Author: admin

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ—ಮಗು ಸಾವನ್ನಪ್ಪಿದ ಘಟನೆ ಇನ್ನೂ ಹಸಿಯಾಗಿರುವಾಗಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್ ನಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಾರಿನ ಮೇಲೆ ಮೆಟ್ರೋ ಬ್ಯಾರಿಕೇಡ್ ಬಿದ್ದಿದ್ದು, ಕಾರಿನಲ್ಲಿದ್ದವರು ಸ್ವಅಲ್ಪದರಲ್ಲೇ ಪಾರಾಗಿದ್ದಾರೆ. ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ಪ್ರಯಾಣಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಕಾರಿನ ಮೇಲೆಯೇ ಬ್ಯಾರಿಕೇಡ್ ಉರುಳಿ ಬಿದ್ದಿದೆ. ಬ್ಯಾರಿಕೇಡ್ ಬಿದ್ದ ಪರಿಣಾಮ ಕಾರು ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣವೇ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದಾರೆ. ಕಾರಿನ ಮಾಲಿಕರು ನೀಡುವ ದೂರನ್ನು ಆಧರಿಸಿ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಪಟ್ಟಣದ ಕೆಲವು ಬಡಾವಣೆಗಳಲ್ಲಿ ರಾತ್ರಿ ವೇಳೆ ಕರಡಿಗಳು ಓಡಾಡುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರಿಗೆ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಮಹತ್ವದ ಸೂಚನೆ ನೀಡಿದ್ದಾರೆ. ಪೆನುಗೊಂಡ ರಸ್ತೆಯ ಬಡಾವಣೆಗೆ ಹೊಂದಿಕೊಂಡು ಸಪೋಟ ಗಿಡಗಳಿದ್ದು ಹಣ್ಣು ತಿನ್ನಲು ಕರಡಿಗಳು ಬರುತ್ತಿವೆ. ಕರಡಿಗಳನ್ನು ಕಂಡರೆ ಸಾರ್ವಜನಿಕರು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕೆ ಕರಡಿಗೆ ಕಲ್ಲು ಹೊಡೆಯುವುದು ಕೋಲಿನಿಂದ ಅಟ್ಟಿಸಿಕೊಂಡು ಹೋಗುವುದು ಗಾಬರಿಗೊಳಿಸುವ ಕೆಲಸ ಮಾಡಬಾರದು ಎಂದು ಸತೀಶ್ ಚಂದ್ರ ಸಲಹೆ ನೀಡಿದ್ದಾರೆ. ಈಗಾಗಲೇ ಕರಡಿಗಳು ಓಡಾಡುತ್ತಿರುವ ಪ್ರದೇಶಗಳಲ್ಲಿ ಬೋನುಗಳನ್ನು ಇರಿಸಲಾಗಿದೆ. ಗಸ್ತು ನಡೆಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮೊಬೈಲ್ ಸಂಖ್ಯೆ 94829 79112, 99023 17536 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ ಜಿಲ್ಲೆಯ ಹೊಸಪೇಟೆಯಲ್ಲಿರುವ ವಿಶ್ವವಿಖ್ಯಾತ ಹಂಪಿಯ ಶ್ರೀ ಮಾತಂಗ ಮಹರ್ಷಿ ಆಶ್ರಮ ಇವರ ಆಶ್ರಯದಲ್ಲಿ ಫೆಬ್ರವರಿ 4 ಮತ್ತು 5ರಂದು ಸಂಗೀತ ಪಿತಾಮಹ ಶ್ರೀ ಮಾತಂಗ ಮಹರ್ಷಿಯವರ ಜಯಂತೋತ್ಸವವು ಮಾತಂಗ ಪರ್ವತದಲ್ಲಿ ನಡೆಯಲಿದೆ ಎಂದು ಮಾತಂಗ ಫೌಂಡೇಷನ್ ನ ಅಧ್ಯಕ್ಷ ಆರ್.ಲೋಕೇಶ್  ತಿಳಿಸಿದ್ದಾರೆ. ಶ್ರೀ ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಫೆಬ್ರವರಿ 4ರಂದು  ಸಂಜೆ 5:30ಕ್ಕೆ ಪೂಜಾ ಕಾರ್ಯಕ್ರಮ, ಸಂಜೆ 6:30ಕ್ಕೆ  ದೀಪೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು. ಫೆಬ್ರವರಿ 5ರಂದು ಬೆಳಗ್ಗೆ 6:30ಕ್ಕೆ ತುಂಗಾ ನದಿಯಲ್ಲಿ ಪವಿತ್ರ ಸ್ನಾನ, ತುಂಗಾ ನದಿಯ ತೀರದಿಂದ ಮಾತಂಗ ಪರ್ವತದ ಶ್ರೀ ಮಾತಂಗ ಮಹರ್ಷಿ ಆಶ್ರಮದವರೆಗೂ ಮೆರವಣಿಗೆ ನಡೆಯಲಿದೆ. ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಎಂದು ತಿಳಿಸಿದರು. ಅಂದು 8:30ಕ್ಕೆ ಧಾರ್ಮಿಕ ಸಭೆ, 9:30ರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, 10:30ರಿಂದ ಭೂಮಿ ತಾಯಿ ಬಳಗ ಇವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.  ಮಧ್ಯಾಹ್ನ 1ರಿಂದ ಪ್ರಸಿದ್ಧ…

Read More

ಬಾಲಕಿಯರ ಹಾಸ್ಟೆಲ್ ನಿಂದ ಮೊಬೈಲ್, ಲ್ಯಾಪ್ ಟಾಪ್ ಕದ್ದು ಓಡುವ ಭರದಲ್ಲಿ ಕಳ್ಳನೋರ್ವ ಬಾವಿಗೆ ಬಿದ್ದ ಘಟನೆ ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ನಡೆದಿದೆ. ತೆಲಂಗಾಣದ ಹನಮಕೊಂಡ ಜಿಲ್ಲೆಯ ಹಾಸನಪರ್ತಿ ಮಂಡಲದ ಅನಂತಸಾಗರದಎಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿದ್ದ ಕಳ್ಳ, ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳನ್ನು ಕದ್ದಿದ್ದಾನೆ. ಕದ್ದ ಬಳಿಕ ಹಾಸ್ಟೆಲ್ ನಿಂದ ಪರಾರಿಯಾಗುತ್ತಿರುವ ಗಡಿಬಿಡಿಯಲ್ಲಿ ಬಾವಿಯೊಳಗೆ ಬಿದ್ದಿದ್ದಾನೆ. ಬೆಳಗ್ಗಿನವರೆಗೂ ಕಳ್ಳ ಬಾವಿಯೊಳಗೆಯೇ ಸಿಲುಕಿದ್ದಾನೆ. ಬಳಿಕ ಸಹಾಯಕ್ಕಾಗಿ ಕೂಗಿಕೊಂಡಾಗ ಬಾವಿಯಲ್ಲಿ ಕಳ್ಳ ಇರುವುದು ಗೊತ್ತಾಗಿದೆ. ತಕ್ಷಣವೇ ಸ್ಥಳೀಯರು ಹಗ್ಗದ ಸಹಾಯದಿಂದ ಕಳ್ಳನನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಹಾಸ್ಟೆಲ್ ನಿಂದ ಮೊಬೈಲ್, ಲ್ಯಾಪ್ ಟಾಪ್ ಕದ್ದು ಓಡುವಾಗ ಬಾವಿಗೆ ಬಿದ್ದಿರುವುದಾಗಿ ಕಳ್ಳ ಇದೇ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಪ್ರಧಾನಿಯಾಗಲು ಸಮರ್ಥರಾಗಿದ್ದಾರೆ  ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿರುವ ಅವರು, “ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಯಾತ್ರೆಯ ಉದ್ದೇಶ ದ್ವೇಷ ಮತ್ತು ಭಯವನ್ನು ಹೋಗಲಾಡಿಸುವುದೇ ಹೊರತು. ವಿರೋಧ ಪಕ್ಷಗಳನ್ನು ತಮ್ಮ ಪಕ್ಷದ ಬ್ಯಾನರ್ ಅಡಿಯಲ್ಲಿ ಒಗ್ಗೂಡಿಸುವುದು ಅಲ್ಲಎಂದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಯಾವುದೇ ತೃತೀಯ ರಂಗ ಯಶಸ್ವಿಯಾಗುವುದಿಲ್ಲ  ಎಂದು ಇದೇ ವೇಳೆ ಹೇಳಿದ ಅವರು,  ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ರಾಹುಲ್ ಗಾಂಧಿ ತಮ್ಮ ನಾಯಕತ್ವದ ಗುಣಗಳನ್ನು ತೋರಿಸುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ತಿ.ನರಸೀಪುರ: ಮೈಸೂರಿನ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತನನ್ನು ಜಯಂತ್ ಎಂದು ಗುರುತಿಸಲಾಗಿದ್ದು, ಆತನ ಮೃತದೇಹ ಗ್ರಾಮದ ಹೊರವಲಯದಲ್ಲಿ 2 ಕಿ.ಮೀ ದೂರದಲ್ಲಿ ಗಿಡಗಂಟಿಗಳ ನಡುವೆ ಪತ್ತೆಯಾಗಿದೆ. ಕಳೆದ 48 ಗಂಟೆಗಳಲ್ಲಿ ಶಂಕಿತ ದಾಳಿಗೆ ಇದು ಎರಡನೇ ಬಲಿಯಾಗಿದೆ. ತಿ.ನರಸೀಪುರ ತಾಲೂಕಿನಲ್ಲಿ ನವೆಂಬರ್‌ ತಿಂಗಳಿನಿಂದ ಈವರೆಗೆ ಚಿರತೆ ದಾಳಿಗೆ ನಾಲ್ವರು ಸಾವನ್ನಪ್ಪಿದ್ದಾರೆ. ಬಾಲಕ ನಾಪತ್ತೆಯಾದ ಬಗ್ಗೆ  ಶನಿವಾರ ಸಂಜೆ ದೂರು ಸ್ವೀಕರಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರೂ, ರಾತ್ರಿಯೇ ಶೋಧ ಕಾರ್ಯವನ್ನು ನಿಲ್ಲಿಸಲಾಯಿತು. ಭಾನುವಾರ ಘಟನೆ ನಡೆದ ಸ್ಥಳದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ತಿಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು. ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್…

Read More

ಸಚಿನ್ ಮಾಯಸಂದ್ರ ತುರುವೇಕೆರೆ: ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳತ್ತ ಸಾಂಪ್ರದಾಯಕ ಹಬ್ಬ ಆಚರಣೆಗಳು ಕಡಿಮೆಯಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಸಂಬಂಧಗಳ ಬಾಂಧವ್ಯ ಬೆಸೆದು, ಸಾಂಪ್ರದಾಯಕ ಹಬ್ಬ ಆಚರಣೆಗಳಿಗೆ ಮಾಯಸಂದ್ರ ಗ್ರಾಮದದಲ್ಲಿ ನಾಗರಹಬ್ಬ ಸಾಕ್ಷಿಯಾಯಿತು. ಹೌದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಶನಿವಾರದಂದು ಗ್ರಾಮದಲ್ಲಿ ಗ್ರಾಮಸ್ಥರಿಂದ  ಸಾಂಪ್ರದಾಯಿಕ ಹಬ್ಬವಾದ ನಾಗರಪೂಜಾ  ಆಚರಣೆ ನಡೆಯಿತು. ಮಕರ ಸಂಕ್ರಮಣ ಹಬ್ಬದ ‌ ಆದ ನಂತರ ‌ಪ್ರತಿ ವರ್ಷಕ್ಕೊಮ್ಮೆ ನಡೆಯುವ ಈ ಹಬ್ಬಕ್ಕೆ  ವಾರದಿಂದಲೇ ಗ್ರಾಮದ ಹಲವಾರು ಮನೆಗಳಲ್ಲಿ ನಾಗರ ಪೂಜೆಯ ಮುಂಜಾಗೃತವಾಗಿ ಮನೆಗಳನ್ನು ಶುದ್ದಿ ಮಾಡುವ ಮೂಲಕ, ಯಾವುದೇ ಮಾಂಸಹಾರಗಳನ್ನು ಸೇವಿಸದೆ, ಕಟ್ಟುನಿಟ್ಟಾಗಿ ಕೆಲ ನಿಯಮಗಳನ್ನು ಪಾಲಿಸುವುದರ‌ ಜೊತೆಗೆ, ಗ್ರಾಮದಲ್ಲಿ ಮತ್ತು  ಹೊರ ಜಿಲ್ಲೆ,ರಾಜ್ಯ, ಹೊರದೇಶಗಳಲ್ಲಿಯೂ  ಸಹಾ ತಮ್ಮ ಒಡಹುಟ್ಟಿದ ಅಣ್ಣ ತಮ್ಮಂದಿರನ್ನು ‌ಈ  ಹಬ್ಬಕ್ಕೆ ಕರೆಯುವ ಸಂಪ್ರದಾಯವಿದೆ. ಯಾವುದೇ ಹಬ್ಬ ಹರಿದಿನಗಳಲ್ಲಿ ಸೇರದ ‌ ಸಂಬಂಧಗಳು, ಈ ಹಬ್ಬದಲ್ಲಿ ಮಾತ್ರ ಸ್ವಯಂ ಪ್ರೇರಿತವಾಗಿ ಸೇರುವುದು ‌ ವಾಡಿಕೆ. ಜೊತೆಗೆ ಅಷ್ಟೇ…

Read More

ತುರುವೇಕೆರೆ: ಸರ್ಕಾರವು ಜನರಿಗೆ ತಲುಪಬೇಕಾದ ಸವಲತ್ತುಗಳ ಅರಿವು ಮತ್ತು ಜನರಿಗೆ ತಲುಪುವಂತಹ ಕಾರ್ಯಕ್ರಮ ಏರ್ಪಡಿಸಿದೆ. ಇದನ್ನು ಸಾರ್ವಜನಿಕರು ಮತ್ತು ರೈತರು ಸದುಪಯೋಗಪಡಿಸಿಕೊಳ್ಳಿ ಎಂದು ತಹಶೀಲ್ದಾರ್  ವೈ.ಎಂ.ರೇಣುಕುಮಾರ್ ಸಾರ್ವಜನಿಕರಲ್ಲಿ  ಮನವಿ ಮಾಡಿದರು. ತಾಲ್ಲೂಕಿನ  ಲೋಕಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಸೂಚನೆಯಂತೆ ಈ ಕಾರ್ಯಕ್ರಮ  ಸರ್ಕಾರದ ಯೋಜನೆಗಳು ಜನರಿಗೆ ನೇರವಾಗಿ ತಲುಪಿಸುವಂಥಹ ಕಾರ್ಯಕ್ರಮ ನಡೆಯುತ್ತಿದೆ. ನಿಮ್ಮ ಕುಂದು ಕೊರತೆ  ಮತ್ತು ಕಂದಾಯ ಇಲಾಖೆಗೆ ಸಂಬಂಧಪಟ್ಟ  ದೂರುಗಳು ಇದ್ದಲ್ಲಿ  ಅವುಗಳನ್ನು ಕಾನೂನಿನ ಅಡಿಯಲ್ಲಿ ಸ್ಥಳದಲ್ಲೇ ಬಗೆಹರಿಸಲಾಗುವುದು. ಮಾಶಾಸನಗಳಿಗೆ ಸಂಬಂಧಪಟ್ಟ ಅರ್ಜಿಗಳನ್ನು ನೀಡಿದರೆ ಅವುಗಳನ್ನು 74 ಘಂಟೆಗಳಲ್ಲಿ ಸ್ಥಳದಲ್ಲೇ ಅರ್ಜಿ ವಿಲೇವಾರಿ ಮಾಡಿಲಾಗುವುದು.  ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ   2022ರ ಜುಲೈ ನಿಂದ ಡಿಸೆಂಬರ್ ವರೆಗೆ 2541 ಪಾವತಿ ಖಾತೆ ಮಾಡಿಕೊಡಲಾಗಿದೆ  ಹಿಂದೆ  ಪಾವತಿ ಖಾತೆ ಮಾಡಲು 30 ದಿನಗಳ ಅವಧಿ ಇತ್ತು  ಇದನ್ನು ಸರ್ಕಾರ 15 ದಿನಗಳಿಗೆ ಇಳಿಸಿ ರೈತರಿಗೆ ಆಗುತಿದ್ದ ತೊಂದರೆಯನ್ನು ನಿವಾರಿಸಿದೆ ಎಂದು…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಬೇಡಿಕೆಯನ್ನು ಪರಿಶೀಲನೆ ನಡೆಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನ ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನ ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗಕ್ಕೆ ತಿಳಿಸಿದರು. ರಾಜ್ಯದಲ್ಲಿ 1.36 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು ಇದ್ದಾರೆ. ಇವರ ಉಳಿದ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು. ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More