Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಬೆಳಗಾವಿ: ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಪರ್ವವನ್ನು ಮುಂದುವರೆಸಿರುವ ಶಾಸಕ ಅನಿಲ ಬೆನಕೆ ಅವರು 27 ಕೋಟಿ ವಿಶೇಷವಾದ ಅನುದಾನ ಬಿಡುಗಡೆ ಮಾಡಿಸಿ ಮತ್ತೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಲಿದ್ದಾರೆ. ಕರ್ನಾಟಕ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಬೆಳಗಾವಿಯಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ 27 ಕೋಟಿ ಬಿಡುಗಡೆ ಆಗಿದೆ. ಬೆಳಗಾವಿಯಲ್ಲಿ ಜಿಲ್ಲಾ ಆಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಸೇರಿದಂತೆ ರಾಜ್ಯ ಸಚಿವರಿಗೆ ಮನವಿ ಸಲ್ಲಿಸಿದರು. ಅದರ ಫಲವಾಗಿ ಕೇಂದ್ರದಿಂದ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ. ಅನುದಾನ ಬಿಡುಗಡೆ ಆಗಿದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ…
ತುಮಕೂರು: ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರು ಮಾತೃಭೂಮಿ ಸೇವಾ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರತಿ ವರ್ಷವೂ ಮಾತೃಭೂಮಿ ಸೇವಾ ಟ್ರಸ್ಟ್ ವಿವಿಧ ರಂಗಗಳಲ್ಲಿ ಸಾಮಾಜಿಕವಾಗಿ ಸೇವೆ ಸಲ್ಲಿಸಿದ ಈ ಸಾಧಕರಿಗೆ ಒಂದು ಗೌರವವಾಗಿ ಗುರುತಿಸುವ ಕಾರ್ಯ ಮಾಡುತ್ತಿದೆ. ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಹಾಗೂ ವರ್ಷದ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದೆ. ಮಾತೃಭೂಮಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜ್ಯೋತಿ ಶ್ರೀನಿವಾಸ್ ರವರು ಸಾಧಕರನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ತುಮಕೂರು ಮಾತ್ರವಲ್ಲದೇ ಇಡೀ ಕರ್ನಾಟಕದಲ್ಲಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ. ರಾಜಕೀಯವಾಗಿ, ಸಾಮಾಜಿಕ ಕಾರ್ಯಕರ್ತರಾಗಿ, ಪತ್ರಕರ್ತರುಗಳಿಗೆ, ಇನ್ನು ವಿವಿಧ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅನೇಕರು ಇಂದು ಕನ್ನಡ ಸಂಭ್ರಮ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಆಮಾನಿಕೆರೆ…
ಬೆಂಗಳೂರು: ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ವೋರ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು, ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹ ಗಳಲ್ಲಿ, ಕೆಲವು ಅಕ್ರಮ ಚಟುವಟಿಕೆ ಗಳ ಬಗ್ಗೆ, ವರದಿಯಾಗಿದ್ದು, ಇದರ ಬಗ್ಗೆ, ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್, ಪ್ರವೀಣ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಮಧುಗಿರಿ: 5 ಕರಡಿಗಳು ಏಕಾ ಏಕಿ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದ ಸಮೀಪದ ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಶುಕ್ರವಾರ ನಡೆದಿದೆ. ಆಹಾರ ಹುಡುಕಿ ಬಂದ ಸುಮಾರು 5ರಷ್ಟಿದ್ದ ಕರಡಿಯನ್ನು ಕಂಡ ಗ್ರಾಮದ ಯುವಕರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ನೋಡಿದ ಗ್ರಾಮಸ್ಥರು, ದೇವಸ್ಥಾನದ ಸಮೀಪಕ್ಕೆ ಯಾರೂ ಹೋಗದಂತೆ ಪರಸ್ಪರ ಜಾಗೃತಿ ಮೂಡಿಸಿದ್ದಾರೆ. ಕರಡಿ ಪ್ರತ್ಯಕ್ಷವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಲಯ ಅರಣ್ಯಾಧಿಕಾರಿ ರವಿ, ಹಲವು ದಿನಗಳ ಹಿಂದೆಯೇ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕರಡಿಗಳು ಪ್ರತ್ಯಕ್ಷವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದು, ತಕ್ಷಣವೇ ಸರ್ಕಾರ ಕರಡಿಗಳ ನಿಯಂತ್ರಣಕ್ಕೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಸಾರ್ವಜನಿಕರ ಮೇಲೆ ಕರಡಿಗಳು ಯಾವುದೇ ಅಪಾಯವನ್ನು ಸೃಷ್ಟಿಸುವ ಮೊದಲೇ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ತ್ರಿವಿಧ ದಾಸೋಹಿ, ಮಹಾಶಿವಯೋಗಿ, ಪದ್ಮವಿಭೂಷಣ, ಕರ್ನಾಟಕ ರತ್ನ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯ 4ನೇ ಪುಣ್ಯಸಂಸ್ಮರಣೋತ್ಸವವು ಜನವರಿ 21ರಂದು ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯ ಸಂಸ್ಮರಣೋತ್ಸವ ಸಮಾರಂಭ ನಡೆಯಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವಚರಮೂರ್ತಿ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಶಿವಕುಮಾರ ಮಹಾಸ್ವಾಮಿಗಳ ಕುರಿತ ಲೇಖನಗಳ ಸಂಗ್ರಹದ ‘ವಿಶ್ವಜ್ಯೋತಿ’ ಪುಸ್ತಕವನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಬಿಡುಗಡೆಗೊಳಿಸಲಿದ್ದಾರೆ. ಸಚಿವ ವಿ.ಸೋಮಣ್ಣ ಅವರು ಭಕ್ತಿ ಸಮರ್ಪಣೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸಂಸದ ತೇಜಸ್ವಿ ಸೂರ್ಯ, ತುಮಕೂರು ನಗರ ಶಾಸಕ ಜೆ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ವಿ.ನಾರಾಯಣಸ್ವಾಮಿ, ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್, ವಿಧಾನ ಪರಿಷತ್…
ತುರುವೇಕೆರೆ: ಕಾರ್ಯಕ್ರಮದ ನಿಮಿತ್ತ ಹರಿಹರಕ್ಕೆ ತೆರಳಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಕಾರ್ಯಕ್ರಮ ಮುಗಿಸಿ ವಾಪಸ್ ಆಗುವಾಗ ತುರುವೇಕೆರೆ ಮಾರ್ಗವಾಗಿ ತಡರಾತ್ರಿ ಸುಮಾರು 8:30 ಕ್ಕೆ ಪಟ್ಟಣಕ್ಕೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಪಟ್ಟಣದ ಬಾಣಸಂದ್ರ ಸರ್ಕಲ್ ನಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡು ಜಮೀರ್ ಅವರಿಗೆ ಹೂಮಾಲೆ ಹಾಕಿ ಪಟಾಕಿ ಸಿಡಿಸಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಅವರ ಕಚೇರಿಗೆ ಅವರು ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಮತ ಕೇಳುವಾಗ ಎಂದಾದರೂ ನಾವು ಇಂತಹ ಕಾರ್ಯಕ್ರಮ ಕೊಟ್ಟಿದ್ದೇವೆ ಎಂದು ಮತ ಕೇಳಿದ್ದಾರಾ? ಖಂಡಿತ ಇಲ್ಲ , ಆದರೆ ನಾವು ಮತಗಳನ್ನು ಕೇಳಲು ಹೋದರೆ ನಮ್ಮ ಕಾಂಗ್ರೆಸ್ ಪಕ್ಷದಿಂದ ಏನು ಕಾರ್ಯಕ್ರಮ ಕೊಟ್ಟಿದ್ದೇವೆ ಅದನ್ನ ತೋರಿಸಿ ಮತ ಕೇಳುತ್ತೇವೆ ಎಂದರು. ಬಿಜೆಪಿ ಪಕ್ಷ ಬರೀ ಹಿಂದೂ, ಮುಸಲ್ಮಾನ್, ಹಿಂದೂ, ಮುಸಲ್ಮಾನ್, ಎನ್ನುತ್ತಾರೆ,…
ತುರುವೇಕೆರೆ: ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಶಾಂತಿನಗರದ ಬಿ.ಎಂ.ಟಿ.ಸಿ. ಕಟ್ಟಡದಲ್ಲಿನ ಟಿ.ಟಿ.ಎಂ.ಸಿ, ಎ.ಬ್ಲಾಕ್ ನ ಐದನೇ ಮಹಡಿಯ ಕೇಂದ್ರ ಕಚೇರಿಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ರವರು, ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ನೂರಾರು ಅಭಿಮಾನಿಗಳು, ಬೆಂಬಲಿಗರು, ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳ ಆಗಮನ. ಶಾಸಕರಿಗೆ ಶುಭಾಶಯ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ಮಸಾಲ ಜಯರಾಮ್, ಗೌರವಯುತ ಸ್ಥಾನವನ್ನು ನೀಡಿದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಪಕ್ಷದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿ ವತಿಯಿಂದ ನೂತನ ಅಧ್ಯಕ್ಷರಿಗೆ ಇದೇ ವೇಳೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ವರದಿ: ಸಚಿನ್…
ತಿಪಟೂರು: ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ತಾಲೂಕು ಮುಖಂಡರಾಗಿರುವ, ಕೆ.ಟಿ.ಶಾಂತಕುಮಾರ್ ಅವರಿಗೆ ಜೆಡಿಎಸ್ ಪ್ರಾದೇಶಿಕ ಪಕ್ಷ ಸೇರುವಂತೆ ಜೆಡಿಎಸ್ ಪಕ್ಷದ ಮುಖಂಡರು, ನೂರಾರು ಸಂಖ್ಯೆಯಲ್ಲಿ ಶಾಂತಕುಮಾರ್ ಮನೆಗೆ ಆಗಮಿಸಿ, ಮನವಿ ಮಾಡಿದ್ದಾರೆ ನಗರದ ಕೆ.ಆರ್.ಬಡಾವಣೆಯಲ್ಲಿರುವ ಕೆ.ಟಿ.ಶಾಂತಕುಮಾರ್ ನಿವಾಸಕ್ಕೆ ಆಗಮಿಸಿದ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಶಿವಸ್ವಾಮಿ ಈ ವೇಳೆ ಮಾತನಾಡಿ, ತಾಲೂಕಿನ ಕೊನೆಹಳ್ಳಿ ಗ್ರಾಮದಲ್ಲಿ ಹುಟ್ಟಿ ಬೆಳೆದಿರುವ ಕೆ.ಟಿ.ಶಾಂತಕುಮಾರ್ ಅವರು, ಸಮಾಜ ಸೇವಕರಾಗಿ ತಾಲೂಕಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸಮಾಜ ಸೇವೆಗೆ ತಮ್ಮ ಸ್ವಂತ ಹಣ ಬಳಕೆ ಮಾಡಿ ಒಬ್ಬ ಸದೃಢ ನಾಯಕರಾಗಿ ತಾಲೂಕಿನಲ್ಲಿ ಸೇವೆಯ ಮೂಲಕ ಗುರುತಿಸಿಕೊಂಡಿದ್ದಾರೆ, ಕಾಂಗ್ರೆಸ್ ಪಕ್ಷದ ಮುಖಂಡರಾಗಿರುವ ಕೆ.ಟಿ.ಶಾಂತಕುಮಾರ್ ರವರು, ಜೆಡಿಎಸ್ ಪಕ್ಷಕ್ಕೆ ಬಂದರೆ ನೂರು ಆನೆ ಬಲ ಜೆಡಿಎಸ್ ಪಕ್ಷಕ್ಕೆ ಬರಲಿದೆ ಎಂದರು. ತಾಲೂಕಿನ ಪ್ರತಿ ಸಮುದಾಯದವರೊಂದಿಗೆ ಉತ್ತಮಒಡನಾಟ ಹೊಂದಿರುವ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಪಕ್ಷ ಸೇರಬೇಕೆಂದು ಗ್ರಾಮೀಣ ಭಾಗದ ಕಾರ್ಯಕರ್ತರ ಒತ್ತಡ ಪಕ್ಷದ ಹೈಕಮಾಂಡ್ ಮೇಲಿದೆ, ಆದ ಕಾರಣ ಕೆ.ಟಿ.ಶಾಂತಕುಮಾರ್ ಅವರಿಗೆ…
ಹಲಗೂರು: ನಿವೃತ್ತಿ ಆದವರಿಗೆ ಸನ್ಮಾನ ಕಾರ್ಯಕ್ರಮ ಸ್ವಾಮಿ ವಿದ್ಯಾಸಂಸ್ಥೆ ಜೆಪಿಎಂ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜು, ಹಲಗೂರು ಕಾಲೇಜು ಆವರಣದಲ್ಲಿ ನಡೆಯಿತು. ಮಳವಳ್ಳಿ ಕ್ಷೇತ್ರ ದ ಶಾಸಕರಾದ ಡಾ.ಕೆ.ಅನ್ನದಾನಿ ಮಾತನಾಡಿ, ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿ ಕಾಲೇಜಿನಲ್ಲಿ ಹಂತದಲ್ಲಿ ವಿದ್ಯಾಭ್ಯಾಸ ಕಲಿಯುತ್ತಿದ್ದೀರಿ. ಒಳ್ಳೆಯ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗಕ್ಕೆ ಹೋಗಬೇಕು . ನಮ್ಮ ಪ್ರಜಾಪ್ರಭುತ್ವದಲ್ಲಿ ಉತ್ತಮ ಪ್ರಜೆಯನ್ನು ಆಯ್ಕೆ ಮಾಡುವ ಹಕ್ಕು ನಿಮ್ಮದಾಗಿದೆ. ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ ಹಾಕುವ ಪಟ್ಟಿಯಲ್ಲಿ ಸೇರಬೇಕು, ನೀವು ಹಾಕುವ ಮತ ಮೊದಲನೆಯದು ನಮಗೆ ಮತ ಹಾಕಬೇಕು. ನಿಮ್ಮ ಸೇವೆ ಮಾಡಲು ನನಗೆ ಮತ ಹಾಕಿ ಬೆಂಬಲಿಸಬೇಕು ಎಂದರು. ನಂತರ ಶಾಲೆಯ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಹಾಡನ್ನು ಹಾಡಿ ರಂಜಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ನೀವು ಅಬ್ದುಲ್ ಕಲಾಂ ಹೆಸರು ಕೇಳಿದ್ದೀರಿ, ಅವರು ಒಂದು ಬಡ ಕುಟುಂಬದಲ್ಲಿ ಹುಟ್ಟಿ ಹಾರುವ ಹಕ್ಕಿಯಾಗಿ ಆಗಬೇಕು ಎಂದು ಕನಸು ಕಂಡವರು. ಹಾಗೆಯೇ…
ಪಾಂಡವಪುರ: ಪುರಾತತ್ವ ಪರಂಪರೆಯ ಸಂಗ್ರಹಾಲಯ ಇಲಾಖೆ ವತಿಯಿಂದ 2 ಕೋಟಿ 60 ಲಕ್ಷದ ವೆಚ್ಚದಲ್ಲಿ ಮೇಲುಕೋಟೆ ಶ್ರೀ ಚೆಲುವ ನಾರಾಯಣ ಸ್ವಾಮಿಯ ದೇವಾಲಯದ ಅರಮನೆ ಮೈದಾನಕ್ಕೆ ಜೀರ್ಣೋದ್ಧಾರಕ್ಕಾಗಿ ಹಾಗೂ ಅಕ್ಕತಂಗಿ ಕೊಳಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಇಂದು ಭೂಮಿ ಪೂಜೆ ಕೈಕೊಂಡಿದ್ದೇನೆಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ಮೇಲುಕೋಟೆಯಲ್ಲಿ ಭೂಮಿ ಪೂಜೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತಿಹಾಸ ಪ್ರಸಿದ್ಧ ಮೇಲುಕೋಟೆ ಶ್ರೀ ಚೆಲುವ ನಾರಾಯಣ ಸ್ವಾಮಿ ದೇವಾಲಯ ಭವ್ಯ ಗಾಜಿನ ಅರಮನೆಯನ್ನು ಯಥಾಸ್ಥಿತಿಯಂತೆ ಅಭಿವೃದ್ಧಿಗೊಳಿಸಿ ಸುತ್ತಲೂ ಉದ್ಯನವನ ನಿರ್ಮಾಣಕ್ಕೆ ಹಾಗೂ ಅಕ್ಕತಂಗಿ ಕೊಳ ಸೇರಿ ಐದು ಕೊಳಗಳ ಅಭಿವೃದ್ಧಿ 2 ಕೋಟಿ 60 ಲಕ್ಷ ಅನುದಾನ ಬಿಡುಗಡೆ ಗೊಳಿಸಲಾಗಿದೆ. ಜತೆಗೆ ಸಣ್ಣ ನೀರಾವರಿ ಇಲಾಖೆಯಿಂದ 32 ಕೋಟಿ ವೆಚ್ಚದಲ್ಲಿ ಮೇಲುಕೋಟೆ ಎಲ್ಲಾ ಕಲ್ಯಾಣಿಗಳ ಅಭಿವೃದ್ಧಿ ಮಾಡಲಾಗುವುದು ಎಂದರು. ಈ ವೇಳೆ ಇಲಾಖೆ ಸಿ.ಟಿ.ಮಹೇಶ್, ಸತೀಶ್, ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಮಾಜಿ ಅಧ್ಯಕ್ಷ ಅವ್ವಗಂಗಾಧರ್, ದೇವಾಲಯದ ಇಒ ಮಹೇಶ್ ಸದಸ್ಯರಾದ…