Subscribe to Updates
Get the latest creative news from FooBar about art, design and business.
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
Author: admin
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಸ್ಪತ್ರೆಯಲ್ಲಿ ಅವರು ಕೋವಿಡ್ ಮತ್ತು ನ್ಯುಮೋನಿಯಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಲಲಿತ್ ಮೋದಿ ಪ್ರಸ್ತುತ ಬಾಹ್ಯ ಆಮ್ಲಜನಕ ಬೆಂಬಲದಲ್ಲಿದ್ದಾರೆ. ಏರ್ ಆಂಬ್ಯುಲೆನ್ಸ್ ಸಹಾಯದಿಂದ ಇಬ್ಬರು ವೈದ್ಯರೊಂದಿಗೆ ಲಲಿತ್ ಮೋದಿ ಮೆಕ್ಸಿಕೋದಿಂದ ಲಂಡನ್‌ಗೆ ಬಂದರು. ಲಲಿತ್ ಮೋದಿ ಅವರು ತಮ್ಮೊಂದಿಗೆ ಲಂಡನ್‌ಗೆ ಬಂದಿದ್ದ ವೈದ್ಯರನ್ನು ಪರಿಚಯಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಮಾಡಿದ ತ್ಯಾಗವನ್ನು ಪೋಸ್ಟ್ ಎತ್ತಿ ತೋರಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅನೇಕರು ಉಚಿತವಾಗಿ ನೀಡುವ ಸಲಹೆಯಾಗಿದೆ. ಈ ಸಲಹೆಯನ್ನು ಕೇಳಿದ ನಂತರ ನಿಮ್ಮ ದೈನಂದಿನ ಕ್ಯಾಲೊರಿ ಸೇವನೆಯನ್ನು ತೀವ್ರವಾಗಿ ಕಡಿಮೆ ಮಾಡಿದರೂ ನೀವು ಕೊಬ್ಬನ್ನು ಕಳೆದುಕೊಳ್ಳುತ್ತಿಲ್ಲ ಎಂದು ನೀವು ದೂರುತ್ತಿದ್ದೀರಾ? ಕೆಲವೊಮ್ಮೆ ನೀವು ತೂಕವನ್ನು ಕಳೆದುಕೊಳ್ಳದಿರುವ ಕಾರಣಗಳು ಈ ಕೆಳಗಿನವುಗಳಾಗಿರಬಹುದು. ನೀವು ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸುತ್ತಿಲ್ಲ ನೀವು ಹೆಚ್ಚು ಸಕ್ಕರೆ, ಕರಿದ ಮತ್ತು ಸಂಸ್ಕರಿಸಿದ ಆಹಾರವನ್ನು ಸೇವಿಸುತ್ತಿದ್ದರೆ, ನೀವು ನಿರೀಕ್ಷಿಸುವುದಕ್ಕಿಂತ ಕಡಿಮೆ ತೂಕವನ್ನು ಕಳೆದುಕೊಳ್ಳುತ್ತೀರಿ. ಧಾನ್ಯಗಳು, ಮೊಟ್ಟೆಗಳು, ಸೊಪ್ಪುಗಳು, ಹಣ್ಣುಗಳು, ರಾಗಿ, ಮೀನು ಮತ್ತು ತರಕಾರಿಗಳನ್ನು ಸೇರಿಸುವ ಮೂಲಕ ಆಹಾರವನ್ನು ಸುಧಾರಿಸಬಹುದು. ವ್ಯಾಯಾಮ ನೀವು ಹೆಚ್ಚು ಸ್ನಾಯುಗಳನ್ನು ಬಲಪಡಿಸಬಹುದು ವ್ಯಾಯಾಮದ ಮೂಲಕ. ಬೇಡವಾದ ದೇಹದಲ್ಲಿ ಇರುವ ಕೊಬ್ಬನ್ನು ಕಳೆದುಕೊಳ್ಳುತ್ತೀರಿ ಮತ್ತು ಬಿಗಿಯಾದ ಸ್ನಾಯುಗಳನ್ನು ನಿರ್ಮಿಸುವ ಮೂಲಕ ಸ್ನಾಯುವಿನ ಸಾಂದ್ರತೆಯನ್ನು ಪಡೆದುಕೊಳ್ಳುತ್ತೀರಿ. ಆದರೆ ನೀವು ನಿಜವಾಗಿಯೂ ನಿಮ್ಮ ದೇಹದಿಂದ ಕೊಬ್ಬನ್ನು ಹೊರಹಾಕುತ್ತಿದ್ದೀರಿ. ಇದು ಆರೋಗ್ಯಕ್ಕೂ ಒಳ್ಳೆಯದು. ಮಾನಸಿಕ ಒತ್ತಡ ಒತ್ತಡವು…
ಸರಗೂರು: ಮೇವು ಅರಸಿ ಕಾಡಿನಿಂದ ಹೊರ ಬಂದ ಹೆಣ್ಣಾನೆಯೊಂದು ಕಾಡು ಪ್ರಾಣಿಗಳ ಹಾವಳಿ ತಡೆಗೆ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ. ತಾಲೂಕಿನ ದೊಡ್ಡಬರಗಿ ಗ್ರಾಮದ ಗೋಪಾಲ ಎಂಬುವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದು, ಗುರುವಾರ ರಾತ್ರಿ ಮೇವು ಅರಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸಿಲುಕಿಕೊಂಡಿದೆ. ಇದರಿಂದ ಗಾಬರಿಗೊಂಡ ಆನೆ ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ವಿಫಲವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದೆ ಎನ್ನಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹೆಡಿಯಾಲ ಉಪ ವಿಭಾಗದ ಹೆಡಿಯಾಲ ವಲಯ ಅಂಚಿನಲ್ಲಿರುವ ಸರಗೂರು ಪ್ರಾದೇಶಿಕ ವಲಯ ವ್ಯಾಪ್ತಿಯ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೊಡ್ಡಬರಗಿ ಗ್ರಾಮದ ಜಮೀನಿನಲ್ಲಿ ಸುಮಾರು 25ರಿಂದ 30 ವರ್ಷ ವಯಸ್ಸಿನ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿಗೆ ಸಿಲುಕಿ ಸಾವನ್ನಪ್ಪಿದ ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ…
ಧಾರವಾಡ: ಧಾರವಾಡ ನಗರದ ಹಮ್ ಫೌಂಡೇಶನ್ ಭಾರತ್ ಪ್ರಭಾತ ಶಾಖೆ ಧಾರವಾಡ, ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ವಾಣಿಜ್ಯ ಮಹಾವಿದ್ಯಾಲಯ (IQAC) ಹಾಗೂ ಅಂತರದೃಷ್ಠಿ ಯೋಗ ಅಕಾಡೆಮಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023 ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ವಯಸ್ಕರ ವಿಭಾಗಗಳಿಂದ ಒಟ್ಟು 420 ಯೋಗಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೂ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು. ವಯೋಮಾನಕ್ಕೆ ತಕ್ಕಂತೆ ಏಳು ವಿಭಾಗದಲ್ಲಿ ವಿಜೇತರಾದ ಯೋಗಪಟುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಮೆಡಲ್ ಮತ್ತು ಭಾಗವಹಿಸಿದ ಶಾಲೆಗಳಿಗೆ ಟ್ರೋಪಿಗಳನ್ನು ನೀಡಲಾಯಿತು. ಸ್ಪರ್ಧೆಯ ನಿರ್ಣಾಯಕರಾಗಿ 30 ಜನ ಅನುಭವಿ ತರಬೇತಿದಾರರು ಭಾಗವಹಿಸಿ ಉತ್ತಮ ಫಲಿತಾಂಶ ನೀಡಿದರು. ಭಾಗವಹಿಸಿದ ಎಲ್ಲ 550 ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರುಗಳಿಗೆ ಉತ್ತಮ ಉಪಹಾರ ಊಟದ ವ್ಯವಸ್ಥೆಯನ್ನು ಸಮಪರ್ಕವಾಗಿ ಒದಗಿಸಲಾಗಿದೆ.…
ಕಲಬುರಗಿ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿದೆ. ಪ್ರಧಾನಿಯ ಭೇಟಿಗೆ ಬಿಜೆಪಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಮಾಲ್ಖೇಡ್ ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿಯವರು ತಾತ್ಕಾಲಿಕವಾಗಿ ನಿರ್ಮಿಸಿರುವ ಮನೆಗಳ ಆಸ್ತಿ ಪತ್ರಗಳನ್ನು 51,900 ತಾಂಡಾ ನಿವಾಸಿಗಳಿಗೆ ವಿತರಿಸಲಿದ್ದಾರೆ. ಕಲಬುರಗಿಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿಯ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಖಾಸಗಿ ಶಾಲೆಯ ಆವರಣದಲ್ಲಿ ಮಾತನಾಡುತ್ತಿದ್ದಾಗ ಐದು ಜನರ ತಂಡವು ಸಂತ್ರಸ್ತೆ ಮತ್ತು ಸ್ನೇಹಿತನಿಗೆ ಚಾಕು ತೋರಿಸಿ ಬೆದರಿಸಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಕಾಮುಕರಿಂದ ತಪ್ಪಿಸಿಕೊಂಡ ವಿದ್ಯಾರ್ಥಿ ಮತ್ತು ಆಕೆಯ ಸ್ನೇಹಿತ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಕುಟುಂಬಸ್ಥರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕತ್ತಲಾಗಿದ್ದ ಕಾರಣ ಯಾರನ್ನೂ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾಳೆ. ಆದರೆ ಆರೋಪಿಗಳಲ್ಲಿ ಒಬ್ಬರು ಇನ್ನೊಬ್ಬರಿಗೆ ಕರೆ ಮಾಡಿದಾಗ ವಿಮಲ್ ಎನ್ನುತ್ತಿರುವುದು ಕೇಳುತ್ತಿತ್ತು ಎಂದು ಹೇಳಿದ್ದಾಳೆ. ಸಂತ್ರಸ್ತೆಯಿಂದ ಮಾಹಿತಿ ಪಡೆದ ಪೊಲೀಸರು ವಿಮಲನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿದ್ದಾರೆ.. ವಿಮಲನನ್ನು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ. ಆರೋಪಿ ವಿಮಲ್ ನನ್ನು ಬಾಯಿ ಬಿಡಿಸಿದ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಬಂಧಿಸಿದ್ದಾರೆ.…
ವಿಜಯನಗರ : ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹೊಸಪೇಟೆಯಲ್ಲಿ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಕೊರೊನಾದಿಂದ ಯಾವುದೇ ಅಂತಹ ತೊಂದರೆಯಾಗಲ್ಲ. ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ. ಸಂಕ್ರಾಂತಿ, ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಬಂದ ಹಾಗೆ ಈ ಬಾರಿ ಕೂಡ ಅದೇ ರೀತಿ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಸಂಗೊಳ್ಳಿ ರಾಯಣ್ಣ ಅವರ ಪ್ರಾಮಾಣಿಕತೆ, ದೇಶಪ್ರೇಮ, ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಉತ್ಸವ ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಉತ್ಸವವಾಗಿ ಬೆಳೆಯಲಿದೆ ಎಂದು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಜ.12) ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2023 ರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಕೇವಲ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮ ನಡೆಸುವುದಲ್ಲ. ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ ರಾಯಣ್ಣನಿಗೆ ಗೌರವ ಸೂಚಿಸುವ ಉದ್ದೇಶವಾಗಿದೆ ಎಂದು ತಿಳಿಸಿದರು. ಇತಿಹಾಸ ಪರಿಚಯಕ್ಕೆ ರಾಕ್ ಗಾರ್ಡನ್ ನಿರ್ಮಾಣ: ರಾಯಣ್ಣನ ಇತಿಹಾಸ ಪರಿಚಯಿಸಲು ಸಂಗೊಳ್ಳಿಯಲ್ಲಿ ಸುಮಾರು 13 ಕೋಟಿ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ ಈಗಾಗಲೇ ಶಾಲೆಯಲ್ಲಿ…
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಹೊಸ ದಿಕ್ಕು ಪಡೆದುಕೊಂಡಿದೆ. ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿ ಸಿಗುವವರೆಗೆ ನಿರಂತರವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ. 2ಡಿ ಮೀಸಲಾತಿ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದ್ದು, ಅದನ್ನು ತಿರಸ್ಕರಿಸಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ಸಲ ಕೊಟ್ಟ ಮಾತು ತಪ್ಪಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಕೈ ಸೇರಬೇಕು. ಸರ್ಕಾರ 2ಎ ಮೀಸಲಾತಿ ಘೋಷಿಸುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮ್ಮನೇ ಅಣ್ಣನ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ವಾರ್ಡ್ ನಲ್ಲಿ ನಡೆದಿದೆ. ಪರಿಷತ್ ರಾಜ್ (28) ಕೊಲೆಯಾದ ವ್ಯಕ್ತಿ .ನಿತ್ಯ ಕುಡಿದು ಬಂದು ಬಂದು ಕಿರಿಕ್ ಮಾಡುತ್ತಿದ್ದು, ಇದೇ ವಿಚಾರವಾಗಿ ಸಹೋದರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy