ಇದೇ ವೇಳೆ ಕರೆ ನೀಡಿದರು. ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ಒಂದೇ ಬೈಕಿನಲ್ಲಿ ಮೂವರ ಪ್ರಯಾಣ ಬೇಡ ಎಂದು ಜಾಗೃತಿ ಮೂಡಿಸಿದರಲ್ಲದೇ, ಕಡ್ಡಾಯವಾಗಿ ಡಿ.ಎಲ್., ಹೊಂದಿರುವಂತೆ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗುರುನಾಥ್,…
ಪಾವಗಡ : ಸಂವಿಧಾನ ನೀಡಿರುವ ಹಲವಾರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ಹೋಬಳಿಯ ಚಿನ್ನಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ‘ಜೈ ಭೀಮೋಸ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ನಮ್ಮ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ, ಸಂವಿಧಾನವನ್ನು ಅರ್ಥ ಮಾಡಿಕೊಳ್ಳಲು ಮತ್ತು ಒಳ್ಳೆಯ ಸಮಾಜ ಕಟ್ಟಲು ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ಎಂದು ಕರೆ ನೀಡಿದರು. ಪಾರದರ್ಶಕವಾದ ಆಡಳಿತ ನಡೆಸುವುದರಿಂದ ಭ್ರಷ್ಟಾಚಾರ ರಹಿತವಾದ ಸರ್ಕಾರವನ್ನು ನಡೆಸಬಹುದು. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಮೊದಲನೇ ಬಾರಿಗೆ ಗ್ರಾಮ ಪಂಚಾಯತಿ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದೆ. ಇಲ್ಲಿವರೆಗೂ ಸಂವಿಧಾನ ನಮಗೆ ನೀಡಿರುವ ಅನೇಕ ಸೌಲಭ್ಯಗಳನ್ನು ಜನರ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಸಮಾಜ ಸೇವಕಿಯಾದ…
ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ಬಳ್ಳೆ ಹಾಡಿ ನಿವಾಸಿ ಹದಿನೆಂಟು ವರ್ಷದ ಮಂಜು ಬಿನ್ ಬೆಟ್ಚದ ಹುಲಿ ಅಲಿಯಾಸ್ ಬಿ.ಕಾಳ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಕಾಡಿನ ಒಳಭಾಗದಲ್ಲಿ ಹುಲಿ ದಾಳಿ ನಡೆಸಿದ್ದು, ಹುಲಿಯ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಿವೈಎಸ್ ಪಿ ಮಹೇಶ್, ಉಪನೀರಿಕ್ಷಕ ತಮ್ಮೇಗೌಡ, ತಂಗರಾಜು, ಕಿರಣ್ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ಬಳ್ಳೆ ಗ್ರಾಮದಲ್ಲಿ ಮೃತ ವ್ಯಕ್ತಿಯ ಪೋಷಕರು ಹಾಗೂ ಹಾಡಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಅಡಚಣೆ ಉಂಟಾಗಿತ್ತು. ಪ್ರತಿಭಟನೆ ನಿರತರನ್ನು ಮನವೊಲಿಸಲು ಡಿವೈಎಸ್ ಪಿ ತೆರಳಿದ್ದಾರೆ. ಇನ್ನೂ ಪ್ರಕರಣ ದಾಖಲಾಗದ ಹಿನ್ನಲೆ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ದಾಳಿ ಮಾಡಿದ ಹುಲಿಯು ನಾಲ್ಕು ಮರಿಗಳ ತಾಯಿ ಬ್ಯಾಕ್ ವಾಟರ್…
ಬೆಂಗಳೂರು: ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಾರ್ಯಕ್ರಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್ ಅಶೋಕ್, ಗಿರಿಜಮ್ಮ, ಮುನಿಯಪ್ಪ ದಂಪತಿ ಮನೆಯಲ್ಲಿ ಉಪಹಾರ ಸೇವಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತ ಕುಟುಂಬಗಳು ತಮ್ಮ ಆಸ್ತಿ ಭಾಗ ಮಾಡಿಕೊಳ್ಳುವುದು ಸವಾಲಿನ ಕೆಲಸವಾಗಿತ್ತು. ಪೌತಿಖಾತೆ ಆಂದೋಲನದ ಮೂಲಕ ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳು ಬರುತ್ತಿವೆ.ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳನ್ನು ತಲುಪಿಸುವ ಮಹತ್ವದ ಸುಧಾರಣೆ ಕ್ರಮವನ್ನು ರಾಜ್ಯ ಸರ್ಕಾರ ತಂದಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬಿಜೆಪಿ ಪ್ರತಿ ಮತದಾರರಿಗೆ 6000 ರೂ ಹಣ ನೀಡಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ಧಾಳಿ ನಡೆಸುವ ಭರದಲ್ಲಿ ನಾನು ನಿಮಗೆ 6 ಸಾವಿರ ರೂಪಾಯಿ ನೀಡುತ್ತೇನೆ ಎಂದು ಹೇಳಿದ್ದರು. ಇದುವರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾವಿರಾರು ರೂಪಾಯಿಯ ಗಿಫ್ಟ್ ನೀಡಿದ್ದಾರೆ, ಎಲ್ಲ ಸೇರಿ 3000 ಆಗಬಹುದು, ನಾನು ಪ್ರತಿ ಮತದಾರರಿಗೆ 6 ಸಾವಿರ ರೂ ನೀಡುತ್ತೇನೆ. ಒಂದು ವೇಳೆ ಕೊಡದಿದ್ದರೆ ನನಗೆ ಓಟು ಹಾಕಬೇಡಿ ಎಂದು ಹೇಳಿದರು. ಈ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಬಿಜೆಪಿ ರಮೇಶ್ ಜಾರಕಿಹೊಳಿಯಿಂದ ಅಂತರ ಕಾಯಿದುಕೊಂಡಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆಲ್ಲಾ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ, 2023 ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬೆಂಗಳೂರಿನ 300 ಸ್ಥಳಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಇಂದು 51 ಮೆಟ್ರೋ ನಿಲ್ದಾಣಗಳು, 26 ಫ್ಲೈಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಘೋಷವಾಕ್ಯದಡಿ ಮೂರು ತಾಸು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಖಳನಟ ಲಕ್ಷ್ಮಣ್ (74) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ನಟ ಲಕ್ಷ್ಮಣ್ ಹೃದಯಾಘಾತ ಸಂಭವಿಸಿದ್ದರಿಂದ ಅವರು ಮೃತಪಟ್ಟಿದ್ದಾರೆ ಅವರಿಗೆ 74 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಯಜಮಾನ, ಸೂರ್ಯವಂಶ,ಒಲವಿನ ಉಡುಗೊರೆ, ದಾದಾ, ಸಾಂಗ್ಲಿಯಾನ ಸೇರಿಂತೆ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತದ 74ನೇ ಗಣರಾಜ್ಯೋತ್ಸವ ಆಚರಣೆ ಪ್ರಗತಿಯಲ್ಲಿದೆ. ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ ಕೋಷ್ಟಕಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಸಾಮಾನ್ಯವಾಗಿ ಪರೇಡ್ ಮೈದಾನದ ಮೊದಲ ಸಾಲು ವಿವಿಐಪಿಗಳಿಗೆ ಮೀಸಲಾಗಿದೆ. ಆದರೆ ಈ ಬಾರಿ ರಿಕ್ಷಾ ಚಾಲಕರು, ಡ್ಯೂಟಿ ಪಾತ್ ಕಾರ್ಮಿಕರು ಮತ್ತು ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾರ್ಮಿಕರು ಪರೇಡ್ ವೀಕ್ಷಿಸಲು ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವ ಅನುಕೂಲವಿದೆ. ಈ ಬಾರಿ ಪರೇಡ್ ವೀಕ್ಷಿಸಲು ಆಸನಗಳ ಸಂಖ್ಯೆಯೂ ಕಡಿಮೆಯಾಗಿದೆ. 32000 ಟಿಕೆಟ್‌ಗಳನ್ನು ಮಾರಾಟ ಮಾಡಲು ಸರ್ಕಾರ ಉದ್ದೇಶಿಸಿದೆ. ಟಿಕೆಟ್ ದರ 20 ರಿಂದ 500 ರೂ ವರೆಗೆ ಟಿಕೆಟ್ ದರಗಳಿವೆ. ಗಣರಾಜ್ಯೋತ್ಸವದ ಪರೇಡ್ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ? ನೋಂದಣಿ ಮೊದಲು ಟಿಕೆಟ್ ಕಾಯ್ದಿರಿಸಲು ನಿಮ್ಮ ಮೊಬೈಲ್ ಸಂಖ್ಯೆಗೆ ಸಂಬಂಧಿಸಿದ ಖಾತೆಗೆ ನೀವು ಸೈನ್ ಇನ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, www.aamantran.mod.gov.in ನಲ್ಲಿ ನೋಂದಾಯಿಸಿ. ನಂತರ ಹೆಸರು, ಪೋಷಕರು/ಸಂಗಾತಿಯ ಹೆಸರು, ಹುಟ್ಟಿದ ದಿನಾಂಕ, ಫೋನ್ ಸಂಖ್ಯೆ ಮತ್ತು ಸ್ಥಳದಂತಹ ವಿವರಗಳನ್ನು ನಮೂದಿಸಿ. ನಂತರ ಫಲಿತಾಂಶದ OTp ಅನ್ನು ನಮೂದಿಸಬೇಕಾಗುತ್ತದೆ.…