Subscribe to Updates
Get the latest creative news from FooBar about art, design and business.
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
Author: admin
ಸರಗೂರು: ಪಟ್ಟಣದ ವಿರಕ್ತಮಠದಲ್ಲಿ ತಾಲ್ಲೂಕು ವಿಶ್ವಕರ್ಮ ಸೇನಾ ಸಮಿತಿ ವತಿಯಿಂದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಸೇನಾ ಸಮಿತಿ ಅಧ್ಯಕ್ಷ ಲೋಕೇಶ್, ಗ್ರಾಪಂ ಅಧ್ಯಕ್ಷ ಮುಳ್ಳೂರು ಗೊವಿಂದಚಾರಿ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಸರಗೂರು ತಾಲ್ಲೂಕಿನ ಪಟ್ಟಣದ 11 ವಾರ್ಡಿನ ಪಡಗಲು ವಿರಕ್ತಮಠದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದಚಾರ್, ಸನಾತನ ಇತಿಹಾಸ ಹೊಂದಿದ ವಿಶ್ವಕರ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಮಾಜ ವಿದ್ಯಾವಂತರಾಗಿ, ಸಂಘಟಿತರಾಗಿಗಬೇಕು ಎಂದು ಕರೆ ನೀಡಿದರು. ವಿಶ್ವಕರ್ಮ ಸೇನಾ ಸಮಿತಿ ಅಧ್ಯಕ್ಷ ಲೋಕೇಶ್ ಮಾತನಾಡಿ, ನಮ್ಮ ಸಮಾಜಕ್ಕೆ ಸರಿಯಾದ ಸಾಮಾಜಿಕ ನ್ಯಾಯ ಸಿಗಬೇಕಿದೆ. ಸಮಾಜಕ್ಕೆ ಮೀಸಲಾತಿಯ ಅಗತ್ಯವಿದ್ದು, ಸಮಾಜದಲ್ಲಿ ತುಳಿತಕ್ಕೊಳಗಾದ ಅರ್ಹರಿಗೆ ಮೀಸಲಾತಿ ದೊರಕಬೇಕು ಎಂದರು. ವಿರಕ್ತ ಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಯಾವುದೇ ಧರ್ಮ ಜಾತಿ ಮೀಸಲಾತಿಗೆ ಒಳಪಡಿಸ ಬೇಕಾದರೆ ಕುಲಶಾಸ್ತ್ರ ಅಧ್ಯಯನವಾಗಬೇಕು. ಬೇರೆ ಸಮಾಜಕ್ಕೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಬೇಕು. ವಿಶ್ವಕರ್ಮ ಸಮಾಜದಲ್ಲಿ ಅನೇಕ ಸಂಘಟನೆಗಳಿದ್ದು…
ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತ ಪಕ್ಷ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ. ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ, ಸಿಬಿಐಗೆ ಅನುಮತಿ ನೀಡಿ ಆದೇಶ ನೀಡಿದೆ. ಈ ಬಗ್ಗೆ ಹೈಕೋರ್ಟ್ ಗೆ ಮಾಹಿತಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೃಹ ಇಲಾಖೆಯಿಂದ ಸಿಬಿಐಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರಿ ಜಾಹೀರಾತಿನ ನೆಪದಲ್ಲಿ ರಾಜಕೀಯ ಜಾಹೀರಾತು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೆ 163.62 ಕೋಟಿ ರೂಪಾಯಿ ವಸೂಲಾತಿ ನೋಟಿಸ್ ನೀಡಿದ್ದು 10 ದಿನಗಳೊಳಗೆ ಮೊತ್ತವನ್ನು ಪಾವತಿಸುವಂತೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (ಡಿಐಪಿ) ಸೂಚಿಸಿದೆ.. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಪಕ್ಷದ ವಿರುದ್ಧ ಕ್ರಮ ಕೈಗೊಂಡ ಸುಮಾರು ಒಂದು ತಿಂಗಳ ನಂತರ ಹೊಸ ಬೆಳವಣಿಗೆಯಾಗಿದೆ.ಆಮ್ ಆದ್ಮಿ ಪಕ್ಷಕ್ಕೆ ನೀಡಿರುವ ನೋಟಿಸ್ ಪ್ರಕಾರ, 2016-2017ನೇ ಸಾಲಿನಲ್ಲಿ ಸರ್ಕಾರಿ ಜಾಹೀರಾತುಗಳ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳನ್ನು ಮುದ್ರಿಸಲು ಖಜಾನೆಯಿಂದ ಬಂದ ಹಣವನ್ನು ಬಳಸಲಾಗಿದೆ. ಈ ಜಾಹೀರಾತುಗಳು ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಲಾಗಿದೆ. ವಸೂಲಾತಿ ಸೂಚನೆಯು ಮೊತ್ತದ ಮೇಲಿನ ಬಡ್ಡಿಯನ್ನು ಸಹ ಒಳಗೊಂಡಿದೆ ಮತ್ತು AAP ಸಂಪೂರ್ಣ ಮೊತ್ತವನ್ನು 10 ದಿನಗಳಲ್ಲಿ ಪಾವತಿಸಲು ಒತ್ತಾಯಿಸುತ್ತದೆ. ನಿಗದಿತ ಸಮಯದೊಳಗೆ ಹಣ ಠೇವಣಿ ಇಡದಿದ್ದರೆ ನಿಯಮಾನುಸಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರದ ಮಾಹಿತಿ ಮತ್ತು ಪ್ರಸಾರ ನಿರ್ದೇಶನಾಲಯ…
ಶಬರಿಮಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ 707157 ಟಿನ್ ಪ್ರಸಾದ ಮೊಹರು. ಇದರಿಂದ ದೇವಸ್ವಂ ಮಂಡಳಿಗೆ ಏಳು ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. 62 ರಿಂದ 69 ರ ಬ್ಯಾಚ್‌ಗಳ ಅವರಣವನ್ನು ಸೀಲ್ ಮಾಡಿ ಗೋದಾಮಿಗೆ ಸ್ಥಳಾಂತರಿಸಲಾಯಿತು. ಪ್ರಸಾದ ತಯಾರಿಕೆಗೆ ಬಳಸುವ ಏಲಕ್ಕಿಯಲ್ಲಿ ಕ್ರಿಮಿನಾಶಕಗಳ ಅಂಶ ಕಂಡುಬಂದ ಹಿನ್ನೆಲೆಯಲ್ಲಿ ಪ್ರಸಾದ ವಿತರಣೆಯನ್ನು ನಿಲ್ಲಿಸಲಾಗಿತ್ತು. ಉಳಿದ ಏಲಕ್ಕಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಏಲಕ್ಕಿ ಗುತ್ತಿಗೆದಾರರ ವಿರುದ್ಧ ಮಂಡಳಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸೂಚಿಸಲಾಗಿದೆ. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವುದು ಸೇರಿದಂತೆ ಕ್ರಮ ಕೈಗೊಳ್ಳಲು ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ. ಗುತ್ತಿಗೆದಾರರಿಂದ ನಷ್ಟವನ್ನು ವಸೂಲಿ ಮಾಡಲು ಮಂಡಳಿ ಮುಂದಾಗಿದೆ. ಶಬರಿಮಲೆಯಲ್ಲಿ ಈಗ ಪ್ರಸಾದ ವಿತರಣೆ ಆರಂಭವಾಗಿದೆ. ಏಲಕ್ಕಿ ಇಲ್ಲದ ಪ್ರಸಾದ ಹಂಚಲಾಗುತ್ತದೆ. ಪ್ರಸಾದ ವಿತರಣೆ ಸ್ಥಗಿತಗೊಂಡಿದ್ದರಿಂದ ಗುರುವಾರ ಸಂಜೆ ಬೆಟ್ಟಕ್ಕೆ ಇಳಿದ ಭಕ್ತರಿಗೆ ಪಂಚಾಮೃತ ಪ್ರಸಾದ ಖರೀದಿಸಲು ಸಾಧ್ಯವಾಗಲಿಲ್ಲ. ಸ್ಥಾವರವು ದಿನಕ್ಕೆ 2,40,000 ಟಿನ್ ಪ್ರಸಾದವನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಪಂಚಾಮೃತ ಬಿಕ್ಕಟ್ಟನ್ನು ಶೀಘ್ರವಾಗಿ…
ರಾಷ್ಟ್ರೀಯ ಯುವ ದಿನ…. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ ಗೌರವ ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು ” ಭಾರತದ ಯುವ ಶಕ್ತಿ ಹೊಂದಿರಬೇಕು ಎಂದು ಆಶಿಸಿದ್ದವರು ಸ್ವಾಮಿ ವಿವೇಕಾನಂದರು. ಆದರೆ ಈಗಿನ ವಾಸ್ತವ ಏನು…… ಸೀಡ್ ಲೆಸ್ ಯುವ ಜನಾಂಗ….. ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು.…
ಸುಮಲತಾ ಬಿಜೆಪಿ ಅಸೋಸಿಯೇಟ್ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದೆ. ನನ್ನ ಪತಿ ಅಂಬರೀಶ್ 25 ವರ್ಷ ಕಾಂಗ್ರೆಸ್ ನಲ್ಲೇ ಇದ್ದರು. ಹೀಗಾಗಿ ನಾನು ಟಿಕೆಟ್ ಕೇಳಿದ್ದೆ. ಆದರೆ ಡಿ.ಕೆ. ಶಿವಕುಮಾರ್ ನಿರಾಕರಿಸಿದರು. ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದೇವೆ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಹಾಗಾದ್ರೆ ಡಿ.ಕೆ. ಶಿವಕುಮಾರ್ ಜೆಡಿಎಸ್ ಅಸೋಸಿಯೇಟಾ..? ಎಂದು ಟಾಂಗ್ ನೀಡಿದರು. ಅಂದು ಸಿದ್ಧರಾಮಯ್ಯ ನನ್ನ ಪರವಾಗಿ ಇದ್ದರು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ನನ್ನನ್ನು ಕೇಳದೇ ಸುಖಾ ಸುಮ್ಮನೇ ಹೇಳಿಕೆ ಕೊಡೋದು ಎಷ್ಟು ಸರಿ ಎಂದು ಸುಮಲತಾ ಅಂಬರೀಶ್ ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದು ಈ ವೇಳೆ ಮತ್ತಷ್ಟು ವಿಚಾರ ಬೆಳಕಿಗೆ ಬಂದಿತ್ತು. ನೀಲ್ ಕಿಶೋರಿಲಾಲ್ ರಾಮ್‌ನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27),…
ಚಿಕ್ಕೋಡಿ: “ರಾಜ್ಯಕ್ಕೆ ಕಾಂಗ್ರೆಸ್ ಪಕ್ಷ ಅನಿವಾರ್ಯ. ಕಣ್ಣು ಕಾಣದ, ಕಿವಿ ಕೇಳದ ಬಿಜೆಪಿ ಸರಕಾರವನ್ನು ಕಿತ್ತೆಸೆಯಿರಿ,” ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳಕರ್ ಜನತೆಗೆ ಕರೆ ನೀಡಿದರು. ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಒಬ್ಬ ಮಹಿಳೆಯಾಗಿ ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಪಡುತ್ತಿರುವ ಸಂಕಟಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಎಂದರು. ಇಂದು ಅಡುಗೆ ಅನಿಲ, ಬೇಳೆಕಾಳು, ಗೋದಿ ಹಿಟ್ಟು ಪ್ರತಿಯೊಂದರ ಬೆಲೆ ಗಗನಕ್ಕೇರಿದೆ. ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಸೋನಿಯಾ ಗಾಂಧಿಯವರ ಆದ್ಯತೆಯಿಂದಾಗಿ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬರದಿದ್ದರೆ ಇಂದು ಮಹಿಳೆಯರಿಗೆ ಒಂದು ಹೊತ್ತಿನ ಊಟಕ್ಕೂಗತಿಯಿರುತ್ತಿರಲಿಲ್ಲ,” ಎಂದರು. “ಮುಂಬರುವ ದಿನಗಳಲ್ಲಿ ಎಲ್ಲ ರೀತಿಯ ಜನಪರ ಯೋಜನೆಗಳನ್ನು ನೀಡಲು ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರು, ರೈತರು, ಯುವಜನರು ಸಂಕಲ್ಪಿಸಬೇಕು,” ಎಂದು ಅವರು ಕರೆ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಹಾಗೂ ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ…
ಬೆಂಗಳೂರು: 1323 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. 1,122 ಹಾಗೂ ಹೈದರಾಬಾದ್ ಕರ್ನಾಟಕದ 201 ಸೇರಿ ಒಟ್ಟು 1,323 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಆಯ್ಕೆ ಪಟ್ಟಿ ಹಾಗೂ ಕಟ್ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ. 2020ರ ಮೇ 14ರಂದು ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕಳೆದ ನವೆಂಬರ್ 25ರಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಗೊಳಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಹುಬ್ಬಳ್ಳಿ : ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಹುಬ್ಬಳ್ಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಯುವಜನೋತ್ಸವ 5 ದಿನಗಳ ಕಾಲ ನಡೆಯಲಿದೆ. ಮಧ್ಯಾಹ್ನ ಮೂರು ಗಂಟೆಗೆ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದು, ನಾಲ್ಕು ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy