Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಜೆಡಿಎಸ್ ಪಕ್ಷ ಇರುವುದೇ ಐದಾರು ಜಿಲ್ಲೆಗಳಲ್ಲಿ. ಕುಮಾರಸ್ವಾಮಿ ಅವರು ತಮಟೆ ಹೊಡೆದುಕೊಂಡು ಪಂಚರತ್ನ ಯಾತ್ರೆ ಎಂದು ಓಡಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ಯಾಕೆ ಪಂಚರತ್ನ ಯೋಜನೆ ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜೆಡಿಎಸ್ ನ ಪಂಚರತ್ನ ಯಾತ್ರೆ ವಿಚಾರವಾಗಿ ಹಾಸನದಲ್ಲಿ ನಡೆದ “ಪ್ರಜಾಧ್ವನಿ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಮತ್ತೆ ಅಧಿಕಾರ ಕೊಡಬೇಕಂತೆ, ಇಲ್ಲದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತಾರಂತೆ. ಜೆಡಿಎಸ್ ನವರು ಗೆದ್ದ ಎತ್ತಿನ ಬಾಲ ಹಿಡಿಯುವವರು, ಅವರು ಯಾವತ್ತೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ. ನಿಮ್ಮ ಮತಗಳನ್ನು ದಯವಿಟ್ಟು ವ್ಯರ್ಥ ಮಾಡಿಕೊಳ್ಳಬೇಡಿ. ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ. ದಯಮಾಡಿ ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ. ಬಿಜೆಪಿ ಮತ್ತು ಜೆಡಿಎಸ್ ನವರಿಂದ ರಾಜ್ಯ ಉದ್ಧಾರವಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಬಸವಜಯಂತಿ ದಿನ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ, ನೇರವಾಗಿ ವಿಧಾನಸೌಧದ ಕ್ಯಾಬಿನೆಟ್ ಹಾಲ್ ಗೆ ಹೋಗಿ ನಮ್ಮ 5 ಭರವಸೆಗಳನ್ನು ಈಡೇರಿಸುವ ಕೆಲಸ…
ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ “ಪ್ರಜಾಧ್ವನಿ” ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ ಹೆಚ್ಚು ರೈತರನ್ನು ಹೊಂದಿರುವ ಜಿಲ್ಲೆ. 2022ರ ಒಳಗಡೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು 2016ರಲ್ಲಿ ನರೇಂದ್ರ ಮೋದಿ ಅವರು ರೈತರಲ್ಲಿ ಭ್ರಮೆಯನ್ನು ಹುಟ್ಟಿಸಿದ್ದರು. ಇದನ್ನು ಹೇಳುತ್ತ ಹೇಳುತ್ತಲೇ 3 ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದರು. ದೆಹಲಿಯ ಹೊರವಲಯದಲ್ಲಿ ದೇಶದ ರೈತರು ಅನೇಕ ದಿನಗಳ ಕಾಲ ಹೋರಾಟ ಮಾಡಿದರು, ಮೊದಮೊದಲು…
ನಟ ಕಿಶೋರ್ ಹಾಗೂ ಪೃಥ್ವಿ ಅಂಬರ್ ಅವರ ನಟನೆಯ ಪೆಂಟಗನ್ ಚಿತ್ರದ ಟೀಸರ್ ಬಿಡುಗಡೆ ವೇಳೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ಅಶ್ವಿನಿ ಗೌಡ ವೇದಿಕೆಯಲ್ಲೇ ಚಿತ್ರದ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಸರ್ ನಲ್ಲಿ ಕನ್ನಡ ಹೋರಾಟಗಾರರನ್ನು ಕೆಟ್ಟದಾಗಿ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹೋರಾಟಗಾರರಿಗೆ ರೋಲ್ ಕಾಲ್ ಅನ್ನೋ ಪದವನ್ನು ಬಳಸಿರುವುದು ರೂಪೇಶ್ ರಾಜಣ್ಣ ಅಸಮಾಧಾನಕ್ಕೆ ಕಾರಣವಾಗಿದೆ. ವೇದಿಕೆಯ ಮೇಲೆಯೇ ಈ ಪದವನ್ನು ತೆಗೆದು ಹಾಕುವಂತೆ ರೂಪೇಶ್ ರಾಜಣ್ಣ ನಿರ್ಮಾಪಕ ಗುರುದೇಶಪಾಂಡೆ ಅವರನ್ನು ಒತ್ತಾಯಿಸಿದರು. ಮತ್ತೋರ್ವ ಹೋರಾಟಗಾರ್ತಿ ಅಶ್ವಿನಿ ಗೌಡ ಕೂಡ ಈ ಪದದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ನಿರ್ಮಾಪಕ ಗುರು ದೇಶಪಾಂಡೆ, ಟೀಸರ್ ನೋಡಿ ಏನನ್ನೂ ಮಾತನಾಡಬೇಡಿ, ಸಂಪೂರ್ಣ ಚಿತ್ರವನ್ನು ನೋಡಿ ಎಂದು ಇಬ್ಬರ ಮನವೊಲಿಸಿದರು. ಇದರ ಹೊರತಾಗಿಯೂ ಟೀಸರ್ ನಿಂದ ರೋಲ್ ಕಾಲ್ ಪದ ತೆಗೆದು ಹಾಕದಿದ್ದರೆ ಗುರು ದೇಶಪಾಂಡೆ ಕಚೇರಿಗೆ ಮುತ್ತಿಗೆ ಹಾಕುವುದಾಘಿ ಕನ್ನಡ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ…
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಮಾಡಿದ್ರೂ ಕೋಲಾರ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್, ಸಂತೋಷ್ ಬರಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಜಾ, ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾರೇ ಬಂದೂ ನನ್ನು ವಿರುದ್ಧವಾಗಿ ಪ್ರಚಾರ ಮಾಡಲಿ, ಕೋಲಾರದಿಂದ ಗೆಲುವು ನಿಶ್ಚಿತ ಎಂದಿದ್ದಾರೆ. ವಯಸ್ಸು ಹಾಗೂ ದೂರದ ಸಮಸ್ಯೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಕ್ಷೇತ್ರದ ಬದಲು ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಋಣಾತ್ಮಕ ಪ್ರಚಾರಗಳು ನಡೆಯುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, 2018 ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲೂ ಅದೇ ರೀತಿ ಪ್ರಯತ್ನ ನಡೆಸಿದ್ದಾರೆ. ಇದಲ್ಲದೇ ಅಮಿತ್ ಶಾ ಮತ್ತು ಇತರ ಹಿರಿಯ ಬಿಜೆಪಿ ನಾಯಕರ…
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಮೂಲಭೂತ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರಶ್ನಿಸಿದರೆ, ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ನೀವೇಕೆ ಮಾತನಾಡುತ್ತಿದ್ದೀರಿ? ಎಂದು ಹೇಳಿ, ನಿಮ್ಮ ಮೇಲೆ ಲೈಂಗಿಕ ಕಿರುಕುಳದ ಕೇಸ್ ಹಾಕಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀಧರ್, ಮತ್ತು ಕುಲಪತಿಗಳಾದ ಪ್ರೊ.ಲಿಂಗರಾಜು ಗಾಂಧಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ತಾಂಡವ ಗೌಡ ಇವರನ್ನು ತಕ್ಷಣವೇ ವಜಾಗೊಳಿಸುವಂತೆ ಇದೇ ವೇಳೆ ವಿದ್ಯಾರ್ಥಿಗಳು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ನಂಜನಗೂಡು: ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕರ್ ನಾಯಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಿದ್ಯಾರ್ಥಿಗಳು ಮೂಢನಂಬಿಕೆಯನ್ನು ಬಿಡಬೇಕು. ಜಾತಿಯ ವ್ಯವಸ್ಥೆಯೇ ಮೂಢನಂಬಿಕೆಯಾಗಿದೆ. ದೇಶದಲ್ಲಿ ಇನ್ನೂ ಜಾತಿ ವ್ಯವಸ್ಥೆ ಇರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು. ವಿಜ್ಞಾನ, ಆರ್ಥಿಕ, ವಿಷಯಗಳನ್ನು ಅಧ್ಯಯನ ಮಾಡಿದರೆ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ. ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಎಲ್ಲ ಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳು ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಜ್ಞಾನವೇ ಒಂದು ದೊಡ್ಡ ಶಕ್ತಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆಯಿದೆ ಅವರು ಸಮಯವನ್ನು ಬಳಸಿಕೊಳ್ಳಬೇಕು. ಕಳೆದುಕೊಂಡ ಸಮಯ ಮತ್ತೆ ಸಿಗುವುದಿಲ್ಲ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ…
ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನಟಿ ರಚಿತಾ ರಾಮ್ ಅವರು ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ರಚಿತಾ ರಾಮ್ ವಿರುದ್ಧ ಮೂಲನಿವಾಸಿ ಅಂಬೇಡ್ಕರ್ ಸಂಘದ ಮುಖಂಡರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಮಾಡಿ ಎಂದು ಕರೆ ನೀಡಿದ್ದರು. ಗಣ ರಾಜ್ಯೋತ್ಸವ ಅನ್ನೋದು ಇಡೀ ದೇಶವೇ ಹೆಮ್ಮೆಪಡುವ ದಿನ ಆದರೆ, ಇದರ ಮಹತ್ವ ತಿಳಿಯದ ನಟಿ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಕ್ರಾಂತಿ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಎಂದು ಮೂಲನಿವಾಸಿ ಅಂಬೇಡ್ಕರ್ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ವಿವಿಧಡೆಗಳಲ್ಲಿ ರಚಿತಾ ರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಾರ್ವಜನಿಕರು ದೂರು ದಾಖಲಿಸಲು ಮುಂದಾಗಿದ್ದು, ಮಂಡ್ಯ, ಮೈಸೂರಿನಲ್ಲೂ ದೂರು ದಾಖಲಾಗಿರುವ ಬಗ್ಗೆ ಮಾಹಿತಿ…
ಕುಸ್ತಿ ಒಕ್ಕೂಟದ ವಿರುದ್ಧ ಆಟಗಾರರ ಮುಷ್ಕರ ಅಂತ್ಯಗೊಂಡಿದೆ. ಅನುರಾಗ್ ಠಾಕೂರ್ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಚರ್ಚೆಯಲ್ಲಿ ಒಮ್ಮತಕ್ಕೆ ಬರಲಾಯಿತು. ತನಿಖೆ ಪೂರ್ಣಗೊಳ್ಳುವವರೆಗೂ ಬ್ರಿಜ್ ಭೂಷಣ್ ದೂರ ಉಳಿಯಲಿದ್ದಾರೆ. ಅಷ್ಟರಲ್ಲಿ ಬ್ರಿಜ್ ಭೂಷಣ್ ಕರೆದು ಪತ್ರಿಕಾಗೋಷ್ಠಿಯನ್ನು ಮುಂದೂಡಿದರು. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಸಂಸ್ಥೆಯ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ತನಿಖೆಗಾಗಿ ನಾಲ್ಕು ವಾರಗಳವರೆಗೆ ಕುಸ್ತಿ ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ. ಕೇಂದ್ರ ಸಚಿವರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಸಿಂಗ್ ಅವರನ್ನು ಬದಲಾಯಿಸಲಾಗುವುದು ಮತ್ತು ಹೋರಾಟದ ಪ್ರತಿ ಹಂತದಲ್ಲೂ ಹೋರಾಟದ ಕುಸ್ತಿಪಟುಗಳಿಗೆ ಬೆಂಬಲ ನೀಡಲಾಗುವುದು ಎಂದು ಕ್ರೀಡಾ ಸಚಿವರು ಹೇಳಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಆರ್ಥಿಕ ದುರುಪಯೋಗ ಸೇರಿದಂತೆ ಎಲ್ಲಾ ಆರೋಪಗಳನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುವುದು. ಆ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಮತ್ತು ಹಣ…
ಉತ್ತರಾಖಂಡದ ಹರಿದ್ವಾರದಲ್ಲಿ 7 ಮಸೀದಿಗಳಿಗೆ ತಲಾ 5000 ರೂಪಾಯಿ ದಂಡ ವಿಧಿಸಲಾಗಿದೆ. 2018 ರ ಉತ್ತರಾಖಂಡ ಹೈಕೋರ್ಟ್ ಆದೇಶದ ಪ್ರಕಾರ ಮಸೀದಿಗಳ ಧ್ವನಿವರ್ಧಕಗಳ ಅನುಮತಿಸುವ ಶಬ್ದ ಮಟ್ಟವನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹರಿದ್ವಾರ ಆಡಳಿತವು ಎರಡೂ ಮಸೀದಿಗಳಿಗೆ ಎಚ್ಚರಿಕೆ ನೀಡಿದೆ. ಆಯಾ ಅರ್ಚಕರಿಗೆ ನೀಡಿರುವ ಶೋಕೇಸ್ ನೋಟಿಸ್‌ಗೆ ನೀಡಿದ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ. ಹರಿದ್ವಾರ ಎಸ್‌ಡಿಎಂ ಪುರಾನ್ ಸಿಂಗ್ ರಾಣಾ ಅವರ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜುಮಾ ಮಸೀದಿ, ಇಬಾದುಲ್ಲಾಹಿತ್ತಲ (ಕಿಕರ್ ವ್ಯಾಲಿ) ಮಸೀದಿ, ಬಿಲಾಲ್ ಮಸೀದಿ, ನಗರದ ಮತ್ತೊಂದು ಜುಮಾ ಮಸೀದಿ, ಸಾಬ್ರಿ ಜುಮಾ ಮಸೀದಿ ಮತ್ತು ಇತರ ಎರಡು ಮಸೀದಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ಹರಿದ್ವಾರ ಎಸ್‌ಡಿಎಂ ತಿಳಿಸಿದೆ. ಉತ್ತರಾಖಂಡ ಹೈಕೋರ್ಟಿನ ಆದೇಶದಂತೆ ಧ್ವನಿವರ್ಧಕಗಳ ಧ್ವನಿ ಮಟ್ಟಕ್ಕೆ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಎಸ್‌ಡಿಎಂ ಹರಿದ್ವಾರ್ ಪುರನ್ ಸಿಂಗ್ ರಾಣಾ ಹೇಳಿದ್ದಾರೆ. ಕ್ಷೇತ್ರದಿಂದ ದೂರುಗಳು ಬಂದಿದ್ದವು. ಈ…
ಜಮ್ಮು ಮತ್ತು ಕಾಶ್ಮೀರದ ಕತ್ವಾ ಜಿಲ್ಲೆಯಲ್ಲಿ ಬಿಲ್ಲವರದ ಸಿಲಾ ಗ್ರಾಮದ ಬಳಿ ಮಿನಿ ಬಸ್ಸೊಂದು ಹೊಳೆಗೆ ಬಿದ್ದು ಅಪಘಾತ ಸಂಭವಿಸಿದೆ. ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ವಕ್ರರೇಖೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌಗ್‌ನಿಂದ ಪೆರೋಲ್‌ಗೆ ಬರುತ್ತಿದ್ದ ವಾಹನ ಸಿಲಾದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ 60 ವರ್ಷದ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ 15 ಜನರನ್ನು ಬಿಲ್ಲವರ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಬಿಲ್ಲವರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy