Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ. ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್ ನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಮಗಳೂರು: ದಲಿತರು ಹಾಗೂ ಅಲ್ಪಸಂಖ್ಯಾತರನ್ನು ದೂರವಿಟ್ಟು ಜಿಲ್ಲಾ ಉತ್ಸವ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ಬಳಿಗೆ ತೆರಳಿ ಮನವಿ ಸಲ್ಲಿಸಲು ಯತ್ನಸಿದ ದಲಿತ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಜಿಲ್ಲಾ ಉತ್ಸವದ ಯಾವುದೇ ಸಮಿತಿಗಳಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವ್ಯಕ್ತಿಗಳನ್ನು ಸೇರಿಸಿಕೊಂಡಿಲ್ಲ, ದಲಿತ ಕಲಾ ಮಂಡಳಿಗಳಿಗೆ ಅವಕಾಶ ನೀಡದೇ ತಾರತಮ್ಯ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಆರೋಪಿಸಿದರು. ಕಾರ್ಯಕ್ರಮಕ್ಕೆ ಭಾಗವಹಿಸಲು ಮುಖ್ಯಮಂತ್ರಿಗಳು ಬಂದಾಗ ಜಿಲ್ಲಾಡಳಿತದ ವಿರುದ್ಧ ದೂರು ಸಲ್ಲಿಸಲು ಮುಂದಾದಾಗ ದಲಿತ ಸಂಘಟನೆಗಳ ಮುಖಂಡರುಗಳಾದ ಶ್ರೀನಿವಾಸ್ ಅಣ್ಣಯ್ಯ, ಹೊನ್ನೇಶ್, ಯಲಗುಡಿಗೆ ಹೊನ್ನಪ್ಪ, ರಮೇಶ್, ಅಂಗಡಿ ಚಂದ್ರು, ಜಗದೀಶ್, ಹುಣಸೇಮಕ್ಕಿ ಲಕ್ಷ್ಮಣ್ ಇತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಕುಶಲಕರ್ಮಿಗಳಿಗಾಗಿ ಸಾಲ ಸಹಾಯಧನ (ಸಬ್ಸಿಡಿ) ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬೆಳಗಾವಿ ಜಿಲ್ಲೆಯ ವಿವಿಧ ವರ್ಗಗಳ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ರೂ 50 ಸಾವಿರವರೆಗೆ ಸಾಲದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಶೇ 30% ರಷ್ಟು ಗರಿಷ್ಟ 15 ಸಾವಿರದ ವರೆಗೆ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಕುಶಲವೃತ್ತಿಗಾಗಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಒಬ್ಬರಿಗೆ ಒಂದು ಬಾರಿ ಮಾತ್ರ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ರಾಜ್ಯ ಕುಶಲಕರ್ಮಿ ಅಭಿವೃದ್ಧಿ ನಿಗಮ/ ಅಭಿವೃದ್ಧಿ ಆಯುಕ್ತರು (ಕರಕುಶಲ) ಕಚೇರಿಯಲ್ಲಿ ನೋಂದಣಿ ಆಗಿರಬೇಕು. ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಗಳು, ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರ ( ಪಿಡಿಓ ) ರವರಿಂದ ಕರಕುಶಲರೆಂದು ದೃಡೀಕರಣ…
ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ. ಶಿವಾನಂದ ಜಕ್ಕಣ್ಣವರ್ (24) ಆತ್ಮಹತ್ಯೆಗೆ ಶರಣಾದವರು. ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಬೆಳಗಾವಿ ಮೂಲದವರಾಗಿರುವ ಶಿವಾನಂದ ಜಕ್ಕಣ್ಣವರ್ , 9 ತಿಂಗಳ ಹಿಂದಷ್ಟೇ ಬಾಳಗಾನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ಕೊರಟಗೆರೆ: ಇಡೀ ರಾಜ್ಯದಲ್ಲೇ ರೈತರ ನಿದ್ದೆಗೆಡಿಸಿದ್ದ ಜಾನುವಾರುಗಳಲ್ಲಿ ಕಂಡುಬಂದಿದ್ದ ಚರ್ಮಗಂಟು ರೋಗದ ಭಯದಿಂದ ರೈತರ ಬದುಕು ಬೀದಿಗೆ ಬಿದ್ದಂತಾಗಿತ್ತು. ಅಕ್ಕ ಪಕ್ಕದ ರಾಜ್ಯಗಳಿಂದ ತಗುಲಿದ್ದ ಚರ್ಮಗಂಟು ರೋಗ ರಾಜ್ಯಾದ್ಯಂತ ಹರಡಿ ಸಾವಿರಾರು ಜಾನುವಾರುಗಳು ಮರಣ ಹೊಂದಿದ್ದವು. ಚರ್ಮಗಂಟು ರೋಗ ಉಲ್ಬಣ ವಾಗುತ್ತಿದ್ದoತೆಯೇ ಎಚ್ಛೆತ್ತುಕೊಂಡ ಸರ್ಕಾರ ಸಂಬಂಧ ಪಟ್ಟ ಪಶು ಸಂಗೋಪನಾ ಇಲಾಖೆಯ ಮೂಲಕ ರಾಜ್ಯದಲ್ಲಿರುವ ಎಲ್ಲಾ ಪಶು ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಲಸಿಕೆ ನೀಡಲು ಸೂಚಿಸಿದ್ದರಿಂದ ಚರ್ಮಗಂಟು ರೋಗ ನಿಯಂತ್ರಣದಲ್ಲಿದೆ. ಈ ರೋಗವು ಅತೀ ವೇಗವಾಗಿ ಹರಡಿದ ಹಿನ್ನೆಲೆ ರಾಜ್ಯಾಧ್ಯoತ ನಡೆಯುವ ಜಾನುವಾರು, ಕುರಿ ಮತ್ತು ಮೇಕೆಗಳ ಸಂತೆಗಳನ್ನು ನಡೆಸದಂತೆ ಸರ್ಕಾರ ಎಲ್ಲಾ ತಾಲ್ಲೂಕ್ ಆಡಳಿತಕ್ಕೆ ಆದೇಶ ಹೊರಡಿಸುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳು ಖಡಕ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇದರಿಂದ ಈ ಚರ್ಮಗಂಟು ರೋಗದಲ್ಲಿ ಇಳಿಮುಖ ಕಂಡಿದೆ ಇಲ್ಲದಿದ್ದರೆ ರೈತಾಪಿ ವರ್ಗಕ್ಕೆ ಬರಸಿಡಿಲು ಬಡಿದಂತಾಗುತ್ತಿತ್ತು. ನಮ್ಮ ರಾಜ್ಯದಲ್ಲಿ ಮುಂದುವರಿದಿದ್ದ ಗೋಹತ್ಯೆ ಯನ್ನು ನಿಷೇಧಿಸಿ…
ಸಾಕಷ್ಟು ಜನರು ಇಂದು ಬೆಲ್ಲದ ಪಾನಕವನ್ನು ಮರೆಯುತ್ತಿದ್ದಾರೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ಬರುವ ಪಾನೀಯಗಳೇ ಇಂದು ಜನರು ಹೆಚ್ಚಾಗಿ ಬಳಸುವ ಪಾನೀಯವಾಗಿದ್ದು, ಇದರಿಂದಾಗಿ ನಾನಾ ರೀತಿಯ ಅನಾರೋಗ್ಯಕ್ಕೆ ಜನರು ತುತ್ತಾಗುತ್ತಿದ್ದಾರೆ. ಬೆಲ್ಲದ ಪಾನಕದಿಂದ ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಅವುಗಳು ಯಾವುದೆಂದು ಇಂದು ತಿಳಿಯೋಣ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಪಾನಕ ಕುಡಿಯುವುದು ಉತ್ತಮ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಬೆಲ್ಲದ ಪಾನಕ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್ ಬಿ 1, ಬಿ 6, ಸಿ ಮತ್ತು ಮೆಗ್ನೀಸಿಯಮ್ ಇದರಲ್ಲಿ ಕಂಡುಬರುತ್ತದೆ. ಅಧಿಕ ತೂಕದಿಂದ ನೀವು ತೊಂದರೆಗೊಳಗಾಗಿದ್ದರೆ, ಬೆಲ್ಲದ ಪಾನಕವನ್ನು ಬಳಸಬೇಕು. ಇದು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡುತ್ತದೆ. ಬೆಲ್ಲದಲ್ಲಿ ಪೊಟ್ಯಾಸಿಯಮ್ ಇದೆ, ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಮತ್ತು ಖನಿಜಗಳ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಬೆಲ್ಲದ ಪಾನಕ ಕುಡಿದರೆ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಬಹುದು. ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶವಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಸದೃಢವಾಗಿಡಲು…
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ. ಈ ನಡುವೆ ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಶ್ವದ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವೆನಿಸಿಕೊಂಡಿದ್ದು, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ರಾಷ್ಟ್ರವನ್ನು ಸುಸ್ಥಿರತೆಯ ಕಡೆಗೆ ನಡೆಸುವ ನಿಟ್ಟಿನಲ್ಲಿ ಆಲೋಚಿಸಬೇಕಾಗಿದೆ. ಜನಂಖ್ಯೆ ಹಾಗೂ ಜನಸಂಖ್ಯಾಶಾಸ್ತ್ರದ ಮೇಲೆ ಗಮನ ಕೇಂದ್ರೀಕರಿಸಿರುವ ವರ್ಲ್ಡ್ ಪಾಪ್ಯೂಲೇಷನ್ ರಿವ್ಯೂ ಅಂದಾಜಿನ ಪ್ರಕಾರ 2022ರ ಅಂತ್ಯಕ್ಕೆ ಭಾರತದ ಜನಸಂಖ್ಯೆ ೧.೪೧೭ ಬಿಲಿಯನ್ ಆಗಿತ್ತು. ಅಂದರೆ ಮಂಗಳವಾರದಂದು ಚೀನಾ ವರದಿ ಮಾಡಿರುವ ೧.೪೧೨ ಬಿಲಿಯನ್ ಗಿಂತ ೫ ದಶಲಕ್ಷ ಹೆಚ್ಚಾಗಿದೆ. ೧೯೬೦ರಿಂದ ಇದೇ ಮೊದಲ ಬಾರಿಗೆ ಚೀನಾದಲ್ಲಿ ಜನಸಂಖ್ಯೆ ಇಳಿಕೆ ಕಂಡಿದೆ. ಮೂವತ್ತು ವರ್ಷಗಳಿಗಿಂತ ಕಡಿಮೆ ವಯಸ್ಸಿನ ಜನಸಂಖ್ಯೆಯನ್ನು ಹೊಂದಿರುವ ಭಾರತ, ಮುಂಬರುವ ವರ್ಷಗಳಲ್ಲಿ ಆತೀ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಲಿದೆ. ಬಹುಪಾಲು ಜನಸಂಖ್ಯಾಶಾಸ್ತ್ರದ ಡಿವಿಡೆಂಡ್ ಅನ್ನು ಬಳಸಿಕೊಳ್ಳಲು ಪ್ರಧಾನ ಮೋದಿಯವರು ಪ್ರತಿ ವರ್ಷ ಉದ್ಯೋಗಕ್ಕೆ ಯೋಗ್ಯರಾಗುವ ಲಕ್ಷಾಂತರ ಜನರಿಗಾಗಿ ಉದ್ಯೋಗಿಗಳನ್ನು ಸೃಷ್ಟಿಸಬೇಕಾಗುತ್ತದೆ. ಮೇಲಾಗಿ ಭಾರತ ಕೃಷಿಯೇತರ ಉದ್ಯೋಗಗಳ ಕಡೆ ಹೆಚ್ಚು ಹೆಜ್ಜೆ ಹಾಕುತ್ತಿದೆ. ಭಾರತ ಈ ಮೈಲಿಗಲ್ಲನ್ನು ಈ…
ಬಾಗಲಕೋಟೆ:ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ದೈವವಾಣಿ ನುಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಅಲೆಮಾರಿಯಲ್ಲ 8 ಬಾರಿ ಚುನವಣೆಯಲ್ಲಿ ಸ್ಪರ್ಧಿಸಿದ್ದೇನೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಲೀಡರ್ ಅಲ್ಲವಾ..? ಪ್ರಧಾನಿ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ..? ನಾನು ಎರಡೇ ದಿನ ಬಾದಾಮಿ ಕ್ಷೇತ್ರಕ್ಕೆ ಬಂದರೂ ಗೆಲ್ಲಿಸಿದ್ದಾರೆ. ಕೊನೆ ಚುನಾವಣೆ ಅಂತಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಅಲ್ಲಿನ ಜನರು ಸೋಲಿಸಿದ್ರು. ಬಾದಾಮಿ ದೂರ ಆಗಿರುವುದಕ್ಕೆ ಹತ್ತಿರಕ್ಕೆ ಹೋಗಿತ್ತಿದ್ದಿನಿ. ವಿಪಕ್ಷ ಸ್ಥಾನದಲ್ಲಿದ್ದರೂ ನಿರೀಕ್ಷೆಗೆ ಮೀರಿ ಕೆಲಸ ಮಾಡಿದ್ದೇನೆ. ಈ ಬಾರಿ ನಾನು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರು. ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ಸ್ಯಾಂಟ್ರೋ ರವಿ ನಟೋರಿಯಸ್ ಕ್ರಿಮಿನಲ್.…
ಗದಗ: ಆಟೋ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಬಾದಾಮಿ ರಸ್ತೆಯಲ್ಲಿ ನಡೆದಿದೆ. ಅಮರೇಗೌಡ ಬಸನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಮೃತ ದುರ್ದೈವಿಗಳು. ಆಟೋದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy