Author: admin

ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ವತಿಯಿಂದ ನಡೆದ ‘ಕನ್ನಡ ಸಂಭ್ರಮ ಹಬ್ಬ‘ ಕಾರ್ಯಕ್ರಮದಲ್ಲಿ ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರಿಗೆ ಮಾತೃ ಭೂಮಿ ಸೇವಾ ರತ್ನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸತತ ನಾಲ್ಕು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಕೆಲಸ ಮಾಡುತ್ತಿರುವ ಆಂಟೋನಿ ರಾಜು ಎ. ಅವರು ನಮ್ಮತುಮಕೂರು ಮಾಧ್ಯಮದಿಂದ ರಾಜ್ಯಾದ್ಯಂತ ಪರಿಚಯಿಸಲ್ಪಟ್ಟರು. ತಮ್ಮ ವೃತ್ತಿಯ ಜೊತೆಗೆ ಸಾಮಾಜಿಕ ಬದ್ಧತೆಗೆ ಇಂದು ಪ್ರಶಸ್ತಿ ಸಂದಿದೆ. ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ನಟರಾಜ್ ಜಿ.ಎಲ್. ಅವರ ವಿಶೇಷ ಮಾರ್ಗದರ್ಶನದಲ್ಲಿ ಜನಸ್ನೇಹಿ, ವಿಭಿನ್ನ ಸುದ್ದಿಗಳನ್ನು ನೀಡುವ ಮೂಲಕ ಮಾಧ್ಯಮರಂಗದಲ್ಲಿ ವಿಶಿಷ್ಠ ಸಾಧನೆ ಮಾಡಿದ ಆಂಟೋನಿ ರಾಜು ಎ. ಅವರ ಪ್ರತಿಭೆಯನ್ನು ಡಾ.ಜ್ಯೋತಿ ಶ್ರೀನಿವಾಸ್ ಗುರುತಿಸಿ, ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿರುವ ಆಂಟೋನಿ ರಾಜು ಎ. ಅವರು, ಉತ್ತಮ ಅವಕಾಶ ನೀಡಿದ ನಮ್ಮತುಮಕೂರು ಮಾಧ್ಯಮ ಹಾಗೂ ತಮ್ಮನ್ನು ಗುರುತಿಸಿದ ಮಾತೃಭೂಮಿ ಸೇವಾ ಟ್ರಸ್ಟ್…

Read More

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇಕ್ರಾ ಜೀವನಿ (19) ಬಂಧಿತ ಪಾಕಿಸ್ತಾನಿ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶ ಮೂಲದ ಮುಲಾಯಂ ಸಿಂಗ್ ಎಂಬಾತನನ್ನು ಮದುವೆಯಾಗಿ ನಗರದ ಸರ್ಜಾಪುರ ರಸ್ತೆಯ ಜನ್ನಸಂದ್ರದಲ್ಲಿ ವಾಸವಾಗಿದ್ದಳು. ಮುಲಾಯಂ ಸಿಂಗ್ ಎಚ್ಎಸ್ಆರ್ ಲೇಔಟ್ನ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ. ಈ ವೇಳೆ ಗೇಮಿಂಗ್ ಆ್ಯಪ್ LUDOನಲ್ಲಿ ಪಾಕಿಸ್ತಾನದ ಇಕ್ರಾ ಜೀವಾನಿ ಪರಿಚಯವಾಗಿದೆ. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಇಬ್ಬರು ಮದುವೆಯಾಗಲು ನಿರ್ಧರಿಸಿದರು. ಈ ಹಿನ್ನೆಲೆಯಲ್ಲಿ ಇಕ್ರಾ ಜೀವಾನಿಯನ್ನು ಭಾರತಕ್ಕೆ ಕರೆತಂದಿದ್ದ ಮುಲಾಯಂ ಸಿಂಗ್, ಆಕೆಯೊಂದಿಗೆ ಒಟ್ಟಿಗೆ ವಾಸವಿದ್ದ. ಇದೀಗ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಆರೋಪಿ ಇಕ್ರಾ, ರವ ಯಾದವ್ ಎನ್ನುವ ಹೆಸರಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಳು. ಮುಲಾಯಂ ಸಿಂಗ್ ಈಕೆಯನ್ನು ನೇಪಾಳದ ಮೂಲಕ ಬಿಹಾರಕ್ಕೆ ಕರೆಸಿಕೊಂಡು, ಅಲ್ಲಿಂದ ರಾಜ್ಯಕ್ಕೆ ಕರೆತಂದಿದ್ದ. ಇವರಿಂದ ಸರಿಯಾಗಿ ದಾಖಲೆ ಪಡೆಯದೇ ಗೋವಿಂದ ರೆಡ್ಡಿ ಎಂಬಾತ ಮನೆ ಬಾಡಿಗೆ ನೀಡಿದ್ದ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಕೇರಳ :  ಎರ್ನಾಕುಲಂನಲ್ಲಿ ನೊರೊ ವೈರಸ್ ಹರಡಿದೆ. ಎರ್ನಾಕುಲಂ ಕಾಕನಾಟೆ ಶಾಲೆಯ 19 ವಿದ್ಯಾರ್ಥಿಗಳಿಗೆ ನೊರೊ ವೈರಸ್ ಇರುವುದು ಪತ್ತೆಯಾಗಿದೆ. ಕೆಲವು ಮಕ್ಕಳ ಪೋಷಕರಿಗೂ ನೊರೊ ವೈರಸ್ ಇರುವುದು ಪತ್ತೆಯಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭಿಸಿದ್ದು, ಶಾಲೆಯ 1ನೇ ತರಗತಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ನೊರೊ ಎಂಬುದು ಹೊಟ್ಟೆ ಜ್ವರಕ್ಕೆ ಕಾರಣವಾಗುವ ವೈರಸ್‌ಗಳ ಗುಂಪಾಗಿದೆ. ವೈರಸ್ ತೀವ್ರವಾದ ವಾಂತಿ ಮತ್ತು ಅತಿಸಾರವನ್ನು ಸಹ ಉಂಟುಮಾಡುತ್ತದೆ. ನೊರೊವೈರಸ್ ಸಾಮಾನ್ಯವಾಗಿ ಆರೋಗ್ಯವಂತ ಜನರಲ್ಲಿ ಸೌಮ್ಯವಾಗಿದ್ದರೂ, ಇದು ಚಿಕ್ಕ ಮಕ್ಕಳು, ವೃದ್ಧರು ಮತ್ತು ಇತರ ಆಧಾರವಾಗಿರುವ ವೈದ್ಯಕೀಯ ಪರಿಸ್ಥಿತಿಗಳನ್ನು ಹೊಂದಿರುವ ಜನರಿಗೆ ಸೋಂಕು ತಗುಲಿದರೆ ಅದು ಗಂಭೀರವಾಗಿರಬಹುದು. ಈ ರೋಗವು ಕೊಳಚೆ ನೀರು, ಆಹಾರ ಮತ್ತು ಸೋಂಕಿತ ಜನರ ಸಂಪರ್ಕದಿಂದ ಹರಡುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಗಳೂರು : ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಡಿ.ಸಿ.ಎಂ. ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್,ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ಕೂಡ ನಮ್ಮ ಪ್ರಣಾಳಿಕೆಯಲ್ಲಿ ಇರಲಿದೆ ಎಂದರು. ಬಿಜೆಪಿ ಸರ್ಕಾರ ವಿದ್ಯಾರ್ಥಿ ವೇತನವನ್ನೂ ನಿಲ್ಲಿಸಿದೆ. ಪಿಡಬ್ಲ್ಯುಡಿ ಇಲಾಖೆಯ 6.5 ಸಾವಿರ ಕೋಟಿ ಹಣ ಬಿಡುಗಡೆ ಆಗಿಲ್ಲ . ಎಸ್ ಸಿ ಮತ್ತು ಎಸ್ ಟಿ ಮೀಸಲಿಟ್ಟ ಹಣವನ್ನ ಬೇರೆ ಕಡೆ ಖರ್ಚು ಮಾಡಿದ್ದಾರೆ. ಇದೆಲ್ಲವನ್ನೂ ತಿಳಿಸಲು ಪ್ರಜಾಧ್ವನಿ ಆಯೋಜನೆ ಮಾಡಿದ್ದೇವೆ. ನಾಳೆ ಉಡುಪಿ ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪರಮೇಶ್ವರ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೀಜಿಂಗ್:‌ ಮುಂದಿನ ಎರಡು ಅಥವಾ ಮೂರು ತಿಂಗಳು ಕೋವಿಡ್-‌19 ಸೋಂಕಿನ ಹಾವಳಿ ಏರುಗತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಶೇ. 80 ರಷ್ಟು ಜನತೆಗೆ ಸೋಂಕು ತಗುಲಿದೆ ಎಂದು ಚೀನಾ ತಿಳಿಸಿದೆ. ಚೀನಾದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯೂ ಇದೆ. ಆದರೆ 2ನೇ ಅಲೆ ಹರಡುವ ನಿರೀಕ್ಷೆ ಇಲ್ಲ ಎಂದು ಚೀನಾ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆಂಡ ಪ್ರಿವೆನ್ಷನ್‌ನ ಮುಖ್ಯ ವಿಜ್ಞಾನಿ ವೂ ಜುನಾವೊ ತಿಳಿಸಿದ್ದಾರೆ. ಜನವರಿ 12-13ರ ಅವಧಿಯಲ್ಲಿ ಚೀನಾದಲ್ಲಿ 12,658 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಳ್ಳಾರಿ : ನಗರದ ಜಿಲ್ಲಾ ಕ್ರೀಡಾಂಗಣದ ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ.ಪುನೀತ್ ರಾಜಕುಮಾರ್ ಅವರ ಪುತ್ಥಳಿಗೆ ರಾಜ್ ಕುಮಾರ್ ಕುಟುಂಬ ಮತ್ತು ಸಚಿವ ಬಿ.ಶ್ರೀರಾಮುಲು ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಗೂಳಿ ಪಳಗಿಸುವ ಕ್ರೀಡೆ ಜಲ್ಲಿಕಟ್ಟು ವೀಕ್ಷಿಸಲು ಬಂದಿದ್ದ 14 ವರ್ಷದ ಬಾಲಕ ಗೂಳಿಯೊಂದರ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಗೋಕುಲ್ (14) ಎಂದು ಗುರುತಿಸಲಾಗಿದ್ದು,, ಈತ ತಡಂಗಂ ಗ್ರಾಮದಲ್ಲಿ ನಡೆದ ಜಲ್ಲಿಕಟ್ಟು ವೀಕ್ಷಿಸಲು ತನ್ನ ಸಂಬಂಧಿಕರೊಂದಿಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಾಲಕನ ಹೊಟ್ಟೆಗೆ ಕೊಂಬಿನಿಂದ ತಿವಿದು ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ  ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಧರ್ಮಪುರಿ ಪೊಲೀಸರು ತನಿಖೆ ಆರಂಭಿಸಿದ್ದು, ಗೋಕುಲ್ ಹೇಗೆ ಗಾಯಗೊಂಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೊಸಕೋಟೆ : ಡಿ.ಕೆ.ಶಿವಕುಮಾರ್ ರನ್ನು ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸದ್ಯ ಎರಡು ಬಣಗಳಿದ್ದು, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಆಗಿದ್ದು, ಡಿ.ಕೆ. ಶಿವಕುಮಾರ್ ನನ್ನು ಸೋಲಿಸಲು 500 ಕೋಟಿ ರೂ. ಸುಪಾರಿ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿ. ಕಾಂಗ್ರೆಸ್ ಸೋಲಿಸಲು ಎಸ್. ಕಾಂಗ್ರೆಸ್ 500 ಕೋಟಿ ರೂ. ಸುಪಾರಿ ನೀಡಲಾಗಿದೆ. ಕಾಂಗ್ರೆಸ್ ನಲ್ಲಿ ಡಿ ಕಾಂಗ್ರೆಸ್ ವರ್ಸಸ್ ಎಸ್ ಕಾಂಗ್ರೆಸ್ ಆಗಿದೆ. ಇವರಿಬ್ಬರಿಂದ ಬಿಜೆಪಿಗೆ ಲಾಭವಾಗಲಿದೆ. ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆ: ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಫ್ ಪರೀಕ್ಷೆಯನ್ನು ಭಾನುವಾರ ತಾಲ್ಲೂಕಿನ ಪ್ರೌಢ ಶಾಲೆಯ ಮಕ್ಕಳು  ಬರೆದರು. ತಾಲ್ಲೂಕಿನ  17 ಸರ್ಕಾರಿ ಪ್ರೌಢ ಶಾಲೆ, ಮೂರು  ಸರ್ಕಾರ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠ ಶಾಲೆ, 26 ಅನುದಾನಿತ ಪ್ರೌಢ ಶಾಲೆಗಳ ಎಂಟನೇ ತರಗತಿಯ 728 ಮಕ್ಕಳು ಎನ್.ಎಂ.ಎಂ.ಎಸ್ ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 711 ಮಕ್ಕಳು ಹಾಜರಾಗಿ 17 ಮಕ್ಕಳು ಗೈರಾಗಿದ್ದಾರೆ. ಪಟ್ಟಣದ ಜಿಜೆಪಿ ಪ್ರೌಢ ಶಾಲೆ, ಜೆಪಿ ಆಂಗ್ಲ ಪ್ರೌಢ ಶಾಲೆ ಹಾಗೂ ಸರಸ್ವತಿಬಾಲಿಕಾ ಪ್ರೌಢ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು ಬೆಳಗ್ಗೆ 10:30ರಿಂದ ಮೊದಲ ಪತ್ರಿಕೆ ಜಿ.ಮ್ಯಾಟ್ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಎರಡನೇ ಪತ್ರಿಕೆ ಸ್ಯಾಟ್ ಅನ್ನು ಬರೆದಿದ್ದು, ಈ ಪರೀಕ್ಷೆಗಳ ಉಸ್ತುವಾರಿಯನ್ನು ಶಿಕ್ಷಣ ಸಂಯೋಜಕರಾದ ಶಿವಕುಮಾರ್ ವಹಿಸಿದ್ದರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ತಿಳಿಸಿದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ…

Read More

ನಂಜನಗೂಡು: ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತನ್ನು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧದಿಂದ ಯಾವುದೇ ಪ್ರಯೋಜನವಿಲ್ಲ. ದಲಿತ, ಹಿಂದುಳಿದ ವರ್ಗದವರನ್ನು ಮುಖ್ಯ ವಾಹಿನಿಗೆ ತರುವುದನ್ನು ಮಠಾಧೀಶರು ಮಾಡಬೇಕು. ಮತಾಂತರ ಆಗುವುದು ಕೊನೆಯಾಗಬೇಕು. ಆಸೆಗಳಿಗೆ ಒಳಗಾಗಬಾರದು. ಮಠದ ಶ್ರೀಗಳು ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವಂತೆ ಮಾಡಬೇಕೆಂದು ಮನವಿ ಮಾಡಿದರು. ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶ್ರೀಗಳ ಕೊಡುಗೆ ಅಪಾರವಾಗಿದೆ. ಕಳೆದ ಎಂಟು ವರ್ಷಗಳಲ್ಲಿ ವಿಶ್ರಾಂತಿ ಪಡೆಯದೆ ಪ್ರಧಾನಿ ನರೇಂದ್ರ ಮೋದಿಯವರು ಕೆಲಸ ಮಾಡಿದ್ದಾರೆ. ಅವರೇ ಮುಂದಿನ ಪ್ರಧಾನಿಯಾಗಬೇಕು. ಮುಖ್ಯಮಂತ್ರಿಯಾಗಿದ್ದಾಗ ನಾನು ಬಜೆಟ್ ನಲ್ಲಿ ಮಠಗಳಿಗೆ ಅನುದಾನ ನೀಡಿದ್ದೆ. ಸುತ್ತೂರು ಶ್ರೀಗಳು ರಾಜ್ಯದ ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿದ್ದಾರೆ. ಮೈಸೂರು ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದೆ ಎಂದರು. ಈ ಸಂದರ್ಭದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,…

Read More