Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಬೆಳಗಾವಿ : ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಸೇವೆ ಮತ್ತು ಉತ್ಪಾದನಾ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಉದ್ಯೋಗಾಕಾಂಕ್ಷಿಗಳು ಕಾಲಕ್ಕೆ ತಕ್ಕಂತೆ ಕೌಶಲ್ಯವನ್ನು ಬೆಳೆಸಿಕೊಂಡು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರೆ ನೀಡಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಮರಾಠಾ ಮಂಡಲದ ಕಲಾ, ವಿಜ್ಞಾನ ಹಾಗೂ ಗೃಹವಿಜ್ಞಾನ ಮಹಾವಿದ್ಯಾಲಯದಲ್ಲಿ ಸರ್ವರಿಗೂ ಉದ್ಯೋಗ ಅಭಿಯಾನದಡಿಯಲ್ಲಿ ಗುರುವಾರ (ಜ.19) ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮದೇ ಉದಾಹರಣೆ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ವಿಜಯಪುರ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತರೂ ನಿರಂತರ ಪ್ರಯತ್ನದ ಫಲವಾಗಿ ನಾಗರಿಕ ಸೇವೆಯಂತಹ ಉನ್ನತ ಹುದ್ದೆ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು. ಸರಕಾರಿ ಹಾಗೂ ಖಾಸಗಿ ಕಂಪನಿಯಲ್ಲಿ ಅನೇಕ ಕೆಲಸಗಳು ದೊರೆತವು. ವಿದೇಶಗಳಿಗೆ…
ಬೆಳಗಾವಿ : ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಫೆಬ್ರುವರಿ 6, 2023 ರಂದು ಮಧ್ಯಾಹ್ನ್ಹ 3 ಗಂಟೆಗೆ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ. ಮಹಾಪೌರರ ಸ್ಥಾನವು ಸಾಮಾನ್ಯ ಮಹಿಳೆಯರಿಗೆ ಹಾಗೂ ಉಪಮಹಾಪೌರ ಸ್ಥಾನವು ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾಗಿದೆ. ಚುಣಾವಣೆ ವೇಳಾಪಟ್ಟಿ: ಫೆಬ್ರುವರಿ 6, 2023 ರಂದು ಮುಂಜಾನೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾಪೌರ, ಉಪಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಲಿದ್ದು, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಹಾಗೂ ಮತಗಳಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು…
ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಕ್ರಿಯಿಸಿದರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಅವರು ಡೋರ್ ಓಫನ್ ಮಾಡಿಲ್ಲ ಎಂದು ಸಮರ್ಥಿಸಿದರು. ಅವರು ಕೂತಿದ್ದು ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ, ಎಟಿಆರ್ ಫ್ಲೈಟ್ ಸೀಟಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್ ನಲ್ಲಿ ಬ್ಲಿಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತಂದ್ರು, ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು ಎಂದರು. ತೇಜಸ್ವಿ ಸೂರ್ಯ ಡೋರ್ ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್‍ಗೆ ಕ್ಷಮೆ ಕೋರಿದ್ದಾರೆ ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದ್ದಾರೆ ಎಂದು ಅಣ್ಣಾಮಲೈ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಗುಜರಾತ್: ಪ್ರೀತಿಯ ಸಂಕೇತವಾಗಿ ಪ್ರತಿಮೆಗಳು ಮದುವೆಗೆ ಸಾಕ್ಷಿಯಾಗಿದೆ. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಆರೋಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣದ 6 ತಿಂಗಳ ನಂತರ, ಕುಟುಂಬವು ವಿಗ್ರಹಗಳನ್ನು ನಿರ್ಮಿಸಿ ಅಲಂಕಾರ ಮಾಡಿ ವಿವಾಹ ಮಾಡಿದ್ದಾರೆ. ಗುಜರಾತ್ನ ತಾಪಿಯಲ್ಲಿ ಈ ಘಟನೆ ನಡೆದಿದೆ.ಆರೋಪಿಗಳು ಕಳೆದ ಆಗಸ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಗಣೇಶ್ ಮತ್ತು ರಂಜನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ನಂತರ, ಕುಟುಂಬವು ದಾದಿಗಳನ್ನು ಮದುವೆಯಾಗಲು ಅವಕಾಶ ನೀಡದಿದ್ದಕ್ಕಾಗಿ ಪಶ್ಚಾತ್ತಾಪಪಟ್ಟಿತು ಮತ್ತು ಅವರಿಬ್ಬರ ಪ್ರತಿಮೆಗಳನ್ನು ನಿರ್ಮಿಸಿತು. ಈ ವಿಗ್ರಹಗಳನ್ನು ಸಕಲ ವಿಧಿವಿಧಾನಗಳೊಂದಿಗೆ ಮದುವೆ ಮಾಡಲಾಯಿತು.ಹುಡುಗ ತನ್ನ ಕುಟುಂಬದೊಂದಿಗೆ ದೂರದ ಸಂಬಂಧ ಹೊಂದಿದ್ದರಿಂದ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹುಡುಗಿಯ ಅಜ್ಜ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರ್ಮಾ ವಿರುದ್ಧ ವಿನೇಶ್ ಫೋಗಟ್ ಸೇರಿದಂತೆ ಸೂಪರ್ ಸ್ಟಾರ್‌ಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಶಿಬಿರದ ವೇಳೆ ಕೋಚ್ ಮತ್ತು ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಶರ್ಮಾ ಸೇರಿದಂತೆ ಆಟಗಾರರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಫೋಗಟ್ ಬಹಿರಂಗಪಡಿಸಿದ್ದಾರೆ. ಕೆಲವು ತರಬೇತುದಾರರು ವರ್ಷಗಳಿಂದ ಆಟಗಾರರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ. ಫೆಡರೇಶನ್ ಅಧಿಕಾರಿಗಳಿಂದ ತನಗೆ ಕೊಲೆ ಬೆದರಿಕೆ ಇದೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.ಬ್ರಿಜ್ ಭೂಷಣ್ ಶರ್ಮಾ ತಾರೆಯರ ಆರೋಪಗಳನ್ನು ನಿರಾಕರಿಸಿದರು. ಕುಸ್ತಿ ಒಕ್ಕೂಟದ ಕಾರ್ಯವೈಖರಿ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಆಟಗಾರರು ಶರ್ಮಾ ಮತ್ತು ತರಬೇತುದಾರರ ವಿರುದ್ಧ ಲೈಂಗಿಕ ಆರೋಪಗಳನ್ನು ಮಾಡಿದರು. ಪುರುಷ ಹಾಗೂ ಮಹಿಳಾ ಆಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರಲ್ಲದೆ, ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸೋನಮ್ ಮಲಿಕ್ ಮತ್ತು ಅಂಶು ಸೇರಿದಂತೆ…
ಉತ್ತರ ಪ್ರದೇಶ:ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಭದೋಹಿ ಎಂಬಲ್ಲಿ ಈ ಘಟನೆ ನಡೆದಿದೆ. ಅನುರಾಧಾ ಬಿಂದ್ ಎಂಬ ಬಾಲಕಿ ಕೊಲೆಯಾದಳು. 22 ವರ್ಷದ ಅರವಿಂದ್ ವಿಶ್ವಕರ್ಮ ತನ್ನ ಸಹೋದರಿ ನಿಶಾ ಜೊತೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಹಿಂತಿರುಗುತ್ತಿದ್ದ ಅನುರಾಧಾಳ ತಲೆಗೆ ಗುಂಡು ಹಾರಿಸಿದ್ದಾನೆ. ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.ಪೊಲೀಸ್ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಶೀಘ್ರದಲ್ಲಿ ಅಪರಾಧಿಯನ್ನು ಹಿಡಿಯುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಗಢ : ಗೋವಾ- ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಮತ್ತು ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿ 9 ಜನರು ಮೃತಪಟ್ಟ ದಾರುಣ ಘಟನೆ ರಾಯಗಡ ಜಿಲ್ಲೆ ರೆಪೊಲಿ ಎಂಬಲ್ಲಿ ನಡೆದಿದೆ. ಘಟನಾ ಸ್ಥಳವಾದ ರೆಪೊಲಿ ಗ್ರಾಮ ಮುಂಬೈಯಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿದೆ. ಮೃತಪಟ್ಟವರನ್ನು ರತ್ನಗಿರಿ ಜಿಲ್ಲೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅಸುನೀಗಿದ ಜನರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶದ ಹಿಂದೂ ಕಾಲೇಜಿನಲ್ಲಿ ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಯುಪಿಯ ಮೊರಾದಾಬಾದ್‌ನಲ್ಲಿರುವ ಹಿಂದೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜಿನ ಯೂನಿಫಾರ್ಮ್ ಕೋಡ್‌ನಲ್ಲಿ ಬುರ್ಖಾ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಬುರ್ಖಾ ತೆಗೆದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡುತ್ತೇವೆ ಎಂದು ಅಧಿಕಾರಿಗಳು ಪಟ್ಟು ಹಿಡಿದರು ಎನ್ನುತ್ತಾರೆ ವಿದ್ಯಾರ್ಥಿಗಳು. ಆಗ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ, ನಡೆಯಿತು. ಕಾಲೇಜಿನ ಪ್ರಾಧ್ಯಾಪಕ ಡಾ. ಎಪಿ ಸಿಂಗ್ ಹೇಳಿದರು. ನಂತರ ಕಾಲೇಜು ಸಮವಸ್ತ್ರದಲ್ಲಿ ಬುರ್ಖಾ ಹಾಕಬೇಕು ಎಂದು ಸಮಾಜವಾದಿ ಛಾತ್ರ ಸಭೆ ಮನವಿ ಮೂಲಕ ಮನವಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲೂಕಿನ ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಇದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಬಿ.ಶಿವಕುಮಾರ ಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಶಿಧರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. 16 ಸಂಖ್ಯಾಬಲ ಸದಸ್ಯವುಳ್ಳ ಪಂಚಾಯಿತಿ ಇದಾಗಿದ್ದು, ಯಾರೊಬ್ಬರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿರುವ ತಾಲೂಕು ದಂಡಾಧಿಕಾರಿಯಯಾದ ವೈ.ಎಂ.ರೇಣು ಕುಮಾರ್ ಅವರು, ಚುನಾವಣಾ ಪ್ರಕ್ರಿಯೆಯನ್ನು ಮುಗಿಸಿ ಶಶಿಧರ್ ಅವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ್ ಇದೇ ವೇಳೆ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಯಾವುದೇ ತರಹದ ನೀರಿನ ಸಮಸ್ಯೆ, ಆಗಲಿ ಚರಂಡಿ ಸಮಸ್ಯೆ ಆಗಲಿ, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಈ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಮಾಜಿ ಅಧ್ಯಕ್ಷ ಕಿರಣ್ ರಾಮಡಿಹಳ್ಳಿ, ಎಲ್ಲಾ ಸದಸ್ಯರುಗಳು, ಚುನಾವಣಾ ಸಿಬ್ಬಂದಿ ಕಾಂತರಾಜು, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಸವೇಶ್ ಹುಲ್ಲೆಕೆರೆ, ರಕ್ಷಿತ್…
ವೈ.ಎನ್.ಹೊಸಕೋಟೆ: ಫುಟ್ಬಾಲ್ ದೇಹಕ್ಕೆ ಉತ್ತಮ ಕಸರತ್ತು ನೀಡುವ ಪಂದ್ಯಾವಳಿಯಾಗಿದ್ದು, ಕ್ರೀಡಾಪಟುಗಳ ಆರೋಗ್ಯ ಉತ್ತಮವಾಗಿರಲು ಸಹಾಯಕವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ. ವೆಂಕಟೇಶ್ ತಿಳಿಸಿದ್ದಾರೆ. ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಆವರಣದಲ್ಲಿ ವೈ.ಎನ್.ಹೊಸಕೋಟೆ ಪುಟ್ ಬಾಲ್ ಕ್ಲಬ್ ಆಯೋಜಿಸಿದ್ದ ಹೊನಲು ಬೆಳಕಿನ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕ್ರೀಡಾಪಟುಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇನ್ನಷ್ಟು ಅಭ್ಯಾಸ ಮಾಡಿಬೇಕು. ತಾಲ್ಲೂಕು ಮಟ್ಟ ಜಿಲ್ಲಾ ಮಟ್ಟ ರಾಜ್ಯಮಟ್ಟಕ್ಕೆ ಹೋಗಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಇನ್ನೂ ಹೆಚ್ಚಿನ ಸಹಕಾರ ನೀಡುತ್ತೇನೆ. ತಾಲ್ಲೂಕು ಮಟ್ಟದ ಫುಟ್ಬಾಲ್ ಕ್ರೀಡಾಕೂಟ ನಡೆಸಬೇಕೆಂದು ಆಟಗಾರರಿಗೆ ಮತ್ತು ಆಯೋಜಕರಿಗೆ ತಿಳಿಸಿದರು. ಇಂದು ಫುಟ್ಬಾಲ್ ಕ್ರೀಡಾಕೂಟವನ್ನು ನೋಡಿ ತುಂಬಾ ಸಂತೋಷವಾಗಿದೆ. ತಂಡಗಳು ಒಂದಕ್ಕಿಂತ ಒಂದು ನಾ ಮುಂದು ತಾ ಮುಂದು ಎಂಬುವಂತೆ ರೋಚಕದಿಂದ ಆಟವನ್ನು ಹಾಡಿದ್ದೀರ. ಗ್ರಾಮೀಣ ಆಟಗಾರರು ತಮ್ಮ ಪ್ರತಿಭೆಯನ್ನು ಪಂದ್ಯಾವಳಿಯಲ್ಲಿ ತೋರಿಸಿ ಕೊಟ್ಟಿದ್ದೀರಾ. ನಿಮ್ಮ ಪ್ರತಿಭೆಯು ಮೆಚ್ಚುವಂತಹದ್ದು ಎಂದರು. ಮುಖಂಡರಾದ ಟಿ.ಉಮೇಶ್ ಮಾತನಾಡಿ, ಗಡಿನಾಡು…