Subscribe to Updates
Get the latest creative news from FooBar about art, design and business.
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
- ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
Author: admin
ಲೈಂಗಿಕತೆ ಅನ್ನೋದು ಒಬ್ಬ ವ್ಯಕ್ತಿಯ ಖಾಸಗಿತನ. ಸಾಕಷ್ಟು ದೇಶಗಳಲ್ಲಿ ಲೈಂಗಿಕತೆ ಅನ್ನೋದು ಏಕಾಂತ ಹಾಗೂ ಮುಚ್ಚುಮರೆಯಿಂದ ಕೂಡಿದೆ. ಆದ್ರೆ ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ವಿಚಿತ್ರ ಸಂಪ್ರದಾಯವೊಂದಿದ್ದು, ಈ ಸಂಪ್ರದಾಯವನ್ನು ಕೇಳಿದರೆ, ನೀವು ಅಚ್ಚರಿಗೀಡಾಗುತ್ತೀರಿ. ಮದುವೆಯ ನಂತರ ವಧುವರ ಮೊದಲ ರಾತ್ರಿಯಲ್ಲಿ ಏಕಾಂತದಲ್ಲಿ ಕಳೆಯುವುದು ಭಾರತ ಸೇರಿದಂತೆ ಸಾಕಷ್ಟು ದೇಶಗಳಲ್ಲಿರುವ ಸಂಪ್ರದಾಯ. ಆದ್ರೆ, ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಮೊದಲ ರಾತ್ರಿಯ ದಿನ ವಧುವಿನ ತಾಯಿ ಕೂಡ ವಧುವರರ ಕೋಣೆಯಲ್ಲಿಯೇ ಮಲಗುವ ವಿಚಿತ್ರ ಸಂಪ್ರದಾಯವಿದೆ. ವಧು ಮತ್ತು ವರ ಹೊಸಬರಾಗಿರುವ ಕಾರಣ ಅವರಿಗೆ ಮೊದಲ ರಾತ್ರಿಯಂದು ವಧುವಿನ ತಾಯಿ ಸಲಹೆ ನೀಡಲೆಂದು ಅವರ ಜೊತೆಗೆ ಇರುತ್ತಾರೆ ಅನ್ನೋದು ಇಲ್ಲಿನ ಸಂಪ್ರದಾಯವಾದಿಗಳ ವಾದವಾಗಿದೆ. ಸಂತೋಷದ ಜೀವನವನ್ನು ಹೇಗೆ ಸಾಗಿಸಬೇಕು, ಸಂಸಾರದ ಬಂಡಿಯಲ್ಲಿನ ಕಷ್ಟ ಸುಖಗಳನ್ನು ಹೇಗೆಲ್ಲ ಸ್ವೀಕರಿಸಬೇಕು ಎಂದು ವಧುವಿನ ತಾಯಿ ವಧುವರರಿಗೆ ಮೊದಲ ರಾತ್ರಿಯಂದು ಹೇಳಿಕೊಡುತ್ತಾಳಂತೆ. ವಧುವರರ ಮೊದಲ ರಾತ್ರಿ ಮುಗಿದ ಬಳಿಕ, ಅವರಿಬ್ಬರು ಸಂತೋಷದಲ್ಲಿದ್ದರೆ, ಎಂದು ವಧುವಿನ ತಾಯಿ ತನ್ನ…
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ನಮ್ಮ ದೇಶದ ಇತಿಹಾಸದಲ್ಲಿ ಎರಡು ಪ್ರಮುಖ ದಿನಗಳು. ಅದೇ ವಿಚಾರವನ್ನು ನೆನಪಿಸಲು ಈ ಎರಡು ದಿನಗಳನ್ನು ಆಚರಿಸಲಾಗುತ್ತದೆ ಎಂದು ನಂಬುವ ಅನೇಕ ಜನರು ಇನ್ನೂ ಇದ್ದಾರೆ. ಆದರೆ ವಾಸ್ತವವಾಗಿ ಈ ಎರಡು ದಿನಗಳು ವಿಶೇಷ ಐತಿಹಾಸಿಕ ಮಹತ್ವ ಮತ್ತು ಪ್ರಸ್ತುತತೆಯನ್ನು ಹೊಂದಿವೆ. ಈ ಎರಡು ದಿನಗಳು ಏನನ್ನು ಸೂಚಿಸುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳೋಣ. ಸ್ವಾತಂತ್ರ್ಯ ದಿನಾಚರಣೆ ಎಲ್ಲರಿಗೂ ತಿಳಿದಿರುವಂತೆ, ಆಗಸ್ಟ್ 14 ಮತ್ತು 15 ರ ಮಧ್ಯರಾತ್ರಿಯಲ್ಲಿ, ನಮ್ಮ ದೇಶವು ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲಾಗುತ್ತದೆ. ಈ ಸ್ವಾತಂತ್ರ್ಯವನ್ನು ಅನೇಕ ದೇಶಭಕ್ತರು ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಗೆದ್ದರು. ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಲು ಮತ್ತು ಸ್ವಾತಂತ್ರ್ಯ ಹೋರಾಟದ ವರ್ಷಗಳ ಸ್ಮರಣಾರ್ಥವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ದಿನದಂದು, ದೇಶದ ಪ್ರಧಾನ ಮಂತ್ರಿಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ನವದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಾರೆ. ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳು, ನಗರಗಳು,…
ಹೈದರಾಬಾದ್‌ನಲ್ಲಿ ನಾಯಿ ಬೆನ್ನಟ್ಟಿದ ಕಾರಣ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ರಿಜ್ವಾನ್ ಅವರು ಆರ್ಡರ್ ನೀಡಲು ಬಂಜಾರಾ ಹಿಲ್ಸ್‌ನ ಲುಂಬಿನಿ ರಾಕ್ ಕ್ಯಾಸಲ್ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಸ್ವಿಗ್ಗಿಯ ಡೆಲಿವರಿ ಏಜೆಂಟ್ ಮೊಹಮ್ಮದ್ ರಿಜ್ವಾನ್ ಅವರಿಗೆ 23 ವರ್ಷ ವಯಸ್ಸಾಗಿತ್ತು. ಫ್ಲಾಟ್‌ನ ಬಾಗಿಲು ತಟ್ಟಿದಾಗ, ಗ್ರಾಹಕರ ಮುದ್ದಿನ ಜರ್ಮನ್ ಶೆಫರ್ಡ್ ಬೊಗಳುತ್ತಾ ಮುಂದೆ ಬಂದಿತು. ಇದರಿಂದ ಹೆದರಿದ ರಿಜ್ವಾನ್ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ನಂತರ ರಿಜ್ವಾನ್ ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ನಿಮ್ಸ್) ಕರೆತರಲಾಯಿತು. ನಂತರ ಅವರು ಶನಿವಾರ ನಿಧನರಾದರು. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಗೃಹಿಣಿಯರಿಗೆ ತಲಾ 2000 ರೂ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಪ್ರಿಯಾಂಕಾ ಗಾಂಧಿ ಮಾತನಾಡಿದರು. ರಾಜ್ಯದಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದ್ದು, ಮಹಿಳೆಯರಿಗಾಗಿಯೇ ವಿಶೇಷ ಪ್ರಣಾಳಿಕೆ ಹೊರಡಿಸಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ರಾಜ್ಯದಲ್ಲಿ ವಾತಾವರಣ ತುಂಬಾ ಕೆಟ್ಟದಾಗಿದೆ. ರಾಜ್ಯದ 1.5 ಲಕ್ಷ ಕೋಟಿ ಸಾರ್ವಜನಿಕ ಹಣವನ್ನು ದೋಚಲಾಗಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ‘ನಾ ನಾಯಕಿ’ ಹೆಸರಿನಲ್ಲಿ ಮಹಿಳಾ ಸಮಾವೇಶ ನಡೆಸಿದೆ. ಇದೇ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೃಹಿಣಿಯರಿಗೆ ಈ ಭರವಸೆ ನೀಡಿದರು.ಗೃಹ ಲಕ್ಷ್ಮಿ ಯೋಜನೆ ಹೆಸರಿನ ಈ ಯೋಜನೆಯು ರಾಜ್ಯದ 1.5 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕತ್ವ ಹೇಳಿದೆ. ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದರು. ಈ ಯೋಜನೆಯು ಗ್ಯಾಸ್ ಬೆಲೆ ಮತ್ತು ಜೀವನ ವೆಚ್ಚದ ಹೆಚ್ಚಳದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪರಿಹಾರವನ್ನು…
ಕಾಳಿಂಗ ಸರ್ಪ ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದೆ. ಈ ಹಾವನ್ನು ಕಂಡರೆ ಜನರು ಭಯಭೀತರಾಗುತ್ತಾರೆ. ಆದರೆ ಇಲ್ಲೊಬ್ಬ ಯುವಕ ಕಾಳಿಂಗ ಸರ್ಪದ ಜೊತೆಗೆಯೇ ಹುಡುಗಾಟ ಮಾಡಲು ಹೋಗಿದ್ದು, ಸ್ವಲ್ಪದರಲ್ಲೇ ಹಾವಿನ ಕಡಿತದಿಂದ ತಪ್ಪಿಸಿಕೊಂಡಿದ್ದಾನೆ. ಯುವಕನೋರ್ವ ಕಾಳಿಂಗ ಸರ್ಪದ ಜೊತೆಗೆ ಹುಡುಗಾಟ ನಡೆಸುತ್ತಿರುವ ವಿಡಿಯೋ ಇನ್ ಸ್ಟಾಗ್ರಾಮ್ ನಲ್ಲಿ ವೈರಲ್ ಆಗಿದೆ. ಹಾವಿನ ಬಾಲ ಹಿಡಿದು ಎಳೆಯುತ್ತಾ, ಸುತ್ತ ನೆರೆದಿರುವವರನ್ನು ರಂಜಿಸಲು ಯುವಕ ಮುಂದಾಗಿದ್ದಾನೆ. ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಪದೇ ಪದೇ ಬಾಲದಿಂದ ಎಳೆದು ಹಿಂಸಿಸಿದಾಗ ಆಕ್ರೋಶಗೊಂಡ ಹಾವು ಏಕಾಏಕಿ ತಿರುಗಿ ಯುವಕನ ಮೇಲೆ ದಾಳಿ ಮಾಡಲು ಹೆಡೆ ಎತ್ತಿನಿಂತಿದೆ. ಕೊನೆಯ ಕ್ಷಣದಲ್ಲಿ ಯುವಕ ಬಚಾವ್ ಆಗಿದ್ದು, ವಿಡಿಯೋ ಬೆಚ್ಚಿಬೀಳಿಸುವಂತಿದೆ. ಹಾವುಗಳ ಜೊತೆಗೆ ಹುಡುಗಾಟ ಆಡಲು ಹೋಗಿ ಸಾಕಷ್ಟು ಜನರು ಪ್ರಾಣಕಳೆದುಕೊಂಡಿರುವ ಉದಾಹರಣೆ ಇದೆ. ಕಾಳಿಂಗ ಸರ್ಪ ಕಚ್ಚಿದರೆ ಏನಾಗುತ್ತದೆ ಅನ್ನೋದು ಗೊತ್ತಿದ್ದರೂ, ಹಾವಿನಿಂದಿಗೆ ಚೆಲ್ಲಾಟ ಆಡಿರುವ ಯುವಕನಿಗೆ ನೆಟ್ಟಿಗರು ಛೀಮಾರಿ ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ಕರ್ನಾಟಕ ಉಚ್ಚ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಎನ್ ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರ ಪೇಟೆಯ ತಾಲೂಕಿನ ಕಾರಹಳ್ಳಿಯ ಗಾಯತ್ರಿ ಅವರು 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ. ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ಕೆಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿ ಅವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದುಕೊಂಡಿದ್ದಾರೆ. ಕೆಜಿಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ರ‍್ಯಾಂಕ್ ಬರುವ ಮೂಲಕ ಪಡೆದುಕೊಂಡಿದ್ದಾರೆ. ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಒಬ್ಬಳೇ ಮಗಳು. ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ…
ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ನಗರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಶಿವಸೇನೆಯ ಸಂಸದ ಧೈರ್ಯಶೀಲ್ ಮಾನೆ ಅವರಿಗೆ ಕರ್ನಾಟಕದ ಗಡಿ ಪ್ರವೇಶಿಸಿ ಬೆಳಗಾವಿಗೆ ಬರದಂತೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ರಾತ್ರೋರಾತ್ರಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಕ್ ನೀಡಿದ್ದಾರೆ. ಇಂದು ನಗರದಲ್ಲಿ ಎಂಇಎಸ್ ಕಾರ್ಯಕರ್ತರು ಹುತಾತ್ಮರ ದಿನ ಆಚರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷ ಆಗಿರುವ ಧೈರ್ಯಶೀಲ್ ಮಾನೆ ಆಗಮಿಸಲಿದ್ದರು. ಮಾನೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಪರಿಸ್ಥಿತಿ ಹದಗೆಡಬಹುದು. ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ವಿಶೇಷ ಅಧಿಕಾರ ಬಳಸಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಗಡಿ ವಿವಾದ ಸಂಬಂಧ ಉದ್ರೇಕಕಾರಿ ಹೇಳಿಕೆಗಳಿಂದ ಭಾಷಾ ಸಮಸ್ಯೆ ಉದ್ಭವವಾಗಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪಿಂಪ್ ಗಳಿಂದ ಹಣ ಮಾಡಿಕೊಳ್ಳುವ ಸ್ಥಿತಿ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಮಾಜಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಮನಗರದ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾನೇಕೆ ಅವರು ಅತ್ಮಹತ್ಯೆ ಮಾಡಿಕೊಳ್ಳಲಿ ಎಂದು ಹೇಳಲಿ. ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದು ಕೊಳ್ಳಬೇಕು. ಪೊಲೀಸ್ ಅಧಿಕಾರಿಗಳಿಂದ ಸ್ಯಾಂಟ್ರೋ ರವಿ ಹಣ ವಸೂಲಿ ಮಾಡಿದ್ದಾನೆ. 150 ಪೊಲೀಸ್ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದಾನೆ. ಅರಗ ಜ್ಞಾನೇಂದ್ರ ಚೇಂಬರ್ ನಲ್ಲೇ ಎರಡು ಫೋಟೊಗಳಿವೆ. ಆರಗ ಜ್ಞಾನೇಂದ್ರ ಯಾಕೆ ಇಂತಹ ವ್ಯಕ್ತಿಯನ್ನ ಸೇರಿಸಿಕೊಂಡರು. ತಮ್ಮ ಭೇಟಿಗೆ ಸಾವಿರಾರು ಜನ ಬರುತ್ತಾರೆ ಎಂದಿದ್ದಾರೆ. ನಾನು ಒಪ್ಪಿಕೊಳ್ಳುತ್ತೇನೆ. ನಮ್ಮನ್ನು ನೋಡಲು ಸಹ ಜನರು ಬರುತ್ತಾರೆ. ಆತ ಏನು ನಡೆಸಿಕೊಂಡು ಬಂದಿದ್ದಾನೆ ಇವರಿಗೆ ಗೊತ್ತಿಲ್ವಾ…? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನಾನು ಕಾಂಗ್ರೆಸ್ ನವರ ಘೋಷಣೆ ಬಗ್ಗೆ ಮಾತನಾಡಲ್ಲ. ದುಡಿಯುವವರ ಕೈ ಬಲಪಡಿಸಲು…
ರಿಪ್ಪನ್‌ಪೇಟೆ: ಸಮೀಪದ ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಜನವರಿ 20 ರಂದು ಧನುರ್ಮಾಸದ ಅಂಗವಾಗಿ ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮೀಜಿಯವರು ಲೋಕಕಲ್ಯಾಣಾರ್ಥ ಶಿವಪೂಜಾನುಷ್ಟಾನ ಮತ್ತು ಧರ್ಮಜಾಗೃತಿ ಕಾರ್ಯಕ್ರಮವನ್ನು ಜನವರಿ 20 ರಂದು ಏರ್ಪಡಿಸಿದ್ದಾರೆಂದು ಮಠದ ಪ್ರಕಟಣೆ ತಿಳಿಸಿದೆ. ಧರ್ಮ ಸಮಾರಂಭದ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ವಹಿಸಿ ಅಶೀರ್ವಚನ ನೀಡುವರು. ಹೊನ್ನಾಳಿ ಹೀರೆಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಧರ್ಮಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶ್ರೀಶಿವಲಿಂಗೇಶ್ವರ ತೂಗು ಪಂಚಾಂಗವನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಹರತಾಳು ಹಾಲಪ್ಪ, ರುದ್ರೇಗೌಡ, ಆರ್.ಎಂ.ಮಂಜುನಾಥ, ಉದ್ಯಮಿ ಕೆ.ಆರ್.ಪ್ರಕಾಶ್, ಕೋಣಂದೂರು ಜಿ.ಪಂ.ಮಾಜಿ ಸದಸ್ಯೆ ಅಪೂರ್ವ ಶರಥಿ ಪೂರ್ಣೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಾಂತಮ್ಮ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ನಾಡಿನ ವಿವಿಧ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆಂದು ಮಠದ ಪೀಠಾಧ್ಯಕ್ಷರಾದ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ…