Subscribe to Updates
Get the latest creative news from FooBar about art, design and business.
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
- ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
Author: admin
ರಾಜಸ್ಥಾನ ಕಾಂಗ್ರೆಸ್‌ನಲ್ಲಿನ ಆಂತರಿಕ ಕಲಹವನ್ನು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿಗೆ ಸ್ವಂತ ಶಾಸಕರ ಮೇಲೆ ನಂಬಿಕೆ ಇಲ್ಲ, ಶಾಸಕರಿಗೆ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಇದು ಯಾವ ರೀತಿಯ ಸರ್ಕಾರ ಎಂದು ಪ್ರಧಾನಿ ಪ್ರಶ್ನಿಸಿದರು. ರಾಜಸ್ಥಾನದ ಮೌಂಟ್ ಅಬುದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟವನ್ನು ಲೇವಡಿ ಮಾಡಿದರು. ರಾಜಸ್ಥಾನ ಸರ್ಕಾರದಲ್ಲಿ ಎಲ್ಲರೂ ಪರಸ್ಪರ ನಿಂದಿಸಲು ಪೈಪೋಟಿಯಲ್ಲಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೇ ದೊಡ್ಡ ಬಿಕ್ಕಟ್ಟು. ಐದು ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇದೇ ವೇಳೆ ರಾಜಸ್ಥಾನದ ಅಭಿವೃದ್ಧಿಯನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಮೋದಿ ಪ್ರಶ್ನಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ಇಂದು ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗಂಭೀರ ಅಪರಾಧಗಳು ಅಪರೂಪವಾಗಿ ಕೇಳಿಬರುತ್ತಿದ್ದ ರಾಜಸ್ಥಾನದಲ್ಲಿ ಇಂದು ಅಪರಾಧಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ. ವೋಟ್ ಬ್ಯಾಂಕ್‌ಗಳ ದಾಸ್ಯದಲ್ಲಿರುವ ಕಾಂಗ್ರೆಸ್‌ಗೆ ಕ್ರಮ ಕೈಗೊಳ್ಳಲು ಭಯವಾಗುತ್ತಿದೆ. ಬುಡಕಟ್ಟು ಸಮುದಾಯವು ವರ್ಷಗಳಿಂದ ಕಾಂಗ್ರೆಸ್ ಅನ್ನು ನಂಬಿದೆ, ಆದರೆ ಅವರಿಗೆ ಏನು…
ಪೂರ್ವ ಉಕ್ರೇನ್‌ನ ಚಾಸಿವ್ ಯಾರ್ ಬಳಿ ರಾಕೆಟ್ ದಾಳಿಯಲ್ಲಿ ಫ್ರೆಂಚ್ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಎಎಫ್‌ಪಿಯ ಉಕ್ರೇನ್ ವಿಡಿಯೋ ಸಂಯೋಜಕ ಅರ್ಮಾನ್ ಸೋಲ್ಡಿನ್ (32) ಸಾವನ್ನಪ್ಪಿದ್ದಾರೆ. ರಷ್ಯಾ-ಉಕ್ರೇನ್ ಘರ್ಷಣೆಯ ಕೇಂದ್ರ ಬಿಂದುವಾಗಿರುವ ಬಖ್‌ಮುತ್ ಬಳಿಯ ಪಟ್ಟಣದಲ್ಲಿ ಮಂಗಳವಾರ ಸಂಜೆ 4:30ಕ್ಕೆ ಈ ದಾಳಿ ನಡೆದಿದೆ. ಗ್ರಾಡ್ ರಾಕೆಟ್ ದಾಳಿಯು ಉಕ್ರೇನಿಯನ್ ಸೈನಿಕರ ಜೊತೆಯಲ್ಲಿದ್ದ AFP ತಂಡದ ಮೇಲೆ ಆಗಿತ್ತು. ಸೋಲ್ಡಿನ್ ಅವರು ನಿಂತಿದ್ದ ಸ್ಥಳದ ಬಳಿ ರಾಕೆಟ್‌ನಿಂದ ಕೊಲ್ಲಲ್ಪಟ್ಟರು. ತಂಡದ ಉಳಿದ ಆಟಗಾರರು ಯಾವುದೇ ಹಾನಿಗೊಳಗಾಗಲಿಲ್ಲ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೋಲ್ಡ್ ಅವರಿಗೆ ಗೌರವ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೀದರ್: ಒಂದು ಏಜೆನ್ಸಿ ಮೊತ್ತೊಂದು ಏಜೆನ್ಸಿಗಳ ನಡುವೆ ಪಕ್ಷಗಳ ಸೀಟುಗಳಿಸುವ ಅಂತರ ದೊಡ್ಡದಿದೆ ಹೀಗಾಗಿ ಇಂತಹ ಎಕ್ಸಿಟ್ ಪೋಲ್ ಗಳ ಬಗ್ಗೆ ನನಗೆ ಸಂಪೂರ್ಣವಾದ ನಂಬಿಕೆ ಇಲ್ಲ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಹೇಳಿದ್ದಾರೆ. ಬೀದರ್ ನಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ ಸ್ಪಷ್ಟವಾಗಿ ಬಿಜೆಪಿ ಪೂರ್ಣ ಬಹುಮತದ ಸರ್ಕಾರ ಬರುತ್ತೆ. ಯಾಕೆಂದರೆ ಕರ್ನಾಟಕದ ಮತದಾರರು ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು. ನಾನು ಅನೇಕ ಎಕ್ಸಿಟ್ ಪೋಲ್‍ಗಳು ನೋಡಿದ್ದೇನೆ. 2014 ಹಾಗೂ 2019 ರಲ್ಲಿ ನಾನು ಸೋಲುತ್ತೆನೆ ಎಂದು ಎಕ್ಸಿಟ್ ಪೋಲ್ ಬಂದಿತ್ತು. ಆದರೆ ನಾನು ಗೆಲುವು ಸಾಧಿಸಿದ್ದೆ ಎಂದರು. ರಾಜ್ಯದಲ್ಲಿ ಪ್ರಧಾನಿ ಮಂತ್ರಿಗಳ, ಅಮಿತ್ ಶಾ, ನಡ್ಡಾ ಮಾಡಿದ ರೋಡ್ ಶೋ ಹಾಗೂ ಬಹಿರಂಗ ಸಮಾವೇಶಗಳು ಮತಗಳಾಗಿ ಪರಿವರ್ತನೆಯಾಗಿದೆ ಎಂದರು. ಕಾಂಗ್ರೆಸ್ ಕೇವಲ ಗ್ಯಾರೆಂಟಿ ಕಾರ್ಡ್ ಮೇಲೆ ಮತ ಕೇಳಿದ್ದು ಗ್ಯಾರಂಟಿ ಕಾರ್ಡ್‍ಗಳು ಜನರ ಮನಸ್ಸಿಗೆ ತಟ್ಟಿಲ್ಲಾ ಜೊತೆಗೆ ಕಾಂಗ್ರೆಸ್‍ನ ತುಷ್ಠೀಕರಣ ರಾಜಕಾರಣವನ್ನು…
ಮೈಸೂರು: ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದು ವಾಗ್ದಾಳಿ ಮಾಡಿದರು. ಈ ಬಾರಿ ಕಾಂಗ್ರೆಸ್ಗೆ ಬಹುಮತ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ನಿವಾಸದಲ್ಲಿ ಮಾತನಾಡಿದ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೇರಿ: ಎಕ್ಸಿಟ್ ಪೊಲ್ 100% ಕರೆಕ್ಟ್ ಆಗಿರುವುದಿಲ್ಲ. ರಿಯಲ್ ಫಲಿತಾಶ ಬರುವಾಗ ಪ್ಲಸ್ ಮೈನಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೊಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಬಹುಮತ ಸಿಗುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಮೇ 13 ರ ಫಲಿತಾಂಶ ಬರುವ ತನಕ ಕಾದು ನೋಡಿ. ನಾವೇ ಕಿಂಗ್ ಆಗುತ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ಬಿಜೆಪಿಗೆ ಸಂಪುರ್ಣ ಬಹುಮತ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದರು. ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೆ ಬಾರಿ ಆಯ್ಕೆ ಮಾಡಲು ಶ್ರಮಿಸಿದವರಿಗೆ ಧನ್ಯವಾದ ತಿಳಿಸಿದರು. ಬಳಿಕ ಕಾರ್ಯಕರ್ತರ ಜೊತೆ ಫೋಟೋ ತೆಗಿಸಿಕೊಂಡು ಸಂತಸದಿಂದ ಕೈ ಕುಲುಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ ತೆರಳಿದ್ದಾರೆ. ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ. ಒಟ್ಟಿನಲ್ಲಿ ಸಮೀಕ್ಷೆ ಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಹೆಚ್‍ಡಿಕೆ ಫಲಿತಾಂಶದ ದಿನ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಿ ಕೇರಳ ಸ್ಟೋರಿ ತಂಡದ ಸಿಬ್ಬಂದಿ ಲಕ್ನೋದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ನಟಿ ಅದಾ ಶರ್ಮಾ, ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಿರ್ಮಾಪಕ ವಿಪುಲ್ ಅಮೃತಲಾಲ್ ಶಾ ಕೂಡ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮೇ 12 ರಂದು ಲೋಕಭವನದಲ್ಲಿ ವಿಶೇಷ ಪ್ರದರ್ಶನದಲ್ಲಿ ಯೋಗಿ ಆದಿತ್ಯನಾಥ್ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ವರದಿಯಾಗಿದೆ. ಅಂದು ಚಿತ್ರ ವೀಕ್ಷಿಸಲು ಎಲ್ಲ ಸಚಿವರೂ ಯೋಗಿ ಜತೆಗಿರುವ ಸೂಚನೆಗಳಿವೆ. ಉತ್ತರ ಪ್ರದೇಶ ಸರ್ಕಾರ ಮತ್ತು ಯೋಗಿ ಜಿ ಈ ಕ್ರಮವನ್ನು ತೆಗೆದುಕೊಂಡರು ಮತ್ತು ನಮ್ಮ ನೈತಿಕತೆಯನ್ನು ಬಹಳಷ್ಟು ಹೆಚ್ಚಿಸಿದರು. ಮುಖ್ಯಮಂತ್ರಿಗಳಿಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಎಂದು ವಿಪುಲ್ ಶಾ ಹೇಳಿದರು. ಕಳೆದ ದಿನ ರಾಜ್ಯದಲ್ಲಿ ಸಿನಿಮಾಗೆ ತೆರಿಗೆ ವಿನಾಯತಿ ಘೋಷಣೆಯಾಗಿದೆ. ಚಿತ್ರದ ವಿರುದ್ಧ ಹೆಚ್ಚುತ್ತಿರುವ ಆಕ್ಷೇಪಗಳ ಕುರಿತು ಯೋಗಿ ಅವರೊಂದಿಗೆ ಚಿತ್ರತಂಡ ಚರ್ಚೆ ನಡೆಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಂಗಳವಾರ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ತಮಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಕ್ಕೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೀವ್ರ ಸಿಡಿಮಿಡಿ ಗೊಂಡಿದ್ದಾರೆ. ಬುಧವಾರ ಸಂಜೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಅವರ ಗೋಕಾಕ ಕ್ಷೇತ್ರ ಸೇರಿದಂತೆ ಅವರ ಉಸ್ತುವಾರಿಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಗೊತ್ತಾಗಿ ಅವರು ಹತಾಶರಾಗಿದ್ದಾರೆ, ಅವರಿಗೆ ಹುಚ್ಚು ಹಿಡಿದಿದೆ ಎಂದು ಕಿಡಿಕಾರಿದರು. ರಮೇಶ ಜಾರಕಿಹೊಳಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ ಮತ್ತು ಗೋಕಾಕದಲ್ಲಿ ಬಿಜೆಪಿ ಸೋಲುತ್ತದೆ ಎಂದು ಹತಾಶರಾಗಿದ್ದಾರೆ ಎಂದರು. ರಾತ್ರಿ 12.30ಕ್ಕೆ ಫೋನ್ ಮಾಡಿ ಬ್ಲ್ಯಾಕ್ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ ಅವರ ಮೇಲೆ ಆರೋಪ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದರೆ ಆರೋಪಕ್ಕೆ ಪೂರಕವಾಗಿ ಅವರು ಫೋನ್ ಕರೆಯ ಸ್ಕ್ರೀನ್ ಶಾಟ್, ಕಾಲ್ ರೆಕಾರ್ಡ್ ರಿಲೀಸ್ ಮಾಡಲಿ.…
ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೊಗಳಿದ್ದಾರೆ. ಮಮತಾ ಭಾರತದ ಪ್ರಧಾನಿಯಾಗಬೇಕಿತ್ತು. ಅಧಿಕಾರದಲ್ಲಿರುವವರಿಂದ ಬೆದರಲಾಗದ ಮಮತಾ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ದೇಶದ ಪ್ರಧಾನಿಯಾಗಬೇಕು. ಇತರ ನಾಯಕರು ಇಂದು ಕೇಂದ್ರೀಯ ಸಂಸ್ಥೆಗಳಿಗೆ ಹೆದರಿ ಸರ್ಕಾರವನ್ನು ಹೆಚ್ಚು ಟೀಕಿಸುವುದಿಲ್ಲ. ಅವರಿಗೆ ಇಡಿ ಮತ್ತು ಸಿಬಿಐ ಭಯವಿದೆ. ಇದು ದೇಶದ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಆದರೆ ಮಮತಾ ಬ್ಯಾನರ್ಜಿ ಧೈರ್ಯಶಾಲಿ. ಅವರು ಎಡಪಕ್ಷಗಳ ವಿರುದ್ಧ ಹೇಗೆ ನಿಲುವು ತಳೆದರು ಎಂಬುದನ್ನು ಕಲಿಯೋಣ. ಇಂದಿನ ಪರಿಸ್ಥಿತಿಯಲ್ಲಿ ಯಾರಿಗೂ ಹೆದರದ ಏಕೈಕ ನಾಯಕಿ ಮಮತಾ ಬ್ಯಾನರ್ಜಿ ಎಂದು ಹೇಳಿದರು. ಯಾರಿಗೂ ಹೆದರದ, ಆಡಳಿತ ಪಕ್ಷದ ಮಿತ್ರರಲ್ಲದ ಉತ್ತಮ ಪ್ರತಿಪಕ್ಷ ದೇಶಕ್ಕೆ ಬೇಕು. ದೇಶಕ್ಕೆ ಬಲಿಷ್ಠ ಪ್ರತಿಪಕ್ಷದ ಅಗತ್ಯವಿದೆ, ಅದನ್ನು ಆಡಳಿತ ಪಕ್ಷದ ಜನರು ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ ಎಂದು ಸ್ವಾಮಿ ಹೇಳಿದರು.…
ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ್ದ ಐವರನ್ನು ಬಂಧಿಸಲಾಗಿದೆ. ಸದ್ಯ ಬಾಂಬ್ ಎಸೆದ ವ್ಯಕ್ತಿ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಅಮೃತಸರದಲ್ಲಿ ಸ್ಫೋಟ ಸಂಭವಿಸಿದೆ. ವಿವಿಧ ರೀತಿಯ ಪಟಾಕಿಗಳಲ್ಲಿ ಬಳಸುವ ಪೊಟಾಶಿಯಂ ಕ್ಲೋರೇಟ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಮೊನ್ನೆ ಮೇ 6 ಮತ್ತು 8ರಂದು ಗೋಲ್ಡನ್ ಟೆಂಪಲ್ ಬಳಿ ಸ್ಫೋಟ ಸಂಭವಿಸಿತ್ತು. ಮಧ್ಯರಾತ್ರಿ 12.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ವರದಿಗಳ ಪ್ರಕಾರ, ತನಗೆ ಯಾವುದೇ ಸಂಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಪ್ರಮುಖ ಆರೋಪಿ ಹೇಳಿಕೆ ನೀಡಿದ್ದಾನೆ. ಕೆಲವು ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರುವುದು ಉದ್ದೇಶವಾಗಿತ್ತು ಎಂದು ವರದಿಯಲ್ಲಿ ವಿವರಿಸಲಾಗಿದ್ದು, ಆರೋಪಿಗಳು ಹೇಳಿಕೆ ನೀಡಿದ್ದಾರೆ. ಆರೋಪಿಯಿಂದ ಡ್ರಗ್ ಇಂಜೆಕ್ಷನ್ ಕೂಡ ವಶಪಡಿಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy