Author: admin

ಸರಗೂರು:  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸದಾಶಿವ ಆಯೋಗದ ವರದಿ ಜಾರಿ ಕುರಿತು ಮಾದಿಗ ಸಂಘಟನೆಯ ಡಾ.ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಅಧ್ಯಕ್ಷ ಸಿ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಶನಿವಾರ ಸಭೆಯನ್ನು ನಡೆಯಿತು. ಈ ವೇಳೆ ಮಾತನಾಡಿದ  ಕೋಟೆ ಮತ್ತು ಸರಗೂರು ತಾಲೂಕಿನ ಡಾಕ್ಟರ್ ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ  ಸಿ.ತಿಮ್ಮಯ್ಯ, ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಸುಮಾರು 101 ಜಾತಿಗಳಿದ್ದು, ಈ ಜಾತಿಗಳಿಗೆ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಮೀಸಲಾತಿಯನ್ನು ನೀಡಿದ್ದು 101 ಜಾತಿಗಳ ಪೈಕಿ ಅತ್ಯಂತ ಹಿಂದುಳಿದ ಜಾತಿ ಮಾದಿಗ ಜಾತಿ. ನಮ್ಮಜಾತಿಯ ಜನಸಂಖ್ಯೆಗೆ ತಕ್ಕಂತೆ ಒಳ ಮೀಸಲಾತಿಯನ್ನು ಜಾರಿಗೆ ತರುವಂತೆ ಸುಮಾರು 35 ವರ್ಷಗಳಿಂದ ರಾಜ್ಯಾದ್ಯಂತ ಆಡಳಿತ ಮಾಡಿದಂತಹ ಸರ್ಕಾರಗಳನ್ನು ಒತ್ತಾಯಿಸಿ ನಾವು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಆದರೆ, ಆಡಳಿತ ನಡೆಸುವ ಸರ್ಕಾರಗಳು ಕಿವಿ, ಮೂಗು ಕಣ್ಣುಗಳಿಲ್ಲದಂತೆ ತಾತ್ಸಾರ ಹಾಗೂ ಉದಾಸಿನ ಮನೋಭಾವನೆಯಿಂದ ನಡೆದುಕೊಳ್ಳುತ್ತಿದೆ ಎಂದರು. ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಬಸವರಾಜ್ ಬೊಮ್ಮಾಯಿ ರವರು ಮುಖ್ಯಮಂತ್ರಿಗಳಾಗಿದ್ದ…

Read More

ಕಲಬುರಗಿ:   ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್‌ ನಲ್ಲಿ ನಡೆದಿದೆ. ಮಹಾದೇವ್ (20) ನಾಪತ್ತೆಯಾದ ಯುವಕ. ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ವೇಳೆ ಈಜುಬಾರದೇ ಮಹಾದೇವ್ ನೀರು ಪಾಲಾಗಿದ್ದಾನೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ರಾಜಸ್ಥಾನ: ಐಸಿಯು ವಾರ್ಡ್ ನಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರಿಗೆ ಮತ್ತು ಬರುವ ಇಂಜೆಕ್ಷನ್ ನೀಡಿದ ಆಸ್ಪತ್ರೆ ಸಿಬ್ಬಂದಿ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿಯನ್ನು ಸುಭಾಷ್ ಗಠಲಾ ಎಂದು ಗುರುತಿಸಲಾಗಿದೆ. ಘಟನೆಯ ನಂತರ  ಆಸ್ಪತ್ರೆಯು ಆತನನ್ನು ಅಮಾನತುಗೊಳಿಸಿದೆ. ಆದರೆ ಇಷ್ಟೊಂದು ಗಂಭೀರವಾ ವಿಚಾರವಾದರೂ, ಆರೋಪಿಯನ್ನು ಬಂಧಿಸಿಲ್ಲ ಎಂದು ತಿಳಿದು ಬಂದಿದೆ. ಇಂಜೆಕ್ಷನ್ ಪರಿಣಾಮ ಅರೆನಿದ್ರಾವಸ್ಥೆಯಲ್ಲಿ ಸಂತ್ರಸ್ತೆ ಇದ್ದರು. ಐಸಿಯು  ಹಾಸಿಗೆ ಸುತ್ತಲೂ ಪರದೆ ಎಳೆಯಲಾಗಿತ್ತು. ಅತ್ಯಾಚಾರ ನಡೆಯುತ್ತಿದ್ದ ವೇಳೆ ಮಹಿಳೆ ಕೂಗಲು ಯತ್ನಿಸಿದ್ದಾರೆ. ಈ ವೇಳೆ ಆಕೆಯ ಪತಿ ಅಲ್ಲಿಗೆ ಹೋಗಿದ್ದಾರೆ. ಆಕೆ ಅರೆ ಪ್ರಜ್ಞಾವಸ್ಥೆಯಲ್ಲಿರುವ ಕಾರಣ ಅತ್ಯಾಚಾರ ನಡೆಯುತ್ತಿದೆ ಎನ್ನುವುದನ್ನು ವಿವರಿಸಲು ಸಾಧ್ಯವಾಗದೇ ನಿದ್ರೆಗೆ ಜಾರಿದರು. ಮಹಿಳೆಯ ಪತಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರೂ, ಈ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಮಹಿಳೆ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡಿದ ನಂತರ ಆರೋಪಿಯನ್ನು ಅಮಾನತು ಮಾಡಲಾಗಿದೆ.  ಇನ್ನೂ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ…

Read More

ತಿಪಟೂರು: ತಾಲ್ಲೂಕಿನ ತಡಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತಾಲ್ಲೂಕಿನಾದ್ಯಂತ ಪರಿಸರ ಜಾಗೃತಿ ಮಾಹಿತಿ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಸಂರಕ್ಷಣೆಗಾಗಿ ಇದುವರೆಗೂ ರಾಜ್ಯಾದ್ಯಂತ 73 ಕೋಟಿಗೂ ಅಧಿಕ ವಿವಿಧ ಸಸಿಗಳನ್ನು ನಾಟಿ ಮಾಡಿ ಪೋಷಿಸುತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಪರಿಸರ ದಿನಾಚರಣೆ ನಿಮಿತ್ತ ಒಂದೆರಡು ಸಾರ್ವಜನಿಕ ಸ್ಥಳಗಳಲ್ಲಿ ಗಿಡನಾಟಿ ಮಾಡಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಎಂದಿಗೂ ಮಾಡುವುದಿಲ್ಲ, ಬದಲಾಗಿ ಪರಿಸರ ಸಂರಕ್ಷಣೆಯ ಹೊಣೆಯನ್ನು ಹೊತ್ತು ರಾಜ್ಯಾದ್ಯಂತ ಅನೇಕ ಸರಕಾರಿ ಶಾಲೆಗಳಲ್ಲಿ, ಕೆರೆಯಂಗಳಗಳಲ್ಲಿ, ದೇವಸ್ಥಾನಗಳ ಬಳಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಳೀಯರ ಸಮ್ಮುಖದಲ್ಲಿ ವಿವಿಧ ಬಗೆಯ ಸಸಿಗಳನ್ನು ನಾಟಿ ಮಾಡಿ ಪೋಷಿಸುವ ಜವಾಬ್ದಾರಿಯನ್ನು ಸ್ಥಳೀಯ ಗ್ರಾಮಸ್ಥರಿಗೆ, ನಮ್ಮ ಪಾಲುದಾರರಿಗೆ, ವಿದ್ಯಾರ್ಥಿಗಳಿಗೆ ವಹಿಸಿಕೊಡಲಾಗುತ್ತದೆ ಎಂದು ತಿಳಿಸಿದರು. ತಡಸೂರು…

Read More

ತುಮಕೂರು: ವಿದ್ಯಾರ್ಥಿಗಳು ಜ್ಞಾನವೃದ್ಧಿಗಾಗಿ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕೆ ಹೊರತು ಕೇವಲ ಕೆಲಸದ ನಿಮಿತ್ತವಾಗಿ ಅಲ್ಲ. ಒಬ್ಬ ವಿದ್ಯಾರ್ಥಿಯು ಜೀವನದಲ್ಲಿ ಉತ್ತಮವಾದ ಯಶಸ್ಸನ್ನು ಸಾಧಿಸುವುದರ ಮೂಲಕ ತನ್ನನ್ನು ತಾನು ಪ್ರತಿನಿಧಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ‘ಯಶಸ್ವಿ ವೃತ್ತಿ ಮತ್ತು ಜೀವನಕ್ಕಾಗಿ ಮಾರ್ಗಸೂಚಿ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಯು ತನ್ನ ನಿತ್ಯ ಜೀವನದ ಪ್ರತಿಕ್ಷಣವೂ ತನಗೆ ಜನ್ಮ ನೀಡಿದ ತಂದೆ ತಾಯಿ ಹಾಗೂ ವಿದ್ಯೆ ಕಲಿಸಿದ ಗುರು ಹಿರಿಯರನ್ನು ನೆನಪಿಸಿಕೊಳ್ಳಬೇಕು. ಅಂತಹ ವಿದ್ಯಾರ್ಥಿಗಳಿಂದ ಮಾತ್ರ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಒಂದು ಬಾರಿ ಜೀವನದಲ್ಲಿ ಸಾಧನೆಗೈದರೆ ಅದರಿಂದ ಸಮಾಜದಲ್ಲಿ ಗೌರವ ಸ್ಥಾನಮಾನ ಹೆಚ್ಚಾಗುತ್ತದೆ. ಅಂತಹ ವಿದ್ಯಾರ್ಥಿಗಳ ಪ್ರಗತಿಯನ್ನು ನಮ್ಮ ವಿಶ್ವವಿದ್ಯಾನಿಲಯವು ಸಂಭ್ರಮಿಸುತ್ತದೆ ಎಂದರು. ಬೆಂಗಳೂರಿನ ಎಂ. ಕ್ಯೂ. ಐ. ಕಾಲೇಜ್ ಆಫ್ ಮ್ಯಾನೇಜ್ಮೆಂಟ್‌ನ ನಿರ್ದೇಶಕರಾದ ಪ್ರೊ. ವಿ. ಪ್ರಭುದೇವ್ ಮಾತನಾಡಿ ವೃತ್ತಿಗೆ ನಿರ್ದಿಷ್ಟವಾದ ವ್ಯಾಪ್ತಿ…

Read More

ಕೊರಟಗೆರೆ: ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ 19 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ತಾಲ್ಲೂಕು ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಸಹಯೋಗದೊಂದಿಗೆ ಸಿದ್ದರಬೆಟ್ಟದ ಮಠದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ತಗ್ಗಿಹಳ್ಳಿ ರಾಮಕೃಷ್ಣಾಶ್ರಮದ ಶ್ರೀ ರಮಾನಂದ ಸ್ವಾಮೀಜಿಗಳು ಉದ್ಘಾಟಿಸಿದರು. ಕಾರ್ಯಕ್ರಮದ ಗಣ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರ ವಿಶೇಷ ಕರ್ತವ್ಯಧಿಕಾರಿಯಾದ ಡಾ ಕೆ ನಾಗಣ್ಣ ವಹಿಸಿಕೊಂಡಿದ್ದರು. ಸಿದ್ದರಬೆಟ್ಟ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಶ್ರೀಮಠದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪುಸ್ತಕ ದಾಸೋಹ  ಎಂಬ ವಿನೂತನ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಆಯೋಜಿಸಲಾಗುತ್ತಿದೆ, ಇದರ ಮುಖ್ಯ ಉದ್ದೇಶ ಜ್ಞಾನವನ್ನು ನಿರಂತರವಾಗಿ ಪ್ರಸಾರ ಮಾಡುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಪುಸ್ತಕ…

Read More

ಬೆಂಗಳೂರು: ಪತ್ನಿಯ ಶೀಲಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೇ ತಲೆ ಕಡಿದು ತಲೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಆನೇಕಲ್ ತಾಲ್ಲೂಕಿನ ಚಂದಾಪುರ ಬಳಿಯ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾನಸ ಹತ್ಯೆಗೀಡಾದ ಮಹಿಳೆಯಾಗಿದ್ದು, ಆಕೆಯ ಪತಿ ಶಂಕರ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯನ್ನು ನಂತರ ಬಂಧಿಸಲಾಯಿತು. ದಂಪತಿ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು ಮತ್ತು ನಾಲ್ಕು ವರ್ಷದ ಮಗಳು ಇದ್ದಾಳೆ. ಇಬ್ಬರೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಕೋರಮಂಗಲದಲ್ಲಿ ಕೆಲಸ ಮಾಡುತ್ತಿದ್ದರೆ, ಮಾನಸಾ ಬೊಮ್ಮಸಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ವಿಚಾರಣೆ ಸಮಯದಲ್ಲಿ, ಇತ್ತೀಚೆಗೆ ತನ್ನ ಪತ್ನಿಗೆ ಬೇರೊಬ್ಬರ ಜೊತೆ ಸಂಬಂಧ ಇರುವುದು ಪತ್ತೆಯಾಗಿದ್ದು, ಇದರಿಂದಾಗಿ ನಮ್ಮ ನಡುವೆ ಜಗಳವಾಗಿತ್ತು. ನಂತರ ಆಕೆ ತನ್ನ ತಾಯಿಯ ಮನೆಗೆ ಹೋಗಿದ್ದಳು. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ, ತಮ್ಮ ಮಗಳಿಗಾಗಿ ರಾಜಿ ಮಾಡಿಕೊಳ್ಳಲು ಆಕೆ ಮನೆಗೆ ಮರಳಿದ್ದಳು ಎಂದು ಶಂಕರ್ ಪೊಲೀಸರಿಗೆ…

Read More

ಬೆಂಗಳೂರು: RCB ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದಾರೆ. ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ವಿಶೇಷ ವಿಚಾರಣಾ ದಳದ ಎಸ್ ​ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ ಸಿಎ) ಕಚೇರಿಗೆ ಭೇಟಿ ನೀಡಿ, ಕಾಲ್ತುಳಿತ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ. ಗೇಟ್ ನಂಬರ್ 7, 19, 18, 16 ಮತ್ತು 21 ರ ಬಳಿ ಹೆಚ್ಚು ಅನಾಹುತ ಆಗಿತ್ತು. ಅಲ್ಲಿಗೆ ಭೇಟಿ ನೀಡಿದ ಸಿಐಡಿ ತಂಡ ಪರಿಶೀಲನೆ ನಡೆಸಿದೆ. ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲು ಸಿಐಡಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದೆ. ಆದರೆ ಇಂದು ಸರ್ಕಾರಿ ರಜೆ, ನಾಳೆ ಭಾನುವಾರವಾಗಿರುವುದರಿಂದ, ಸೋಮವಾರ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು…

Read More

ತುಮಕೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ವೀರಶೈವ ಲಿಂಗಾಯತ ಜಾತಿ ಮತ್ತು ಉಪಜಾತಿಗೆ ಸೇರಿದ ಸಮುದಾಯದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬಸವಬೆಳಗು(ಹೊಸತು/ನವೀಕರಣ), ವಿದೇಶ ವಿದ್ಯಾವಿಕಾಸ(ಹೊಸತು), ಜೀವಜಲ, ಕಾಯಕ ಕಿರಣ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ, ಸ್ವ–ಸಹಾಯ ಸಂಘಗಳಿಗೆ ಉತ್ತೇಜನ ಹಾಗೂ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com  ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in  ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ https://kvldcl.karnataka.gov.in  ಅಥವಾ ನಿಗಮದ ದೂ.ವಾ.ಸಂಖ್ಯೆ 080–22865522, 9900012351ನ್ನು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ…

Read More

ತುಮಕೂರು:  ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಾಗಿ ಆಸಕ್ತ ಶಿಕ್ಷಕರಿಂದ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 21ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಇ.ಇ.ಡಿ.ಎಸ್. ಮೂಲಕ ಆನ್‌ ಲೈನ್‌ ನಲ್ಲಿ ಸಲ್ಲಿಸಬೇಕು. ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಸ್ಯೆ/ಆಕ್ಷೇಪಣೆ/ ಸಂದೇಹಗಳಿದ್ದಲ್ಲಿ ಜಿಲ್ಲಾ ಹಂತದ ವರ್ಗಾವಣೆ ಕೋಶದ ಮೂಲಕವೇ ಬಗೆಹರಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್ ಹೆಚ್.ಕೆ.(ಮೊ.ಸಂ.9448999352), ಪತ್ರಾಂಕಿತ ಸಹಾಯಕ ವಸಂತಕುಮಾರ್ ಡಿ.(6363560430) ಹಾಗೂ ಅಧೀಕ್ಷಕ ಯೋಗಾನಂದ(9886479184) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More