Author: admin

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75)  ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ನಿಧನರಾಗಿದ್ದಾರೆ. ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಅವರು ತಂದೆಯ ಅಗಲಿಕೆಯ ಕುರಿತು ಟ್ವೀಟ್ ಮಾಡಿದ್ದಾರೆ. ಅಪ್ಪ ಇನ್ನಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಎರಡೂ ಸಮುದಾಯಗಳ ಬಹುವರ್ಷಗಳ ಮೀಸಲಾತಿ ಬೇಡಿಕೆಯು ಈಡೇರಿದಂತಾಗಿದೆ. ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಜನವರಿ 12ರಂದು ವಿಶೇಷ ರಾಜ್ಯಪತ್ರ ಹೊರಡಿಸಿದ್ದಾರೆ. ಎಸ್ಸಿ ಸಮುದಾಯಕ್ಕೆ ಈ ಹಿಂದೆ ಇದ್ದ ಶೇ. 15 ಮೀಸಲಾತಿಯನ್ನು ಶೇ. 17 ಕ್ಕೆ ಹಾಗೂ ಎಸ್ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರ, ಈ ಹಿಂದೆಯೇ ಸುಗ್ರೀವಾಜ್ಞೆ ಹೊರಡಿಸಿತ್ತು. ಈಗ ವಿಧೇಯಕಕ್ಕೆ ರಾಜ್ಯಪಾಲರ ಮುದ್ರೆಯೂ ಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉದ್ಘಾಟನೆಗೆ ಸಿದ್ಧವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದ್ದು, ಪರಿಣಾಮವಾಗಿ ಕಿಟಕಿ ಗಾಜು ಪುಡಿಪುಡಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವೆ ಸಂಚರಿಸುವ ಈ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಜನವರಿ 15ರಂದು  ಪ್ರಧಾನಿ ಮೋದಿ ಚಾಲನೆ ನೀಡಬೇಕಿತ್ತು. ಕಂಚರಪಾಲೆಂನ ಕೋಚ್ ಸಂಕೀರ್ಣದಲ್ಲಿ ನಿಂತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕಿಟಕಿಗಳ ಮೇಲೆ ಮೂವರು ಆರೋಪಿಗಳು ಕಲ್ಲುಗಳನ್ನೆಸೆದಿದ್ದು, ಪರಿಣಾಮವಾಗಿ ರೈಲಿನ ಗಾಜುಗಳು ಒಡೆದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಿ.ಟಿ ರವಿ, ಸಿದ್ಧರಾಮಯ್ಯಗೆ ಮೈಸೂರು ಭಾಗದಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ವಿಶ್ವಾಸ ಕಳೆದು ಕೊಂಡಿದ್ದಾರೆ. ಈಗ ಬಾದಾಮಿ ಕ್ಷೇತ್ರದಲ್ಲಿ 2ನೇ ಬಾರಿ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಟಾಂಗ್ ನೀಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನೂ ಜನರು ನಿರ್ಧರಿಸುತ್ತಾರೆ. ಜನರ ತೀರ್ಮಾನದ ಬಗ್ಗೆ ನಾನೇನು ಹೇಳುವುದಿಲ್ಲ. ಎಂದು ಶಾಸಕ ಸಿಟಿ ರವಿ ತಿಳಿಸಿದರು. ಸಿದ್ಧರಾಮಯ್ಯಗೆ 40 ವರ್ಷದ ರಾಜಕೀಯ ಅನುಭವವಿದೆ. ಈಗಲೂ ಕ್ಷೇತ್ರದ ಹುಡುಕಾಟ ನಡೆಸುತ್ತಿರುವುದು ದುರಂತದ ವಿಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿಯಲ್ಲಿ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರರು ಸ್ವಾಗತ ಕೋರಿದರು. ನಂತರ ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯುವ ರೈಲ್ವೆ ಮೈದಾನದವರೆಗೆ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ರಸ್ತೆ ಇಕ್ಕೆಲೆಗಳಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕೈಬೀಸಿದರು. ರಸ್ತೆಯುದ್ದಕ್ಕೂ ಅಭಿಮಾನಿಗಳು ಮೋದಿ ಅವರ ಕಾರಿಗೆ ಹೂಮಳೆಗರೆದು ಮೋದಿ ಅವರಿಗೆ ಜೈಕಾರ ಕೂಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಿಸಿತ್ತು. ಆದರೆ ಕೇಂದ್ರ ಸರ್ಕಾರದ ನಡೆಗೆ ರಾಜ್ಯದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಇದೀಗ ಕೊನೆ ಕ್ಷಣದಲ್ಲಿ ಕರ್ನಾಟಕದ ನಾರಿಶಕ್ತಿ ಸ್ತಬ್ದಚಿತ್ರ ಸೇರ್ಪಡೆ ಮಾಡಿದೆ. ಈ ಮೂಲಕ ಗಣರಾಜ್ಯೋತ್ಸವದಲ್ಲಿ ಸತತ 14ನೇ ಬಾರಿ ರಾಜ್ಯದ ಟ್ಯಾಬ್ಲೋ ಪ್ರದರ್ಶನವಾಗುತ್ತಿದೆ. ರಾಜ್ಯದ ಟ್ಯಾಬ್ಲೊಗೆ ಕೇಂದ್ರದಿಂದ ಅನುಮತಿ ನಿರಾಕರಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಜೂನ್ ವರೆಗೆ ಹಬ್ಬಗಳು, ಪ್ರವಾಸ, ಮದುವೆ ಮೊದಲಾದ ಕಾರ್ಯಕ್ರಮಗಳು ಹೆಚ್ಚಾಗಿರುತ್ತವೆ. ವಾಹನಗಳ ಕಾರ್ಯಾಚರಣೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕೆಎಸ್‌ಆರ್‌ಟಿಸಿ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಹೈನುಗಾರಿಕೆಯಲ್ಲಿ ಉತ್ತಮ ಲಾಭ ಪಡೆಯಬಹುದು, ಆದ್ದರಿಂದ ಗುಣಮಟ್ಟದ ಹಾಲು ನೀಡಿ ಎಂದು ಕೆಎಂಎಫ್ ನಿರ್ದೇಶಕ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚೆನ್ನಮಲ್ಲಯ್ಯ ರೈತರಿಗೆ ಕರೆ ನೀಡಿದರು. ತಾಲೂಕಿನ ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣಕಯಂತ್ರ ಮತ್ತು ಹೊಸದುರ್ಗ ಮಹಿಳಾ ಸ್ವಸಹಾಯ ಸಂಘಕ್ಕೆ 2 ಲಕ್ಷ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು, ರಾಜ್ಯದ 14 ಒಕ್ಕೂಟಗಳಲ್ಲಿ ತುಮಕೂರು ಎರಡನೇ ಲಾಭದಾಯಕ ಸ್ಥಾನದಲ್ಲಿದೆ. ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಣೆಯಾಗುತ್ತಿದೆ. ನಂದಿನಿ ತುಪ್ಪ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸರಬರಾಜಾಗುತ್ತಿದೆ. ಜಿಲ್ಲಾದ್ಯಂತ ಒಟ್ಟು ಹಾಲು ಉತ್ಪಾದನೆ 7 ಲಕ್ಷ 6 ಸಾವಿರ ಲೀಟರ್ ಆಗುತ್ತಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸಿ ಬಂದಂತ ಲಾಭಾಂಶವನ್ನು ಹಾಲು ನಂದಿನಿ ಡೈರಿಗೆ ಹಾಕುವ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಮುಖ್ಯಸ್ಥ ದಿಲೀಪ್ ಕುಮಾರ್, ವಿಸ್ತರಣಾಧಿಕಾರಿ ಸುನಿತಾ, ತಾಲೂಕಿನ ಸಂಘಗಳ…

Read More

ತಿಪಟೂರು: ಜನವರಿ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ರಾಜ್ಯ ಕಾಂಗ್ರೆಸ್ ಮಹಿಳಾ ಸಮಾವೇಶ ಆಯೋಜಿಸಲಾಗಿದ್ದು, ಕನಿಷ್ಠ 2000 ಜನ ಮಹಿಳೆಯರು ತಿಪಟೂರಿನಿಂದ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಇಂದಿನಿಂದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಪ್ರಾರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಟ್ಟಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನವರಿ 24ರಂದು ಬಸ್ ಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸಲಿದ್ದು, ತಿಪಟೂರಿನಿಂದ 3,000 ಕಾರ್ಯಕರ್ತರು ಈ ಸಮಾವೇಶಕ್ಕೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೆನೂರು ಕಾಂತರಾಜ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಕಾಶ್, ತಾಲೂಕು ಮಾಜಿ ಅಧ್ಯಕ್ಷ ಸುರೇಶ್ ನಾ ಕೇನಳ್ಳಿ, ಮಹಿಳಾ ಘಟಕದ ಅಧ್ಯಕ್ಷ ನೂರು ಬಾನು ಸೈಫ್ ಉಲ್ಲಾ ಇತರರು…

Read More

ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳು ಬುಧವಾರದಂದು ಬೆಳಿಗ್ಗೆಯಿಂದ ವಿವಿಧ ರೀತಿಯ ಪೂಜೆ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು. ಬಳಿಕ ಮಧ್ಯಾಹ್ನ ಸಮಯದಲ್ಲಿ ಕೆರೆಯಿಂದ ಸತ್ತಿಗೆ ಮುಖಾಂತರ ಪೂರ್ಣ ಕುಂಭ ಕಳಸವನ್ನು ಹೊತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ನಡೆಸಲಾಯಿತು. ಚಿಕ್ಕಬರಗಿ ಹೆಡಿಯಾಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಿಕೊಂಡು ಉದ್ದಕ್ಕೂ ನಗಾರಿ ತಮಟೆ ಕಲಾತಂಡಗಳೊಡನೆ ಸಾಗಿ ವರದರಾಜ ಸ್ವಾಮಿ ದೇವಾಲಯ ಬಳಿ ತಲುಪಿತ್ತು . ನಂತರ ವಿಶೇಷ ಪೂಜೆ ಮತ್ತು ಭಜನೆ ಹಾಗೂ ದೀಪಾರಾಧನೆ ನಡೆಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಮುಖಂಡರು ಯುವಕರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More